Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ವಾರ ಭವಿಷ್ಯ ಪ್ರಕಾರ 12 ರಾಶಿಗಳ ಈ ವಾರದ ಆರ್ಥಿಕ ಭವಿಷ್ಯ ಹೇಗಿದೆ?
ವಾರ ಭವಿಷ್ಯವನ್ನು ನೋಡುವುದಾದರೆ ಈ ವಾರ ಆರ್ಥಿಕವಾಗಿ ಕೆಲ ರಾಶಿಗಳಿಗೆ ಒಳ್ಳೆಯದು, ಇನ್ನು ಕೆಲ ರಾಶಿಗಳು ಹಣಕಾಸಿನ ವಿಷಯದಲ್ಲಿ ಜಾಗ್ರತೆವಹಿಸಬೇಕು, ಈ ವಾರದ 12 ರಾಶಿಗಳ ಆರ್ಥಿಕ ಭವಿಷ್ಯ ನೋಡೋಣ:

ಮೇಷ ರಾಶಿ
ಹಣದ ವಿಷಯದಲ್ಲಿ ಯಾವುದೇ ಸಮಸ್ಯೆ ಇರಲ್ಲ, ಈ ಏಳು ದಿನಗಳು ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ, ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ಆದರೆ ಹೆಚ್ಚು ಹಣ ಖರ್ಚು ಮಾಡಲು ಹೋಗಬೇಡಿ, ಅನಗ್ಯತ ಖರ್ಚಿಗೆ ಕಡಿವಾಣ ಹಾಕಿದರೆ ಒಳ್ಳೆಯದು.
ವೃಷಭ ರಾಶಿ
ಹಣದ ವಿಷಯದಲ್ಲಿ ಈ ವಾರ ಜಾಗ್ರತೆವಹಿಸಬೇಕು, ಹಣದ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಈ ಅವಧಿ ಉತ್ತಮವಲ್ಲ, ಅಲ್ಲದೆ ಈ ಸಮಯದಲ್ಲಿ ಖರ್ಚು ಅಧಿಕವಿರಲಿದೆ. ನೀವು ಖರ್ಚಿಗೆ ಕಡಿವಾಣ ಹಾಕಿದರೆ ಒಳ್ಳೆಯದು.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ವಾರ ಆರ್ಥಿಕವಾಗಿ ಉತ್ತಮವಲ್ಲ. ಈ ಅವಧಿಯಲ್ಲಿ ಖರ್ಚು ಅಧಿಕವಿರಲಿದೆ, ನೀವು ಶಾಪಿಂಗ್‌ಗೆ ಹೆಚ್ಚಿನ ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಇನ್ನು ನೀವು ನಿಮ್ಮ ಆದಾಯ ಹೆಚ್ಚಿಸಲು ಪ್ರಯತ್ನ ಹಾಕಿದರೆ ಅಥವಾ ಹಣ ಸಾಲ ಪಡೆಯಲು ಪ್ರಯತ್ನ ಮಾಡಿದರೆ ಈ ಅವಧಿ ಅನುಕೂಲಕರವಾಗಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ, ಈ ಸಮಯದಲ್ಲಿ ಹಣದ ಸಮಸ್ಯೆ ಎದುರಾಗಬಹುದು, ಖರ್ಚು ಹೆಚ್ಚಿರಲಿದೆ. ಆರೋಗ್ಯಕ್ಕಾಗಿ ಹಣದ ಖರ್ಚು ಹೆಚ್ಚಾಗಬಹುದು.
ಸಿಂಹ ರಾಶಿ
ಆರ್ಥಿಕ ದೃಷ್ಟಿಯಿಂದ ಈ ಅಅವಧಿ ಉತ್ತಮವಲ್ಲ, ಈ ವಾರ ಖರ್ಚು ಹೆಚ್ಚಿರಲಿದೆ, ಹಣವನ್ನು ಹೊಂದಿಸಲು ಕಷ್ಟವಾಗುವುದು. ನೀವು ಅನಗ್ಯತ ಖರ್ಚು ನಿಯಂತ್ರಿಸಿದರೆ ಒಳ್ಳೆಯದು.
ಕನ್ಯಾ ರಾಶಿ
ಕನ್ಯಾ ರಾಶಿಯ ವ್ಯಾಪಾರಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ನೀವು ಅಪೇಕ್ಷಿತ ಲಾಭ ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಚೆನ್ನಾಗಿರುವುದರಿಂದ ನಿಮ್ಮ ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ನಡೆಯಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಆರ್ಥಿಕವಾಗಿ ಉತ್ತಮವಾಗಿದೆ. ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರೆ ಈ ಅವಧಿಯಲ್ಲಿ ಅದಕ್ಕೆ ಪರಿಹಾರ ಸಿಗಲಿದೆ. ನೀವು ಸಾಲಕ್ಕೆ ಪ್ರಯತ್ನಿಸುತ್ತಿದ್ದರೆ ಈ ಅವಧಿ ಉತ್ತಮವಾಗಿರಲಿದೆ. ಖರ್ಚು ಮಿತಗೊಳಿಸಿದರೆ ಒಳ್ಳೆಯದು.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಹಣದ ವಿಷಯದಲ್ಲಿ ಜಾಗ್ರತೆವಹಿಸಬೇಕು, ವ್ಯಾಪಾರಿಗಳು ಹಣದ ತೊಂದರೆಯನ್ನು ಎದುರಿಸಬಹುದು. ಕೆಲವೊಂದು ಖರ್ಚುಗಳು ಬರಲಿದೆ, ಆದರೆ ಖರ್ಚಿಗೆ ಕಡಿವಾಣ ಹಾಕಿದರೆ ಒಳ್ಳೆಯದು.
ಧನು ರಾಶಿ
ಹಣದ ವಿಷಯದಲ್ಲಿ ಈ ವಾರ ಉತ್ತಮವಾಗಿದೆ. ಈ ಸಮಯದಲ್ಲಿ ಹಣದ ಚಿಂತೆ ಕಾಡಲ್ಲ, ಅಲ್ಲದೆ ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಾಗುವುದು. ವ್ಯಾಪಾರಿಗಳು ಈ ಸಮಯದಲ್ಲಿ ಆರ್ಥಿಕ ಲಾಭ ಪಡೆಯುತ್ತೀರಿ.
ಮಕರ ರಾಶಿ
ಮಕರ ರಾಶಿಯವರು ಹಣದ ವಿಷಯದಲ್ಲಿ ಹೆಚ್ಚು ಜಾಗ್ರತೆವಹಿಸಬೇಕು. ಹಣದ ಹೂಡಿಕೆ ಮಾಡುವುದಾದರೆ ತುಂಬಾ ಜಾಗ್ರತೆವಹಿಸಬೇಕು. ವ್ಯಾಪಾರಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳದಿದ್ದರೆ ಒಳ್ಳೆಯದು.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ವಾರ ಉತ್ತಮವಾಗಿರುತ್ತದೆ, ಅತಿಯಾದ ಅತ್ಮವಿಶ್ವಾಸ ಒಳ್ಳೆಯದಲ್ಲ. ಹಣದ ಹೂಡಿಕೆ ಮಾಡುವುದಾದರೆ ನೀವು ಅದರ ಬಗ್ಗೆ ಚೆನ್ನಾಗಿ ವಿಚಾರಿಸಿ ಹೂಡಿಕೆ ಮಾಡಿದರೆ ಒಳ್ಳೆಯದು.
ಮೀನ ರಾಶಿ
ಮೀನ ರಾಶಿಯವರಿಗೆ ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದದೆ. ವ್ಯಾಪಾರಿಗಳು ಆರ್ಥಿಕ ಲಾಭ ಗಳಿಸಲು ಸಾಧ್ಯವಾಗುವುದು. ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
