ರಾಶಿ ಭವಿಷ್ಯ ಪ್ರಕಾರ ಈ ವಾರ (ಸೆಪ್ಟೆಂಬರ್ 21-28) 12 ರಾಶಿಗಳಿಗೆ ಹೇಗಿರಲಿದೆ?

ವಾರ ಭವಿಷ್ಯ ಪ್ರಕಾರ ಸೆಪ್ಟೆಂಬರ್ 21-28ರ ಏಳೂ ದಿನಗಳು ನಿಮಗೆ ಹೇಗಿರಲಿದೆ?

ಮೇಷ ರಾಶಿ

ಮೇಷ ರಾಶಿಗೆ ಈ ದಿನ ಶುಭವಾಗಿದೆ, ಈ ವಾರ ಕೆಲಸದ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ. ಇನ್ನು ಹೂಡಿಕೆ ವಿಷಯದಲ್ಲಿ ಈ ಸಮಯ ಉತ್ತಮವಾಗಿದೆ. ವೈವಾಹಿಕ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟ ಸಂಖ್ಯೆ: 5
ಶುಭ ದಿನ: ಶುಕ್ರವಾರ

weekly horoscope

ವೃಷಭ ರಾಶಿ

ಈ ವಾರದ ಆರಂಭ ಅಷ್ಟೊಂದು ಅನುಕೂಲಕರವಲ್ಲ, ಕೆಲಸದಲ್ಲಿ ಕೆಲ ಸವಾಲುಗಳನ್ನು ಎದುರಿಸಬಹುದು. ನಿಮ್ಮ ಕೆಲಸದ ಸ್ಥಳದಲ್ಲಿ ನೀವು ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ಅಂತಹ ಪರಿಸ್ಥಿತಿಯಲ್ಲಿ ನೀವು ತುಂಬಾ ಸಂತೋಷವಾಗಿರುತ್ತೀರಿ. ಈ ಅವಧಿಯಲ್ಲಿ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿವೆ. ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ. ಆರೋಗ್ಯದ ದೃಷ್ಟಿಯಿಂದ ಈ ಏಳು ದಿನಗಳು ನಿಮಗೆ ಒಳ್ಳೆಯದು. ವೈಯಕ್ತಿಕ ಬದುಕು ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 18
ಶುಭ ದಿನ: ಗುರುವಾರ

ಮಿಥುನ ರಾಶಿ

ಈ ಅವಧಿಯಲ್ಲಿ ನೀವು ಧನಾತ್ಮಕ ಪ್ರಯೋಜನ ಪಡೆಯಬಹುದು. ನಿಮ್ಮ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಕೆಲವು ಉತ್ತಮ ಬದಲಾವಣೆಗಳನ್ನು ಕಾಣಬಹುದು. ವಾರದ ಕೊನೆಯಲ್ಲಿ ಮಾಡುವ ಪ್ರಯಾಣ ನಿಮಗೆ ಹೆಚ್ಚಿನ ಖುಷಿ ನೀಡಲಿದೆ. ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 11
ಶುಭ ದಿನ: ಸೋಮವಾರ


ಕರ್ಕ ರಾಶಿ

ಆರ್ಥಿಕವಾಗಿ ಈ ಅವಧಿ ನಿಮಗೆ ಉತ್ತಮವಾಗಿರಲಿದೆ. ನಿಮ್ಮ ಖರ್ಚುಗಳನ್ನು ನೀವು ಸರಿಯಾಗಿ ಟ್ರ್ಯಾಕ್ ಮಾಡಬೇಕಾಗುತ್ತದೆ.ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಆರೋಗ್ಯಕ್ಕಾಗ ಜೀವನಶೈಲಿ ಕಡೆಗೆ ಹೆಚ್ಚಿನ ಗಮನಹರಿಸಿ. ಕುಟುಂಬ ಜೀವನದಲ್ಲಿ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 40
ಶುಭ ದಿನ: ಗುರುವಾರ

ಸಿಂಹ ರಾಶಿ

ಈ ವಾರ ನಿಮಗೆ ಉತ್ತಮವಾಗಿರಲಿದೆ. ನೀವು ನಿರುದ್ಯೋಗಿಗಳಾಗಿದ್ದರೆ ಮತ್ತು ಉದ್ಯೋಗವನ್ನು ಹುಡುಕುತ್ತಿದ್ದರೆ ನೀವು ಸರಿಯಾದ ದಿಕ್ಕಿನಲ್ಲಿ ಪ್ರಯತ್ನಗಳನ್ನು ಮಾಡಬೇಕಾಗುತ್ತದೆ. ಹಣದ ವಿಷಯದಲ್ಲಿ ತುಂಬಾ ದುಬಾರಿಯಾಗಲಿದೆ. ಅನಗತ್ಯ ಖರ್ಚುಗಳು ಬರಬಹುದು. ನಿಮ್ಮ ಬಜೆಟ್ ಅನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಬೇಕಾಗುತ್ತದೆ, ಸಂಬಂಧದ ವಿಷಯದಲ್ಲಿ ಭಿನ್ನಾಭಿಪ್ರಾಯ ಉಂಟಾಗದಮತೆ ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 36
ಶುಭ ದಿನ: ಮಂಗಳವಾರ

ಕನ್ಯಾ ರಾಶಿ

ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ಕೆಲಸದ ಸ್ಥಳದಲ್ಲಿ ನೀವು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ನೀವು ಸಮತೋಲಿತವಾಗಿ ವರ್ತಿಸಬೇಕು. ಮನೆಯಲ್ಲಿ ವಾತಾವರಣವು ಅನುಕೂಲಕರವಾಗಿರುತ್ತದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ವೈವಾಹಿಕ ಬದುಕಿನಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 12
ಶುಭ ದಿನ: ಶನಿವಾರ

ತುಲಾ ರಾಶಿ

ವೃತ್ತಿ ಜೀವನದಲ್ಲಿ ಉತ್ತಮ ಬೆಳವಣಿಗೆ ಕಂಡು ಬರಲಿದೆ, ಈ ಅವಧಿಯಲ್ಲಿ ನೀವು ತುಂಬಾ ಧನಾತ್ಮವಾಗಿರುತ್ತೀರಿ. ಹಣಕಾಸಿನ ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು. ನೀವು ಹೊಸ ಆಸ್ತಿಯನ್ನು ಖರೀದಿಸಲು ಯೋಜಿಸುತ್ತಿದ್ದರೆ ನಿಮ್ಮ ಯೋಜನೆಗಳನ್ನು ಸ್ವಲ್ಪ ಸಮಯದವರೆಗೆ ಮುಂದೂಡಿದರೆಎ ಒಳ್ಲೆಯದು. ವೈವಾಹಿಕ ಜೀವನದಲ್ಲಿ ಸನ್ನಿವೇಶಗಳು ಆಹ್ಲಾದಕರವಾಗಿರುತ್ತದೆ. ಮಕ್ಕಳ ಸಾಧನೆ ಬಗ್ಗೆ ತುಂಬಾ ಹೆಮ್ಮೆಪಡುತ್ತೀರಿ. ಆರೋಗ್ಯವಾಗಿರಲು ಆಹಾರಕ್ರಮದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 9
ಶುಭ ದಿನ: ಬುಧವಾರ

ವೃಶ್ಚಿಕ ರಾಶಿ

ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶವನ್ನು ನೀವು ಪಡೆಯುತ್ತೀರಿ. ವಾರದ ಆರಂಭದಲ್ಲಿ ನೀವು ಕೆಲಸಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವಿರಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳು ದೂರಾಗಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ. ಒಟ್ಟಿನಲ್ಲಿ ಈ ಅವಧಿ ನಿಮಗೆ ಅನುಕೂಲಕರವಾಗಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 5
ಶುಭ ದಿನ: ಸೋಮವಾರ

ಧನು ರಾಶಿ

ವೃತ್ತಿಪರ ಜೀವನದಲ್ಲಿ ನಿಮ್ಮ ಕಾರ್ಯಕ್ಷಮತೆ ತುಂಬಾ ಚೆನ್ನಾಗಿರಲಿದೆ. ಕೆಲಸದ ಹೊರೆ ಅಧಿಕವಿರಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹಾಗಂತ ತುಂಬಾ ಖರ್ಚು ಮಾಡಲು ಹೋಗಬೇಡಿ, ಸಾಲವನ್ನು ನೀಡಿದ್ದರೆ ಅದನ್ನು ತೀರಿಸಲು ಪ್ರಯತ್ನಿಸಿ. ವೈವಾಹಿಕ ಜೀವನದಲ್ಲಿ ಕೆಲವು ಸಮಸ್ಯೆಗಳಿರುತ್ತವೆ. ನಿಮ್ಮ ನಡುವೆ ನಂಬಿಕೆಯ ಕೊರತೆ ಇರಬಹುದು. ಈ ಅವಧಿಯಲ್ಲಿ, ನಿಮ್ಮ ಸಂಗಾತಿಯ ನಡವಳಿಕೆಯು ನಿಮ್ಮ ಕಡೆಗೆ ಉತ್ತಮವಾಗಿರುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನೀವು ನಿಮ್ಮನ್ನು ನಿಯಂತ್ರಿಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ಯಾವುದೇ ರೀತಿಯಲ್ಲಿ ಅಜಾಗರೂಕರಾಗಬೇಡಿ. ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವತ್ತ ಗಮನ ಹರಿಸಬೇಕು.

ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 28
ಶುಭ ದಿನ: ಭಾನುವಾರ

ಮಕರ ರಾಶಿ

ಈ ವಾರ ನಿಮಗೆ ಸ್ವಲ್ಪ ಕಷ್ಟಕರವಾಗಿರುತ್ತದೆ. ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಮತೋಲನವನ್ನು ಸಾಧಿಸುವಲ್ಲಿ ನೀವು ಬಹಳಷ್ಟು ತೊಂದರೆಗಳನ್ನು ಎದುರಿಸಬಹುದು. ಜವಾಬ್ದಾರಿಗಳ ಹೊರೆ ಹೆಚ್ಚಾಗುವ ಸಾಧ್ಯತೆಯಿದೆ. ಕೆಲಸಕ್ಕೆ ಸಂಬಂಧಿಸಿದಂತೆ ನೀವು ಪ್ರಯಾಣ ಮಾಡಬಹುದು. ಇನ್ನು ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.ಹಣದ ವಿಷಯದಲ್ಲಿ ಈ ವಾರ ನಿಮಗೆ ಸರಾಸರಿಯಾಗಲಿದೆ. ಹೆಚ್ಚು ಖರ್ಚು ಮಾಡಬೇಡಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 14
ಶುಭ ದಿನ: ಸೋಮವಾರ

ಕುಂಭ ರಾಶಿ

ನೀವು ನಿಮ್ಮ ಜವಾಬ್ದಾರಿ ಮರೆಯಲು ಹೋಗಬೇಡಿ,ವೃತ್ತಿ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ. ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವವರಿಗೆ ಈ ಸಮಯ ಒಳ್ಳೆಯದಲ್ಲ. ಇಲ್ಲದಿದ್ದರೆ ನಷ್ಟ ಉಂಟಾಗಬಹುದು. ಈ ಸಮಯದಲ್ಲಿ ನಿಮ್ಮ ಯಾವುದೇ ಸಮಸ್ಯೆಗಳನ್ನು ಪರಿಹರಿಸುವಲ್ಲಿ ನಿಮ್ಮ ಸ್ನೇಹಿತರ ಸಹಕಾರ ದೊರೆಯಲಿದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರಲು ಪ್ರತಿದಿನ ಯೋಗ ಮತ್ತು ಧ್ಯಾನ ಮಾಡಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 2
ಶುಭ ದಿನ: ಭಾನುವಾರ

ಮೀನ ರಾಶಿ

ಈ ವಾರ ಉತ್ತಮವಾಗಿರಲಿದೆ, ವೃತ್ತಿಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ಈ ಅವಧಿಯಲ್ಲಿ ನೀವು ಒಳ್ಳೆಯ ಸುದ್ದಿ ಪಡೆಯಬಹುದು.ಉದ್ಯೋಗವನ್ನು ಬದಲಾಯಿಸಲು ಯೋಜಿಸುತ್ತಿದ್ದರೆ ದೊಡ್ಡ ಕಂಪನಿಯಿಂದ ಕರೆಬರಬಹುದು. ಈ ಹಿಂದೆ ಮಾಡಿದ ಹೂಡಿಕೆಯಿಂದ ವರ್ತಕರಿಗೆ ದುಪ್ಪಟ್ಟು ಲಾಭ ದೊರೆಯಲಿದೆ.ಈ ಅವಧಿಯಲ್ಲಿ ನಿಮ್ಮ ವ್ಯವಹಾರದಲ್ಲಿ ನೀವು ಬೆಳವಣಿಗೆಯನ್ನು ಕಾಣುತ್ತೀರಿ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಈ ಏಳೂ ದಿನಗಲು ನಿಮಗೆ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 18
ಶುಭ ದಿನ: ಶುಕ್ರವಾರ

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Weekly Horoscope From September 21 To September 28 In Kannada

Here is weekly horoscope prediction from September 21 To September 28, read on..
Story first published: Saturday, September 21, 2024, 14:17 [IST]
X
Desktop Bottom Promotion