Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ವಾರ ಭವಿಷ್ಯ ಪ್ರಕಾರ ಈ ವಾರ (ನವೆಂಬರ್ 3-9) ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಈ ವಾರ ನಿಮ್ಮೆಲ್ಲಾ ಕಾರ್ಯ ದೈವಕೃಪೆಯಿಂದ ನಿರ್ವಿಘ್ನವಾಗಿ ನೆರವೇರಲಿ, ಜ್ಯೋತಿಷ್ಯಶಾಸ್ತ್ರ ಪ್ರಕಾರ ಈ ವಾರದ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ವಾರ ಉತ್ತಮವಾಗಿರಲಿದೆ, ವ್ಯಾಪಾರಿಗಳು ಉತ್ತಮ ಪ್ರಯೋಜನ ಪಡೆಯುತ್ತೀರಿ, ಯಾವುದಾದರೂ ಪ್ರಮುಖ ದಾಖಲೆ ಮಾಡುವಾಗ ಅದರ ಡಾಕ್ಯೂಮೆಂಟ್ ಬಗ್ಗೆ ಜಾಗ್ರತೆವಹಿಸಿ. ಮನೆಯ ವಾತಾವರಣ ಚೆನ್ನಾಗಿರಲಿದೆ. ಈ ವಾರ ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿದೆ.

ವೃಷಭ ರಾಶಿ
ಈ ವಾರ ನಿಮಗೆ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ನಿಮಗೆ ವಹಿಸಿದ ಜವಾಬ್ದಾರಿ ಪೂರ್ಣಗೊಳಿಸಲು ಸಾಧ್ಯವಾಗುವುದು. ಈ ವಾರದ ಕುಟುಂಬ ಜೀವನದ ಬಗ್ಗೆ ಹೇಳುವುದಾದರೆ ವೈವಾಹಿಕ ಬದುಕಿನ ಕಡೆಗೆ ಗಮನಹರಿಸಬೇಕು, ಚಿಕ್ಕ ಪುಟ್ಟ ಮನಸ್ತಾಪ ಬಗೆಹರಿಸಲು ಪ್ರಯತ್ನಿಸಿ.
ಮಿಥುನ ರಾಶಿ
ಮಿಥುನ ರಾಶಿಯರು ಕೆಲಸವನ್ನು ನಿರ್ಲಕ್ಷ್ಯ ಮಾಡಬಾರದು, ಪ್ರಯತ್ನ ಪಟ್ಟರೆ ನಿಮ್ಮ ಸಮಸ್ಯೆಗೆ ಖಂಡಿತ ಪರಿಹಾರ ಸಿಗಲಿದೆ. ಮನೆಯವರ ಬೆಂಬಲ ನಿಮಗೆ ಸಿಗಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಕರ್ಕ ರಾಶಿ
ನೀವು ನಿಮ್ಮ ಶತ್ರುಗಳ ಬಗ್ಗೆ ಜಾಗ್ರತೆವಹಿಸಬೇಕು, ಕುಟುಂಬ ಜೀವನದ ಕಡೆಗೆ ಗಮನಹರಿಸಬೇಕು, ಚಿಕ್ಕ ಪುಟ್ಟ ವಿಷಯಗಳನ್ನು ನಿರ್ಲಕ್ಷ್ಯ ಮಾಡಬೇಡಿ, ಮನಸ್ತಾಪ ಹೆಚ್ಚಿಸಬಹುದು. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ. ನಿಮ್ಮೆಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ, ಕೆಲಸದ ಒತ್ತಡದ ಕಾರಣ ಕುಟುಂಬದ ಕಡೆಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುವುದಿಲ್ಲ. ಈ ವಾರ ವೃತ್ತಿ ಬದುಕಿನಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ವಾರ ಮಿಶ್ರಫಲ, ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಹಣಕಾಸಿನ ದೃಷ್ಟಿಯಿಂದ ನೋಡುವುದಾದರೆ ಈ ವಾರ ಖರ್ಚು ಅಧಿಕವಿರಲಿದೆ. ನೀವು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಾದರೂ ಸಂಗಾತಿಯ ಅಭಿಪ್ರಾಯ ಕೂಡ ಕೇಳಿ, ಅವರ ಭಾವನೆಗಳನ್ನು ಗೌರವಿಸಿ.
ತುಲಾ ರಾಶಿ
ಪ್ರಮುಖ ಕೆಲಸ ಸಂಬಂಧಿತ ವಿಷಯಗಳನ್ನಾಗಲಿ ನಿಮ್ಮ ವೈಯಕ್ತಿಕ ವಿಷಯಗಳನ್ನಾಗಲಿ, ವ್ಯಾಪಾರಿಗಳು ತಮ್ಮ ವ್ಯಾಪಾರ ಯೋಜನೆಗಳಾಗಲಿ ಇತರರ ಜೊತೆ ಹಂಚಿಕೊಳ್ಳಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ಈ ವಾರ ಆರೋಗ್ಯದ ಕಡೆಗೆ ಗಮನಹರಿಸಬೇಕು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ದುಬಾರಿಯಾಗಬಹುದು. ಕುಟುಂಬ ಜೀವನದಲ್ಲಿ ಒತ್ತಡವಿರಬಹುದು, ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಯ ಬರಬಹುದು. ಭಿನ್ನಾಭಿಪ್ರಾಯ ಬಗೆಹರಿಸಲು ಪ್ರಯತ್ನಿಸಿ, ಕ ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯಿರಿ.
ಧನು ರಾಶಿ
ಈ ವಾರ ಕೆಲಸ ಕಾರ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಚಿಕ್ಕ ತಪ್ಪು ದೊಡ್ಡ ನಷ್ಟ ಉಂಟು ಮಾಡಬಹುದು. ನಿಮ್ಮ ಮಾತುಗಳು ಸಂಗಾತಿಯನ್ನು ನೋಯಿಸಬಹುದು, ಈ ಬಗ್ಗೆ ಜಾಗ್ರತೆವಹಿಸಿ. ಆರ್ಥಿಕ ದೃಷ್ಟಿಯಿಂದ ಈ ವಾರ ಉತ್ತಮವಾಗಿದೆ. ಆರ್ಥಿಕ ಪ್ರಯತ್ನಗಳಿಗೆ ಉತ್ತಮ ಫಲ ಸಿಗಲಿದೆ. ಮೆಯ ಸದಸ್ಯರಲ್ಲಿ ಆರೋಗ್ಯ ಸಮಸ್ಯೆಯಿದ್ದರೆ ಅವರ ಆರೈಕೆ ಕಡೆಗೆ ಗಮನಹರಿಸಿ.
ಮಕರ ರಾಶಿ
ಮಕರ ರಾಶಿಯವರಿಗೆ ಈ ವಾರ ಉತ್ತಮವಾಗಿದೆ, ಆರ್ಥಿಕವವಾಗಿ ಉತ್ತಮ ಪ್ರಯೋಜನ ಪಡೆಯುತ್ತೀರಿ, ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ವಾರ ಉತ್ತಮವಾಗಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ. ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ, ಕುಟುಂಬ ಜೀವನ ಸರಾಸರಿಯಾಗಿರಲಿದೆ. ಸಂಗಾತಿ ಜೊತೆಗೆ ಚಿಕ್ಕ ಪುಟ್ಟ ಮನಸ್ತಾಪ ಬರಬಹುದು. ವೃತ್ತಿ ಬದುಕಿನ ದೃಷ್ಟಿಯಿಂದ ಈ ವಾರ ಉತ್ತಮವಾಗಿದೆ.
ಮೀನ ರಾಶಿ
ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ಈ ವಾರ ನಿಮ್ಮ ಪ್ರಮುಖ ಕಾರ್ಯದಲ್ಲಿ ಯಶಸ್ಸು ದೊರೆಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಅವಾಹಿತರಿಗೆ ಮದುವೆ ಸಂಬಂಧ ಬರಬಹುದು, ಆರೋಗ್ಯದ ದೃಷ್ಟಿಯಿಂದಲೂ ಈ ವಾರ ಉತ್ತಮವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











