Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ವಾರ ಭವಿಷ್ಯ: ಈ ವಾರ (ಸೆಪ್ಟೆಂಬರ್ 16-22) 12 ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯ ಶಾಸ್ತ್ರ ಪ್ರಕಾರ ಈ ವಾರ ನಿಮಗೆ ಹೇಗಿರಲಿದೆ?
ಮೇಷ ರಾಶಿ
ಮೇಷ ರಾಶಿಯವರಿಗೆ ಈ ವಾರ ಉತ್ತಮವಾಗಿದೆ. ವೃತ್ತಿ ಬದುಕು ಹಾಗೂ ವಯಯಕ್ತಿಕ ಬದುಕು ಎರಡೂ ಚೆನ್ನಾಗಿರಲಿದೆ. ಕೆಲಸದ ಸಮಸ್ಯೆ ಬಗ್ಗೆ ಹೆಚ್ಚಿನ ಚಿಂತೆ ಬೇಡ ಅದು ಬಗೆಹರಿಯಲಿದೆ. ಆರ್ಥಿಕವಾಗಿ ಈ ವಾರ ನಿಮಗೆ ಉತ್ತಮವಾಗಿದೆ, ಕುಟುಂಬ ಜೀವನ ಕೂಡ ಚೆನ್ನಾಗಿರಲಿದೆ.

ವೃಷಭ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ, ಉದ್ಯೋಗವನ್ನು ಹುಡುಕುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ನಿಮ್ಮ ಹಾಗು ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಪ್ರೇಮಿಗಳಿಗೆ ವಿವಾಹಕ್ಕೆ ಇರುವ ಅಡೆತಡೆ ದೂರಾಗಲಿದೆ. ಆರ್ಥಿಕವಾಗಿ ಜಾಗ್ರತೆವಹಿಸಬೇಕು. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಮಿಥುನ ರಾಶಿ
ಈ ವಾರ ನೀವು ಜಾಗ್ರತೆವಹಿಸಬೇಕು. ಈ ಅವಧಿಯಲ್ಲಿ ಅಡೆತಡೆಗಳನ್ನು ಎದುರಿಸಬಹುದು. ಆರ್ಥಿಕವಾಗಿ ಈ ಅವಧಿ ನಿಮಗೆ ಉತ್ತಮವಾಗಿರಲಿದೆ. ಕೆಲಸದ ಒತ್ತಡದಿಂದ ನಿಮ್ಮ ಕುಟುಂಬಕ್ಕೆ ಹೆಚ್ಚು ಸಮಯ ಕೊಡಲು ಸಾಧ್ಯವಾಗುವುದಿಲ್ಲ, ನಿಮ್ಮ ಕುಟುಂಬದ ಕಡೆಯೂ ಗಮನಹರಿಸಿದರೆ ಒಳ್ಳೆಯದು.
ಕರ್ಕ ರಾಶಿ
ಈ ವಾರ ನಿಮಗೆ ಉತ್ತಮವಾಗಿದೆ.ವೃತ್ತಿ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ನೀವು ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶ ಸಿಗಲಿದೆ. ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ, ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಸಿಂಹ ರಾಶಿ
ಈ ವಾರ ನೀವು ಕೆಲಸದ ಕಡೆಗೆ ತುಂಬಾನೇ ಗಮನಹರಿಸಬೇಕು. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರಪಡಬೇಡಿ. ಕೆಲಸದ ಹೊರೆ ಹೆಚ್ಚಿರಲಿದೆ. ಆರ್ಥಿಕ ದೃಷ್ಟಿಯಿಂದಲೂ ಈ ಅವಧಿ ಉತ್ತಮವಲ್ಲ, ಈ ಸಮಯದಲ್ಲಿ ಖರ್ಚು ಹೆಚ್ಚಿರಲಿದೆ. ಆರೋಗ್ಯ ವಿಷಯದಲ್ಲಿಯೂ ನಿರ್ಲಕ್ಷ್ಯ ಮಾಡಬೇಡಿ.
ಕನ್ಯಾ ರಾಶಿ
ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಅವಾಹಿತರಿಗೆ ಮದುವೆ ಸಂಬಂಧ ಬರಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ಈ ಅವಧಿಯಲ್ಲಿ, ನೀವು ಹೊಸ ಆಸ್ತಿ, ಮನೆ, ವಾಹನ ಇತ್ಯಾದಿಗಳನ್ನು ಖರೀದಿಸಲು ಯೋಜಿಸಬಹುದು. ಆರೋಗ್ಯ ಉತ್ತಮವಾಗಿರಲಿದೆ.
ತುಲಾ ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಕೆಲಸದ ಹುಡುಕಾಟದಲ್ಲಿದ್ದರೆ ಈ ಅವಧಿಯಲ್ಲಿ ಕೆಲಸ ಸಿಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ಈ ವಾರ ನೀವು ಸ್ವಲ್ಪ ಜಾಗ್ರತೆವಹಿಸಿ. ವಾರದ ಆರಂಭವು ನಿಮಗೆ ತುಂಬಾ ಕಷ್ಟಕರವಾಗಿರುತ್ತದೆ. ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದಾಗಿ ನಿಮ್ಮ ಕೆಲಸ ಕಾರ್ಯಗಳಿಗೆ ಅಡೆತಡೆ ಇರಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು.
ಧನು ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ. ಕೆಲಸದ ಸ್ಥಳದಲ್ಲಿ ನೀವು ಧನಾತ್ಮಕ ಬದಲಾವಣೆಯನ್ನು ಕಾಣಬಹುದು. ವ್ಯಾಪಾರದಲ್ಲಿ ಪ್ರಗತಿ ಕಂಡು ಬರಲಿದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಬಗ್ಗೆ ಸಂಪೂರ್ಣ ಗಮನ ಹರಿಸಬೇಕು. ಆರೋಗ್ಯದಲ್ಲಿ ಏರಳಿತಗಳಿರಬಹುದು.
ಮಕರ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ. ನಿಮ್ಮ ಯಾವುದೇ ಬಾಕಿಯಿರುವ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುವುದು. ಈ ವಾರ ಕೆಲಸದಲ್ಲಿ ಒತ್ತಡ ಅಧಿಕವಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಈ ಅವಧಿಯಲ್ಲಿ, ನೀವು ಹಠಾತ್ ಆರ್ಥಿಕ ಲಾಭವನ್ನು ಸಹ ಪಡೆಯಬಹುದು.ಆದರೆ ಖರ್ಚು ಹೆಚ್ಚಿರಲಿದೆ, ಇದು ನಿಮ್ಮ ಚಿಂತೆಗೆ ಕಾರಣವಾಗಿರಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.
ಕುಂಭ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ವೆಚ್ಚಗಳು ಆದಾಯವನ್ನು ಮೀರಿಸಬಹುದು, ಅಲ್ಲದೆ ಸಾಲ ಮರುಪಾವತಿ ಬಗ್ಗೆ ಕೂಡ ನಿಮಗೆ ಒತ್ತಡ ಹೆಚ್ಚಿರಲಿದೆ. ಉದ್ಯೋಗಿಗಳು ತಮ್ಮ ಕೆಲಸದ ಕಡೆಗೆ ಗಮನಹರಿಸಬೇಕು. ನೀವು ಮಧುಮೇಹದಿಂದ ಬಳಲುತ್ತಿದ್ದರೆ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು.
ಮೀನ ರಾಶಿ
ಈ ವಾರ ನಿಮಗೆ ಶುಭವಾಗಿದೆ. ನೀವು ಉದ್ಯಮಿಯಾಗಿದ್ದರೆ ಮತ್ತು ವಿದೇಶದಲ್ಲಿ ನಿಮ್ಮ ವ್ಯವಹಾರವನ್ನು ವಿಸ್ತರಿಸಲು ಯೋಜಿಸುತ್ತಿದ್ದರೆ ನಿಮಗೆ ಉತ್ತಮ ಅವಕಾಶ ಸಿಗಬಹುದು. ಉದ್ಯೋಗಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ.ನೀವು ಉದ್ಯಮಿಯಾಗಿದ್ದರೆ ಮತ್ತು ವಿದೇಶದಲ್ಲಿ ನಿಮ್ಮ ವ್ಯವಹಾರವನ್ನು ವಿಸ್ತರಿಸಲು ಯೋಜಿಸುತ್ತಿದ್ದರೆ ನಿಮಗೆ ಉತ್ತಮ ಅವಕಾಶ ಸಿಗಬಹುದು. ಆರೋಗ್ಯ ಉತ್ತಮವಾಗಿರಲಿದೆ, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











