Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಯುಗಾದಿ ಹಬ್ಬದ ವಾರ ದ್ವಾದಶ ರಾಶಿಗಳ ಆರ್ಥಿಕ ಭವಿಷ್ಯ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಯುಗಾದಿ ಹಬ್ಬದ ಈ ವಾರ ದ್ವಾದಶ ರಾಶಿಗಳ ಆರ್ಥಿಕ ಜೀವನ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಮಾರ್ಚ್ ತಿಂಗಳ ಕೊನೆಯ ವಾರ ಆರ್ಥಿಕ ದೃಷ್ಟಿಯಿಂದ ನಿಮಗೆ ಉತ್ತಮವಾಗಿರಲಿದೆ, ವ್ಯವಹಾರ ಕ್ಷೇತ್ರದಲ್ಲಿರುವವರು ಒಳ್ಳೆಯ ಲಾಭ ಗಳಿಸಲು ಸಾಧ್ಯವಾಗಲಿದೆ. ಹಬ್ಬದ ವಾರ ನಿಮಗೆ ಆರ್ಥಿಕ ದೃಷ್ಟಿಯಿಂದ ಪ್ರಯೋಜನಕಾರಿಯಾಗಿದೆ. ಇನ್ನು ವ್ಯವಹಾರವನ್ನು ವಿಸ್ತರಣೆ ಮಾಡಬೇಕೆಂದು ಬಯಸುವವರಿಗೆ ಈ ಅವಧಿ ಅನುಕೂಲಕರವಾಗಿದೆ.

ವೃಷಭ ರಾಶಿ
ಆರ್ಥಿಕ ದೃಷ್ಟಿಯಿಂದ ಈ ವಾರ ಉತ್ತಮವಾಗಿರಲಿದೆ. ಹಣಕ್ಕೆ ಸಂಬಂಧಿಸಿದ ಪ್ರಯತ್ನಕ್ಕೆ ಉತ್ತಮ ಪ್ರತಿಫಲ ದೊರೆಯಲಿದೆ. ವ್ಯಾಪಾರಿಗಳಿಗೆ ತುಂಬಾನೇ ಧನ ಲಾಭವಾಗಲಿದೆ. ಆದರೆ ಹೂಡಿಕೆ ಮಾಡುವಾಗ ತುಂಬಾನೇ ಜಾಗ್ರತೆವಹಿಸಿ. ನಿಮ್ಮ ನಿಮ್ಮ ಶ್ರಮಕ್ಕೆ ತಕ್ಕ ಆರ್ಥಿಕ ಪ್ರಯೋಜನ ಪಡೆಯುವಲ್ಲಿಯೂ ನೀವು ಯಶಸ್ವಿಯಾಗುತ್ತೀರಿ.
ಮಿಥುನ ರಾಶಿ
ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ಆರ್ಥಿಕವಾಗಿ ಕೂಡ ನಿಮಗೆ ತುಂಬಾ ಚೆನ್ನಾಗಿರಲಿದೆ, ಆರ್ಥಿಕವಾಗಿ ಬೆಳೆಯಲು ಉತ್ತಮ ಅವಕಾಶ ದೊರೆಯಲಿದೆ. ವ್ಯಾಪಾರಸ್ಥರು ಉತ್ತಮ ಲಾಭ ಗಳಿಸಲು ಸಾಧ್ಯವಾಗಲಿದೆ. ಹಬ್ಬದ ಈ ವಾರ ನಿಮಗೆ ಪರಯೋಜನಕಾರಿಯಾಗಿದೆ.
ಕರ್ಕ ರಾಶಿ
ಈ ವಾರ ಹಣದ ವಿಷಯದಲ್ಲಿ ಸ್ವಲ್ಪ ಜಾಗ್ರತೆ ಮಾಡಬೇಕು, ಅನಾವಶ್ಯಕ ಖರ್ಚುಗಳು ಬರಬಹುದು, ಆ ಖರ್ಚುಗಳಿಗೆ ಕಡಿವಾಣ ಹಾಕಿದರೆ ಒಳ್ಳೆಯದು. ಇನ್ನು ಶಾಪಿಂಗ್, ಸ್ನೇಹಿತರ ಜೊತೆ ತಿರುಗಾಡುವುದು ಅಂತ ಹೆಚ್ಚು ಹಣ ಖರ್ಚಾಗುವ ಸಾಧ್ಯತೆ ಇದೆ. ಪ್ರತಿಕೂಲ ಸಂದರ್ಭದಲ್ಲಿ ಪ್ರೀತಿ ಪಾತ್ರರ ಬೆಂಬಲ ದೊರೆಯಲಿದೆ.
ಸಿಂಹ ರಾಶಿ
ಹಣಕಾಸಿನ ದೃಷ್ಟಿಯಿಂದ ನೋಡುವುದಾದರೆ ಈ ಅವಧಿ ನಿಮಗೆ ಲಾಭದಾಯಕವಾಗಿರಲಿದೆ. ವ್ಯಾಪಾರಸ್ಥರು ನಿರೀಕ್ಷೆ ಮಾಡಿದ ಲಾಭ ಪಡೆಯಲು ಸಾಧ್ಯವಾಗಲಿದೆ. ಈ ವಾರ ಹಣದ ಖರ್ಚು ಕಡಿಮೆ ಇರಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ವಾರ ಖರ್ಚು ಹೆಚ್ಚಿರಲಿದೆ, ನೀವು ಅನಗ್ಯತ ಖರ್ಚುಗಳಿಗೆ ಕಡಿವಾಣ ಹಾಕಿದರೆ ಒಳ್ಳೆಯದು. ವ್ಯಾಪಾರಸ್ಥರು ತಮ್ಮ ವ್ಯವಹಾರದ ಕಡೆಗೆ ಗಮನಹರಿಸಿ, ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ. ಇನ್ನು ವೃತ್ತಿ ಬದುಕಿನ ಕಡೆಗೆ ಹೆಚ್ಚಿನ ಗಮನಹರಿಸಿ, ಇಲ್ಲದಿದ್ದರೆ ಆರ್ಥಿಕ ಸಮಸ್ಯೆ ಉಂಟಾಗಬಹುದು.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ, ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ. ಆರ್ಥಿಕವಾಗಿ ತುಂಬಾ ಪ್ರಯೋಜನ ಪಡೆಯಲು ಸಾಧ್ಯವಾಗಲಿದೆ. ನಿಮ್ಮ ವೃತ್ತಿ ಬದುಕಿನಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗಲಿದೆ.
ವೃಶ್ಚಿಕ ರಾಶಿ
ಈ ವಾರ ನೀವು ಆದಾಯಕ್ಕಿಂತ ಹೆಚ್ಚು ಖರ್ಚು ಎದುರಿಸಬೇಕಾಗುತ್ತದೆ. ಮೊದಲೇ ಬಜೆಟ್ ರೂಪಿಸಿ ಅದರಂತೆ ಖರ್ಚು ಮಾಡಿದರೆ ಒಳ್ಳೆಯದು. ಅಲ್ಲದೆ ಪ್ರಮುಖವಾದ ಕೆಲಸ ಸಮಯಕ್ಕೆ ಮಾಡಿ ಮುಗಿಸಲು ಪ್ರಯತ್ನಿಸಿ, ಇಲ್ಲದಿದ್ದರೆ ಮತ್ತಷ್ಟು ಹಣ ಖರ್ಚಾಗುವುದು.
ಧನು ರಾಶಿ
ಈ ವಾರ ಸ್ವಲ್ಪ ಸವಾಲುಗಳು ಎದುರಾಗಬಹುದು, ಹಣದ ವ್ಯವಹಾರ ಮಾಡುವಾಗ ಸ್ವಲ್ಪ ಜಾಗ್ರತೆ ಮಾಡಿ, ಹಣದ ಖರ್ಚು ಹೆಚ್ಚಿರಲಿದೆ. ವ್ಯಾಪಾರಸ್ಥರು ವ್ಯವಹಾರದಲ್ಲಿ ತುಂಬಾನೇ ಜಾಗ್ರತೆವಹಿಸಿ. ಕೆಲಸದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ, ಆರ್ಥಿಕ ನಷ್ಟ ಉಂಟಾಗುವುದು.
ಮಕರ ರಾಶಿ
ಮಕರ ರಾಶಿಯವರ ಆರ್ಥಿಕ ಜೀವನ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಸ್ಥರು ಉತ್ತಮ ಆರ್ಥಿಕ ಲಾಭ ಪಡೆಯಲು ಸಾಧ್ಯವಾಗಲಿದೆ. ಹಣ ಗಳಿಸಲು ಉತ್ತಮ ಅವಕಾಶ ಕೂಡ ಸಿಗಲಿದೆ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಕುಂಭ ರಾಶಿ
ಕುಂಭ ರಾಶಿಯವರು ಈ ಅವಧಿಯಲ್ಲಿ ತುಂಬಾನೇ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ವ್ಯಾಪಾರಿಗಳು ಉತ್ತಮ ಆರ್ಥಿಕ ಲಾಭ ಗಳಿಸಲು ಸಾಧ್ಯವಾಗಲಿದೆ. ಬಡ್ತಿಯ ನಿರೀಕ್ಷೆಯಲ್ಲಿರುವ ಉದ್ಯೋಗಿಗಳಿಗೆ ಈ ವಾರ ಅನುಕೂಲಕರವಾಗಿದೆ.
ಮೀನ ರಾಶಿ
ಆರ್ಥಿಕವಾಗಿ ಈ ಸಮಯ ನಿಮಗೆ ಸವಾಲಿನಿಂದ ಕೂಡಿರಲಿದೆ, ಖರ್ಚುಗಳು ಅಧಿಕವಿರಲಿದೆ. ಕೆಲಸವನ್ನು ಸಮಯಕ್ಕೆ ಮಾಡಿ ಮುಗಿಸಲು ಪ್ರಯತ್ನಿಸಬೇಕು. ಮನೆಯಲ್ಲಿ ಶುಭ ಕಾರ್ಯ ನಡೆಯಲಿದೆ, ಅದರ ಖರ್ಚು ಕೂಡ ಇರಲಿದೆ. ಆರೋಗ್ಯ ಸಂಬಂಧಿತ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications