Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಾರ ಭವಿಷ್ಯ(ಮೇ4-ಮೇ 10) ಪ್ರಕಾರ ಈ ವಾರ ನಿಮ್ಮ ರಾಶಿಫಲ ಹೇಗಿದೆ?
ಗ್ರಹಗತಿಗಳ ಸ್ಥಾನದ ಪ್ರಕಾರ ಈ ವಾರ ಯಾವ ರಾಶಿಗೆ ಹೇಗಿರಲಿದೆ ನೊಡೋಣ ಬನ್ನಿ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ವಾರ ಉತ್ತಮವಾಗಿರಲಿದೆ. ಇನ್ನು ಪ್ರೀತಿಯಲ್ಲಿ ಇರುವವರಿಗೆ ಈ ವಾರ ವಿಶೇಷವಾಗಿರಲಿದೆ. ಈ ವಾರ ನಿಮ್ಮ ಪ್ರೀತಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ಹಣದ ವಿಷಯದಲ್ಲಿ ಈ ವಾರ ಉತ್ತಮವಾಗಿದೆ. ಕೆಲಸದ ಬಗ್ಗೆ ಹೇಳುವುದಾದರೆ ಕೆಲಸದ ಹೊರೆ ಹೆಚ್ಚಿರಲಿದೆ. ನಿಮ್ಮ ಎಲ್ಲಾ ಕೆಲಸಗಳನ್ನು ಯೋಜನೆಯ ಪ್ರಕಾರ ಪೂರ್ಣಗೊಳಿಸಲು ಪ್ರಯತ್ನಿಸಿ. ಆರೋಗ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ನಮ್ಮ ಪ್ರಮುಖ ನಿರ್ಧಾರಕ್ಕೆ ಮನೆಯವರ ಬೆಂಬಲ ಸಿಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಹಣದ ವಿಷಯದಲ್ಲಿ ಈ ವಾರ ಉತ್ತಮವಾಗಿ, ನಿಮ್ಮ ಆದಾಯ ಪ್ರಗತಿಯಾಗಲಿದೆ. ಉದ್ಯೋಗಿಗಳಾದರೆ ಬಡ್ತಿ ಸಿಗಬಹುದು, ವ್ಯಾಪಾರಿಗಳ ವ್ಯವಹಾರ ವಹಿವಾಟು ಚೆನ್ನಾಗಿ ನಡೆಯಲಿದೆ. ಇನ್ನು ವಿದೇಶದಲ್ಲಿ ಓದಲು ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳು ಈ ಸಮಯದಲ್ಲಿ ಶುಭ ಸುದ್ದಿ ಪಡೆಯಬಹುದು. ಆರೋಗ್ಯದ ಕಡೆ ಗಮನಹರಿಸಿ.
ಮಿಥುನ ರಾಶಿ
ಅವಾಹಿತರು ವಿವಾಹ ಸಂಬಂಧ ನೋಡುತ್ತಿದ್ದರೆ ಈ ವಾರ ಮದುವೆ ಮಾತುಕತೆ ನಡೆಯುವ ಸಾಧ್ಯತೆ ಇದೆ. ಪ್ರೇಮಿಗಳಿಗೂ ಚೆನ್ನಾಗಿರಲಿದೆ, ಆದರೆ ವಿವಾಹಿತರಿಗೆ ಈ ವಾರ ಸ್ವಲ್ಪ ಅಭಿಪ್ರಾಯ ವ್ಯತ್ಯಾಸ ಬರಬಹುದು. ನೀವು ಈ ವಾರ ಖರ್ಚಿನ ಕಡೆಗೆ ಗಮನಹರಿಸಬೇಕು. ಅಲ್ಲದೆ ಹಣದ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಈ ವಾರ ಸೂಕ್ತವಲ್ಲ, ಯಾವುದೇ ಹೂಡಿಕೆ ಮಾಡಲು ಹೋಗಬೇಡಿ. ಆರೋಗ್ಯ ಸಮಸ್ಯೆಯಿದ್ದರೆ ವೈದ್ಯರಿಗೆ ತೋರಿಸಿ, ನಿರ್ಲಕ್ಷ್ಯ ಮಾಡಿದರೆ ಹೆಚ್ಚು ಹಣ ಖರ್ಚು ಮಾಡಬೇಕಾಗುತ್ತದೆ.
ಕರ್ಕ ರಾಶಿ
ಯಾವುದೇ ಚಿಕ್ಕ-ಪುಟ್ಟ ವಿಷಯಗಳನ್ನು ಮನಸ್ಸಿಗೆ ಹಚ್ಚಿಕೊಲ್ಲದೆ ನಿಮ್ಮ ಕೆಲಸದ ಕಡೆಗೆ ಗಮನಹರಿಸಿ. ಸರ್ಕಾರಿ ಉದ್ಯೋಗಕ್ಕೆ ಪ್ರಯತ್ನಿಸುತ್ತಿರುವ ಕರ್ಕ ರಾಶಿಯವರು ಈ ವಾರ ಶುಭ ಸುದ್ದಿ ಪಡೆಯಬಹುದು. ಹಣದ ಹೂಡಿಕೆಯಿಂದ ಲಾಭ ದೊರೆಯಲಿದೆ. ಮನೆಯ ವಾತಾವರಣ ಕೂಡ ಚೆನ್ನಾಗಿರಲಿದೆ. ಗಂಡ-ಹೆಂಡತಿ ನಡುವೆ ಏನಾದರೂ ಸಮಸ್ಯೆಯಿದ್ದರೆ ಬಗೆಹರಿಯಲಿದೆ, ಆರೋಗ್ಯ ಕೂಡ ಚೆನ್ನಾಗಿರಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ವಾರ ಕೆಲಸದ ಒತ್ತಡ ಅಧಿಕವಿರಲಿದೆ. ಜೊತೆಗೆ ಆರೋಗ್ಯ ಸಮಸ್ಯೆ ಕೂಡ ನಿಮ್ಮನ್ನು ಬಾಧಿಸಬಹುದು. ವ್ಯಾಪಾರಿಗಳು ಈ ವಾರ ಯಾವುದೇ ಹೊಸ ವ್ಯಾಪಾರ ಅಥವಾ ಹೂಡಿಕೆ ಮಾಡದಿರುವುದು ಒಳ್ಳೆಯದು. ನೀವು ಅನುಭವಿ ವ್ಯಕ್ತಿಗಳ ಬಳಿಕ ವಿಚಾರಿಸಿದ ಬಳಿಕವಷ್ಟೇ ಹೂಡಿಕೆ ಮಾಡಬೇಕು. ನಿ ಸಂಗಾತಿ ಆರೋಗ್ಯದ ಕಡೆಗೆ ಕಾಳಜಿವಹಿಸಿ, ಅಲ್ಲದೆ ವಾರದ ಕೊನೆಯಲ್ಲಿ ಹಣದ ಖರ್ಚು ಅಧಿಕವಿರಲಿದೆ.
ಕನ್ಯಾ ರಾಶಿ
ಈ ವಾರ ವಿವಾಹಿತರಿಗೆ ಒಳ್ಳೆಯದಿದೆ. ಇನ್ನು ಕೆಲಸದಲ್ಲಿಯೂ ಶುಭವಾಗಿದೆ. ನಿಮ್ಮ ಕೆಲಸವನ್ನು ಯೋಜನೆಯಂತೆಯೇ ಪೂರ್ಣಗೊಳಿಸಲು ಸಾಧ್ಯವಾಗುವುದು. ವ್ಯಾಪಾರಿಗಳು ತಮ್ಮ ವ್ಯಾಪಾರ-ವಹಿವಾಟು ಅಬಿವೃದ್ಧಿಯಾಗುವುದನ್ನು ನೋಡಬಹುದು. ಆರ್ಥಿಕ ಚೆನ್ನಾಗಿರಲಿದೆ, ಯಾವುದೇ ಆರೋಗ್ಯ ಸಮಸ್ಯೆ ಇರಲ್ಲ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ವಾರದ ಏಳೂ ದಿನಗಳು ಶುಭವಾಗಿರಲಿದೆ. ಹಣದ ಸ್ಥಿತಿ ಚೆನ್ನಾಗಿರಲಿದೆ. ಉದ್ಯೋಗಿಗಳು ಬಡ್ತಿ ಪಡೆಯಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಈ ವಾರ ಉತ್ತಮವಾಗಿದೆ, ಇನ್ನು ವಿದೇಶದಲ್ಲಿ ಓದುಲು ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳು ಕೂಡ ಶುಭ ಸುದ್ದಿ ಪಡೆಯಬಹುದು. ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯ ಸುಧಾರಿಸಬಹುದು. ಕುಟುಂಬ ಜೀವನ, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಈ ವಾರ ಜಾಗ್ರತೆ. ವ್ಯಾಪಾರಿಗಳಿಗೆ ಸವಾಲಿನ ವಾರ. ಬರಬೇಕಾಗಿರುವ ಹಣ ಬರದೆ ತೊಂದರೆಯಾಗುವುದು. ಜವಾಬ್ದಾರಿಗಳ ಹೊರೆ ಹೆಚ್ಚಾಗುವ ಸಾಧ್ಯತೆಯಿದೆ. ನೀವು ಎಲ್ಲಾ ಚಿಂತೆಗಳನ್ನು ಮರೆತು ನಿಮ್ಮ ಕೆಲಸದ ಮೇಲೆ ಗಮನ ಹರಿಸಿದರೆ ಉತ್ತಮ. ಕುಟುಂಬದ ಸದಸ್ಯರ ಆರೋಗ್ಯ ಹದಗೆಡಬಹುದು. ಸಾಲ ಪಡೆದಿದ್ದರೆ ಮರುಪಾವತಿಯ ಒತ್ತಡ ಕೂಡ ಇರಲಿದೆ.
ಧನು ರಾಶಿ
ಧನು ರಾಶಿಯವರಿಗೆ ಈ ವಾರ ಮಂಗಳಕರವಾಗಿದೆ. ನಿಮ್ಮ ಸಂಬಳಕ್ಕೆ ಸಂಬಂಧಿಸಿದಂತೆ ನೀವು ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದು ಬಗೆಹರಿಯಲಿದೆ. ವ್ಯಾಪಾರಿಗಳಿಗೂ ಆರ್ಥಿಕ ದೃಷ್ಟಿಯಿಂದ ಈ ವಾರ ಉತ್ತಮವಾಗಿದೆ. ಆರ್ತಿಕ ಸಮಸ್ಯೆ ಇರಲ್ಲ. ಪ್ರೇಮಿಗಳು ವಿವಾಹಕ್ಕೆ ಮನೆಯವರ ಒಪ್ಪಿಗೆ ಪಡೆಯಬಹುದು, ಕುಟುಂಬ ಹಾಗೂ ಆರೋಗ್ಯ ಜೀವನ ಚೆನ್ನಾಗಿರಲಿದೆ.
ಮಕರ ರಾಶಿ
ಹಣಕಾಸಿನ ಸಮಸ್ಯೆ ಉಂಟಾಗದಿರಲು ನೀವು ವಾರದ ಆರಂಭದಿಂದಲೇ ಜಾಗ್ರತೆವಹಿಸಿ. ಇನ್ನು ಈ ಅವಧಿಯಲ್ಲಿ ಹೊಸ ವ್ಯವಹಾರ ಮಡಲು ಹೋಗದಿರಿ. ಕುಟುಂಬದಲ್ಲಿಯೂ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ, ಇದು ನಿಮ್ಮ ಮಾನಸಿಕ ಒತ್ತಡ ಹೆಚ್ಚಿಸಲಿದೆ. ನಿಮ್ಮ ಸಂಬಂಧಗಳಿಗೆ ನೀವು ಪ್ರಾಮುಖ್ಯತೆ ನೀಡಬೇಕು. ವೈವಾಹಿಕ ಜೀವನದಲ್ಲಿಯೂ ಕೆಲ ಭಿನ್ನಾಭಿಪ್ರಾಯ ಬರಬಹುದು. ವ್ಯಾಪಾರಿಗಳು ನಷ್ಟ ಉಂಟಾಗದಂತೆ ಜಾಗ್ರತೆವಹಿಸಿ, ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ.
ಕುಂಭ ರಾಶಿ
ಈ ವಾರ ನೀವು, ವಾಹನವನ್ನು ಬಹಳ ಎಚ್ಚರಿಕೆಯಿಂದ ಬಳಸಲು ನಿಮಗೆ ಸಲಹೆ ನೀಡಲಾಗುವುದು.ನೀವು ಕಚೇರಿಯಲ್ಲಿ ಹೆಚ್ಚಿನ ಕೆಲಸದ ಹೊರೆ ಹೊಂದಿದ್ದರೆ, ನಂತರ ನಿಮ್ಮ ಎಲ್ಲಾ ಕೆಲಸಗಳನ್ನು ಯೋಜನೆಯ ಪ್ರಕಾರ ಪೂರ್ಣಗೊಳಿಸಲು ಪ್ರಯತ್ನಿಸಿ. ಬೇರೆಯವರ ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡುವುದಕ್ಕೆ ಹೋಗಬೇಡಿ. ವ್ಯಾಪಾರಿಗಳಿಗೂ ಕೆಲ ಸವಾಲುಗಳು ಬರಬಹುದು. ಆದರೆ ವಾರದ ಕೊನೆಯಲ್ಲಿ ನೀವು ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಈ ವಾರ ಖರ್ಚು ನೀವು ಊಹೆ ಮಾಡಿರುವುದಕ್ಕಿಂತಲೂ ಅಧಿಕ ಇರಲಿದೆ.
ಮೀನ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ. ನಿಮ್ಮ ಕೆಲಸಕ್ಕೆ ಸಂಬಂಧಿಸಿದ ವಿಷಯಗಳನ್ನು ರಹಸ್ಯವಾಗಿಡಿ. ಕುಟುಂಬ ಜೀವನದಲ್ಲಿ ಖುಷಿ, ನೆಮ್ಮದಿ ಇರಲಿದೆ. ನೀವು ವಿವಾಹಿತರಾಗಿದ್ದರೆ ವೈವಾಹಿಕ ಜೀವನದ ಕಡೆಗೆ ಗಮನಹರಿಸಬೇಕು. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ನಿಮ್ಮ ಕಠಿಣ ಪರಿಶ್ರಮ ಮತ್ತು ಬುದ್ಧಿವಂತಿಕೆಯಿಂದ ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ದುಬಾರಿಯಾಗಬಹುದು, ಜಾಗ್ರತೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications