Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜೂನ್ 22-29ರವರೆಗಿನ ವಾರ ಭವಿಷ್ಯ: ಈ 8 ರಾಶಿಯವರು ಸ್ವಲ್ಪ ಜಾಗ್ರತೆ
ಈ ವಾರದ ಗ್ರಹಗತಿಗಳ ಸ್ಥಾನದ ಪ್ರಕಾರ ಈ 8 ರಾಶಿಯವರು ಜಾಗ್ರತೆವಹಿಸಿ:
ವೃಷಭ ರಾಶಿ
ಈ ವಾರ ವೃಷಭ ರಾಶಿಯವರಿಗೆ ಮಿಶ್ರಫಲ, ನೀವು ವೈವಾಹಿಕ ಬದುಕಿನ ಕಡೆಗೆ ಹೆಚ್ಚಿನ ಗಮನಹರಿಸಬೇಕು, ನಿಮ್ಮ ನಡುವಿನ ಎಲ್ಲಾ ಭಿನ್ನಾಭಿಪ್ರಾಯ ಬಗೆಹರಿಸಲು ಪ್ರಯತ್ನಿಸಿ, ಮೂರನೇಯವರು ನಿಮ್ಮ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಬಿಡದಿರಿ.

ಮನೆಯ ಪರಿಸ್ಥಿತಿಯನ್ನು ತಾಳ್ಮೆ ಮತ್ತು ಬುದ್ಧಿವಂತಿಕೆಯಿಂದ ಬಗೆಹರಿಸಲು ಪ್ರಯತ್ನಿಸಿ. ಇನ್ನು ಕೆಲಸದ ಜಾಗದಲ್ಲಿ ಮೇಲಾಧಿಕಾರಿಗಳ ಸಲಹೆ ನಿರ್ಲಕ್ಷ್ಯ ಮಾಡಲು ಹೋಗದಿರಿ. ಕೆಲಸದ ಜಾಗದಲ್ಲಿ ತಪ್ಪು ಉಂಟಾಗದಂತೆ ಜಾಗ್ರತೆವಹಿಸಿ.
ಆರ್ಥಿಕವಾಗಿ ಈ ವಾರ ಚೆನ್ನಾಗಿರಲಿದೆ. ಆರೋಗ್ಯ ತುಂಬಾ ಚೆನ್ನಾಗಿರಲಿದೆ, ಆದರೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಯಾದರೂ ನಿರ್ಲಕ್ಷ್ಯ ಮಾಡುವುದು ಬೇಡ ಎಂದು ಸಲಹೆ ನೀಡಲಾಗುವುದು.
ಈ ವಾರ ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 11
ಶುಭ ದಿನ: ಸೋಮವಾರ
ಮಿಥುನ ರಾಶಿ
ಈ ವಾರ ನೀವು ಜಾಗ್ರತೆವಹಿಸಬೇಕು, ಅನಗ್ಯತ ಚಿಂತೆಯಿಂದ ದೂರವಿರಿ, ನೀವು ಧನಾತ್ಮಕವಾಗಿ ಯೋಚಿಸಿ ಎಲ್ಲವ ಒಳ್ಳೆಯದಾಗುವುದು. ಆಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವು ನ್ಯಾಯಾಲಯದಲ್ಲಿ ನಡೆಯುತ್ತಿದ್ದರೆ, ಅದು ಇತ್ಯರ್ಥವಾಗುವ ಬಲವಾದ ಸಾಧ್ಯತೆಯಿದೆ. ಅದರ ತೀರ್ಪು ನಿಮ್ಮ ಪರವಾಗಿ ಬರಬಹುದು. ನಿರುದ್ಯೋಗಿಗಳು ಉದ್ಯೋಗ ಪಡೆಯಬಹುದು,
ಈ ಸಮಯದಲ್ಲಿ ವೃತ್ತಿ ಬದುಕಿಗೆ ಸಂಬಂಧಿಸಿದ ನಿರ್ಧಾರ ಅವಸರದಿಂದ ತೆಗೆದುಕೊಳ್ಳಬೇಡಿ. ನೀವು ಅನುಭವಿ ವ್ಯಕ್ತಿಯಿಂದ ಸಲಹೆ ಪಡೆದ ಬಳಿಕವಷ್ಟೇ ನೀವು ತೀರ್ಮಾನ ತೆಗೆದುಕೊಳ್ಳಬೇಕು, ವೈವಾಹಿಕ ಜೀವನ ಚೆನ್ನಾಗಿರಲಿದೆ, ಪ್ರೇಮಿಗಳಿಗೆ ಈ ವಾರ ಅನುಕೂಲಕರವಾಗಿದೆ. ಮಾನಸಿಕ ಆರೋಗ್ಯಕ್ಕಾಗಿ ಧ್ಯಾನ ಮಾಡಿ.
ಈ ವಾರ ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 6
ಶುಭ ದಿನ: ಬುಧವಾರ
ಕರ್ಕ ರಾಶಿ
ಈ ವಾರ ತುಂಬಾನೇ ಜಾಗ್ರತೆವಹಿಸಿ, ನೀವು ಜಾಗರೂಕರಾಗಿರಬೇಕು, ಕೆಲವರು ನಿಮ್ಮಿಂದ ಲಾಭ ಪಡೆಯಲು ಪ್ರಯತ್ನಿಸಬಹುದು. ನೀವು ಉದ್ಯಮಿಯಾಗಿದ್ದರೆ ನಿಮ್ಮ ಯೋಜನೆಗಳನ್ನು ಇತರರ ಜೊತೆಗೆ ಹಂಚಿಕೊಳ್ಳಲು ಹೋಗಬೇಡಿ. ಈ ವಾರ ಕೆಲಸದಲ್ಲಿ ಅಧಿಕ ಒತ್ತಡ ಇರಲಿದೆ, ಆದರೆ ನೀವು ಸರಿಯಾಗಿ ಪ್ಲ್ಯಾನ್ ಮಾಡಿ ಕೆಲಸ ಮಾಡಿದರೆ ಯಾವುದೇ ಸಮಸ್ಯೆ ಇರಲ್ಲ. ಈ ಸಮಯದಲ್ಲಿ ಕುಟುಂಬ ಜೀವನ ಚೆನ್ನಾಗಿರಲಿದೆ, ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರುವುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಶುಭ ದಿನ: ಮಂಗಳವಾರ
ಕನ್ಯಾ ರಾಶಿ
ಈ ಅವಧಿಯಲ್ಲಿ ದುಡುಕಿನಿಂದ ಕೆಲ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬಹುದು, ಆದ್ದರಿಂದ ಈ ಬಗ್ಗೆ ಜಾಗ್ರತೆವಹಿಸಿ. ಅನಗ್ಯತ ವಿಷಯದ ಕಡೆಗೆ ಗಮನಹರಿಸದೆ, ನಿಮ್ಮ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಿದರೆ ಒಳ್ಳೆಯದು. ನಿಮ್ಮ ವ್ಯವಹಾರದ ನಿರ್ಧಾರಗಳನ್ನು ನೀವು ಪೂರ್ಣ ವಿಶ್ವಾಸದಿಂದ ತೆಗೆದುಕೊಳ್ಳಬೇಕು. ಇನ್ನು ಏನಾದರೂ ಹೂಡಿಕೆ ಮಾಡಬೇಕೆಂದಿದ್ದರೆ ಈ ವಾರ ಅನುಕೂಲಕರವಾಗಿದೆ. ವಿದ್ಯಾರ್ಥಿಕಗಳು ತಮ್ಮ ಕಲಿಕೆ ಕಡೆಗೆ ಹೆಚ್ಚಿನ ಗಮನರಿಸಿದರೆ ಒಳ್ಳೆಯದು. ಆರೋಗ್ಯದ ಬಗ್ಗೆ ಹೇಳುವುದಾದರೆ ಆಯಾಸ ಕಾಡಲಿದೆ.
ಈ ವಾರ ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 10
ಶುಭ ದಿನ: ಸೋಮವಾರ
ತುಲಾ ರಾಶಿ
ನೀವು ಯಾರನ್ನೂ ಕಣ್ಮುಚ್ಚಿ ನಂಬಲು ಹೋಗದಿರಿ. ವಾರದ ಆರಂಭದಲ್ಲಿ ನೀವು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು ಆದರೆ ಇದರ ನಂತರ ಎಲ್ಲವೂ ಸರಿಯಾಗಲಿದೆ. ವ್ಯಾಪಾರಸ್ಥರು ತಮ್ಮ ಕೆಲಸದ ಕಡೆಗೆ ಹೆಚ್ಚು ಗಮನಹರಿಸಬೇಕು. ನಿಮ್ಮ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಗಾಢವಾಗಬಹುದು. ಕೆಲಸದ ಒತ್ತಡ ಹೆಚ್ಚಿರಲಿದೆ, ಹೀಗಾಗಿ ಕುಟುಂಬದ ಕಡೆಗೆ ಗಮನಹರಿಸಲು ಕಷ್ಟವಾಗುವುದು.
ಈ ವಾರ ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 10
ಶುಭ ದಿನ: ಮಂಗಳವಾರ
ಮಕರ ರಾಶಿ
ವ್ಯಾಪಾರಿಗಳಿಗೆ ಈ ವಾರ ಅಷ್ಟೊಂದು ಅನುಕೂಲಕರವಲ್ಲ, ಉದ್ಯೋಗಿಗಳಿಗೆ ಅನುಕೂಲಕರವಾಗಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ವೈವಾಹಿಕ ಬದುಕಿನಲ್ಲಿ ಎಲ್ಲಾ ಭಿನ್ನಾಭಿಪ್ರಾಯ ದೂರಾಗಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಅಲರ್ಜಿಯಂಥ ಸಮಸ್ಯೆ ಕಾಡಬಹುದು.
ಈ ವಾರ ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 17
ಶುಭ ದಿನ: ಶನಿವಾರ
ಕುಂಭ ರಾಶಿ
ಈ ವಾರ ನೀವು ನಿಮ್ಮ ಕೋಪ ನಿಯಂತ್ರಿಸಿದರೆ ಒಳ್ಳೆಯದು, ಇಲ್ಲದಿದ್ದರೆ ಸಂಬಂಧಗಳು ಹಾಳಾಗುವುದು. ನೀವು ಉದ್ಯಮಿಯಾಗಿದ್ದರೆ ನೀವು ವ್ಯವಹಾರದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಉದ್ಯೋಗಿಗಳು ತಮ್ಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಿದರೆ ಒಳ್ಳೆಯದು. ಆರೋಗ್ಯದ ದೃಷ್ಟಿಯಿಂದ ಈ ಸಮಯವು ನಿಮಗೆ ಸರಾಸರಿಯಾಗಿರುತ್ತದೆ.
ಈ ವಾರ ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 32
ಶುಭ ದಿನ: ಗುರುವಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications