Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಾರ ಭವಿಷ್ಯ ಪ್ರಕಾರ ಆಗಸ್ಟ್ ಮಾಸದ ಕೊನೆಯ ವಾರ ನಿಮ್ಮ ಪ್ರೀತಿ ಜೀವನಕ್ಕೆ ಹೇಗಿರಲಿದೆ?
ಈ ವಾರದ ರಾಶಿಫಲ ಪ್ರಕಾರ ಈ ವಾರ ನಿಮ್ಮ ಪ್ರೀತಿ ಭವಿಷ್ಯ ಹೇಗಿರಲಿದೆ?
ಮೇಷ ರಾಶಿ
ಸಂಬಂಧದ ವಿಷಯದಲ್ಲಿ ನೋಡುವುದಾದರೆ ಈ ವಾರ ನಿಮಗೆ ಉತ್ತಮವಾಗಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ. ಅಲ್ಲದೆ ನಿಮಗೆ ನಿಮ್ಮ ಪ್ರೀತಿ ಪಾತ್ರರ ಬೆಂಬಲ ಇರುವುದರಿಂದ ಆತ್ಮವಿಶ್ವಾಸ ಹೆಚ್ಚಾಗಲಿದೆ.

ವೃಷಭ ರಾಶಿ
ನೀವು ಕೆಲಸದ ಒತ್ತಡ ಅಂತ ಕುಟುಂಬವನ್ನು ನಿರ್ಲಕ್ಷ್ಯ ಮಾಡಬೇಡಿ, ನಿಮ್ಮ ಸಂಬಂಧಗಳಿಗೆ ಪ್ರಾಮುಖ್ಯತೆ ನೀಡಿ, ಮನೆಯ ಜವಾಬ್ದಾರಿ ತೆಗೆದುಕೊಳ್ಳಬೇಕು, ನಿಮ್ಮ ವರ್ತನೆಯಿಂದ ಮನೆಯ ವಾತಾವರಣ ಹಾಳಾಗದಂತೆ ಜಾಗ್ರತೆವಹಿಸಬೇಕು, ಇನ್ನು ಕೋಪಕ್ಕೆ ಕಡಿವಾಣ ಹಾಕಿದರೆ ತುಂಬಾ ಒಳ್ಳೆಯದು.
ಮಿಥುನ ರಾಶಿ
ಸಂಬಂಧಗಳ ವಿಷಯದಲ್ಲಿ ಈ ಸಮಯವು ತುಂಬಾ ಉತ್ತಮವಾಗಿರುತ್ತದೆ. ಪ್ರತಿಕೂಲ ಸಂದರ್ಭದಲ್ಲಿ ನಿಮ್ಮ ಸಂಗಾತಿಯ ಸಂಪೂರ್ಣ ಬೆಂಬಲ ಸಿಗುವುದರಿಂದ ಗೆಲುವಾಗಿರುತ್ತೀರಿ. ನೀವು ಹಾಗೂ ಸಂಗಾತಿ ಜೊತೆಯಾಗಿ ಸಮಯ ಕಳೆಯುತ್ತೀರಿ. ಹೀಗಾಗಿ ನಿಮ್ಮಿಬ್ಬರ ನಡುವಿನ ಭಾಂಧವ್ಯ ಚೆನ್ನಾಗಿರಲಿದೆ. ಪ್ರೇಮಿಗಳಿಗೆ ಈ ವಾರ ಉತ್ತಮವಾಗಿರಲಿದೆ.
ಕರ್ಕ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ. ಅವಿವಾಹಿತರಿಗೆ ಉತ್ತಮ ವಿವಾಹ ಪ್ರಸ್ತಾಪವಾಗುವ ಸಾಧ್ಯತೆಯಿದೆ. ಪ್ರೇಮಿಗಳ ನಡುವ ಬಾಂಧವ್ಯ ತುಂಬಾ ಹೆಚ್ಚಾಗಿರಲಿದೆ, ನಿಮ್ಮ ನಡುವೆ ಪ್ರೀತಿ ಹೆಚ್ಚಾಗಲಿದೆ, ನಂಬಿಕೆ ಬಲವಾಗುವುದು.
ಸಿಂಹ ರಾಶಿ
ವೈವಾಹಿಕ ಬದುಕು ಚೆನ್ನಾಗಿರಲಿದೆ, ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲುವುದರಿಂದ ಈ ಅವಧಿ ಉತ್ತಮವಾಗಿರಲಿದೆ. ಕುಟುಂಬದ ಬೇರೆ ಸದಸ್ಯರ ಜೊತೆಗೆ ಸಮಸ್ಯೆ ಇದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ಪ್ರೇಮಿಗಳಿಗೆ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ.
ಕನ್ಯಾ ರಾಶಿ
ಈ ವಾರ ಸಂಬಂಧದಲ್ಲಿ ಏರಳಿತಗಳಿರಬಹುದು. ಪ್ರೇಮ ಜೀವನವಾಗಲಿ ಅಥವಾ ವೈವಾಹಿಕ ಜೀವನವಾಗಲಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ವೈವಾಹಿಕ ಬದುಕಿನಲ್ಲಿ ಸಮಸ್ಯೆಗಳಿರಬಹುದು, ವೈಯಕ್ತಿಕ ಬದುಕಿನ ಸಮಸ್ಯೆ ವೃತ್ತಿ ಬದುಕಿನ ಮೇಲೂ ಬೀರಬಹುದು. ಪ್ರೇಮಿಗಳ ನಡುವೆ ನಂಬಿಕೆಯ ಕೊರತೆ ಕಾಣಿಸಬಹುದು.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ವಾರ ಉತ್ತಮವಾಗಿರಲಿದೆ. ವೈಯಕ್ತಿಕ ಬದುಕಿನಲ್ಲಿ ಖುಷಿ ಇರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಪ್ರೇಮಿಗಳಿಗೂ ವಿಶೇಷವಾಗಿರಲಿದೆ.
ವೃಶ್ಚಿಕ ರಾಶಿ
ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರುತ್ತದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಪ್ರೇಮಿಗಳ ನಡುವೆ ಕೂಡ ಉತ್ತಮ ಬಾಂಧವ್ಯ ಇರಲಿದೆ. ನಿಮ್ಮ ಪ್ರೀತಿಯ ಬಗ್ಗೆ ಮನೆಯಲ್ಲಿ ಹೇಳಲು ಈ ಅವಧಿ ಅನುಕೂಲಕರವಾಗಿದೆ.
ಧನು ರಾಶಿ
ಕೌಟುಂಬಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳು ಬಗೆಹರಿಯಲಿದೆ. ಸಂಬಂಧಗಳು ಸುಧಾರಿಸುತ್ತವೆ. ಪ್ರೀತಿಗೆ ಮನೆಯವರ ಒಪ್ಪಿಗೆ ಪಡೆಯಲು ಸೂಕ್ತವಾಗಿದೆ. ಪ್ರೇಮ ವಿವಾಹವಾಗಲು ಇದ್ದ ಅಡೆತಡೆಗಳು ದೂರಾಗುವುದರಿಂದ ಖುಷಿಯಾಗರುತ್ತೀರಿ.
ಮಕರ ರಾಶಿ
ಈ ಅವಧಿ ನಿಮಗೆ ತುಂಬಾ ಉತ್ತಮವಾಗಿರಲಿದೆ. ಗಂಡ -ಹೆಂಡತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಉತ್ತಮವಾಗಿರಲಿದೆ. ಈ ವಾರ ಲವಲವಿಕೆಯಿಮದ ಇರುತ್ತೀರಿ.
ಕುಂಭ ರಾಶಿ
ಈ ವಾರ ತುಂಬಾ ಉತ್ತಮವಾಗಿರಲಿದೆ. ಪ್ರತಿಕೂಲ ಸಂದರ್ಭಗಳಲ್ಲಿಯೂ ನಿಮ್ಮ ಪ್ರೀತಿಪಾತ್ರರ ಬೆಂಬಲ ಮತ್ತು ಪ್ರೀತಿ ಸಿಗುವುದು. ವಿಶೇಷವಾಗಿ ನೀವು ನಿಮ್ಮ ಪೋಷಕರಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ.
ಮೀನ ರಾಶಿ
ಈ ವಾರ ತುಂಬಾ ಉತ್ತಮವಾಗಿರಲಿದೆ. ಸಂಬಂಧಗಳಲ್ಲಿ ನಡೆಯುತ್ತಿರುವ ತಪ್ಪುಗ್ರಹಿಕೆಗಳು ಪರಿಹರಿಸಲ್ಪಡುತ್ತವೆ ಮತ್ತು ನಿಮ್ಮ ಪ್ರೀತಿಪಾತ್ರರ ಜೊತೆ ನೀವು ಉತ್ತಮ ಸಮಯ ಕಳೆಯುತ್ತೀರಿ, ಸಂಗಾತಿಯ ಆರೋಗ್ಯದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications