Latest Updates
-
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್!
ವಾರ ಭವಿಷ್ಯ: ಮೇ 12-18 ಏಳು ದಿನಗಳು ಈ 6 ರಾಶಿಯವರಿಗೆ ಹೆಚ್ಚು ಅನುಕೂಲಕರವಾಗಿದೆ
ಈ ವಾರದ ರಾಶಿಫಲ ನೋಡುವುದಾದರೆ ಈ 6 ರಾಶಿಗಳಿಗೆ ಗ್ರಹಗಳ ಸ್ಥಾನ ತುಂಬಾನೇ ಅನುಕೂಲಕರ ಸ್ಥಾನದಲ್ಲಿದ್ದು ಹೆಚ್ಚಿನ ಶುಭ ಫಲ ಪಡೆಯಲಿದ್ದಾರೆ.
ಮಿಥುನ ರಾಶಿ
ಈ ವಾರ ತುಂಬಾ ಚೆನ್ನಾಗಿರಲಿದೆ. ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲಿದೆ, ಈ ವಾರದ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಯಾವುದೇ ದೊಡ್ಡ ಸಮಸ್ಯೆಯಿಲ್ಲ, ಏನಾದರೂ ಚಿಕ್ಕ ಪುಟ್ಟ ಸಮಸ್ಯೆಯಿದ್ದರೂ ನಿರ್ಲಕ್ಷ್ಯ ಮಾಡಲು ಹೋಗಬಾರದು.

ಸಿಂಹ ರಾಶಿ
ಸಿಂಹ ರಾಶಿಯವರೇ ಈ ವಾರ ಚೆನ್ನಾಗಿರಲಿದೆ, ಇನ್ನು ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದವರಿಗೆ ಕೆಲಸ ಸಿಗುವ ಸಾಧ್ಯತೆ ಹೆಚ್ಚು. ಈ ವಾರ ಆರ್ಥಿಕವಾಗಿ ಚೆನ್ನಾಗಿರಲಿದೆ, ಆದರೆ ನೀವು ನಿಮ್ಮ ಖುಷಿಗಾಗಿ ಖರ್ಚು ಮಾಡುತ್ತೀರಿ, ಶಾಪಿಂಗ್ ಮಾಡುವುದು ಅಥವಾ ವಸ್ತುಗಳನ್ನು ಖರೀದಿಸುವುದು ಮಾಡಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ, ದಂಪತಿ ನಡುವೆ ಹೊಂದಾಣಿಕೆ ಇರಲಿದೆ, ಆರೋಗ್ಯವೂ ಉತ್ತಮವಾಗಿರಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ಮೇ 12-18 ತುಂಬಾ ಶುಭ ದಿನಗಳಾಗಿವೆ, ಕುಟುಂಬದಲ್ಲಿ ತುಂಬಾನೇ ಸಂತೋಷದ ವಾತಾವರಣ ಇರಲಿದೆ. ಆರ್ಥಿಕವಾಗಿಯೂ ಆದಾಯ ಚೆನ್ನಾಗಿರಲಿದೆ. ಇನ್ನು ಒಂದು ಸಲಹೆ ಏನೆಮದರೆ ಬೇರೆಯವರ ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಲು ಹೋಗಬೇಡಿ. ವ್ಯಾಪಾರಿಗಳು ಸ್ವಲ್ಪ ಹೆಚ್ಚಿ ಶ್ರಮ ಹಾಕಿದರೆ ಉತ್ತಮ ಫಲ ಪಡೆಯಬಹುದು.
ವೃಶ್ಚಿಕ ರಾಶಿ
ಈ ವಾರದ ಆರಂಭವೇ ನಿಮಗೆ ತುಂಬಾ ಚೆನ್ನಾಗಿರಲಿದೆ. ಉದ್ಯೋಗಿಗಳಿಗೆ ಸಂಬಳ ಹೆಚ್ಚಳದ ಸುದ್ದಿ ಪಡೆಯುತ್ತೀರಿ ಅಥವಾ ಯಾವುದಾದರೂ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಅದರ ಶುಭ ಫಲದ ಸುದ್ದಿ ಪಡೆಯುತ್ತೀರಿ. ಅಲ್ಲದೆ ನೀವು ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಪ್ರಯತ್ನಿಸುತ್ತಿದ್ದರೆ ನಿಮಗಿದ್ದ ಎಲ್ಲಾ ಅಡೆತಡೆಗಳು ದೂರಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಕುಟುಂಬದಲ್ಲಿಯೂ ಉತ್ತಮ ವಾತಾವರಣ ಇರಲಿದೆ, ಹೂಡಿಕೆಗೆ ಉತ್ತಮವಾಗಿದೆ.
ಮಕರ ರಾಶಿ
ಈ ವಾರ ವ್ಯಾಪಾರಿಗಳಿಗೆ ತುಂಬಾ ಲಾಭದಾಯಕವಾಗಿರಲಿದೆ. ಇನ್ನು ಉದ್ಯೋಗಿಗಳಿಗೂ ಚೆನ್ನಾಗಿರಲಿದೆ, ನೀವೇನಾದರೂ ವರ್ಗಾವಣೆಗೆ ಯತ್ನಿಸುತ್ತಿದ್ದರೆ ಅದರಲ್ಲಿ ಯಶಸ್ವಿಯಾಗುವಿರಿ. ಈ ಏಳೂ ದಿನಗಳು ಹಣದ ವಿಷಯದಲ್ಲಿ ಮಂಗಳಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಆದಾಯ ಹೆಚ್ಚಾಗುವ ಸೂಚನೆಯಿದೆ. ನಿಮ್ಮ ಆರ್ಥಿಕ ಸ್ಥಿತಿಯು ಚೆನ್ನಾಗಿರಲಿದೆ. ಈ ಸಮಯದಲ್ಲಿ ನೀವು ಹೂಡಿಕೆ ಮಾಡಲು ಉತ್ತಮ ಅವಕಾಶ ಸಿಗಲಿದೆ, ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿದೆ. ವೈವಾಹಿಕ ಬದುಕು ಚೆನ್ನಾಗಿದ್ದು ನೀವಿಬ್ಬರು ಒಬ್ಬರನ್ನೊಬ್ಬರು ಅರ್ಥ ಮಾಡುತ್ತೀರಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications