Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಈ ವಾರ ಪ್ರೇಮಿಗಳ ಪ್ರೀತಿಯ ಜೀವನ, ವಿವಾಹಿತರ ದಾಂಪತ್ಯ ಜೀವನ ಹೇಗಿರಲಿದೆ?
ಗ್ರಹಗತಿಗಳ ಸ್ಥಾನವು ಈ ವಾರ ಪ್ರೇಮಿಗಳ ಪ್ರೀತಿ ಮೇಲೆ, ವಿವಾಹಿತರ ಸಂಬಂಧದದ ಮೇಲೆ, ಅವಾಹಿತರ ಪ್ರೀತಿ ಭವಿಷ್ಯ ಬಗ್ಗೆ ಏನು ಹೇಳಿದೆ ಎಂದು ನೋಡೋಣ:
ಮೇಷ ರಾಶಿ
ಈ ವಾರ ನಿಮ್ಮ ಪ್ರೇಮ ಜೀವನ ತುಂಬಾ ಚೆನ್ನಾಗಿರಲಿದೆ, ವಿವಾಹಿತರಿಗೆ ಈ ಸಮಯ ತುಂಬಾನೇ ಮಾಧುರ್ಯದಿಂದ ಕೂಡಿರಲಿದೆ. ನೀವಿಬ್ಬರು ಚಿಕ್ಕ ಟ್ರಿಪ್ ಪ್ಲ್ಯಾನ್ ಮಾಡಬಹುದು, ಇನ್ನು ಪ್ರೇಮಿಗಳು ತಮ್ಮ ನಡುವೆ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಬೇಕು.

ವೃಷಭ ರಾಶಿ
ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ. ನಿಮ್ಮ ನಡುವೆ, ಪ್ರೀತಿ, ಹೊಂದಾಣಿಕೆ ಇರಲಿದೆ. ಇನ್ನು ಮದುವೆಗೆ ಸಂಬಂಧ ಹುಡುಕುತ್ತಿದ್ದರೆ ಈ ವಾರ ಮದುವೆ ಪ್ರಸ್ತಾಪ ಬರಲಿದೆ, ಇನ್ನು ಪ್ರೇಮಿಗಳು ತಮ್ಮ ಸಂಬಂಧದ ಬಗ್ಗೆ ಮನೆಯಲ್ಲಿ ತಿಳಿಸಬಹುದು.
ಮಿಥುನ ರಾಶಿ
ಮಿಥುನ ರಾಶಿಗಳ ಪ್ರೇಮಿಗಳಿಗೆ ಈ ವಾರ ಸವಾಲಿನಿಂದ ಕೂಡಿರಲಿದೆ, ಆತುರದ ನಿರ್ಧಾರದಿಂದ ದೂರವಿರಿ. ವಿವಾಹಿತರು ಕೂಡ ಭಿನ್ನಾಭಿಪ್ರಯ ಜಗಳ ತಪ್ಪಿಸಲು ನೀವು ನಿಮ್ಮ ಸಂಗಾತಿಯನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು, ಕೋಪದಿಂದ ಅವರ ಮನಸ್ಸು ನೋಯಿಸದಿರಿ.
ಕರ್ಕ ರಾಶಿ
ಪ್ರೇಮಿಗಳಿಗೆ, ವಿವಾಹಿತರಿಗೆ ಈ ವಾರ ಅನುಕೂಲಕರವಾಗಿದೆ, ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಗಾಢವಾಗುತ್ತದೆ, ದೈನಂದಿನ ಕಾರ್ಯಗಳಲ್ಲಿ ನಿಮ್ಮ ಪ್ರೀತಿಪಾತ್ರರ ಬೆಂಬಲವನ್ನು ನೀವು ಪಡೆಯುತ್ತೀರಿ. ಪ್ರೇಮಿಗಳಿಗೆ ರೊಮ್ಯಾಂಟಿಕ್ ಆಗಿರಲಿದೆ. ಈ ವಾರ ನಿಮ್ಮ ನೆನಪಿನಲ್ಲಿ ಸದಾ ಉಳಿಯುವ ಸುಂದರ ಘಟನೆಗಳು ನಡೆಯಬಹುದು.
ಸಿಂಹ ರಾಶಿ
ಕುಟುಂಬ ಜೀವನದ ಕಡೆಗೆ ತುಂಬಾ ಗಮನಹರಿಸಬೇಕು, ನೀವು ನಿಮ್ಮ ಕುಟುಂಬದ ಜೀವನದ ಕಡೆಗೆ ಗಮನಹರಿಸಬೇಕು, ನಿಮ್ಮ ನಡುವೆ ಏನೇ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ತಾಳ್ಮೆಯಿಂದ ಬಗೆಹರಿಸಿ.
ಕನ್ಯಾ ರಾಶಿ
ನಿಮ್ಮ ಹಾಗೂ ಸಂಗಾತಿಯ ನಡುವಿನ ಬಾಂಧವ್ಯ ಗಟ್ಟಿಯಾಗಲಿದೆ, ನಿಮ್ಮಿಬ್ಬರ ನಡುವಿನ ಭಿನ್ನಾಭಿಪ್ರಾಯಗಳು ದೂರಾಗಲಿದೆ, ಹೀಗಾಗಿ ಈ ವಾರ ಖುಷಿಯಿಮದ ಇರುವಿರಿ. ಇನ್ನು ಈ ವಾರದ ಕೊನೆ ನಿಮಗೆ ಮತ್ತಷ್ಟು ವಿಶೇಷವಾಗಿರಲಿದೆ.
ತುಲಾ ರಾಶಿ
ಪ್ರೇಮಿಗಳಿಗೆ ಈ ದಿನ ವಿಶೇಷವಾಗಿರಲಿದೆ, ನಿಮ್ಮ ಸಂಗಾತಿಯಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ, ನೀವು ನಿಮ್ಮೆಲ್ಲಾ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುತ್ತೀರಿ, ಇದು ಸಂಬಂಧದ ದೃಷ್ಟಿಯಿಂದ ಒಳ್ಳೆಯದು ಕೂಡ ಹೌದು.
ವೃಶ್ಚಿಕ ರಾಶಿ
ಈ ವಾರ ನಿಮ್ಮ ಪ್ರಮುಖ ಸಮಸ್ಯೆ ಸಂಗಾತಿಯ ಸಹಾಯದಿಂದ ಬಗೆಹರಿಯಲಿದೆ. ಈ ಅವಧಿಯಲ್ಲಿ ನೀವು ನಿಮ್ಮ ವೈಯಕ್ತಿಕ ಜೀವನದ ಕಡೆಗೆ ಹೆಚ್ಚು ಗಮನಹರಿಸುತ್ತೀರಿ. ಪ್ರೇಮಿಗಳು ಈ ವಾರ ಪ್ರಣಯ ಪಕ್ಷಿಗಳಂತೆ ಸಮಯ ಕಳೆಯುತ್ತೀರಿ.
ಧನು ರಾಶಿ
ನಿಮ್ಮ ಸಂಬಂಧ ಚೆನ್ನಾಗಿರಲಿದೆ, ನಿಮ್ಮ ನಡುವೆ ಒಳ್ಳೆಯ ಹೊಂದಾಣಿಕೆ ಇರಲಿದೆ. ಪ್ರೇಮಿಗಳ ನಡುವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ನೀವು ಬುದ್ಧಿವಂತಿಕೆಯಿಂದ ವರ್ತಿಸಿದರೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗುವುದು.
ಕುಂಭ ರಾಶಿ
ನಿಮ್ಮ ಪ್ರೀತಿಯ ಜೀವನದಲ್ಲಿ ಹೊಸ ತಿರುವುಉ ಉಂಟಾಗಲಿದೆ, ವೈವಾಹಿಕ ಬದುಕಿನಲ್ಲಿ ಖುಷಿ, ನೆಮ್ಮದಿ ಇರಲಿದೆ. ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಗಾಢವಾಗುವುದು. ನಿಮಗೆ ಪ್ರತಿಕೂಲ ಸಮಯದಲ್ಲಿ ಸಂಗಾತಿಯ ಬೆಂಬಲ ದೊರೆಯಲಿದೆ.
ಮೀನ ರಾಶಿ
ವೈವಾಹಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳು ದೂರವಾಗುವುದು. ಏನೇ ಭಿನ್ನಾಭಿಪ್ರಾಯವಿದ್ದರೆ ಅದು ದೂರಾಗಲಿದೆ, ಪ್ರೇಮ ಜೀವನದಲ್ಲಿ ಕೆಲವು ಗೊಂದಲಗಳು ಇದ್ದರೆ ನೀವು ಮುಕ್ತವಾಗಿ ಮಾತನಾಡಯವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
