Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಈ ವಾರ ಜೂನ್ 2-8ರವರೆಗಿನ ಪ್ರೀತಿ ಭವಿಷ್ಯ: ಈ ವಾರ ನಿಮ್ಮ ಪ್ರೀತಿ ಜೀವನ ಹೇಗಿರಲಿದೆ?
ಈ ವಾರ ಪ್ರೇಮಿಗಳಿಗೆ , ವಿವಾಹಿತರಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಮೇಷ ರಾಶಿಯ ಪ್ರೇಮಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ನೀವಿಬ್ಬರು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಈ ವಾರ ದಂಪತಿಗಳ ನಡುವಿನ ಸಂಬಂಧ ಚೆನ್ನಾಗಿರಲಿದೆ.

ವೃಷಭ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ, ಈ ಅವಧಿಯಲ್ಲಿ ಪ್ರೀತಿ ನಿಮ್ಮ ಹೃದಯ ಮತ್ತು ಮನಸ್ಸಿನ ಮೇಲೆ ಪ್ರಾಬಲ್ಯ ಸಾಧಿಸುತ್ತದೆ. ನಿಮ್ಮ ಸಂಗಾತಿಯೊಂದಿಗೆ ಸಾಧ್ಯವಾದಷ್ಟು ಸಮಯವನ್ನು ಕಳೆಯಲು ನೀವು ಬಯಸುತ್ತೀರಿ. ನೀವು ಪ್ರೇಮ ವಿವಾಹವನ್ನು ಹೊಂದಲು ಬಯಸಿದರೆ ಅದರ ಕುರಿತು ಮನೆಯವರಿಗೆ ತಿಳಿಸಲು ಈ ಅವಧಿ ಉತ್ತಮವಾಗಿದೆ.
ಮಿಥುನ ರಾಶಿ
ಪ್ರೇಮಿಗಳು ಈ ವಾರ ಜಾಗ್ರತೆವಹಿಸಬೇಕು. ಅನುಮಾನ ನಿಮ್ಮ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಹೆಚ್ಚಿಸಬಹುದು. ನೀವು ಸಂಶಯ ಬಿಡಬೇಕು, ಸಂಗಾತಿಯನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು. ವೈವಾಹಿಕ ಜೀವನದಲ್ಲಿ ಇರುವ ಭಿನ್ನಾಭಿಪ್ರಾಯ ದೂರಾಗಲಿದೆ.
ಕರ್ಕ ರಾಶಿ
ಈ ವಾರ ನಿಮಗೆ ತುಂಬಾ ಕಾರ್ಯನಿರತವಾಗಿರಲಿದೆ. ಹಾಗಾಗಿ ಸಂಗಾತಿಗೆ ಹೆಚ್ಚು ಸಮಯ ನೀಡಲು ಸಾಧ್ಯವಾಗುವುದಿಲ್ಲ. ಈ ವಿಚಾರದಲ್ಲಿ ನಿಮ್ಮ ನಡುವೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಕೋಪ ಸಮಸ್ಯೆ ಹೆಚ್ಚಿಸಲಿದೆ, ಈ ಅವಧಿಯಲ್ಲಿ ನೀವು ನಿಮ್ಮ ಸಂಗಾತಿಯನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ, ಕುಟುಂಬದಲ್ಲಿ ಸಂತೋಷ ಇರಲಿದೆ.
ಸಿಂಹ ರಾಶಿ
ಪ್ರಣಯ ಜೀವನದಲ್ಲಿ ಹೊಸ ತಿರುವು ಉಂಟಾಗಲಿದೆ, ನಿಮ್ಮಿಬ್ಬರ ನಡುವೆ ಅಂತರ ಕಡಿಮೆಯಾಗಲಿದೆ. ಈ ಅವಧಿಯಲ್ಲಿ, ನಿಮ್ಮ ನಡುವಿನ ಎಲ್ಲಾ ತಪ್ಪು ತಿಳುವಳಿಕೆಗಳನ್ನು ತೆಗೆದುಹಾಕಲು ನೀವು ನಿಮ್ಮ ಕೈಲಾದಷ್ಟು ಪ್ರಯತ್ನಿಸುತ್ತೀರಿ, ವೈವಾಹಿಕ ಜೀವನ ಚೆನ್ನಾಗಿರಲಿದೆ.
ಕನ್ಯಾ ರಾಶಿ
ನೀವು ನಿಮ್ಮ ಸಂಬಂಧಗಳನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ನಿಮ್ಮ ತಪ್ಪು ವರ್ತನೆ ನಿಮ್ಮ ಸಂಗಾತಿಯ ಮನಸ್ಸಿಗೆ ನೋವಾಗದಂತೆ ನೋಡಿಕೊಳ್ಳಿ. ಅನಗ್ಯತ ವಿಷಯಗಳನ್ನು ಚರ್ಚೆ ಮಾಡಬೆಡಿ. ವಾರದ ಅಂತ್ಯವು ನಿಮಗೆ ಉತ್ತಮವಾಗಿರುತ್ತದೆ.
ತುಲಾ ರಾಶಿ
ವಿವಾಹಿತರಿಗೆ ಈ ವಾರ ತುಂಬಾ ಒಳ್ಳೆಯದು. ನಿಮ್ಮ ಸಂಬಂಧವು ಗಟ್ಟಿಯಾಗುತ್ತದೆ. ನೀವು ಪ್ರೇಮ ವಿವಾಹವನ್ನು ಆಗಲು ಬಯಸಿದರೆ ನಿಮ್ಮ ಮದುವೆಗೆ ಕುಟುಂಬದವರ ಒಪ್ಪಿಗೆ ದೊರೆಯಲಿದೆ.
ವೃಶ್ಚಿಕ ರಾಶಿ
ಅದು ಪ್ರೇಮ ಜೀವನವಾಗಿರಲಿ ಅಥವಾ ವೈವಾಹಿಕ ಜೀವನವೇ ಆಗಿರಲಿ, ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ನೀವಿಬ್ಬರು ಚಿಕ್ಕ ಟ್ರಿಪ್ ಕೂಡ ಪ್ಲ್ಯಾನ್ ಮಾಡಬಹುದು. ಈ ದಿನ ನಿಮಗೆ ತುಂಬಾ ಉತ್ತಮವಾಗಿರಲಿದೆ.
ಧನು ರಾಶಿ
ಈ ಸಮಯದಲ್ಲಿ ನೀವು ನಿಮ್ಮ ಸಂಗಾತಿಯಿಂದ ದೂರ ಉಳಿಯಬೇಕಾಗಬಹುದು. ಇದರಿಂದ ನಿಮ್ಮ ಮನಸ್ಸು ತುಂಬಾನೇ ತಳಮಳದಿಂದ ಕೂಡಿರಲಿದೆ. ನೀವು ನಿಮ್ಮ ಸಂಗಾತಿಯ ಹೃದಯವನ್ನು ನೋಯಿಸುವ ಯಾವುದನ್ನೂ ಮಾಡಬೇಡಿ. ವಾರದ ಮಧ್ಯಭಾಗವು ನಿಮಗೆ ತುಂಬಾ ವಿಶೇಷವಾಗಿರಲಿದೆ. ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡುತ್ತೀರಿ.
ಮಕರ ರಾಶಿ
ನಿಮ್ಮ ಪ್ರಣಯ ಜೀವನಕ್ಕೆ ಹೆಚ್ಚು ಗಮನ ಕೊಡಲು ನಿಮಗೆ ಸಾಧ್ಯವಾಗುವುದಿಲ್ಲ. ಕೆಲಸದ ಬ್ಯುಸಿ ಕಾರಣ ಸಂಗಾತಿಗೆ ಗಮನ ನೀಡಲು ಗಮನ ನೀಡಲು ಸಾಧ್ಯವಾಗುವುದಿಲ್ಲ, ಇದು ಸಂಬಂಧದಲ್ಲಿ ಸಮಸ್ಯೆ ಉಂಟಾಗಬಹುದು. ವಾರದ ಅಂತ್ಯವು ನಿಮಗೆ ಉತ್ತಮವಾಗಿರುತ್ತದೆ. ಈ ಅವಧಿಯಲ್ಲಿ ನೀವು ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ.
ಕುಂಭ ರಾಶಿ
ಈ ವಾರ ನಿಮ್ಮ ಪ್ರಣಯ ಜೀವನಕ್ಕೆ ಹೆಚ್ಚು ಗಮನ ಕೊಡಲು ನಿಮಗೆ ಸಾಧ್ಯವಾಗುವುದಿಲ್ಲ. ನಿಮ್ಮ ವೃತ್ತಿಪರ ಜೀವನದಲ್ಲಿ ನೀವು ತುಂಬಾ ಕಾರ್ಯನಿರತರಾಗಿರಬಹುದು. ವಾರದ ಅಂತ್ಯವು ನಿಮಗೆ ಉತ್ತಮವಾಗಿರುತ್ತದೆ. ಈ ಅವಧಿಯಲ್ಲಿ ನೀವು ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ.
ಮೀನ ರಾಶಿ
ಸಂಬಂದದಲ್ಲಿ ಅಹಂಕಾರ, ಅಹಂ ಒಳ್ಳೆಯದಲ್ಲ. ಚಿಕ್ಕ ವಿಷಯವನ್ನು ದೊಡ್ಡದಾಗಿ ಮನಸ್ಸಿಗೆ ತೆಗೆದುಕೊಳ್ಳಬೇಡಿ. ಇನ್ನು ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು, ಆದರೆ ಸ್ವಲ್ಪ ಕಾಯುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
