Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ವಾರ ಭವಿಷ್ಯ: ಈ ವಾರ 5 ರಾಶಿಗಳಿಗೆ ಹೆಚ್ಚು ಅನುಕೂಲಕರ
ಜ್ಯೋತಿಷ್ಯಶಾಸ್ತ್ರ ಪ್ರಕಾರ ಈ ವಾರ ಈ 5 ರಾಶಿಗಳಿಗೆ ಅನುಕೂಲಕರ:
ಮೇಷ ರಾಶಿ
ಈ ವಾರ ಗ್ರಹತಿಗಳ ಸ್ಥಾನ ಮೇಷ ರಾಶಿಯವರಿಗೆ ಅನುಕೂಲಕರವಾಗಿದೆ. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರಲಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ಉತ್ತಮ ಫಲಿತಾಂಶ ನೀಡಲಿದೆ. ವ್ಯಾಪಾರಿಗಳಿಗೂ ಈ ಸಮಯ ಅನುಕೂಲಕರವಾಗಿರಲಿದೆ. ನೀವು ಊಹಿಸಿರುವುದಕ್ಕಿಂತಲೂ ಈ ವಾರ ಲಾಭದಾಯಕವಾಗಿದೆ.
ಹಣಕಾಸಿಗೆ ಮಾಡಿರುವ ಪ್ರಯತ್ನಗಳು ಉತ್ತಮ ಫಲ ನೀಡಲಿದೆ, ಹೊಸ ಹೂಡಿಕೆಗೂ ಈ ಸಮಯ ಚೆನ್ನಾಗಿರಲಿದೆ. ಕುಟುಂಬದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ.

ಆದರೆ ನೀವು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ವಾರ ಅದ್ಭುತವಾಗಿರಲಿದೆ. ನೀವು ತುಂಬಾ ಸಮಯದಿಂದ ಕಾಯುತ್ತಿರುವ ಬಡ್ತಿ ಸಿಗಬಹುದು. ನೀವು ಕೆಲಸ ಬದಲಾಯಿಸಲು ಪ್ರಯತ್ನಿಸುತ್ತಿದ್ದರೆ ಅಥವಾ ನಿರುದ್ಯೋಗಿಗಳು ಕೆಲಸದ ಹುಡುಕಾಟದಲ್ಲಿದ್ದರೆ ಈ ಅವಧಿ ಅನುಕೂಲಕರವಾಗಿರಲಿದೆ.
ಆರ್ಥಿಕವಾಗಿ ಈ ಅವಧಿ ನಿಮಗೆ ಟಾನುಕೂಲಕರವಾಗಿರಲಿದೆ. ಷೇರು ಮಾರುಕಟ್ಟೆಯಲ್ಲಿ ತೊಡಗಿಸಿಕೊಂಡಿದ್ದರೆ ಉತ್ತಮ ಲಾಭ ಗಳಿಸುತ್ತೀರಿ. ಹೊಸ ಹೂಡಿಕೆ ಬಗ್ಗೆ ಪ್ಲ್ಯಾನ್ ಮಾಡಬಹುದು.
ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ. ಒಟ್ಟಿನಲ್ಲಿ ಈ ವಾರ ನಿಮಗೆ ಸಕರಾತ್ಮಕವಾಗಿರಲಿದೆ.
ಸಿಂಹ ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿರಲಿದೆ. ವೃತ್ತಿ ಬದುಕು, ಆರ್ಥಿಕ ಜೀವನ,ಕುಟುಂಬ ಜೀವನ ಎಲ್ಲವೂ ಚೆನ್ನಾಗಿರಲಿದೆ. ಈ ವಾರ ಕೆಲಸ ಕಾರ್ಯಗಳು ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.
ವ್ಯಾಪಾರಿಗಳು ವ್ಯವಹಾರದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೀರಿ. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ದಿನ ನಿಮಗೆ ಅನುಕೂಲಕರವಾಗಿರಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಈ ಅವಧಿಯಲ್ಲಿ ಉತ್ತಮ ಆರ್ಥಿಕ ಪ್ರಯೋಜನ ಕೂಡ ಪಡೆಯುತ್ತೀರಿ, ವ್ಯಾಪಾರಿಗಳಿಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ವಾರ ತುಂಬಾ ಅನುಕೂಲಕರವಾಗಿರಲಿದೆ. ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ವ್ಯಾಪಾರಿಗಳು ಉತ್ತಮ ಪ್ರಗತಿ ಪಡೆಯುತ್ತೀರಿ, ಹಣದ ಹೂಡಿಕೆಗೂ ಈ ಅವಧಿ ಅನುಕೂಲಕರವಾಗಿರಲಿದೆ, ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆ ನಡೆಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ಮೀನ ರಾಶಿ
ಈ ವಾರ ನಿಮಗೆ ಧನಾತ್ಮಕವಾಗಿರಲಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ. ಕೆಲವೊಂದು ವಸ್ತುಗಳ ಖರೀದಿಗೆ ಹಣ ಖರ್ಚಾಗಬಹುದು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
