ವಾರ ಭವಿಷ್ಯ (ಫೆಬ್ರವರಿ9-15): ಈ ವಾರ ಅದೃಷ್ಟದ 6 ರಾಶಿಗಳಿಗೆ ಅದೃಷ್ಟದ, 6 ರಾಶಿಯವರು ಜಾಗ್ರತೆ

ವಾರ ಭವಿಷ್ಯ ಪ್ರಕಾರ ಈ ವಾರ ಯಾವ ರಾಶಿಗಳಿಗೆ ಶುಭ ಯಾರು ಜಾಗ್ರತೆವಹಿಸಬೇಕು ಎಂದು ನೋಡೋಣ:

ಮೇಷ ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿದೆ, ಈ ವಾರ ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ, ವಾರದ ಆರಂಭದಲ್ಲಿಎದುರಾದ ಸವಾಲುಗಳು ವಾರದ ಅಂತ್ಯದ ಒಳಗಾಗಿ ಸರಿಯಾಗಲಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ, ಇನ್ನು ಆರ್ಥಿಕ ದೃಷ್ಟಿಯಿಂದ ನಿಮಗೆ ಉತ್ತಮವಾಗಿದೆ, ನಿಮಗೆ ಬರಬೇಕಾಗಿರುವ ಹಣ ಕೈ ಸೇರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.

Weekly Horoscope

ವೃಷಭ ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿದೆ, ಆದರೆ ಕೆಲಸದಲ್ಲಿ ಸೋಮಾರಿತನ ತೋರಿಸಬೇಡಿ, ಇದು ನಿಮ್ಮ ಪ್ರಗತಿಗೆ ಅಡ್ಡಿಯಾಗಲಿದೆ. ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ವಾರ ಮಿಶ್ರಫಲ, ಉದ್ಯಮಿಗಳು ರಿಸ್ಕಿ ಹೂಡಿಕೆ ಮಾಡದಂತೆ ಸಲಹೆ ನೀಡಲಾಗುವುದು. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.

ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ, ಉದ್ಯೋಗಿಗಳಿಗೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ, ಆರ್ಥಿಕವಾಗಿ ಈ ಅವಧಿ ನಿಮಗೆ ಅನುಕೂಲಕರವಾಗಿದೆ. ಆದಾಯದ ದೃಷ್ಟಿಯಿಂದ ಈ ಸಮಯ ನಿಮಗೆ ಅನುಕೂಲಕರವಾಗಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ.

ಕರ್ಕ ರಾಶಿ
ಕರ್ಕ ರಾಶಿಯವರು ಏರಳಿತಗಳಿಂದ ಕೂಡಿರಲಿದೆ, ನೀವು ಅಪೇಕ್ಷಿತ ಲಾಭ ಪಡೆಯಲು ಸಾಧ್ಯವಾಗುವುದು. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ, ಈ ವಾರ ಖರ್ಚುಗಳು ಹೆಚ್ಚು ಬರಬಹುದು, ಈ ವಾರ ಸಂಬಂಧದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ.

ಸಿಂಹ ರಾಶಿ
ಈ ವಾರ ಅನುಕೂಲಕರವಾಗಿರಲಿದೆ, ಈ ವಾರ ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ಅನುಕೂಲಕರವಾಗಿದೆ. ಉದ್ಯೋಗವನ್ನು ಹುಡುಕುತ್ತಿದ್ದರೆ ಈ ಅವಧಿ ನಿಮಗೆ ಉತ್ತಮವಾಗಿರಲಿದೆ. ಈ ವಾರ ಬಾಕಿ ಇರುವ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.

ಕನ್ಯಾ ರಾಶಿ
ಈ ವಾರ ಮಿಶ್ರಫಲಿತಾಂಶ, ವೃತ್ತಿ ಬದುಕು ಉತ್ತಮವಾಗಿರಲಿದೆ, ಕೆಲಸದ ಜಾಗದಲ್ಲಿ ಜಾಗ್ರತೆವಹಿಸಬೇಕು. ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ವಾರದ ಆರಂಭ ನಿಮಗೆ ಅನುಕೂಲಕರವಾಗಿರಲಿದೆ, ವಾರದ ಮಧ್ಯದಲ್ಲಿ ಖರ್ಚು ವೆಚ್ಚ ಕಡೆಗೆ ಗಮನಹರಿಸಿದರೆ ಒಳ್ಳೆಯದು. ಕುಟುಂಬ ಜೀವನ ಚೆನ್ನಾಗಿರಲಿದೆ.

ತುಲಾ ರಾಶಿ
ತುಲಾ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ, ನಿಮ್ಮ ಕೆಲಸ ಕಾರ್ಯಗಳು ಸಮಯಕ್ಕೆ ಪೂರ್ಣವಾಗಲಿದೆ, ಕೆಲವೊಂದು ಅನಿರೀಕ್ಷಿತ ಲಾಭ ಪಡೆಯಲು ಸಾಧ್ಯವಾಗಲಿದೆ. ಪೂರ್ವಜರ ಆಸ್ತಿಯಿಂದ ಲಾಭ ದೊರೆಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.

ವೃಶ್ಚಿಕ ರಾಶಿ
ಈ ವಾರ ನೀವು ಸ್ವಲ್ಪ ಜಾಗ್ರತೆವಹಿಸಿ, ಕೆಲಸ ಕಾರ್ಯಗಳಿಗೆ ಹೆಚ್ಚು ಓಡಾಡಬೇಕಾಗುತ್ತದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ಇನ್ನು ಯಾವುದೆ ಪ್ರಮುಖ ನಿರ್ಧಾರ ತೆಗೆದುಕೊಲ್ಳುವ ಮುನ್ನ ಹಿರಿಯರ ಸಲಹೆ ಪಡೆಯಿರಿ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಸರಿಯಾಗಲಿದೆ.

ಧನು ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿರಲಿದೆ, ತುಂಬಾ ಸಮಯದಿಂದ ಬಾಕಿಯುಳಿದಿರುವ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ. ವಿದ್ಯಾರ್ಥಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ವ್ಯಾಪಾರಿಗಳು ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ಈ ವಾರ ಕುಟುಂಬ ಜೀವನದ ದೃಷ್ಟಿಯಿಂದಲೂ ಉತ್ತಮವಾಗಿದೆ. ಧಾರ್ಮಿಕ ಕಾರ್ಯಗಳಲ್ಲಿ ಪ್ರಗತಿ ಸಿಗಲಿದೆ.

ಮಕರ ರಾಶಿ
ಈ ವಾರ ನಿಮಗೆ ಮಿಶ್ರಫಲ, ಕೆಲಸದ ಜಾಗದಲ್ಲಿ ತಪ್ಪುಗಳಾಗದಂತೆ ಜಾಗ್ರತೆವಹಿಸಿ, ಆರ್ಥಿಕವಾಗಿ ಈ ಅವಧಿ ತುಂಬಾ ಉತ್ತಮವಾಗಿರಲಿದೆ. ವಾರದ ಆರಂಭ ತುಂಬಾನೇ ಅನುಕೂಲಕರವಾಗಿದೆ. ಹಣದ ಬಗ್ಗೆ ನೋಡುವುದಾದರೆ ಖರ್ಚು ಹೆಚ್ಚು ಬರಬಹುದು. ಪ್ರೇಮಿಗಳಿಗೆ ಅನುಕೂಲಕರವಾಗಿದೆ.

ಕುಂಭ ರಾಶಿ
ಈ ವಾರ ನೀವು ಪ್ರತಿಕೂಲ ಸಂದರ್ಭದಲ್ಲಿ ತಾಳ್ಮೆಯಿಂದ ವರ್ತಿಸಿದರೆ ಒಳ್ಳೆಯದು. ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಈ ವಾರ ಮಿಶ್ರಫಲ. ಕೋಪ ನಿಯಂತ್ರಿಸಿ, ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ಗಮನಹರಿಸಿ. ವೈವಾಹಿಕ ಸಂಬಂಧ ಸುಧಾರಿಸಲು ನೀವು ಏನೇ ಸಮಸ್ಯೆವಿದ್ದರೆ ಮುಕ್ತ ಮಾತುಕತೆ ಮೂಲಕ ಬಗೆಹರಿಸಲು ಪ್ರಯತ್ನಿಸಿ.

ಮೀನ ರಾಶಿ
ಈ ವಾರ ಪ್ರಮುಖ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ಕಠಿಣ ಪರಿಶ್ರಮಕ್ಕೆ ನೀವು ನಿರೀಕ್ಷಿಸಿದ ಫಲ ಸಿಗಲಿಲ್ಲ ಎಂದು ಬೇಸರವಾಗಬಹುದು, ಆದರೆ ಚಿಂತೆ ಬೇಡ, ನಿಮ್ಮ ನಿರೀಕ್ಷೆಗೆ ತಕ್ಕ ಪ್ರತಿಫಲ ಪಡೆಯುತ್ತೀರಿ. ಹಣದ ವಿಷಯದಲ್ಲಿ ನಿಯಂತ್ರಣ ಒಳ್ಳೆಯದು. ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Weekly Horoscope: Lucky And Unlucky Zodiac Signs In Kannada

Weekly Horoscope: Here is lucky and unlucky zodiac signs of this week,
Story first published: Sunday, February 9, 2025, 17:17 [IST]
X
Desktop Bottom Promotion