Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಾರ ಆರೋಗ್ಯದ ರಾಶಿಫಲ: (ಜುಲೈ 01ರಿಂದ ಜುಲೈ 7) 6 ರಾಶಿಗಳ ಆರೋಗ್ಯ ಭವಿಷ್ಯ
ಗ್ರಹಗತಿಗಳ ಸ್ಥಾನವು ಈ ವಾರ ಜನರ ಆರೋಗ್ಯದ ಮೇಲೆ ಯಾವ ರೀತಿ ಪ್ರಭಾವ ಬೀರಲಿದೆ? ಯಾವ ರಾಶಿಗಳಿಗೆ ಯಾವ ರೀತಿಯ ಫಲ ನೀಡಲಿದೆ ಎಂದು ನೋಡೋಣ ಬನ್ನಿ:
ತುಲಾ ರಾಶಿ
ನೀವು ಕೆಲವು ದಿನಗಳ ಕಾಲ ನಿದ್ರಾಹೀನತೆಯಿಂದ ಬಳಲಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ತುಂಬಾ ದಣಿದಿರುವಿರಿ. ದೂರ ಪ್ರಯಾಣದ ಸಂಭವವಿದೆ. ನಿಮ್ಮ ಆರೋಗ್ಯದೊಂದಿಗೆ ಯಾವುದೇ ರೀತಿಯಲ್ಲಿ ನಿರ್ಲಕ್ಷ್ಯ ಮಾಡಬೇಡಿ. ನೀವಂದುಕೊಂಡ ಕೆಲಸ ಆಗುವವರೆಗೂ ಅದರ ಕಡೆ ಗಮನವಿಡಿ. ವಾರದ ಆರಂಭದಲ್ಲಿ ಶೀತ, ಕೆಮ್ಮು ಸೇರಿ ಸಣ್ಣ ಪುಟ್ಟ ಸಮಸ್ಯೆಗೆ ಒಳಗಾಗಬಹುದು.

ವೃಶ್ಚಿಕ ರಾಶಿ
ಸಣ್ಣ ಆರೋಗ್ಯ ಸಮಸ್ಯೆಯಿದ್ದರೂ, ಅದನ್ನು ನಿರ್ಲಕ್ಷಿಸುವುದು ನಿಮಗೆ ದುಬಾರಿಯಾಗಬಹುದು. ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದುಕೊಂಡರೆ ಉತ್ತಮ. ಕಾಲಿನ ಸಮಸ್ಯೆ, ಹೃದಯ ಸಂಬಂಧಿ ಸಮಸ್ಯೆ ಇದ್ದವರು ಹೆಚ್ಚು ಜಾಗೃತೆ ವಹಿಸಿ. ಇಲ್ಲವೆ ಹತ್ತಾರು ಸಮಸ್ಯೆಗಳು ನಿಮ್ಮ ಕಾಡಬಹುದು. ಪ್ರಾಣಿಗಳಿಂದ ಆದಷ್ಟು ದೂರವಿರಿ. ಮನೆಯಲ್ಲಿ ಹಿರಿಯರಿದ್ದರೆ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ.
ಧನು ರಾಶಿ
ಆರೋಗ್ಯದ ದೃಷ್ಟಿಯಿಂದ ನಿಮಗೆ ಒಂದಿಷ್ಟು ವಿರಾಮ ಸಿಗಲಿದೆ. ಯಾವುದೇ ಸಮಯದಲ್ಲಿ ಆತ್ಮ ವಿಶ್ವಾಸ ಕಳೆದುಕೊಳ್ಳಬೇಡಿ. ವಾರಾಂತ್ಯದಲ್ಲಿ ನಿಮ್ಮ ಕೆಲಸ ಪೂರ್ಣವಾಗಲಿದೆ. ಆದರೂ ನಿಮ್ಮ ಆರೋಗ್ಯ ನಿರ್ಲಕ್ಷಿಸಬೇಡಿ .ನೀವು ಉದ್ಯಮಿಯಾಗಿದ್ದರೆ ನೀವು ವ್ಯವಹಾರದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಉದ್ಯೋಗಿಗಳು ತಮ್ಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಿದರೆ ಒಳ್ಳೆಯದು. ಏಕೆಂದರೆ ಒತ್ತಡದ ಕೆಲಸದಿಂದಾಗಿ ನಿಮ್ಮ ಆರೋಗ್ಯ ಹದಗೆಡಬಹುದು.
ಮಕರ ರಾಶಿ
ಆರೋಗ್ಯದ ಬಗ್ಗೆ ಹೆಚ್ಚು ಚಿಂತಿಸುವುದನ್ನು ತಪ್ಪಿಸಿ. ಈ ವಾರ ಮಾಡುವ ಪ್ರಯಾಣ ವಿಶೇಷವಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೀವು ಶ್ರಮಿಸುತ್ತಿದ್ದರೆ, ಬಲಗಾಲು ನೋವು ಹಾಗೂ ಮಧುಮೇಹಿಗಳಿದ್ದರೆ ಹೆಚ್ಚು ಜಾಗೃತೆ ವಹಿಸಿ.
ಕುಂಭ ರಾಶಿ
ಹವಾಮಾನದಲ್ಲಿನ ಬದಲಾವಣೆಗಳಿಂದ ನೀವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬಹುದು. ನೀವು ಜ್ವರ, ಕೆಮ್ಮು, ನೆಗಡಿ ಮುಂತಾದ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ನೀವು ಹೊಸ ವ್ಯವಹಾರ ಪ್ರಸ್ತಾಪವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಕಾಲೋಚಿತ ಅನಾರೋಗ್ಯ ಸಮಸ್ಯೆಗಳತ್ತ ಗಮನ ಕೊಡಿ. ಹೆಚ್ಚು ಆಯಾಸವಾಗುವುದು, ಶೀತ, ತಲೆ ನೋವು ನಿರ್ಲಕ್ಷಿಸಬೇಡಿ.
ಮೀನ ರಾಶಿ
ಆರೋಗ್ಯದ ಬಗ್ಗೆ ಅಜಾಗರೂಕತೆಯು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಉದ್ಯೋಗಿಗಳ ಕಾರ್ಯಕ್ಷಮತೆಯಲ್ಲಿ ದೊಡ್ಡ ಸುಧಾರಣೆ ಕಂಡುಬರುತ್ತದೆ. ಅನಾರೋಗ್ಯದ ಸಮಸ್ಯೆಯಿಂದಾಗಿ ಉದ್ಯೋಗದಲ್ಲಿರುವ ಅಡೆತಡೆಗಳು ನಿವಾರಣೆಯಾಗುತ್ತವೆ. ಅನಾರೋಗ್ಯ ಹಿನ್ನೆಲೆ ಖರ್ಚು ಹೆಚ್ಚಾಗಬಹುದು. ಮೂಳೆ ಸಂಬಂಧಿಸಿದ ಸಮಸ್ಯೆ ಹಾಗೂ ಕಣ್ಣು, ಕಿವಿಯಂತಹ ಪಂಚೇಂದ್ರಿಯಕ್ಕೆ ಸಂಬಂಧಿಸಿದ ಸಮಸ್ಯೆಗೆ ಒಳಗಾಗುವ ಸಂಭವವಿದೆ.
ಉಳಿದ 6 ರಾಶಿಗಳ ಈ ವಾರದ ಆರೋಗ್ಯ ಭವಿಷ್ಯ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications