Latest Updates
-
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್
ವಾರ ಭವಿಷ್ಯ: ಅಕ್ಟೋಬರ್ 26ರಿಂದ ನವೆಂಬರ್ 1ರವರೆಗೆ ಈ ರಾಶಿಯವರು ಜಾಗ್ರತೆ
ಜ್ಯೋತಿಷ್ಯಶಾಸ್ತ್ರ ಪ್ರಕಾರ ಈ ವಾರ ಅಂದರೆ ಅಕ್ಟೋಬರ್ ಮಾಸದ ಕೊನೆಯ ದಿನಗಳು ನವೆಂಬರ್ ಮಾಸದ ಪ್ರಾರಂಭದ ಎರಡು ದಿನಗಳು ಈ ರಾಶಿಯವರಿಗೆ ಹೆಚ್ಚು ಅನುಕೂಲಕರವಲ್ಲ. ಕೆಲಸದಲ್ಲಿ ಹೆಚ್ಚು ಒತ್ತಡವಿರಬಹುದು ಅಥವಾ ಆರ್ಥಿಕ ಸಮಸ್ಯೆವಿರಬಹುದು, ಆರೋಗ್ಯ ಸಮಸ್ಯೆಗಳಿರಬಹುದು, ಹಾಗಾಗಿ ಈ ಬಗ್ಗೆ ಜಾಗ್ರತೆವಹಿಸಿ.

ಮಿಥುನ ರಾಶಿ
ಮಿಥುನ ರಾಶಿಯವರು ಈ ವಾರ ಜಾಗ್ರತೆವಹಿಸಬೇಕು. ಯಾವುದೇ ಪ್ರಮುಖ ಕೆಲಸ ಅಪೂರ್ಣವಾಗಿ ಬಿಡಬೇಡಿ. ವ್ಯಾಪಾರಿಗಳು ಕೂಡ ತಮ್ಮ ವ್ಯವಹಾರದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಇಲ್ಲದಿದ್ದರೆ ನಷ್ಟ ಉಂಟಾಗಬಹುದು. ವಿದ್ಯಾರ್ಥಿಗಳಿಗೆ ಈ ಸಮಯ ಒಳ್ಳೆಯದಿದೆ, ಈ ಅವಧಿಯಲ್ಲಿ ಯಾವುದಾದರು ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದರೆ ಸುಧಾರಣೆ ಕಂಡು ಬರಲಿದೆ. ಕುಟುಂಬಜೀವನ ಚೆನ್ನಾಗಿರಲಿದೆ, ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಕೂಡ ಬಗೆಹರಿಯಲಿದೆ. ಆರೋಗ್ಯದ ಕಡೆಯೂ ಗಮನಹರಿಸಬೇಕು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 11
ಶುಭ ದಿನ: ಶುಕ್ರವಾರ
ತುಲಾ ರಾಶಿ
ಈ ವಾರ ನಿಮಗೆ ಮಿಶ್ರಫಲ, ನೀವು ಕೆಲಸದ ಕಡೆಗೆ ಮಾತ್ರವಲ್ಲ ವೈಯಕ್ತಿಕ ಜೀವನದ ಕಡೆಗೆ ಹೆಚ್ಚು ಗಮನಹರಿಸಿದರೆ ಒಳ್ಳೆಯದು. ವೃತ್ತಿ ಜೀವನದಲ್ಲಿ ಕೆಲಸದ ಒತ್ತಡ ತುಂಬಾ ಇರಲಿದೆ. ಆರ್ಥಿಕವಾಗಿ ನೋಡುವುದಾದರೆ ಈ ವಾರ ದೊಡ್ಡ ಸಮಸ್ಯೆಯಿಲ್ಲ. ಕುಟುಂಬಕ್ಕೆ ಹೆಚ್ಚು ಸಮಯ ನೀಡಿ. ಕೆಲಸದ ಒತ್ತಡ ಕುಟುಂಬದ ಮೇಲೆ ಪರಿಣಾಮಬೀರಬಹುದು, ಅವರು ನೀವು ಸಮಯ ನೀಡುತ್ತಿಲ್ಲ ಎಂದು ದೂರಬಹುದು. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಲೇಬೇಡಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 18
ಶುಭ ದಿನ: ಸೋಮವಾರ
ವೃಶ್ಚಿಕ ರಾಶಿ
ಈ ಸಮಯದಲ್ಲಿ ನೀವು ಸ್ವಲ್ಪ ಜಾಗ್ರತೆವಹಿಸಬೇಕು, ಕೆಲಸದಲ್ಲಿ ಹೆಚ್ಚು ಒತ್ತಡವಿರಲಿದೆ. ಆರ್ಥಿಕವಾಗಿ ನೋಡುವುದಾದರೆ ಈ ಸಮಯ ನಿಮಗೆ ತುಂಬಾ ಚೆನ್ನಾಗಿರಲಿದೆ. ಕುಟುಂಬ ಜೀವನದಲ್ಲಿ ಪ್ರೀಿ, ಹೊಂದಾಣಿಕೆ ಇರಲಿದೆ. ಪ್ರತಿಕೂಲ ಸಂದರ್ಭದಲ್ಲಿ ಕುಟುಂಬದ ಬೆಂಬಲ ಸಿಗಲಿದೆ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಲೇಬೇಡಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 42
ಶುಭ ದಿನ: ಸೋಮವಾರ
ಧನು ರಾಶಿ
ವಾರದ ಆರಂಭ ಸ್ವಲ್ಪ ಮಂದವಾಗಿರಲಿದೆ, ಆದರೆ ನಂತರ ಕೆಲಸ ಕಾರ್ಯಗಳು ಚುರುಕುಗೊಳ್ಳಲಿದೆ. ಕಚೇರಿಯಲ್ಲಿ ನಿಮ್ಮ ಸ್ಥಾನವು ಬಲವಾಗಿರುತ್ತದೆ. ವ್ಯಾಪಾರಸ್ಥರಿಗೆ ಉತ್ತಮ ಲಾಭ ಸಿಗಲಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಹಣಕಾಸಿನ ದೃಷ್ಟಿಯಿಂದ ಉತ್ತಮವಾಗಿದೆ. ನಿಮ್ಮ ಹಣದ ಪ್ರಯತ್ನಕ್ಕೆ ಉತ್ತಮ ಫಲ ಸಿಗಲಿದೆ. ಸಾಲ ಪಡೆಯುವುದಾದರೂ ಅಗ್ಯತಮೀರಿ ಸಾಲ ಮಾಡಬೇಡಿ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 2
ಶುಭ ದಿನ: ಶನಿವಾರ
ಮಕರ ರಾಶಿ
ಈ ವಾರ ನೀವು ಜಾಗ್ರತೆವಹಿಸಬೇಕು, ನಿಮ್ಮ ಕೆಲಸಕ್ಕೆ ಕೆಲವರು ಅಡೆತಡೆ ಉಂಟು ಮಾಡುವ ಸಾಧ್ಯತೆ ಇದೆ.ವ್ಯಾಪಾರಸ್ಥರಿಗೆ ಈ ವಾರ ಏರಿಳಿತಗಳಿಂದ ಕೂಡಿರಲಿದೆ. ಆರ್ಥಿಕವಾಗಿ ನೋಡುವುದಾದರೆ ಕೆಲ ಸಮಸ್ಯೆವಿರಬಹುದು. ಖರ್ಚು ಹೆಚ್ಚಾಗುವುದು ನಿಮ್ಮ ಚಿಂತೆಗೆ ಕಾರಣವಾಗಬಹುದು. ಸಂಗಾತಿಯ ಜೊತೆಗಿನ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 11
ಶುಭ ದಿನ: ಸೋಮವಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications