Latest Updates
-
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ!
ಈ ವಾರದ ರಾಶಿಫಲ ಪ್ರಕಾರ ಪ್ರೇಮಿಗಳಿಗೆ, ವಿವಾಹಿತರಿಗೆ, ಅವಾಹಿತರಿಗೆ ಹೇಗಿರಲಿದೆ?
ಈ ವಾರದ ರಾಶಿಫಲ ಪ್ರಕಾರ ಈ ವಾರ ದ್ವಾದಶ ರಾಶಿಗಳ ಪ್ರೀತಿ ಭವಿಷ್ಯ ಹೇಗಿದೆ?
ಮೇಷ ರಾಶಿ
ನೀವು ಸಂಬಂಧದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ. ನಿಮ್ ನಡುವಿನ ಭಿನ್ನಾಭಿಪ್ರಾಯ ಬುದ್ಧಿವಂತಿಕೆಯಿಂದ ಬಗೆಹರಿಸಲು ಪ್ರಯತ್ನಿಸಿ. ನಿಮ್ಮ ಸಂಗಾತಿಯ ನಂಬಿಕೆ ಗಳಿಸಲು ಪ್ರಯತ್ನಿಸಬೇಕು, ಅವರ ಜೊತೆ ಹೆಚ್ಚಿನ ಸಮಯ ಕಳೆಯುವುದು ಒಳ್ಳೆಯದು.

ವೃಷಭ ರಾಶಿ
ವೈವಾಹಿಕ ಜೀವನ ಚೆನ್ನಾಗಿರಲಿದೆ. ಪ್ರತಿಕೂಲ ಸಂದರ್ಭದಲ್ಲಿ ನಿಮ್ಮ ಸಂಗಾತಿಯಿಂದ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ಪ್ರೇಮಿಗಳಿಗೆ ವಿಶೇಷವಾಗಿರಲಿದೆ, ನೀವು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುತ್ತೀರಿ, ಹಾಗಾಗಿ ಈ ವಾರ ವಿಶೇಷವಾಗಿರಲಿದೆ.
ಮಿಥುನ ರಾಶಿ
ಈ ವಾರ ವೈವಾಹಿಕ ಜೀವನದಲ್ಲಿನ ಭಿನ್ನಾಭಿಪ್ರಾಯ ದೂರಾಗಲಿದೆ. ಪ್ರೇಮ ಸಂಬಂಧ ಗಟ್ಟಿಯಾಗಲಿದೆ. ನಿಮ್ಮ ನಡುವೆ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ, ವಿವಾಹಿತರಿಗೆ ಈ ವಾರ ಅನುಕೂಲಕರವಾಗಿದೆ.
ಕರ್ಕ ರಾಶಿ
ವೈವಾಹಿಕ ಜೀವನ ಚೆನ್ನಾಗಿರಲಿದೆ. ಈ ವಾರ ಚಿಕ್ಕ ಟ್ರಿಪ್ ಪ್ಲ್ಯಾನ್ ಮಾಡಬಹುದು. ಇದು ನಿಮ್ಮಲ್ಲಿ ಲವಲವಿಕೆ ತುಂಬುವುದು, ಪ್ರೇಮಿಗಳಿಗೆ ಕೂಡ ಈ ವಾರ ವಿಶೇಷವಾಗಿರಲಿದೆ.
ಸಿಂಹ ರಾಶಿ
ಕೆಲಸದ ಒತ್ತಡವು ನಿಮ್ಮ ವೈವಾಹಿಕ ಜೀವನದ ಮೇಲೆ ಪರಿಣಾಮ ಬೀರಬಹುದು, ಕೆಲಸದ ಸಮಸ್ಯೆ ಮನೆಗೆ ತರದಂತೆ ನೋಡಿಕೊಂಡರೆ ಒಳ್ಳೆಯದು. ಅನೈತಿಕ ಸಂಬಂಧವಿರುವವರು ಅದರಿಂದ ಹೊರ ಬಂದರೆ ಮಾತ್ರ ನೆಮ್ಮದಿ ಸಿಗಲಿದೆ. ನಿಮ್ಮ ಸಂಗಾತಿ ನಿಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ನಿಮ್ಮ ಮನಸ್ಸಿಗೆ ನೋವುಂಟಾಗಬಹುದು.
ಕನ್ಯಾ ರಾಶಿ
ವೈವಾಹಿಕ ಜೀವನದಲ್ಲಿನ ಸಮಸ್ಯೆಗಳು ಕೊನೆಗೊಳ್ಳುತ್ತವೆ , ನೀವು ನಿಮ್ಮ ಸಂಗಾತಿಗೆ ಹೆಚ್ಚಿನ ಸಮಯ ನೀಡುವುದರಿಂದ ನಿಮ್ಮ ಬಾಂಧವ್ಯ ಚೆನ್ನಾಗಿರಲಿದೆ, ಈ ವಾರ ನಿಮಗೆ ರೊಮ್ಯಾಂಟಿಕ್ ಅಗಿರಲಿದೆ. ಪ್ರೇಮಿಗಳು ಮದುವೆಯ ನಿರ್ಧಾರ ತೆಗೆದುಕೊಳ್ಳಬಹುದು.
ತುಲಾ ರಾಶಿ
ಅನೇಕ ಸಮಸ್ಯೆಗಳಿಂದಾಗಿ ವೈವಾಹಿಕ ಜೀವನದ ಕಡೆಗೆ ಗಮನಹರಿಸುವುದು ಕಷ್ಟವಾಗುವುದು. ಇದು ನಿಮ್ಮ ಸಂಗಾತಿಯ ಅಸಮಧಾನಕ್ಕೆ ಕಾರಣವಾಗಬಹದುಉ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು.
ವೃಶ್ಚಿಕ ರಾಶಿ
ನಿಮ್ಮ ಸಂಗಾತಿಯ ಮನಸ್ಸು ನೋಯಿಸುವ ಮಾತುಗಳನ್ನಾಡದಂತೆ ಜಾಗ್ರತೆವಹಿಸಿ. ಅವಾಹಿತರಿಗೆ ಮದುವೆ ಪ್ರಸ್ತಾಪ ಬಂದರೆ ಆತುರದ ನಿರ್ದಾರ ಬೇಡ, ಪ್ರೇಮಿಗಳಿಗೆ ಏರಳಿತದ ವಾರವಾಗಿದೆ.
ಧನು ರಾಶಿ
ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಸಂಗಾತಿಗೆ ನೀವು ಬೆಂಬಲ ನೀಡುತ್ತೀರಿ, ಇದರಿಂದಾಗಿ ಅವರಿಗೆ ನಿಮ್ಮ ಮೇಲೆ ಪ್ರೀತಿ ಹೆಚ್ಚಾಗಲಿದೆ. ಪ್ರೇಮ ಸಂಬಂಧಗಳಲ್ಲಿ ಆಪ್ತತೆ ಹೆಚ್ಚಲಿದೆ. ಪ್ರೇಮಿಗಳಿಗೆ, ಒಂಟಿಯಾಗಿರುವವರೆಗೆ ಮದುವೆ ಮಾತುಕತೆಗೆ ಈ ಸಮಯವು ಅನುಕೂಲಕರವಾಗಿರುತ್ತದೆ.
ಮಕರ ರಾಶಿ
ನಿಮ್ಮ ಸಂಗಾತಿಯೊಂದಿಗೆ ನೀವು ಹೆಚ್ಚು ಸಮಯ ಕಳೆಯಲು ಸಾಧ್ಯವಾಗುವುದು, ಇದರಿಂದ ನಿಮ್ಮ ಸಂಬಂಧವು ಗಟ್ಟಿಯಾಗುತ್ತದೆ. ಪ್ರೇಮಿಗಳಿಗೆ ಈ ವಾರ ಸ್ವಲ್ಪ ಒತ್ತಡ ಇರುತ್ತದೆ. ನಿಮ್ಮ ನಡುವೆ ಪರಸ್ಪರ ತಿಳುವಳಿಕೆಯ ಕೊರತೆ ಕಂಡು ಬರುವುದು, ಇಬ್ಬರು ಮಾತನಾಡಿ ನಿಮ್ಮ ಸಮಸ್ಯೆ ಬಗೆಹರಿಸಿದರೆ ಒಳ್ಳೆಯದು.
ಕುಂಭ ರಾಶಿ
ವೈವಾಹಿಕ ಜೀವನದಲ್ಲಿ ಸಾಮರಸ್ಯ ಇರಲಿದೆ. ಪ್ರೇಮಿಗಳು ಎದುರಿಸುತ್ತಿರುವ ಸಮಸ್ಯೆಗಳು ದೂರವಾಗುತ್ತವೆ , ನೀವು ಮದುವೆಯ ತೀರ್ಮಾನಕ್ಕೆ ಬರಬಹುದು.
ಮೀನ ರಾಶಿ
ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು, ನೀವು ವಿವಾಹಿತರಾಗಿದ್ದರೆ ನಿಮ್ಮ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ಇದರಿಂದಾಗಿ ಮನೆಯಲ್ಲಿ ಖುಷಿಯ ವಾತಾವರಣ ಇರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications