Latest Updates
-
ಮುಂಬೈನಲ್ಲಿ 10% ನೀರು ಕಡಿತ: ನೀರಿನ ಅಭಾವ ಎದುರಿಸಲು ಮತ್ತು ಉಳಿತಾಯ ಮಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಹಬ್ಬದ ಸಿಹಿ ಖರೀದಿಸುವ ಮುನ್ನ ಎಚ್ಚರ! FSSAI ದಾಳಿ: ಕಳಪೆ ಖೋವಾ, ಪನ್ನೀರ್ ಪತ್ತೆ ಹೇಗೆ? -
ಭಾರತ vs ಪಾಕಿಸ್ತಾನ ಏಷ್ಯನ್ ಗೇಮ್ಸ್ ಫೈನಲ್: ಹೈ-ವೋಲ್ಟೇಜ್ ಕದನಕ್ಕೆ ಸಜ್ಜಾಗಿ, ಲೈವ್ ವೀಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಮುಂಬೈನಲ್ಲಿ ಕಲುಷಿತ ಗಾಳಿ: ವಾಕಿಂಗ್ ಹೋಗುವ ಮುನ್ನ ಈ ಎಚ್ಚರಿಕೆ ವಹಿಸಿ, ಇಲ್ಲದಿದ್ದರೆ ಆರೋಗ್ಯಕ್ಕೆ ಕುತ್ತು! -
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!
ವಾರ ಭವಿಷ್ಯ: ಏಳು ದಿನಗಳು (ಜನವರಿ26-ಜನವರಿ31) ಯಾವ ರಾಶಿಗೆ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಜನವರಿ ಮಾಸದ ಕೊನೆಯ ಯಾವ ರಾಶಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ವಾರ ನಿಮಗೆ ತುಂಬಾನೇ ಚೆನ್ನಾಗಿರಲಿದೆ, ಈ ವಾರ ನಿಮಗೆ ಅದೃಷ್ಟದ ವಾರವಾಗಿದೆ, ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಏನಾದರೂ ಹಣದ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ಮದುವೆಗೆ ಸಂಂಬಂಧ ಹುಡುಕುತ್ತಿರುವವರೆಗೆ ಈ ದಿನ ಉತ್ತಮವಾಗಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ.

ವೃಷಭ ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿರಲಿದೆ, ನ್ಯಾಯಾಲಯದಲ್ಲಿ ಏನಾದರು ಪ್ರಕರಣವಿದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಬರಲಿದೆ. ವ್ಯಾಪಾರಸ್ಥರಿಗೆ ಈ ವಾರ ಅನುಕೂಲಕರವಾಗಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ವಾರ ಮಿಶ್ರಫಲ, ಉದ್ಯೋಗದಲ್ಲಿ ಏರಳಿತವಿರಲಿದೆ, ನಿಮ್ಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ. ಹಣಕಾಸಿನ ವಿಷಯದಲ್ಲಿ ಈ ವಾರ ನಿಮಗೆ ಸರಾಸರಿಯಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು, ಆದರೆ ಎಲ್ಲವನ್ನೂ ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ.
ಕರ್ಕ ರಾಶಿ
ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ.ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶಗಳು ದೊರೆಯಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ನಿಮ್ಮ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ವಾರ ತುಂಬಾನೇ ಅನುಕೂಲಕರವಾಗಿದೆ. ಈ ವಾರ ನಿಮ್ಮ ಪ್ರಯತ್ನಗಳಿಗೆ ತುಂಬಾ ಉತ್ತಮ ಪ್ರಯೋಜನ ಪಡೆಯಲು ಸಾಧ್ಯವಾಗಲಿದೆ, ಆರ್ಥಿಕವಾಗಿ ನೋಡುವುದಾದರೆ ಈ ವಾರ ನಿಮಗೆ ಉತ್ತಮವಾಗಿದೆ, ಇನ್ನು ಹೂಡಿಕೆ ದೃಷ್ಟಿಯಿಂದಲೂ ವಾರ ನಿಮಗೆ ತುಂಬಾನೇ ಉತ್ತಮವಾಗಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ವಾರ ತುಂಬಾ ಚೆನ್ನಾಗಿರಲಿದೆ, ಆರ್ಥಿಕ ದೃಷ್ಟಿಯಿಂದಲೂ ಈ ವಾರ ನಿಮಗೆ ಅನುಕೂಲಕರವಾಗಿದೆ, ವ್ಯಾಪಾರಸ್ಥರು ಉತ್ತಮ ಲಾಭ ಪಡೆಯುತ್ತೀರಿ. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಮನಸ್ತಾಪ ಬರಬಹುದು, ಎಲ್ಲಾ ಸಮಸ್ಯೆ ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ. ಈ ದಿನ ಬಜೆಟ್ ಮೀರಿ ಖರ್ಚು ಮಾಡದಂತೆ ಸಲಹೆ ನೀಡಲಾಗುವುದು. ಆಸ್ತಿಗೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಈ ವಾರ ಮಿಶ್ರಫಲಿತಾಂಶ. ಉದ್ಯೋಗಿಗಳು ಕೆಲಸದಲ್ಲಿ ಕೆಲವು ಅಡೆತಡೆ ಎದುರಿಸಬಹುದು. ಈ ವಾರ ಆರೋಗ್ಯದ ಕಡೆಗೆ ಗಮನಹರಿಸಿ. ಈ ವಾರ ಖರ್ಚು ಹೆಚ್ಚಿರಲಿದೆ, ನಿಮ್ಮ ಸಂಗಾತಿಯ ಭಾವನೆಗಳನ್ನು ಗೌರವಿಸಿ.
ಧನು ರಾಶಿ
ಈ ವಾರ ಕೆಲಸದ ಕಡೆಗೆ ಹೆಚ್ಚು ಗಮನಹರಿಸಬೇಕು, ಈ ವಾರ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಹಣದ ವಹಿವಾಟು ಮಾಡುವಾಗ ಜಾಗ್ರತೆವಹಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಮತ್ತು ಸಂಗಾತಿಯ ನಡುವಿನ ಬಾಂಧಬ್ಯ ಚೆನ್ನಾಗಿರಲಿದೆ.
ಮಕರ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ, ಈ ವಾರ ಕೆಲಸ ಕಾರ್ಯಗಳು ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ವೃತ್ತಿ ಸಂಬಂಧಿಸಿದ ಪ್ರಯಾಣ ಲಾಭ ತರಲಿದೆ. ವಿದ್ಯಾರ್ಥಿಗಳಿಗೂ ಈ ಅವಧಿ ತುಂಬಾ ಚೆನ್ನಾಗಿರಲಿದೆ, ವೈವಾಹಿಕ ಬದುಕಿನಲ್ಲಿ ಪ್ರೀತಿ-ಸಾಮರಸ್ಯ ಇರಲಿದೆ.
ಕುಂಭ ರಾಶಿ
ಕುಭ ರಾಶಿಯವರು ಈ ವಾರ ವೃತ್ತಿ ಬದುಕಿನಲ್ಲಿ ಬದಲಾವಣೆಯನ್ನು ಕಾಣಬಹುದು, ವೃತ್ತಿಗೆ ಸಂಬಂಧಿಸಿದ ನಿರ್ಧಾರಗಳನ್ನು ತಾಳ್ಮೆಯಿಂದ ತೆಗೆದುಕೊಳ್ಳಿ, ಕೆಲಸದಲ್ಲಿನ ಅಡೆತಡೆ ಉಂಟಾದರೆ ನೀವು ಕೋಪದ ಬದಲಿಗೆ ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ. ವ್ಯಾಪಾರಿಗಳು ತುಂಬಾ ಜಾಗ್ರತೆವಹಿಸಬೇಕು.
ಮೀನ ರಾಶಿ
ಮೀನ ರಾಶಿಯವರಿಗೆ ಈ ವಾರ ತುಂಬಾ ಚೆನ್ನಾಗಿರಲಿದೆ, ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ. ಅಪೂರ್ಣವಾಗಿರುವ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುವುದು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ದಾಂಪತ್ಯ ಬದುಕು ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
