Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಮಾರ್ಚ್ 23-29ರವರೆಗಿನ ಭವಿಷ್ಯ: ಈ ವಾರ ಯಾವ ರಾಶಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರ ಪ್ರಕಾರ ಈ ವಾರ (ಮಾರ್ಚ್ 23-29) ದ್ವಾದಶ ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ವಾರ ಕುಟುಂಬದ ಕಾರಣಗಳಿಂದ ಹೆಚ್ಚು ಚಿಂತೆ ಕಾಡಬಹುದು, ಮನೆಯಲ್ಲಿ ಏನಾದರು ಸಮಸ್ಯೆಯಾಗಿದ್ದರೆ ಅದು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಮನೆಯ ಚಿಂತೆ ನಿಮ್ಮ ಕೆಲಸದಲ್ಲಿಯೂ ಪರಿಣಾಮ ಬೀರಬಹುದು. ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ಅವಧಿ ನಿಮಗೆ ಅನುಕೂಲಕರವಾಗಿದೆ.

ವೃಷಭ ರಾಶಿ
ಈ ವಾರ ನೀವು ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ, ಕುಟುಂಬ ಜೀವನದ ಕಡೆಗೂ ಗಮನಹರಿಸಬೇಕು. ನಿಮ್ಮ ಹಾಗೂ ಸಂಗಾತಿ ನಡುವೆ ಅನಗ್ಯತ ಜಗಳ ಉಂಟಾಗದಂತೆ ಜಾಗ್ರತೆ ಮಾಡಿ.ಕೆಲಸವೊಂದು ವಿಷಯಗಳ ಬಗ್ಗೆ ಅನಗ್ಯತವಾಗಿ ಚರ್ಚೆ ಮಾಡದಿದ್ದರೆ ಒಳ್ಳೆಯದು. ಹಣದ ವಿಷಯದಲ್ಲಿ ನಿಮಗೆ ಉತ್ತಮವಾಗಿದೆ, ನಿಮಗೆ ಬರಬೇಕಾಗಿರುವ ಹಣ ಕೈ ಸೇರಲಿದೆ.
ಮಿಥುನ ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿದೆ. ಈ ವಾರ ಆರ್ಥಿಕವಾಗಿ ನಿಮಗೆ ಪ್ರಯೋಜನಕಾರಿಯಾಗಿದೆ. ಕೆಲಸದ ದೃಷ್ಟಿಯಿಂದಲೂ ಈ ವಾರ ನಿಮಗೆ ಅನುಕೂಲಕರವಾಗಿದೆ. ನಿಮಗೆ ಪ್ರಮುಖ ಜವಾಬ್ದಾರಿ ನೀಡಬಹುದು, ಲೋಪದೋಷ ಉಂಟಾಗದಂತೆ ಜಾಗ್ರತೆವಹಿಸಿ. ಈ ವಾರ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿದೆ. ವಾಹನವನ್ನು ಜಾಗ್ರತೆಯಿಂದ ಚಲಾಯಿಸಿ.
ಕರ್ಕ ರಾಶಿ
ಈ ವಾರ ನಿಮಗೆ ತುಂಬಾನೇ ಅನುಕೂಲಕರವಾಗಿದೆ. ಅಪೂರ್ಣವಾಗಿದ್ದ ಕೆಲಸ ಕಾರ್ಯ ಪೂರ್ಣಗೊಳಿಸಲು ಸಾಧ್ಯವಾಗುವುದು. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದಾದರೆ ಸ್ವಲ್ಪ ಜಾಗ್ರತೆವಹಿಸಿ. ಕುಟುಂಬದ ಸದಸ್ಯರ ಆರೋಗ್ಯದ ಚಿಂತೆ ಕಾಡಬಹುದು. ಆದಾಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ಸಿಂಹ ರಾಶಿ
ಈ ವಾರ ನಿಮಗೆ ಆರ್ಥಿಕವಾಗಿ ಅನುಕೂಲಕರವಲ್ಲ, ಖರ್ಚು ಹೆಚ್ಚಿರಬಹುದು. ಕುಟುಂಬದಲ್ಲಿಯೂ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು. ನೀವು ತಾಳ್ಮೆಯಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕು. ಆರೋಗ್ಯದ ಕಡೆಗೆ ಗಮನಹರಿಸಿ, ಇಲ್ಲದಿದ್ದರೆ ಆರೋಗ್ಯಕ್ಕಾಗಿ ಹೆಚ್ಚು ಹಣ ಖರ್ಚಾಗುವುದು.
ಕನ್ಯಾ ರಾಶಿ
ಕೆಲಸದಲ್ಲಿ ಯಾವುದೇ ಪ್ರಮುಖ ಬದಲಾವಣೆ ಮಾಡುವುದು ಒಳ್ಳೆಯದಲ್ಲ. ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುವಾಗ ಜಾಗ್ರತೆ ಮಾಡಿ. ಕುಟುಂಬದಲ್ಲಿ ಸಮಸ್ಯೆ ಹೆಚ್ಚಾಗದಂತೆ ಜಾಗ್ರತೆವಹಿಸಿ. ಹಣಕಾಸಿನ ವಿಷಯದಲ್ಲಿ ಈ ವಾರ ಜಾಗ್ರತೆ ಮಾಡಿ.
ತುಲಾ ರಾಶಿ
ಈ ವಾರ ನಿಮಗೆ ತುಂಬಾನೇ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಲಾಭ ಗಳಿಸಲು ಸಾಧ್ಯವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಪ್ರಯತ್ನಕ್ಕೆ ಉತ್ತಮ ಪ್ರತಿಫಲ ದೊರೆಯಲಿದೆ. ರಾಜಕಾರಣಿಗಳಿಗೆ ಈ ಅವಧಿ ಅನುಕೂಲಕರವಾಗಿದೆ.
ವೃಶ್ಚಿಕ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ, ಅಪೂರ್ಣವಾಗಿರುವ ಕೆಲಸವು ಪೂರ್ಣವಾಗಬಹುದು, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ದೊಡ್ಡ ಹೂಡಿಕೆಗೆ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಪ್ರಯೋಜನಕಾರಿಯಾಗಿದೆ.
ಧನು ರಾಶಿ
ಈ ವಾರ ಹೆಚ್ಚು ಜಾಗ್ರತೆವಹಿಸಬೇಕು, ಇಲ್ಲದಿದ್ದರೆ ದೊಡ್ಡ ಸಮಸ್ಯೆಗೆ ಸಿಲುಕಬಹುದು. ವ್ಯಾಪಾರಿಗಳು ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ ಎಂದು ಸಲಹೆ ನೀಡಲಾಗುವುದು. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಕುಟುಂಬದಲ್ಲಿನ ಸಮಸ್ಯೆಯನ್ನು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ.
ಮಕರ ರಾಶಿ
ಆರ್ಥಿಕವಾಗಿ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ, ಸಾಲ ಮಾಡಬೇಕಾದ ಪರಿಸ್ಥಿತಿ ಬರಬಹುದು. ರಾಜಕಾರಣಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಈ ವಾರ ಯಾವುದೇ ಹೊಸ ಕೆಲಸ ಪ್ರಾರಂಭಿಸದಂತೆ ಸಲಹೆ ನೀಡಲಾಗುವುದು. ಕೆಲಸ ಕಾರ್ಯಗಳನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ.
ಕುಂಭ ರಾಶಿ
ಈ ವಾರ ನಿಮಗೆ ತುಂಬಾನೇ ಅನುಕೂಲಕರವಾಗಿದೆ, ಆಸ್ತಿ ವ್ಯವಹಾರ ಮಾಡಿದರೆ ಲಾಭ ಗಳಿಸಲು ಸಾಧ್ಯವಾಗಲಿದೆ. ಮನೆಯ ವಾತಾವರಣ ಸಂತೋಷದಿಂದ ಕೂಡಿರಲಿದೆ. ಮನೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯಬಹುದು.
ಮೀನ ರಾಶಿ
ಮೀನ ರಾಶಿಯವರಿಗೆ ಈ ವಾರ ಉತ್ತಮವಾಗಿರಲಿದೆ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಸ್ಥರಿಗೆ ಧನ ಲಾಭವಾಗಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಭಿನ್ನಾಭಿಪ್ರಾಯ ದೂರಾಗಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











