Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಈ ವಾರದ ಭವಿಷ್ಯ ಪ್ರಕಾರ ಈ 7 ರಾಶಿಗಳಿಗೆ ವಾರದ ಏಳೂ ದಿನವೂ ಶುಭವಾಗಿದೆ
ಜ್ಯೋತಿಷ್ಯದ ಪ್ರಕಾರ ಈ ವಾರ ಈ 7 ರಾಶಿಗಳಿಗೆ ಅನುಕೂಲಕರವಾಗಿದೆ:
ಮೇಷ ರಾಶಿ
ಮೇಷ ರಾಶಿಯವರೇ ಈ ಅವಧಿ ಅನುಕೂಲಕರವಾಗಿದೆ, ಈ ಅವಧಿಯಲ್ಲಿ ನೀವು ನಿಮ್ಮ ಪ್ರಮುಖ ಕೆಲಸ ಬಾಕಿಯುಳಿದಿದ್ದರೆ ಅದರ ಬಗ್ಗೆ ಗಮನಹರಿಸುವುದು ಒಳ್ಳೆಯದು. ಹಣದ ವಿಷಯದಲ್ಲಿಯೂ ಈ ವಾರ ನೀವು ಜಾಗ್ರತೆವಹಿಸಬೇಕು, ಬಜೆಟ್ ಮೀರಿ ಖರ್ಚು ಮಾಡಬೇಡಿ. ಕೆಲಸದ ಸ್ಥಳದಲ್ಲಿ ಕೆಲಸ ಅಧಿಕವಿರಲಿದೆ, ಆದರೆ ಹೆಚ್ಚಿನ ಕೆಲಸದ ಒತ್ತಡ ತೆಗೆದುಕೊಳ್ಳಬೇಡಿ. ನೀವು ಮೊದಲೇ ಪ್ಲ್ಯಾನ್ ಮಾಡಿದರೆ ಕೆಲಸ ನಿಭಾಯಿಸಿಕೊಂಡು ಹೋಗುವುದು ಸುಲಭವಾಗುವುದು. ವಾರದ ಕೊನೆಯಲ್ಲಿ ದೂರ ಪ್ರಯಾಣ ಮಾಡುವಿರಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 14
ಶುಭ ದಿನ: ಭಾನುವಾರ

ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ವಾರ ಉತ್ತಮವಾಗಿರಲಿದೆ. ಈ ವಾರ ನಿಮ್ಮ ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ನಡೆಯಲಿದೆ, ಅಲ್ಲದೆ ಉತ್ತಮ ಪ್ರತಿಫಲ ಕೂಡ ಪಡೆಯುವಿರಿ. ಕೆಲಸದಲ್ಲಿ ಏನಾದರೂ ಸಮಸ್ಯೆಯಿದ್ದರೆ ಅದು ಈ ಅವಧಿಯಲ್ಲಿ ಬಗೆಹರಿಯಲಿದೆ. ನೀವು ಸ್ವಲ್ಪ ಸಮಯದಿಂದ ಕೆಲಸಕ್ಕೆ ಹುಡುಕುತ್ತಿದ್ದರೆ ಬಯಸಿದ ಕೆಲಸ ಸಿಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯದ ಕಡೆಯೂ ಗಮನಹರಿಸುತ್ತೀರಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 10
ಶುಭ ದಿನ: ಗುರುವಾರ
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ಸಮಯ ಉತ್ತಮವಾಗಿರಲಿದೆ, ನಿಮ್ಮ ಕೆಲಸ ಕಾರ್ಯದತ್ತ ಸಂಪೂರ್ಣ ಗಮನಹರಿಸಲು ಸಾಧ್ಯವಾಗುವುದು. ನಿಮ್ಮ ಕುಟುಂಬದ ಜೊತೆ ಅಥವಾ ಸಂಗಾತಿ ಜೊತೆಗೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಎಲ್ಲವೂ ಸರಿಯಾಗಲಿದೆ. ಈ ದೀಪಾವಳಿಯನ್ನು ಕುಟುಂಬದ ಜೊತೆಗೆ ಸಂತೋಷದಿಂದ ಆಚರಣೆ ಮಾಡುತ್ತೀರಿ. ನ್ಯಾಯಾಲದಲ್ಲಿ ಏನಾದರು ಪ್ರಕರಣವಿದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಬರಲಿದೆ. ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುವುದರಿಂದ ಖುಷಿಯಾಗಿರುತ್ತೀರಿ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 5
ಶುಭ ದಿನ: ಗುರುವಾರ
ಕನ್ಯಾ ರಾಶಿ
ಈ ವಾರ ತುಂಬಾ ಚೆನ್ನಾಗಿರಲಿದೆ, ಕೆಲಸದ ಒತ್ತಡ ಕಡಿಮೆ ಇರುವುದರಿಂದ ಹಬ್ಬದ ಕಡೆಗೆ ಗಮನಹರಿಸಲು ಸಾಧ್ಯವಾಗುವುದು. ಆದರೆ ಹಣದ ಬಗ್ಗೆ ನೋಡುವುದಾದರೆ ಖರ್ಚು ನಿಯಂತ್ರಿಸಿದರೆ ಒಳ್ಳೆಯದು. ಕುಟುಂಬ ಜೀವನ ಚೆನ್ನಾಗಿರಲಿದೆ ಕುಟುಂಬಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಆತುರದಿಂದ ತೆಗೆದುಕೊಳ್ಳಬೇಡಿ, ಹಿರಿಯರ ಸಲಹೆ ಕಡೆಗೆ ಗಮನಹರಿಸಬೇಕು. ಆರೋಗ್ಯಕೂಡ ತುಂಬಾ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 6
ಶುಭ ದಿನ: ಮಂಗಳವಾರ
ಕುಂಭ ರಾಶಿ
ಈ ವಾರ ನಿಮಗೆ ಉತ್ತಮವಾಗಿದೆ. ಕೆಲಸ ಕಾರ್ಯಗಳು ಚೆನ್ನಾಗಿ ನಡೆಯಲಿದೆ, ಆಸ್ತಿ ಸಂಬಂಧಿತ ಏನೇ ಸಮಸ್ಯೆಯಿದ್ದರೆ ಅದುಬಗೆಹರಿಯಲಿದೆ. ವಿದ್ಯಾರ್ಥಿಗಳಿಗೂ ಈ ಸಮಯ ಉತ್ತಮವಾಗಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ವಾರ ಖರ್ಚು ಹೆಚ್ಚಿರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 26
ಶುಭ ದಿನ: ಶನಿವಾರ
ಮೀನ ರಾಶಿ
ಮೀನ ರಾಶಿಯವರಿಗೆ ಈ ವಾರ ತುಂಬಾ ಚೆನ್ನಾಗಿರಲಿದೆ, ಕೆಲಸದಲ್ಲಿ ಒತ್ತಡವಿದದರೂ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ. ವ್ಯಾಪಾರಿಗಳಿಗೆ ಲಾಭ ಗಳಿಸಲು ಉತ್ತಮ ಅವಕಾಶ ಸಿಗಲಿದೆ. ಹಿಂದೆ ಮಾಡಿದ ಹೂಡಿಕೆಯಿಂದ ದುಪ್ಪಟ್ಟು ಲಾಭ ಸಿಗುವ ಸಾಧ್ಯತೆ ಇದೆ. ಮನೆಯಲ್ಲಿ ಹಬ್ಬದ ವಾತಾವರಣ ಇರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 8
ಶುಭ ದಿನ: ಶುಕ್ರವಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications