Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ವಾರ ಆರೋಗ್ಯ ಭವಿಷ್ಯ: (ಜುಲೈ 01ರಿಂದ ಜುಲೈ 7) 6 ರಾಶಿಗಳ ಜನರ ಆರೋಗ್ಯ ಹೇಗಿರಲಿದೆ!
ಗ್ರಹಗತಿಗಳ ಸ್ಥಾನವು ಈ ವಾರ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಯಾವ ರಾಶಿಗಳಿಗೆ ಯಾವ ರೀತಿಯ ಫಲ ನೀಡಲಿದೆ ಎಂದು ನೋಡೋಣ ಬನ್ನಿ:
ಮೇಷ ರಾಶಿ
ಹೆಚ್ಚಿದ ಕೆಲಸದ ಹೊರೆಯಿಂದಾಗಿ ನೀವು ಹೆಚ್ಚಿನ ಸಮಯವನ್ನು ಕೆಲಸದಲ್ಲಿ ತೊಡಗಬಹುದು. ಹೀಗಾಗಿ ನಿಮ್ಮ ಆರೋಗ್ಯದ ಮೇಲೆ ಗಮನ ಹರಿಸಲು ಸಾಧ್ಯವಾಗದೇ ಇರಬಹುದು. ಅಲ್ಲದೆ ನಿಮ್ಮ ಆರೋಗವ್ಯದಲ್ಲಿ ಏರುಪೇರಾಗುವ ಸಂಭವವಿದೆ. ಹಲವು ಸಮಯದಲ್ಲಿ ನೀವು ಅನಾರೋಗ್ಯಕ್ಕೆ ಸಂಬಂಧಿಸಿರುವ ಕಿರಿಕಿರಿ ಅನುಭವಿಸುವ ಸಾಧ್ಯತೆ ಇದೆ. ಪೂರ್ಣ ಮಾಡದೆ ಬಾಕಿ ಉಳಿಸಿಕೊಂಡ ಕೆಲಸವನ್ನು ಪೂರ್ಣ ಮಾಡಲು ಒಳ್ಳೆಯ ಕಾಲವಾಗಿದೆ.

ವೃಷಭ ರಾಶಿ
ಈ ವಾರ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ನೀವು ತುಂಬಾ ಧನಾತ್ಮಕ ಭಾವನೆ ಹೊಂದುವಿರಿ ಮತ್ತು ನಿಮ್ಮ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ನಿಮ್ಮ ಆರೋಗ್ಯ ತಪಾಸಣೆಯನ್ನು ನೀವು ದೀರ್ಘಕಾಲದವರೆಗೆ ಮಾಡದಿದ್ದರೆ, ಈ ಸಮಯದಲ್ಲಿ ಖಂಡಿತವಾಗಿಯೂ ವೈದ್ಯರನ್ನು ಭೇಟಿ ಮಾಡಿ. ಈ ವಾರ ನಿಮ್ಮ ಹಣಕಾಸಿನ ಸಮಸ್ಯೆಗೆ ಅಲ್ಪ ನಿವಾರಣೆ ಕಾಣಬಹುದು. ಮನೆ ಹೊರಗಿನ ಕೆಲಸ ಮಾಡುವವರು ಎಚ್ಚರಿಕೆಯಿಂದಿರಿ, ಗಾಯ ಮಾಡಿಕೊಳ್ಳುವುದು, ಅಪಾಯ ಬರುವ ಸಾಧ್ಯತೆ ಇದೆ.
ಮಿಥುನ ರಾಶಿ
ಈ ವಾರ ನಿಮಗೆ ಆರೋಗ್ಯದ ವಿಷಯದಲ್ಲಿ ಮಿಶ್ರ ಫಲಿತಾಂಶ ಇರಲಿದೆ. ವಾರದ ಬಹುಪಾಲು ದಿನಗಳು ನೀವು ಪ್ರಯಾಣದಲ್ಲಿ ಕಳೆಯಬೇಕಾಗಬಹುದು. ಪ್ರತಿ ದಿನ ದೇವರ ಧ್ಯಾನ ಅಥವಾ ಒಂದಿಷ್ಟು ದಿನ ದೇವಸ್ಥಾನಕ್ಕೆ ಭೇಟಿ ನೀಡಿ. ಆರ್ಥಿಕ ಸ್ಥಿತಿ ಗತಿಗಳು ಸುಧಾರಣೆಯಾಗಲಿದೆ. ಮನೆಯಲ್ಲಿ ಉತ್ತಮ ವಾತಾವರಣ ಇರಲಿದೆ. ವೈವಾಹಿಕ ಜೀವನದಲ್ಲಿ ಸಂಗಾತಿಯ ಭಾವನೆ ಕಡೆಗೆ ಗಮನಹರಿಸಿ. ಈ ದಿನ ನಿಮ್ಮ ಸಂಗಾತಿಯ ಭಾವನೆಗಳನ್ನು ಗೌರವಿಸಿ. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ.
ಕರ್ಕ ರಾಶಿ
ನಿಮ್ಮ ಮೇಲೆ ಕೇಂದ್ರೀಕರಿಸಲು ನಿಮಗೆ ಸಾಕಷ್ಟು ಸಮಯ ಸಿಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಆರೋಗ್ಯವು ಇನ್ನಷ್ಟು ಉತ್ತಮವಾಗಿರುತ್ತದೆ. ನಿಮ್ಮ ಆಹಾರ ಮತ್ತು ಕುಡಿಯುವ ಅಭ್ಯಾಸದಲ್ಲಿ ನೀವು ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಬಹುದು. ಉದ್ಯೋಗ ಬದಲಿಸುವ ನಿಮ್ಮ ಆಲೋಚನೆಗೆ ಒಂದಿಷ್ಟು ಪೂರಕ ವಾತಾವರಣ ಸೃಷ್ಡಿಯಾಗಲಿದೆ. ಗೃಹಿಣಿಯರಿಗೆ ಒಳ್ಳೆಯ ವಾರವಾಗಿರಲಿದೆ. ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಿ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ.
ಸಿಂಹ ರಾಶಿ
ಜವಾಬ್ದಾರಿಗಳ ಹೊರೆ ಅಧಿಕವಾಗಿರುತ್ತದೆ, ಅಂತಹ ಪರಿಸ್ಥಿತಿಯಲ್ಲಿ ನೀವು ತುಂಬಾ ದಣಿದ ಮತ್ತು ಭಾರವನ್ನು ಅನುಭವಿಸುವಿರಿ. ನಿಮ್ಮ ಮಾನಸಿಕ ಆರೋಗ್ಯವೂ ಹದಗೆಡಬಹುದು. ನೀವು ಸಣ್ಣ ವಿಷಯಗಳಿಗೆ ಕೋಪಗೊಳ್ಳುತ್ತೀರಿ ಮತ್ತು ಸಾಕಷ್ಟು ಕಿರಿಕಿರಿಯನ್ನು ಅನುಭವಿಸಬಹುದು. ಆದರೆ ಹಣಕಾಸಿನ ವಿಚಾರವಾಗಿ ನೀವು ಮತ್ತಷ್ಟು ಬಲಗೊಳ್ಳುತ್ತೀರಿ. ಉದ್ಯೋಗಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಕೆಲಸದಲ್ಲಿ ಜವಾಬ್ದಾರಿ ಹೆಚ್ಚಿರಲಿದೆ. ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ಸಮಯ ತುಂಬಾ ಒಳ್ಳೆಯದಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ಕನ್ಯಾರಾಶಿ
ಈ ಸಮಯದಲ್ಲಿ ಹೆಚ್ಚು ಹೊರಗೆ ಓಡಾಡುವುದನ್ನು ಕಡಿಮೆ ಮಾಡಿದರೆ ಉತ್ತಮ. ನರಗಳು, ಮೂಳೆ ಮತ್ತು ಸ್ನಾಯುಗಳಿಗೆ ಸಂಬಂಧಿಸಿದ ಕೆಲವು ಸಮಸ್ಯೆಗಳಿಗೆ ತುತ್ತಾಗುವ ಸಂಭವ ಹೆಚ್ಚು. ತರಾತುರಿಯಲ್ಲಿ ಮತ್ತು ಗಾಬರಿಯಿಂದ ಯಾವುದೇ ಕೆಲಸವನ್ನು ಮಾಡಬೇಡಿ. ಯಾವುದೇ ನಿರ್ಧಾರವನ್ನು ಅವಸರದಲ್ಲಿ ಮಾಡಬೇಡಿ. ತಾಳ್ಮೆ ಕಳೆದುಕೊಳ್ಳಬೇಡಿ. ಸಂಬಂಧಗಳ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರಲಿದೆ. ಕಚೇರಿಯಲ್ಲಿ ಹೆಚ್ಚಿನ ಒತ್ತಡ ಇರಲಿದೆ. ವ್ಯಾಪರಿಗಳಿಗೆ ಈ ವಾರ ಲಾಭದಾಯಕವಾಗಿದೆ. ಉದ್ಯೋಗಿಗಳ ಕಾರ್ಯಕ್ಷಮತೆಯಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ.
ಉಳಿದ 6 ರಾಶಿಗಳ ಈ ವಾರದ ಆರೋಗ್ಯ ಭವಿಷ್ಯ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











