Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಮೇ 25ರಿಂದ ಮೇ 31ರವರೆಗಿನ ವಾರ ಭವಿಷ್ಯ: ಮಾಸದ ಕೊನೆಯ ವಾರ ಈ 6 ರಾಶಿಗಳಿಗೆ ಶುಭವಾಗಿದೆ
ಈ ವಾರ ಗ್ರಹಗತಿಗಳ ಸ್ಥಾನವೂ ಈ 6 ರಾಶಿಗಳಿಗೆ ಶುಭವಾಗಿದೆ...........
ಮಿಥುನ ರಾಶಿ
ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ಇನ್ನು ಮದುವೆಗೆ ಸಂಬಂಧ ಹುಡುಕುತ್ತಿದ್ದರೆ ಈ ವಾರ ಮದುವೆ ಪ್ರಸ್ತಾಪ ಬರಬಹುದು. ವ್ಯಾಪಾರಿಗಳಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ನಿಮಗೆ ಹೊಸ ಗ್ರಾಹಕರು ಸಿಗಬಹುದು, ಈ ವಾರದಲ್ಲಿ ಒಳ್ಳೆಯ ಲಾಭ ಗಳಿಸಲು ಸಾಧ್ಯವಾಗುವುದು. ಆದರೆ ನೀವು ನಿಮ್ಮ ಮಾತಿನ ಕಡೆಗೆ ಗಮನಹಿಸಬೇಕು, ಇಲ್ಲದಿದ್ದರೆ ನಿಮ್ಮ ಮಾತು, ವರ್ತನೆ ನಿಮ್ಮ ಪ್ರೀತಿಪಾತ್ರರಿಗೆ ತುಂಬಾನೇ ನೋವುಂಟು ಮಾಡುತ್ತದೆ, ಆದ್ದರಿಂದ ಈ ಬಗ್ಗೆ ಜಾಗ್ರತೆವಹಿಸಬೇಕು. ಉದ್ಯೋಗಿಗಳು ತಮ್ಮ ಶ್ರಮಕ್ಕೆ ತಕ್ಕ ಫಲ ಪಡೆಯಬಹುದು. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ.

ಕರ್ಕ ರಾಶಿ
ಈ ವಾರ ನಿಮಗೆ ತುಂಬಾ ಒಳ್ಳೆಯದು. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ನೀವು ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ. ತಾಯಿಯ ಆರೋಗ್ಯವು ಸ್ವಲ್ಪ ಸಮಯದವರೆಗೆ ಉತ್ತಮವಾಗಿಲ್ಲದಿದ್ದರೆ, ಈ ಅವಧಿಯಲ್ಲಿ ಅವರ ಆರೋಗ್ಯವು ಉತ್ತಮವಾಗಿರುತ್ತದೆ. ವ್ಯಾಪಾರಿಗಳು ದೀರ್ಘ ಪ್ರಯಾಣವನ್ನು ಕೈಗೊಳ್ಳಬೇಕಾಗಬಹುದು. ನಿಮ್ಮ ಈ ಪ್ರಯಾಣವು ತುಂಬಾ ಚೆನ್ನಾಗಿರಲಿದೆ. ನೀವು ಲಾಭವನ್ನು ಗಳಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ಈ ಏಳೂ ದಿನಗಳು ಉದ್ಯೋಗಿಗಳಿಗೆ ತುಂಬಾ ಕಾರ್ಯನಿರತವಾಗಿರುತ್ತದೆ, ಆದರೆ ನಿಮ್ಮ ಧೈರ್ಯ ಮತ್ತು ಆತ್ಮವಿಶ್ವಾಸದ ಸಹಾಯದಿಂದ ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುವುದು. ಹಣ ಉಳಿತಾಯವಾಗುವುದು, ಹೀಗಾಗಿ ಸಾಲ ತೀರಿಸಲು ಸಾಧ್ಯವಾಗುವುದು.
ಸಿಂಹ ರಾಶಿ
ಈ ವಾರ ನಿಮಗೆ ಉತ್ತಮವಾಗಿದೆ. ಈ ಅವಧಿಯಲ್ಲಿ, ನೀವು ಎಲ್ಲಾ ಚಿಂತೆಗಳನ್ನು ಮರೆತು ನಿಮ್ಮ ಪ್ರಮುಖ ಕಾರ್ಯಗಳತ್ತ ಗಮನ ಹರಿಸಬೇಕು. ಅನಗತ್ಯ ವಿಷಯಗಳ ಬಗ್ಗೆ ಯೋಚಿಸಿ ನಿಮ್ಮ ಅಮೂಲ್ಯ ಸಮಯ ಹಾಳು ಮಾಡಬೇಡಿ. ನೀವು ಎಷ್ಟು ಕಷ್ಟಪಟ್ಟು ಕೆಲಸ ಮಾಡುತ್ತೀರೋ ಅಷ್ಟು ಯಶಸ್ಸು ಸಿಗುತ್ತದೆ. ಸರ್ಕಾರಿ ಕೆಲಸ ಮಾಡುವವರಿಗೆ ಈ ವಾರ ಶುಭ ಸೂಚನೆಯಿದೆ, ಈ ಅವಧಿಯಲ್ಲಿ ನಿಮ್ಮ ಆದಾಯ ಹೆಚ್ಚಾಗಬಹುದು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಈ ಅವಧಿಯಲ್ಲಿ ತೆಗೆದುಕೊಳ್ಳುವ ನಿರ್ಧಾರದಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಷೇರು ಮಾರುಕಟ್ಟೆಯಲ್ಲಿ ತೊಡಗಿಸಿಕೊಂಡಿದ್ದರೆ ಈ ದಿನ ಉತ್ತಮವಾಗಿದೆ. ನಿಮ್ಮ ಆರೋಗ್ಯವನ್ನು ಸುಧಾರಿಸಲು, ನಿಮ್ಮ ಬಗ್ಗೆ ಹೆಚ್ಚು ಗಮನ ಹರಿಸಬೇಕು.
ತುಲಾ ರಾಶಿ
ಈ ವಾರ ಕುಟುಂಬದಲ್ಲಿ ಸಂತೋಷ, ನೆಮ್ಮದಿ ಇರಲಿದೆ. ಮನೆಗೆ ಅತಿಥಿಗಳು ಬರಬಹುದು. ನಿಮ್ಮ ಸಂಗಾತಿಯೊಂದಿಗೆ ನಿಮ್ಮ ಭಾವನಾತ್ಮಕ ಬಾಂಧವ್ಯ ಹೆಚ್ಚಾಗುತ್ತದೆ. ಈ ಅವಧಿಯಲ್ಲಿ ನೀವು ಪರಸ್ಪರ ಸಂಪೂರ್ಣವಾಗಿ ಸಮರ್ಪಿತರಾಗಿರುತ್ತೀರಿ. ಪ್ರಣಯ ಜೀವನದಲ್ಲಿ ಪ್ರೀತಿ ಮತ್ತು ಪ್ರಣಯ ಉಳಿಯುತ್ತದೆ. ಪ್ರೇಮಿಗಳಿಗೂ ಈ ಅವಧಿ ವಿಶೇಷವಾಗಿರಲಿದೆ. ಕೆಲಸದಲ್ಲಿ ನಿಮ್ಮ ಊಹೆಯಂತೆಯೇ ಎಲ್ಲಾ ಕೆಲಸಗಳು ಪೂರ್ಣಗೊಳ್ಳಲಿದೆ. ವ್ಯಾಪಾರಿಗಳು ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ಏಳೂ ದಿನಗಳು ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಉದ್ಯೋಗಿಗಳಿಗೆ ಈ ವಾರ ಉತ್ತಮವಾಗಿರಲಿದೆ, ನಿಮಗೆ ಬಡ್ತಿಯ ಸಾಧ್ಯತೆ ಇದೆ. ಈ ಅವಧಿಯಲ್ಲಿ ವ್ಯಾಪಾರಿಗಳು ಜಾಗರೂಕರಾಗಿರಲು ಸಲಹೆ ನೀಡಲಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದಾಗ್ಯೂ, ಅದ್ದೂರಿಯಾಗಿ ಖರ್ಚು ಮಾಡದಂತೆ ನಿಮಗೆ ಸಲಹೆ ನೀಡಲಾಗುವುದು. ಸಂಗಾತಿ ಜೊತೆಗೆ ಹೆಚ್ಚಿನ ಸಮಯ ಕಳೆಯಲು ಪ್ರಯತ್ನಿಸಿ, ಇದರಿಂದಾಗಿ ವೈವಾಹಿಕ ಬದುಕು ಚೆನ್ನಾಗಿರಲಿದೆ, ಸಂಬಂಧ ಗಟ್ಟಿಯಾಗುವುದು. ಆರೋಗ್ಯ ಈ ವಾರ ಸರಾಸರಿ ಆಗಿರಲಿದೆ.
ಕುಂಭ ರಾಶಿ
ಕೌಟುಂಬಿಕ ಜೀವನ ಈ ವಾರ ತುಂಬಾನೇ ಖುಷಿಯಿಂದ ಕೂಡಿರಲಿದೆ. ನಿಮ್ಮ ಜವಾಬ್ದಾರಿಗಳನ್ನು ಉತ್ತಮವಾಗಿ ನಿರ್ವಹಿಸುವಿರಿ. ಕೆಲವು ಶುಭ ಕಾರ್ಯಗಳು ಸಹ ನೆರವೇರುತ್ತವೆ. ಅರ್ಥಿಕವಾಗಿಯೂ ಯಾವುದೇ ಸಮಸ್ಯೆ ಇರಲ್ಲ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ಉದ್ಯೋಗಸ್ಥರು ಬಡ್ತಿ ಪಡೆಯುತ್ತೀರಿ. ನಿಮ್ಮ ಪ್ರಗತಿಯ ಕನಸು ನನಸಾಗಬಹುದು. ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
