Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ವಾರ ಭವಿಷ್ಯ (ಮಾರ್ಚ್ 16-25) : ಈ ರಾಶಿಯವರಿಗೆ ಈ ವಾರ ಉತ್ತಮವಾಗಿರಲಿದೆ
ಈ ವಾರದ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಈ ರಾಶಿಯವರಿಗೆ ತುಂಬಾನೇ ಅದೃಷ್ಟಕರವಾಗಿದೆ ನೋಡಿ:
ಈ ವಾರ ಸೂರ್ಯ, ಮಂಗಳ ರಾಶಿ ಬದಲಾವಣೆ ಮಾಡಿದೆ, ಶನಿ ಗ್ರಹವೂ ಕುಂಭ ರಾಶಿಯಲ್ಲಿ ಉದಯವಾಗಿದೆ, ಬುಧ ಗ್ರಹ ಕೂಡ ಮೀನ ರಾಶಿಯಲ್ಲಿದೆ ಹೀಗೆ ಗ್ರಹಗಳ ಪ್ರಭಾವ ಪ್ರತಿಯೊಂದು ರಾಶಿಯ ಮೆಲೂ ಪ್ರಭಾವ ಬೀರುವುದು. ಈ ವಾರ ಯಾರಿಗೆ ಅದೃಷ್ಟಕರ ಎಂದು ನೋಡೋಣ ಬನ್ನಿ:
ಮಿಥುನ ರಾಶಿ
ಈ ಅವಧಿ ಮಿಥುನ ರಾಶಿಯವರಿಗೆ ತುಂಬಾ ಒಳ್ಳೆಯದು, ಉದ್ಯೋಗಿಗಳು ಕೆಲಸದಲ್ಲಿ ಯಶಸ್ಸು ಕಾಣುತ್ತೀರಿ. ಈ ವಾರ ಕೆಲಸದ ಹೊರೆ ಅಧಿಕವಿರಲಿದೆ. ಇನ್ನು ಆರ್ಥಿಕ ದೃಷ್ಟಿಯಿಂದಲೂ ಉತ್ತಮವಾಗಿರಲಿದೆ. ಕೌಟುಂಬಿಕ ಜೀವನ ತುಂಬಾ ಚೆನ್ನಾಗಿರಲಿದೆ. ಕುಟುಂಬ ಬದುಕಿನಲ್ಲಿ ಸಂತೋಷ ಇರಲಿದೆ.

ಕನ್ಯಾ ರಾಶಿ
ಈ ವಾರ ಕನ್ಯಾ ರಾಶಿಯ ವ್ಯಾಪಾರಿಗಳಿಗೆ ತುಂಬಾ ಒಳ್ಳೆಯದು. ಹಣಕಾಸಿನ ದೃಷ್ಟಿಯಿಂದ ಈ ಸಮಯವು ನಿಮಗೆ ಉತ್ತಮವಾಗಿರಲಿದೆ. ಈ ಸಮಯದಲ್ಲಿ ಯಾರಿಗೂ ಸಾಲ ನೀಡುವುದು ಅಥವಾ ಯಾರ ಬಳಿಯಿಂದಾರೂ ಸಾಲ ತೆಗೆಯುವುದು ಮಾಡಬೇಡಿ, ಉಳಿದಂತೆ ಆರ್ರತಿಕ ದೃಷ್ಟಿಯಿಂದ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಏಳೂ ದಿನಗಳು ಉತ್ತಮವಾಗಿರುತ್ತದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ವಾರ ಅದ್ಭುತವಾಗಿರಲಿದೆ. ವಾರದ ಆರಂಭವು ನಿಮಗೆ ತುಂಬಾ ಧನಾತ್ಮಕವಾಗಿರುತ್ತದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಈ ಅವಧಿಯಲ್ಲಿ ನಿಮ್ಮ ನಿಮ್ಮ ಆದಾಯವೂ ಹೆಚ್ಚಾಗಬಹುದು. ಇನ್ನು ಈ ವಾರ ಹಣದ ಹೂಡಿಕೆ ಬಗ್ಗೆ ಯೋಚಿಸುತ್ತಿದ್ದರೆ ಹೂಡಿಕೆಯಿಂದ ಲಾಭ ಗಳಿಸುತ್ತೀರಿ. ಆರೋಗ್ಯ ಉತ್ತಮವಾಗಿರಲಿದೆ.
ಮೀನ ರಾಶಿ
ಮೀನ ರಾಶಿಯ ವ್ಯಾಪಾರಿಗಳಿಗೆ ತುಂಬಾ ಒಳ್ಳೆಯದು. ಉದ್ಯೋಗಸ್ಥರು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು, ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಹಣಕಾಸಿನ ದೃಷ್ಟಿಯಿಂದ ಈ ವಾರ ತುಂಬಾ ಒಳ್ಳೆಯದಿದೆ. ಮನೆ ಸೌಕರ್ಯಗಳಿಗೆ ಹಣ ಖರ್ಚಾಗುವ ಸಾಧ್ಯತೆ ಹೆಚ್ಚಾಗುವುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಉಳಿದಂತೆ ಮೀನ ರಾಶಿಯವರಿಗೆ ಈ ವಾರ ಉತ್ತಮವಾಗಿದೆ.
ಇನ್ನು ಸಂಖ್ಯಾಶಾಸ್ತ್ರ ಪ್ರಕಾರ ಈ ದಿನಾಂಕದಂದು ಜನಿಸಿದ್ದವರಿಗೆ ಒಳ್ಳೆಯದು:
ಸಂಖ್ಯೆ 1 ( 1, 10, 19, 28 ): ವೃತ್ತಿ ಬದುಕಿಗೆ ಈ ವಾರ ಉತ್ತಮವಾಗಿದೆ. ಈ ಸಮಯದಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಈ ವಾರ ವೃತ್ತಿ ಜೀವನದ ದೃಷ್ಟಿಯಿಂದ ಉತ್ತಮವಾಗಿರಲಿದೆ. ಇನ್ನು ವೈವಾಹಿಕ ಜೀವನದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ. ವ್ಯಾಪಾರಸ್ಥರು ಈ ವಾರ ಲಾಭ ಗಳಿಸಲು ಸಾಧ್ಯವಾಗುವುದು.
ಸಂಖ್ಯೆ 3 ( ಜನ್ಮ ಸಂಖ್ಯೆ 03, 12, 21, 30):ಈ ವಾರ ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಒಡಹುಟ್ಟಿದವರೊಂದಿಗೆ ಉತ್ತಮ ಸಂಬಂಧ ಇರಲಿದೆ. ಇನ್ನು ವೈವಾಹಿಕ ಹಾಗೂ ಪ್ರೇಮ ಜೀವನ ಕೂಡ ಚೆನ್ನಾಗಿರಲಿದೆ. ಇನ್ನು ನೀವು ಹೊಸ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಧನಾತ್ಮಕ ಫಲಿತಾಂಶ ದೊರೆಯಲಿದೆ, ವ್ಯಾಪಾರಿಗಳು ಉತ್ತಮ ಆರ್ಥಿಕ ಲಾಭ ಪಡೆಯುತ್ತೀರಿ. ಆರೋಗ್ಯ ಚೆನ್ನಾಗಿರಲಿದೆ.
ಸಂಖ್ಯೆ 5 (ಜನ್ಮ ದಿನಾಂಕ 05, 14, 23)
ಈ ವಾರ ನಿಮ್ಮ ಸಂಗಾತಿಯೊಂದಿಗೆ ಸಂಬಂಧ ಚೆನ್ನಾಗಿರಲಿದೆ,ನಿಮ್ಮ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ, ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾರೆ ಈ ವಾರ ನೀವು ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುವುದು, ವ್ಯಾಪಾರಿಗಳು ಹೊಸ ಬ್ಯುಸ್‌ನೆಸ್ ಮಾಡುವುದಕ್ಕೆ ಈ ಅವಧಿ ಉತ್ತಮವಾಗಿದೆ. ಈ ಏಳೂ ದಿನಗಳು ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











