Latest Updates
-
ಗಣೇಶೋತ್ಸವದ ಸೌಂಡ್ ಕಿರಿಕಿರಿ: ನೆರೆಹೊರೆಯವರ ಜೊತೆ ಜಗಳವಿಲ್ಲದೆ ನೆಮ್ಮದಿಯ ನಿದ್ರೆ ಪಡೆಯುವುದು ಹೇಗೆ? -
ದೆಹಲಿ ಮಳೆ: ನಿಮ್ಮ ಮನೆಯಲ್ಲಿ ಬೂಷ್ಟು ಮತ್ತು ತೇವಾಂಶ ತಡೆಯಲು 45 ನಿಮಿಷದ ಸಿಂಪಲ್ ಪ್ಲಾನ್! -
ಗಣೇಶ ಹಬ್ಬದ ಮೋದಕ: ಶುಗರ್ ಏರಿಕೆಯಾಗದಂತೆ ಸವಿಯಲು ಇಲ್ಲಿವೆ 5 ಆರೋಗ್ಯಕರ ಟಿಪ್ಸ್ -
ಐಫೋನ್ 18 ಪ್ರೋ ಪ್ರೀ-ಆರ್ಡರ್: ₹7,000 ಕ್ಯಾಶ್ಬ್ಯಾಕ್ ಪಡೆಯುವುದು ಹೇಗೆ? ನಕಲಿ ಆಫರ್ಗಳಿಂದ ಎಚ್ಚರ! -
ದೆಹಲಿ ಮಳೆ: ಜಾರಿ ಬೀಳದಂತೆ ಎಚ್ಚರ, ಬೆನ್ನುನೋವಿನಿಂದ ಮುಕ್ತಿ ಪಡೆಯಲು 12 ನಿಮಿಷದ ವರ್ಕೌಟ್ ರೂಟಿನ್! -
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್! -
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್!
ವಾರ ಭವಿಷ್ಯ (ಸೆಪ್ಟೆಂಬರ್22-28) : ಈ 7 ರಾಶಿಗಳಿಗೆ ಈ ವಾರ ಅನುಕೂಲಕರವಾಗಿದೆ
ರಾಶಿಫಲ ಪ್ರಕಾರ ಈ ವಾರ ಈ 7 ರಾಶಿಗಳಿಗೆ ವೃತ್ತಿ ಜೀವನದ ದೃಷ್ಟಿಯಿಂದ, ವೈಯಕ್ತಿಕ ಜೀವನದ ದೃಷ್ಟಿಯಿಂದ ಅನುಕೂಲಕರ:
ಮೇಷ ರಾಶಿ
ಸೆಪ್ಟೆಂಬರ್ ಮಾಸದ ಈ ವಾರ ನಿಮಗೆ ಅನುಕೂಲಕರವಾಗಿರಲಿದೆ, ವೃತ್ತಿ ಜೀವನದಲ್ಲಿ ಹಾಗೂ ವೈಯಕ್ತಿಕ ಬದುಕಿನಲ್ಲಿ ನೆಮ್ಮದಿ ಇರಲಿದೆ. ಇನ್ನು ಈ ಅವಧಿಯಲ್ಲಿ ಕೆಲಸದಲ್ಲಿನ ಸಮಸ್ಯೆಗಳು ಬಗೆಹರಿಯುವುದರಿಂದ ಖುಷಿಯಾಗಿರುತ್ತೀರಿ. ಕೆಲಸದಲ್ಲಿ ನಿಮ್ಮ ಸಹೋದ್ಯೋಗಿಗಳ ಬೆಂಬಲ ಕೂಡ ಸಿಗಲಿದೆ.

ಇನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಈ ಅವಧಿ ಅನುಕೂಲಕರವಾಗಿದೆ.
ಅರ್ಥಿಕವಾಗಿ ಈ ಸಮಯದಲ್ಲಿ ಯಾವುದೇ ದೊಡ್ಡ ಸಮಸ್ಯೆ ಇರಲ್ಲ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಕೂಡ ಚೆನ್ನಾಗಿರಲಿದೆ.
ವೃಷಭ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ. ವೃತ್ತ ಜೀವನದಲ್ಲಿ ಈ ಅವಧಿ ಉತ್ತಮವಾಗಿರಲಿದೆ. ಮನೆಯಲ್ಲಿ ಶುಭ ಕಾರ್ಯಗಳಿರಬಹುದು, ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿವೆ. ಹಣದ ಕೊರತೆಯಿಂದ ಯಾವುದೋ ಕೆಲಸ ಅಪೂರ್ಣವಾಗಿದ್ದರೆ ಈ ಅವಧಿ ಅನುಕೂಲಕರವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಏಳು ದಿನಗಳು ನಿಮಗೆ ಒಳ್ಳೆಯದು. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ನೀವು ಯಶಸ್ವಿಯಾಗಬಹುದು , ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿ ಪೂರ್ಣಗೊಳ್ಳಲಿದೆ. ವ್ಯಾಪಾರಸ್ಥರಿಗೆ ತಕ್ಕ ಲಾಭ ದೊರೆಯಲಿದೆ. ಮಗುವಿನ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಯಾವುದೇ ಕಾಳಜಿ ಇದ್ದರೆ ಅದು ಬಗೆಹರಿಯಲಿದೆ. ಅರೋಗ್ಯ ಉತ್ತಮವಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಆರ್ಥಿಕವಾಗಿ ಉತ್ತಮವಾಗಿದೆ. ಹಣಕಾಸಿನ ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ವೈದಿಕ ಶಾಸ್ತ್ರದ ಪ್ರಕಾರ ಈ ವಾರವ ನಿಮಗೆ ಅನುಕೂಲಕರವಾಗಿದೆ. ಉದ್ಯೋಗ ಅಥವಾ ವ್ಯವಹಾರವಾಗಿರಲಿ ಈ ವಾರ ನಿಮಗೆ ಅನುಕೂಲಕರವಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ವೈಯಕ್ತಿಕ ಬದುಕಿನಲ್ಲಿರುವ ಸಮಸ್ಯೆ ಬಗೆಹರಿಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಉತ್ತಮ ಬಾಂಧವ್ಯ ಇರಲಿದೆ.
ಮೀನ ರಾಶಿ
ಮೀನ ರಾಶಿಯವರಿಗೆ ಈ ವಾರ ನಿಮಗೆ ಉತ್ತಮವಾಗಿರಲಿದೆ. ವೃತ್ತಿಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ವೃತ್ತಿ ಬದುಕಿಗೆ ಸಂಬಂಧಿಸಿದಂತೆ
ಈ ಅವಧಿಯಲ್ಲಿ ನೀವು ಒಳ್ಳೆಯ ಸುದ್ದಿ ಪಡೆಯಬಹುದು.ಉದ್ಯೋಗವನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ನಿಮಗೆ ಉತ್ತಮ ಅವಕಾಶ ದೊರೆಯಲಿದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಲಾಭ ಸಿಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪ್ರಯತ್ನ ಪಡುವುದರಿಂದ ನಿಮ್ಮ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
