Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ಈ ವಾರ (ಜನವರಿ 19ರವರೆಗೆ)ಈ 5 ರಾಶಿಯವರು ಸ್ವಲ್ಪ ಜಾಗ್ರತೆ
ಈ ವಾರದ ರಾಶಿಫಲ ಪ್ರಕಾರ ಕೆಲ ರಾಶಿಯವರು ಸ್ವಲ್ಪ ಜಾಗ್ರತೆವಹಿಸಬೇಕು, ಕೆಲವರು ವೃತ್ತಿ ಬದುಕಿನಲ್ಲಿ, ಇನ್ನು ಕೆಲವರು ಕುಟುಂಬ ವಿಷಯದಲ್ಲಿ ಅಥವಾ ಆರ್ಥಿಕ ವಿಷಯದಲ್ಲಿ ಜಾಗ್ರತೆವಹಿಸಬೇಕು, ಯಾವ ರಾಶಿಗೆ ಹೇಗಿರಲಿದೆ ಎಂದು ನೋಡೋಣ:

ವೃಷಭ ರಾಶಿ
ಈ ವಾರ ನೀವು ಸ್ವಲ್ಪ ಜಾಗ್ರತೆವಹಿಸಿ, ನಿಮ್ಮ ಕೆಲಸದಲ್ಲಿ ಅಡೆತಡೆ ಉಂಟಾಗಲಿದೆ, ನೀವು ಕೆಲಸದ ಕಡೆಗೆ ಹೆಚ್ಚು ಗಮನಹರಿಸಿ, ನಿಮಗೆವಹಿಸಿರುವ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ, ಆರ್ರತಿಕವಾಗಿ ಕೂಡ ಈ ಅವಧಿಯಲ್ಲಿ ಎಚ್ಚರಿಕೆವಹಿಸಬೇಕು, ಖರ್ಚು ಹೆಚ್ಚಿರಬಹುದು. ಕುಟುಂಬ ಜೀವನದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ಮಿಥಿನ ರಾಶಿಯವರಿಗೆ ಈ ಅವಧಿಯಲ್ಲಿ ಏರಳಿತವಿರಲಿದೆ, ಕೆಲಸದ ಜಾಗದಲ್ಲಿ ಕೆಲವರು ಪಿತೂರಿ ಮಾಡಬಹುದು, ಈ ಬಗ್ಗೆ ತುಂಬಾನೇ ಜಾಗ್ರತೆವಹಿಸಿ. ನಿಮ್ಮ ಕೆಲಸವನ್ನು ನೀವೇ ಮಾಡಿ ಮುಗಿಸಲು ಪ್ರಯತ್ನಿಸಬೇಕು, ಬೇರೆಯವರನ್ನು ನಂಬಿ ಕೂರಬೇಡಿ. ವ್ಯಾಪಾರಸ್ಥರಿಗೆ ಈ ಅವಧಿ ತುಂಬಾನೇ ಲಾಭದಾಯಕವಾಗಿರಲಿದೆ. ಹಣಕಾಸಿನಲ್ಲಿ ಸ್ವಲ್ಪ ಸುಧಾರಣೆ ಕಂಡು ಬರಲಿದೆ. ಕುಟುಂಬ ಬದುಕು ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ವಾರ ಮಾನಸಿಕ ಒತ್ತಡ ಹೆಚ್ಚಿರಬಹುದು, ಆದರೆ ಅತಿಯಾದ ಮಾನಸಿಕ ಒತ್ತಡ ದೈಹಿಕ ಸಮಸ್ಯೆಯನ್ನು ಉಂಟು ಮಾಡಬಹುದು, ಹಾಗಾಗಿ ಮಾನಸಿಕ ಒತ್ತಡ ಕಡಿಮೆ ಮಾಡುವತ್ತ ಗಮನಹರಿಸಿ, ಖರ್ಚು ಹೆಚ್ಚಿರಲಿದೆ, ಈ ಬಗ್ಗೆ ಜಾಗ್ರತೆವಹಿಸಿ, ಈ ಅವಧಿಯಲ್ಲಿ ಅಪಾಯಕಾರಿ ಹೂಡಿಕೆ ತಪ್ಪಿಸುವಂತೆ ಸಲಹೆ ನೀಡಲಾಗುವುದು. ಮನೆಯ ಕಡೆ ಕೂಡ ಗಮನಹರಿಸುವುದು ಒಳ್ಳೆಯದು.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಈ ವಾರ ಮಿಶ್ರಫಲಿತಾಂಶ. ನೀವು ನಿಮ್ಮ ಕೆಲಸ ಕಾರ್ಯದಲ್ಲಿ ಕೆಲ ಅಡೆತಡೆ ಉಂಟಾಗಬಹುದು. ವ್ಯಾಪಾರಸ್ಥರಿಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಆದರೆ ಹಣದ ವ್ಯವಹಾರ ಮಾಡುವಾಗ ಜಾಗ್ರತೆವಹಿಸಬೇಕು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು, ಅದನ್ನು ಸಮಧಾನದಿಂದ ಬಗೆಹರಿಸಲು ಪ್ರಯತ್ನಿಸಿ.
ಧನು ರಾಶಿ
ಈ ವಾರ ಸ್ವಲ್ಪ ಗೊಂದಲ ಉಂಟಾಗಬಹುದು, ಆದರೆ ನೀವು ಕೆಲಸದ ಕಡೆಗೆ ಹೆಚ್ಚು ಗಮನಹರಿಸಿ. ನೀವು ಕೋಪ ನಿಯಂತ್ರಿಸಿದರೆ ಒಳ್ಳೆಯದು. ಇಲ್ಲದಿದ್ದರೆ ಸಮಸ್ಯೆ ಹೆಚ್ಚಾಗುವುದು. ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡಬೇಡಿ. ಇನ್ನು ವೈವಾಹಿಕ ಬದುಕಿನ ಕಡೆಗೆ ಕೂಡ ಗಮನಹರಿಸಬೇಕು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications