Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಾರ ಭವಿಷ್ಯ ಪ್ರಕಾರ 12 ರಾಶಿಗಳಿಗೆ ಆಗಸ್ಟ್ 10-17ರವರೆಗಿನ ಏಳು ದಿನಗಳು ಹೇಗಿರಲಿದೆ?
ವಾರ ಭವಿಷ್ಯ ಪ್ರಕಾರ ಈ ವಾರ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ವಾರ ನಿಮಗೆ ಅದ್ಭುತವಾಗಿರಲಿದೆ, ವೃತ್ತಿ ಜೀವನಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆ ಬಗೆಹರಿಯುವುದು, ಕೆಲಸದಲ್ಲಿ ಉತ್ತಮ ಪ್ರಗತಿ ಕಂಡು ಬರುವುದರಿಂದ ಖುಷಿಯಾಗಿರುತ್ತೀರಿ. ಕುಟುಂಬ ಜೀವ ತುಂಬಾ ಚೆನ್ನಾಗಿರಲಿದೆ. ಆರ್ಥಿಕವಾಗಿಯೂ ಈ ವಾರ ಉತ್ತಮವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ತುಂಬಾ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 7
ಶುಭ ದಿನ: ಶುಕ್ರವಾರ

ವೃಷಭ ರಾಶಿ
ಈ ವಾರ ನಿಮಗೆ ತುಂಬಾನೇ ಚೆನ್ನಾಗಿರಲಿದೆ. ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ದೂರಾಗಲಿದೆ. ಆರ್ಥಿಕ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಿ,
ಹಣಕ್ಕೆ ಸಂಬಂಧಿಸಿದ ವ್ಯವಹಾರಗಳನ್ನು ಆಲೋಚಿಸಿ ತೆಗೆದುಕೊಂಡರೆ ಒಳ್ಳೆಯದು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯ ತುಂಬಾ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ:49
ಶುಭ ದಿನ: ಬುಧವಾರ
ಮಿಥುನ ರಾಶಿ
ಹೊಸ ಕೆಲಸಕ್ಕೆ ಕೈ ಹಾಕುವ ಮುನ್ನ ಪೋಷಕರ ಆಶೀರ್ವಾದ ಪಡೆಯಿರಿ. ಆರ್ಥಿಕವಾಗಿ ಉತ್ತಮವಾಗಿದೆ, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಲು ಸೂಕ್ತ ಸಮಯ.
ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿಗಳು ಒತ್ತಡದಿಂದ ಕೂಡಿರಲಿದೆ. ಕುಟುಂಬದ ಕಡೆಗೆ ಗಮನಹರಿಸಿ, ಆದರೆ ನೀವು ಕೋಪವನ್ನು ನಿಯಂತ್ರಿಸಬೇಕು. ಆರೋಗ್ಯದ ಬಗ್ಗೆ ಸ್ವಲ್ಪವೂ ನಿರ್ಲಕ್ಷ್ಯ ವಹಿಸಬೇಡಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 33
ಶುಭ ದಿನ: ಮಂಗಳವಾರ
ಕರ್ಕ ರಾಶಿ
ಈ ವಾರದ ಆರಂಭವು ಅಷ್ಟು ಅನುಕೂಲಕರವಲ್ಲ, ಕೆಲ ಆರೋಗ್ಯ ಸಮಸ್ಯೆಗಳಿರಬಹುದು, ನಿಮ್ಮ ಆರೋಗ್ಯದ ಬಗ್ಗೆ ನೀವು ಜಾಗರೂಕರಾಗಿರಬೇಕು. ಅನಗತ್ಯ ವೆಚ್ಚಗಳನ್ನು ತಪ್ಪಿಸಿ, ಉಳಿತಾಯದತ್ತ ಗಮನಹರಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕು ಕೂಡ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 12
ಶುಭ ದಿನ: ಶನಿವಾರ
ಸಿಂಹ ರಾಶಿ
ನೀವು ಅನಗ್ಯತ ಖರ್ಚುಗಳಿಂದ ದೂರವಿರಿ, ಸಾಲ ತೆಗೆದುಕೊಳ್ಳಬೇಡಿ. ಕೆಲಸದಲ್ಲಿ ಈ ವಾರ ತುಂಬಾ ಒತ್ತಡ ಇರಲಿದೆ. ವೈಯಕ್ತಿ ಹಾಗೂ ವೃತ್ತಿ ಜೀವನದ ನಡುವಿನ ಸಸಮತೋಲನ ಕಾಪಾಡುವುದೇ ಕಷ್ಟವಾಗುವುದು. ಕುಟುಂಬದಲ್ಲಿ ಪರಿಸ್ಥಿತಿ ಅಷ್ಟೊಂದು ಚೆನ್ನಾಗಿರಲ್ಲ, ನೀವು ತಾಳ್ಮೆಯಿಂದ ವರ್ತಿಸಿದರೆ ಒಳ್ಳೆಯದು. ಇನ್ನು ಆರೋಗ್ಯ ಕೂಡ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 28
ಶುಭ ದಿನ: ಸೋಮವಾರ
ಕನ್ಯಾ ರಾಶಿ
ಈ ಅವಧಿ ಪ್ರತಿಕೂಲವಾಗಿರಲಿದೆ. ಕೆಲಸದ ಒತ್ತಡ ಹೆಚ್ಚಿರಲಿದೆ, ಆದರೆ ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ಮಕ್ಕಳಿಗೆ ಸಂಬಂಧಿಸಿದ ಯಾವುದೇ ಚಿಂತೆಗಳು ದೂರವಾಗುತ್ತದೆ, ಈ ಏಳು ದಿನಗಳು ಆರೋಗ್ಯದ ದೃಷ್ಟಿಯಿಂದ ಮಿಶ್ರಫಲ. ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 36
ಶುಭ ದಿನ: ಗುರುವಾರ
ತುಲಾ ರಾಶಿ
ಕೌಟುಂಬಿಕ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ, ಕುಟುಂಬ ಜೀವನದಲ್ಲಿ ನೆಮ್ಮದಿ ಇರಲಿದೆ. ಹಣದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರುತ್ತದೆ. ಕೆಲಸದ ಕಡೆಗೆ ಗಮನಹರಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಲು ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ವಾರ ಬಹಳ ಮಹತ್ವದ್ದಾಗಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 7
ಶುಭ ದಿನ: ಶುಕ್ರವಾರ
ವೃಶ್ಚಿಕ ರಾಶಿ
ವ್ಯಾಪಾರಸ್ಥರಿಗೆ ಈ ವಾರ ತುಂಬಾ ಚೆನ್ನಾಗಿರಲಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಉತ್ತಮ ಲಾಭ ಪಡೆಯುತ್ತೀರಿ, ಉದ್ಯೋಗಿಗಳಿಗೆ ಈ ಅವಧಿ ಉತ್ತಮವಾಗಿದೆ.
ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ಅತಿಯಾದ ಕೋಪ ಒಳ್ಳೆಯದಲ್ಲ, ನಿಮ್ಮ ಸಮಸ್ಯೆ ಹೆಚ್ಚಿಸುವುದು. ಆರೋಗ್ಯ ವಿಷಯದದಲ್ಲಿ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 19
ಶುಭ ದಿನ: ಭಾನುವಾರ
ಧನು ರಾಶಿ
ಕೆಲಸದ ವಿಷಯದಲ್ಲಿ ಈ ವಾರ ಉತ್ತಮವಲ್ಲ, ಉದ್ಯಮಿಗಳಿಗೆ ಏರಳಿತಗಳಿಂದ ಕೂಡಿರಲಿದೆ, ಸವಾಲುಗಳು ಬರಬಹುದು, ಈ ಅವಧಿಯಲ್ಲಿ ನೀವು ಯಾರನ್ನೂ ಕುರುಡಾಗಿ ನಂಬುವುದನ್ನು ತಪ್ಪಿಸಬೇಕಾಗುತ್ತದೆ. ಹಣಕಾಸಿನ ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು. ಈ ಅವಧಿಯಲ್ಲಿ ಯಾವುದೇ ಹೂಡಿಕೆ ಮಾಡಬೇಡಿ. ಸಂಬಂಧ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 32
ಶುಭ ದಿನ: ಶುಕ್ರವಾರ
ಮಕರ ರಾಶಿ
ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಆದರೆ ಚಿಕ್ಕ-ಪುಟ್ಟ ವಿಷಯವನ್ನು ನಿರ್ಲಕ್ಷ್ಯ ಮಾಡಲು ಹೋಗಬೇಡಿ. ನಿಮ್ಮ ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ, ಈ ವಾರ ನಿಮಗೆ ಮಿಶ್ರ ಫಲಿತಾಂಶ. ಕೊಟ್ಟ ಕೆಲಸವನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಿ. ವ್ಯಾಪಾರಸ್ಥರು ಕಾನೂನು ವಿಷಯಗಳಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ಯಾವುದೇ ಕಾನೂನು ಬಾಹಿರ ಕೆಲಸ ಮಾಡಬೇಡಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 21
ಶುಭ ದಿನ: ಸೋಮವಾರ
ಕುಂಭ ರಾಶಿ
ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಕೆಲವು ಉತ್ತಮ ಮತ್ತು ದೊಡ್ಡ ಬದಲಾವಣೆಗಳನ್ನು ಕಾಣಬಹುದು. ವ್ಯಾಪಾರಿಗಳಿಗೆ ಅಪೇಕ್ಷಿತ ಲಾಭ ದೊರೆಯಲಿದೆ. ನಿಮ್ಮ ಬಾಕಿ ಕೆಲಸಗಳೂ ಪೂರ್ಣಗೊಳ್ಳುತ್ತವೆ. ಪ್ರೇಮಿಗಳಿಗೆ ಈ ಅವಧಿ ಅನುಕುಲಕರವಾಗಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 5
ಶುಭ ದಿನ: ಬುಧವಾರ
ಮೀನ ರಾಶಿ
ವೃತ್ತಿ ಜೀವನ ತುಂಬಾ ಚೆನ್ನಾಗಿರಲಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಸಂಬಂಧದ ವಿಷಯಗಳಲ್ಲಿ ನೀವು ಸ್ವಲ್ಪ ಜಾಗರೂಕರಾಗಿರಬೇಕು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರವನ್ನು ಮಾಡಲು ಹೋದರೆ, ನಿಮ್ಮ ನಿರ್ಧಾರವನ್ನು ನೀವು ಆಲೋಚಿಸಿ ತೆಗೆದುಕೊಳ್ಳಿ. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 21
ಶುಭ ದಿನ: ಮಂಗಳವಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications