Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಾರದ ರಾಶಿಫಲ (ಜೂನ್ 30ರಿಂದ ಜುಲೈ 6) ಪ್ರಕಾರ 12 ರಾಶಿಗಳ ಭವಿಷ್ಯ
ಗ್ರಹಗತಿಗಳ ಸ್ಥಾನದ ಪ್ರಕಾರ ಈ ವಾರದ ಏಳು ದಿನಗಳು ನಿಮಗೆ ಹೇಗಿರಲಿದೆ?:
ಮೇಷ ರಾಶಿ
ಈ ವಾರ ನಿಮಗೆ ಸರ್ಕಾರಿ ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಿರಬಹುದು, ಇನ್ನು ನೀವು ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡುವ ತಪ್ಪನ್ನು ಮಾಡಬೇಡಿ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಲಿದೆ. ಈ ವಾರ ನೀವು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು.

ವೃಷಭ ರಾಶಿ
ಉದ್ಯೋಗಿಗಳಿಗೆ ಈ ವಾರ ಬಹಳ ಶುಭಕರವಾಗಿರುತ್ತದೆ. ಕುಟುಂಬ ಜೀವನದಲ್ಲಿ ಪ್ರೀತಿ ಹಾಗೂ ಸಾಮರಸ್ಯ ಇರಲಿದೆ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಯಾವುದೇ ದುಬಾರಿ ವಸ್ತುವನ್ನು ಖರೀದಿಸಲು ಬಯಸುತ್ತಿದ್ದರೆ ಈ ಸಮಯದಲ್ಲಿ ನಿಮ್ಮಾಸೆ ನೆರವೇರಲಿದೆ, ಆರೋಗ್ಯ ಕೂಡ ಚೆನ್ನಾಗಿರಲಿದೆ.
ಮಿಥುನ ರಾಶಿ
ವಾರದ ಆರಂಭ ಅನೇಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ, ಆದರೆ ನಂತರದಲ್ಲಿ ಎಲ್ಲವೂ ಸರಿ ಹೋಗುವುದು, ಕುಟುಂಬ ಜೀವನ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ.
ಕರ್ಕ ರಾಶಿ
ವ್ಯಾಪಾರಿಗಳು ಜಾಗ್ರತೆವಹಿಸಬೇಕು, ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಪಾಲುದಾರರೊಂದಿಗೆ ಹೊಂದಾಣಿಕೆಯನ್ನು ಕಾಪಾಡಿಕೊಳ್ಳಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಈ ಏಳು ದಿನಗಳು ನಿಮ್ಮ ಸಂಗಾತಿಯೊಂದಿಗೆ ಬಹಳ ವಿಶೇಷವಾಗಿರುತ್ತವೆ. ಅರ್ಥಿಕವಾಗಿ ಚೆನ್ನಾಗಿರಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಸಿಂಹ ರಾಶಿ
ಕೆಲಸದಲ್ಲಿ ಈ ವಾರ ನಿಮಗೆ ಏರಿಳಿತಗಳಿಂದ ಕೂಡಿರಲಿದೆ. ನಿರ್ಲಕ್ಷ್ಯದಿಂದ ನೀವು ದೊಡ್ಡ ನಷ್ಟವನ್ನು ಅನುಭವಿಸಬಹುದು. ಪಾಲುದಾರಿಕೆಯ ವ್ಯಾಪಾರದಲ್ಲಿ ತೊಡಗಿಕೊಂಡಿದ್ದರೆ ಈ ವಾರ ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ದಂಪತಿಗಳು ತಮ್ಮ ಸಂಬಂಧದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಆರೋಗ್ಯದ ಕಡೆಯೂ ಗಮನಹರಿಸಿ.
ಕನ್ಯಾ ರಾಶಿ
ಕೆಲಸದ ಸ್ಥಳದಲ್ಲಿ ಕಠಿಣ ಪರಿಶ್ರಮದ ಹೊರತಾಗಿಯೂ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಸಿಗಲಿದೆ. ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ನೀವು ಯಾವುದೇ ರೀತಿಯ ಬದಲಾವಣೆಯನ್ನು ತರಲು ಯೋಜಿಸುತ್ತಿದ್ದರೆ ನಂತರ ನೀವು ಅದನ್ನು ಮರುಚಿಂತನೆ ಮಾಡಬೇಕಾಗುತ್ತದೆ.ವಿದ್ಯಾರ್ಥಿಗಳಿಗೆ ಈ ವಾರ ಅನುಕೂಲಕರವಾಗಿರುತ್ತದೆ. ವೃತ್ತಿ ಸಂಬಂಧಿತ ಯಾವುದೇ ಸಮಸ್ಯೆಯನ್ನು ಪರಿಹರಿಸುವಲ್ಲಿ ನಿಮ್ಮ ಹಿರಿಯರು ಮತ್ತು ಶಿಕ್ಷಕರ ಬೆಂಬಲವನ್ನು ನೀವು ಪಡೆಯುತ್ತೀರಿ. ಹಣದ ವಿಷಯದಲ್ಲಿ ಈ ವಾರ ನಿಮಗೆ ಸಾಮಾನ್ಯವಾಗಿರುತ್ತದೆ. ಹೆಚ್ಚು ಖರ್ಚು ಮಾಡಲು ಹೋಗಬೇಡಿ.
ತುಲಾ ರಾಶಿ'
ಈ ವಾರ ನಿಮಗೆ ನಿಮಗೆ ಉತ್ತಮವಾಗಿದೆ, ನೀವು ಯಶಸ್ಸನ್ನು ಪಡೆಯಬಹುದು. ಅವಧಿಯಲ್ಲಿ, ನಿಮ್ಮ ಯಾವುದೇ ಕೆಲಸವನ್ನು ನಾಳೆಗೆ ಮುಂದೂಡುವುದನ್ನು ತಪ್ಪಿಸಿ. ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ, ಅನಗ್ಯತ ವಿಷಯಗಳಿಂದ ದೂರವಿರಿ. ನೀವು ಆರೋಗ್ಯದ ಕಡೆಗೆ ಗಮನಹರಿಸಬೇಕು.
ವೃಶ್ಚಿಕ ರಾಶಿ
ಈ ವಾರ ಉದ್ಯಮಿಗಳಿಗೆ ಕಾರ್ಯನಿರತವಾಗಿದೆ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಅಧಿಕವಿರಲಿದೆ. ಹೀಗಾಗಿ ಕುಟುಂಬದ ಕಡೆಗೆ ಹೆಚ್ಚಿನ ಗಮನಹರಿಸಲು ಕಷ್ಟವಾಗಬಹುದು. ಆರೋಗ್ಯ ಸಂಬಂಧಿ ಸಮಸ್ಯೆಗಳಿದ್ದರೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರಲಿದೆ. ಉದ್ಯಮಿಗಳು ಹೊಸ ಕೆಲಸವನ್ನು ಪ್ರಾರಂಭಿಸಲು ಬಯಸಿದರೆ ಈ ಸಮಯವು ಅನುಕೂಲಕರವಾಗಿರುತ್ತದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ.
ಮಕರ ರಾಶಿ
ಈ ರಾಶಿಯ ಉದ್ಯಮಿಗಳಿಗೆ ಈ ವಾರವು ತುಂಬಾ ಚೆನ್ನಾಗಿರಲಿದೆ. ಉದ್ಯೋಗಿಗಳಿಗೆ ಇದು ಬದಲಾವಣೆಯ ಸಮಯ. ಬೇರೆ ಕಡೆ ಕೆಲಸ ಹುಡುಕುತ್ತಿದ್ದರೆ ಈ ಅವಧಿ ಅನುಕೂಲಕವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಕುಂಭ ರಾಶಿ
ಈ ವಾರ ನಿಮಗೆ ಕೆಲಸದಲ್ಲಿ ತುಂಬಾ ಬ್ಯುಸಿಯಾಗಿರುತ್ತೀರಿ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಂಬಂಧಿಸಿದ ಯಾವುದೇ ಪ್ರಯತ್ನವು ಯಶಸ್ವಿಯಾಗಬಹುದು, ಆದರೆ ನೀವು ಧನಾತ್ಮಕವಾಗಿರಬೇಕು. ನಿಮ್ಮ ಆರ್ಥಿಕ ಸ್ಥಿತಿಯು ಕುಸಿಯಬಹುದು. ಸರಿಯಾದ ಹಣಕಾಸು ಯೋಜನೆಯ ಪ್ರಕಾರ ನೀವು ಮುಂದುವರಿಯಬೇಕು, ಇಲ್ಲದಿದ್ದರೆ ಭವಿಷ್ಯದಲ್ಲಿ ನಿಮ್ಮ ಸಮಸ್ಯೆಗಳು ಹೆಚ್ಚಾಗಬಹುದು. ಆರೋಗ್ಯದ ಕಡೆಗೆ ಗಮನಹರಿಸಬೇಕು.
ಮೀನ ರಾಶಿ
ಹೆಚ್ಚು ಕೆಲಸ ಇರಲಿದೆ, ನೀವು ಅನಗತ್ಯ ಜಗಳಗಳನ್ನು ಹೊಂದಿರಬಹುದು. ಉದ್ಯಮಿ ದೊಡ್ಡ ಹಣಕಾಸಿನ ವಹಿವಾಟು ಮಾಡಲು ಹೋದರೆ, ಕೆಲವು ಕಾರಣಗಳಿಂದ ಕೆಲಸವು ಸ್ಥಗಿತಗೊಳ್ಳಬಹುದು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಪಾಲುದಾರರಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ಈ ಅವಧಿಯಲ್ಲಿ ನೀವು ಸಕಾರಾತ್ಮಕವಾಗಿರಿ ಮತ್ತು ಒಳ್ಳೆಯದನ್ನು ಯೋಚಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications




