Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಾರ ಭವಿಷ್ಯ: ನವೆಂಬರ್ 17ರಿಂದ 23ರವರೆಗಿನ ದಿನಗಳವರೆಗೆ ದ್ವಾದಶ ರಾಶಿಗಳ ಭವಿಷ್ಯ
ವಾರ ಭವಿಷ್ಯ ಪ್ರಕಾರ ಈ ವಾರ (ನವೆಂಬರ್ 17-23) ದ್ವಾದಶ ರಾಶಿಗಳಿಗೆ ಹೇಗಿದೆ?
ಮೇಷ ರಾಶಿ
ವೃತ್ತಿ ಬದುಕು: ಈ ವಾರ ನಿಮಗೆ ತುಂಬಾ ಅನುಕೂಲಕರವಾಗಿರಲಿದೆ, ವೃತ್ತಿ ಬದುಕಿನಲ್ಲಿ ನೀವು ಹೆಚ್ಚು ಗಮನಹರಿಸಿದಷ್ಟೂ ಹೆಚ್ಚು ಫಲ ಪಡೆಯಲು ಸಾಧ್ಯವಾಗಲಿದೆ. ವ್ಯಾಪಾರಿಗಳಿಗೂ ಅನುಕೂಲಕರವಾಗಿದೆ.
ಆರ್ಥಿಕ ಸ್ಥಿತಿ: ಈ ವಾರ ನೀವು ಹಣದ ವಿಷಯದಲ್ಲಿ ಜಾಗ್ರತೆವಹಿಸಬೇಕು, ಯಾವುದೇ ಹೊಸ ಹೂಡಿಕೆ ಮಾಡಲು ಹೋಗಬೇಡಿ. ಎಲ್ಲಾ ದಾಖಲೆಗಳನ್ನು ಸರಿಯಾಗಿಡಿ
ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವುದಾದರೂ ಮನೆಯವರ, ಅನುಭವಿಗಳಸಲಹೆ ಪಡೆಯುವುದು ಒಳ್ಳೆಯದು.
ಕುಟುಂಬ ಜೀವನ ಸರಾಸರಿಯಾಗಿರಲಿದೆ, ನೀವು ಸಂಗಾತಿಯನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು. ಅವರ ಭಾವನೆಗಳಿಗೆ ಸ್ಪಂದಿಸಿ.
ಆರೋಗ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕು ಚೆನ್ನಾಗಿರಲಿದೆ.
ವೃತ್ತಿ ಬದುಕು: ನಿಮ್ಮೆಲ್ಲಾ ಕೆಲಸ ಕಾರ್ಯಗಳು ಯೋಜಿತ ರೀತಿಯಲ್ಲಿ ಪೂರ್ಣವಾಗಲಿದೆ. ಇದರಿಂದ ನೀವು ಖುಷಿಯಾಗಿರುತ್ತೀರಿ. ವ್ಯಾಪಾರಿಗಳಿಗೂ ಈ ವಾರ ಹಣಕಾಸು ಚೆನ್ನಾಗಿರಲಿದೆ.
ಹಣಕಾಸು: ಆರ್ಥಿಕವಾಗಿ ಯಾವುದೇ ಸಮಸ್ಯೆ ಇರಲ್ಲ
ಆರೋಗ್ಯ ಚೆನ್ನಾಗಿರಲಿದೆ
ಕುಟುಂಬ ಜೀವನ: ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಸಾಮರಸ್ಯ ಇರಲಿದೆ. ಮನೆಯ ಸದಸ್ಯರ ಜೊತೆಗೆ ಹೊಂದಾಣಿಕೆ ತುಂಬಾ ಚೆನ್ನಾಗಿರಲಿದೆ.
ಮಿಥುನ ರಾಶಿ
ವೃತ್ತಿ ಬದುಕು: ಈ ವಾರ ನಿಮಗೆ ಶುಭವಾಗಿದೆ, ಯಾವುದೇ ಕೆಲಸ ಅಪೂರ್ಣವಾಗಿದ್ದರೆ ಈ ವಾರ ಪೂರ್ಣಗೊಳಿಸಲು ಸಾಧ್ಯವಾಗುವುದು.ನೀವು ತೆಗೆದುಕೊಳ್ಳುವ ನಿರ್ಧಾರದಿಂದ ಉತ್ತಮ ಫಲ ಸಿಗಲಿದೆ. ನಿಮ್ಮ ಕೆಲಸಕ್ಕೆ ಮನ್ನಣೆ ದೊರೆಯಲಿದೆ. ವ್ಯಾಪಾರಿಗಳಿಗೆ ತುಂಬಾನೇ ಅನುಕೂಲಕರವಾಗಿರಲಿದೆ, ವ್ಯಾಪಾರವನ್ನು ವಿಸ್ತರಣೆ ಮಾಡಲು ಈ ವಾರ ನಿಮಗೆ ಅನುಕೂಲಕರವಾಗಿರಲಿದೆ.
ಆರ್ಥಿಕ ಜೀವನ: ಹಣಕಾಸು ಚೆನ್ನಾಗಿರಲಿದೆ, ಹಣಕಾಸಿನ ಸಮಸ್ಯೆಯಿಂದಾಗಿ ನಿಲ್ಲಿಸಿದ ಕೆಲಸ ಪ್ರಾರಂಭಿಸಲು ಈ ಅವಧಿ ನಿಮಗೆ ಅನುಕೂಲಕರವಾಗಿರಲಿದೆ. ಆಸ್ತಿ ಖರೀದಿ ಅಥವಾ ಮಾರಾಟ ಮಾಡುವವರುಲಾಭ ಗಳಿಸುತ್ತೀರಿ.
ಆರೋಗ್ಯ ಸರಾಸರಿಯಾಗಿರಲಿದೆ, ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಕುಟುಂಬ ಜೀವನ:ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಬದುಕಿನಲ್ಲಿ ಸಂತೋಷ ಇರಲಿದೆ.
ಕರ್ಕ ರಾಶಿ :
ವೃತ್ತಿ ಬದುಕು: ಈ ವಾರ ನಿಮಗೆ ತುಂಬಾನೇ ಅನುಕೂಲಕರವಾಗಿದೆ, ತುಂಬಾ ಸಮಯದಿಂದ ಕೆಲಸದ ಹುಡುಕಾಟಲ್ಲಿದ್ದರೆ ಈ ಅವಧಿಯಲ್ಲಿ ಕೆಲಸ ಪಡೆಯುವಿರಿ, ವೃತ್ತಿ ಬದುಕಿನಲ್ಲಿ ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣವಾಗಲಿದೆ. ವ್ಯಾಪಾರಿಗಳಿಗೂ ಲಾಭ ಗಳಿಸಲು ಸಾಧ್ಯವಾಗುವುದು.
ಆರ್ಥಿಕ ಜೀವನ: ಹಣಕಾಸು ಚೆನ್ನಾಗಿರಲಿದೆ, ಆರ್ಥಿಕವಾಗಿ ಅಭಿವೃದ್ಧಿ ಕಾಣುವಿರಿ.
ಕುಟುಂಬ ಜೀವನ: ಕುಟುಂಬ ಜೀವನದ ಬಗ್ಗೆ ಹೇಳುವುದಾದರೆ ನಿಮ್ಮ ವರ್ತನೆಯಿಂದ ನೋವಾಗದಂತೆ ನೋಡಿಕೊಳ್ಳಿ.
ಆರೋಗ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ವೃತ್ತಿ ಜೀವನ: ಈ ವಾರ ನಿಮಗೆ ಮಿಶ್ರಫಲ. ವೃತ್ತಿ ಬದುಕಿನಲ್ಲಿ ಸವಾಲುಗಳು ಎದುರಾಗಬಹುದು, ವ್ಯಾಪಾರಿಗಳು ದೊಡ್ಡ ಏರಿಳಿತಗಳನ್ನು ಎದುರಿಸಬೇಕಾಗಬಹುದು.
ಹಣಕಾಸು: ಈ ವಾರ ಬಜೆಟ್ ಮೀರಿ ಖರ್ಚು ಮಾಡಬೇಡಿ, ಹಣಕಾಸಿನ ವಿಷಯದಲ್ಲಿ ಜಾಗ್ರತೆವಹಿಸಬೇಕು.
ಆರೋಗ್ಯ: ಆರೋಗ್ಯದ ಕಡೆಗೆ ಗಮನಹರಿಸಿ, ಚಿಕ್ಕ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಕುಟುಂಬ ಜೀವನ: ಸಂಗಾತಿಯ ಜೊತೆ ಚಿಕ್ಕ-ಪುಟ್ಟ ಮನಸ್ತಾಪ ಬರಬಹುದು, ಆದರೆ ಸಣ್ಣ ಪುಟ್ಟ ವಿಷಯಗಳನ್ನು ನಿರ್ಲಕ್ಷ್ಯ ಮಾಡಿದರೆ ಈ ವಾರ ತುಂಬಾ ಚೆನ್ನಾಗಿರಲಿದೆ.
ಕನ್ಯಾ ರಾಶಿ
ವೃತ್ತಿ ಜೀವನ: ಕನ್ಯಾ ರಾಶಿಯವರು ಈ ವಾರ ಕೆಲಸ ಕಾರ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ನೀವು ನಿಮ್ಮ ಕೆಲಸವನ್ನು ಸಮಯಕ್ಕೆ ಸರಿಯಾಗಿ ಮಾಡುವುದು ಒಳ್ಳೆಯದು. ವ್ಯಾಪಾರಸ್ಥರು ನಿರ್ಲಕ್ಷ್ಯ ತೋರಿದರೆ ಹಣಕಾಸಿನ ನಷ್ಟವಾಗಬಹುದು, ಹಾಗಾಗಿ ಈ ಬಗ್ಗೆ ಜಾಗ್ರತೆವಹಿಸಿ.
ಹಣಕಾಸು: ಆರ್ಥಿಕವಾಗಿ ನೋಡುವುದಾದರೆ ಈ ವಾರ ಖರ್ಚು ಹೆಚ್ಚಿರಲಿದೆ,ಬಜೆಟ್ ರೆಡಿ ಮಾಡಿ ಅದರಂತೆ ಖರ್ಚು ಮಾಡಿದರೆ ತುಂಬಾ ಒಳ್ಳೆಯದು.
ಆರೋಗ್ಯ: ಆರೋಗ್ಯದಲ್ಲಿ ಏರಳಿತವಿರಬಹುದು, ಸೂಕ್ತ ವೈದ್ಯರನ್ನು ಕಾಣಿ
ಸಂಬಂಧ: ವೈವಾಹಿಕ ಬದುಕಿನಲ್ಲಿ ಕೆಲ ಭಿನ್ನಾಭಿಪ್ರಾಯ ಬರಬಹುದು, ನೀವು ಸಂಗಾತಿಯ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ.
ತುಲಾ ರಾಶಿ
ವೃತ್ತಿ ಬದುಕು: ಈ ವಾರ ನಿಮಗೆ ಮಿಶ್ರಫಲ, ಕೆಲಸದ ಜಾಗದಲ್ಲಿ ಎಚ್ಚರಿಕೆಯಿಂದ ವರ್ತಿಸಿ, ನಿಮ್ಮ ಕೋಪ ನಿಯಂತ್ರಿಸಿದರೆ ಒಳ್ಳೆಯದು, ವ್ಯಾಪಾರಿಗಳು ಈ ವಾರ ಕಠಿಣ ಸ್ಪರ್ಧೆ ಎದುರಿಸಬಹುದು.
ಆರ್ಥಿಕ ಜೀವನ: ಆರ್ಥಿಕವಾಗಿ ಈ ವಾರ ನಿಮಗೆ ಸವಾಲಿನ ಸಮಯ, ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ.
ಆರೋಗ್ಯ: ಈವಾರ ಅತಿಯಾದ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವುದು, ಮಾನಸಿಕ ಒತ್ತಡ ಕಡಿಮೆ ಮಾಡುವತ್ತ ಗಮನಹರಿಸಿ.
ಸಂಬಂಧ: ಚಿಕ್ಕ ಪುಟ್ಟ ಮನಸ್ತಾಪಗಳು ಬರಬಹುದು, ಸಮಸ್ಯೆಯನ್ನು ದೊಡ್ಡದು ಮಾಡಲು ಹೋಗಬೇಡಿ.
ವೃಶ್ಚಿಕ ರಾಶಿ
ವೃತ್ತಿ ಬದುಕು: ಈ ವಾರ ನಿಮಗೆ ಅನುಕೂಲಕರವಾಗಿರಲಿದೆ, ಈ ವಾರ ಕೆಲಸದಲ್ಲಿ ಹೆಚಚಿನ ಒತ್ತಡವಿರಲ್ಲ. ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಉದ್ಯೋಗವನ್ನು ಹುಡುಕುತ್ತಿರುವವರೆಗೆ ಈ ವಾರ ಅನುಕೂಲಕರವಾಗಿದೆ.
ಹಣಕಾಸು:ಆರ್ಥಿಕವಾಗಿ ಈ ವಾರ ಸರಾಸರಿಯಾಗಿರಲಿದೆ, ದೊಡ್ಡ ಖರ್ಚು ಇರಲ್ಲ.
ಕುಟುಂಬ ಜೀವನ: ಅನುಮಾನ ಸಂಸಾರದಲ್ಲಿ ಸಮಸ್ಯೆ ತರಬಹುದು, ಏನೇ ಸಮಸ್ಯೆಯಯಿದ್ದರೂ ಮುಕ್ತವಾಗಿ ಮಾತನಾಡಿ ಬಗೆಹರಿಸಲು ಪ್ರಯತ್ನಿಸಿ.
ಧನು ರಾಶಿ
ಧನು ರಾಶಿ: ಈ ವಾರವನ್ನು ನೀವು ಉತ್ತಮವಾಗಿ ಬಳಸಿಕೊಳ್ಳಬೇಕು, ವೃತ್ತಿ ಬದುಕಿನಲ್ಲಿ ನಿಮಗೆ ಒಳ್ಳೆಯ ಅವಕಾಶ ದೊರೆಯಲಿದೆ, ಅದನ್ನು ಬಳಸಿಕೊಳ್ಳಲು ಪ್ರಯತ್ನಿಸಬೇಕು.
ಆರ್ಥಿಕ ಬದುಕು: ಈ ವಾರ ಅನುಕೂಲಕರವಾಗಿರಲಿದೆ. ಆಸ್ತಿ ವಿವಾದವಿದ್ದರೆ ಅದನ್ನು ಕೋರ್ಟ್‌ನಿಂದ ಹೊರಗಡೆ ಪರಿಹರಿಸುವುದು ಒಳ್ಳೆಯದು.
ಕುಟುಂಬ ಬದುಕು: ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ,ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಮಕರ ರಾಶಿ
ವೃತ್ತಿ ಬದುಕು: ಈ ವಾರ ನಿಮಗೆ ಅನುಕೂಲಕರವಾಗಿರಲಿದೆ, ವೃತ್ತಿ ಬದುಕಿನಲ್ಲಿ ಯಶಸ್ಸು ಸಿಗಲಿದೆ.
ಆರ್ಥಿಕ ಜೀವನ: ಆರ್ಥಿಕವಾಗಿ ಈ ಅವಧಿ ನಿಮಗೆ ಅನುಕೂಲಕರವಾಗಿರಲಿದೆ, ವ್ಯಾಪಾರಿಗಳಿಗೆ ದೊಡ್ಡ ಲಾಭ ಗಳಿಸಲು ಸಾಧ್ಯವಾಗುವುದು. ಹೂಡಿಕೆಗೆ ಈ ಸಮಯ ಅನುಕೂಲಕರವಾಗಿರಲಿದೆ.
ಸಂಬಂಧ: ಸಂಬಂಧದ ದೃಷ್ಟಿಯಿಂದ ಈ ಸಮಯ ನಿಮಗೆ ಅನುಕೂಲರವಾಗಿರಲಿದೆ. ದಾಂಪತ್ಯ ಜೀವನದಲ್ಲಿ ಸಾಮರಸ್ಯ ಇರಲಿದೆ.
ಕುಂಭ ರಾಶಿ
ವೃತ್ತಿ ಬದುಕು: ವೃತ್ತಿ ಬದುಕಿನ ದೃಷ್ಟಿಯಿಂದ ಈ ವಾರ ಅನುಕೂಲಕರವಾಗಿರಲಿದೆ. ಅಪೂರ್ಣವಾದ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು.
ಆರ್ಥಿಕ ಜೀವನ: ಹಣಕಾಸಿನ ದೃಷ್ಟಿಯಿಂದ ಉತ್ತಮವಾಗಿದೆ, ಆದರೆ ಹಣದ ಹೂಡಿಕೆ ಮಾಡದಂತೆ ಸಲಹೆ ನೀಡಲಾಗುವುದು.
ಆರೋಗ್ಯ: ಈ ವಾರ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿದೆ.
ಕುಟುಂಬ ಜೀವನ: ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಉತ್ತಮವಾಗಿರಲಿದೆ.
ಮೀನ ರಾಶಿ
ವೃತ್ತಿ ಬದುಕು:ಈ ವಾರ ನಿಮಗೆ ತುಂಬಾನೇ ಚೆನ್ನಾಗಿಲಿದೆ, ವರ್ಗಾವಣೆಗೆ ಪ್ರಯತ್ನಿಸುತ್ತಿರುವವರಿಗೆ ಈ ವಾರ ಬಯಸಿದಂತೆಯೇ ವರ್ಗಾವಣೆ ಪಡೆಯಲು ಸಾಧ್ಯವಾಗುವುದು.
ಆರ್ಥಿಕ ಬದುಕು: ಈ ವಾರ ಆರ್ಥಿಕವಾಗಿ ತುಂಬಾ ಪ್ರಯೋಜನಕಾರಿಯಾಗಿದೆ. ಏನಾದರೂ ವಸ್ತುಖರೀದಿಗೆ ಪ್ರಯತ್ನ ಮಾಡುತ್ತಿದ್ದರೆ ಈ ವಾರ ಸಾಧ್ಯವಾಗಲಿದೆ.
ಸಂಬಂಧದ ದೃಷ್ಟಿಯಿಂದ ಈ ವಾರ ನಿಮಗೆ ಅನುಕೂಲಕರವಾಗಿರಲಿದೆ, ನಿಮ್ಮ ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ
ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಅನುಕೂಲಕರವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications