Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಈ ವಾರ 12 (ಜೂನ್ 8-15): ಈ ವಾರ ನಿಮ್ಮ ಪ್ರೀತಿ, ವೈವಾಹಿಕ ಬದುಕು ಹೇಗಿರಲಿದೆ, ಯಾವ ರಾಶಿಯ ಅವಾಹಿತರಿಗೆ ಮದುವೆ ಪ್ರಸ್ತಾಪ ಬರಲಿದೆ
ವೈದಿಕ ಶಾಸ್ತ್ರದ ಪ್ರಕಾರ ಈ ವಾರ ನಿಮ್ಮ ಪ್ರೇಮಿಗಳಿಗೆ, ವಿವಾಹಿತರಿಗೆ ಹೇಗಿರಲಿದೆ, ಮದುವೆ ಸಂಬಂಧ ನೋಡುತ್ತಿರುವ ಅವಾಹಿತರಿಗೆ ಈ ವಾರ ಮದುವೆ ಪ್ರಸ್ತಾಪ ಬರಲಿದೆ?
ಮೇಷ ರಾಶಿ
ವಾರದ ಆರಂಭವು ನಿಮಗೆ ಪ್ರೇಮಿಗಳಿಗೆ, ವಿವಾಹಿತರಿಗೆ ಅದ್ಭುತವಾಗಿರುತ್ತದೆ. ನಿಮ್ಮ ಸಂಗಾತಿಗೆ ಹೆಚ್ಚಿನ ಸಮಯ ಕೊಡಲು ಸಾಧ್ಯವಾಗುವುದು. ಇದರಿಂದಾಗಿ ನಿಮ್ಮ ನಡುವೆ ಒಂದು ಒಳ್ಳೆಯ ಬಾಂಧವ್ಯ ಇರಲಿದೆ. ಇನ್ನು ನಿಮ್ಮ ನಡುವೆ ಇರುವ ಭಿನ್ನಾಭಿಪ್ರಾಯ ಸರಿಪಡಿಸಲು ಕೂಡ ಈ ಸಮಯ ತುಂಬಾ ಉತ್ತಮವಾಗಿದೆ.

ವೃಷಭ ರಾಶಿ
ನೀವು ನಿಮ್ಮ ನಡುವಿನ ಬಾಂಧವ್ಯ ಗಟ್ಟಿಯಾಗಿಸಲು ಪ್ರಯತ್ನಿಸಬೇಕು. ನಿಮ್ಮ ಬದುಕು ತುಂಬಾ ಚೆನ್ನಾಗಿರಲಿದೆ. ನೀವು ನಿಮ್ಮ ವೈವಾಹಿಕ ಜೀವನದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಅವರಿಗೆ ನೀವು ಅವರನ್ನು ಎಷ್ಟು ಇಷ್ಟಪಡುತ್ತಿದ್ದೀರಿ ಎಂಬುವುದನ್ನು ವ್ಯಕ್ತಪಡಿಸಿ.
ಮಿಥುನ ರಾಶಿ
ಈ ವಾರ ನಿಮ್ಮ ಜೀವನ ತುಂಬಾ ಚೆನ್ನಾಗಿರಲಿದೆ, ನಿಮ್ಮ ಸಂಬಂಧದ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಯಾವುದೇ ರೀತಿಯ ಸಂದಿಗ್ಧತೆ ಇದ್ದರೆ, ಈ ಸಮಯದಲ್ಲಿ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರಗಳನ್ನು ನೀವು ಪಡೆಯುತ್ತೀರಿ. ಪರಸ್ಪರ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತೀರಿ. ಪ್ರೀತಿಯಲ್ಲಿ ಇರುವವರು ತಮ್ಮ ಪ್ರೀತಿಯನ್ನು ಮನೆಗೆ ತಿಳಿಸಲು ಈ ಸಮಯ ಅನುಕೂಲಕರವಾಗಿದೆ.
ಕರ್ಕ ರಾಶಿ
ನಿಮಗೆ ಈ ವಾರ ನಿಮಗೆ ತುಂಬಾ ರೊಮ್ಯಾಂಟಿಕ್ ಆಗಿರಲಿದೆ. ಪ್ರೇಮಿಗಳಿಗೆ ವಿಶೇಷವಾಗಿರಲಿದೆ, ಈ ವಾರ ನೀವು, ನಿಮ್ಮ ಸಂಗಾತಿ ಸೇರಿ ಚಿಕ್ಕ ಟ್ರಿಪ್ ಮಾಡಿದರೆ ನಿಮ್ಮಿಬ್ಬರ ಬಾಂಧವ್ಯ ಮತ್ತಷ್ಟು ಮಧುರವಾಗಿರಲಿದೆ.
ಸಿಂಹ ರಾಶಿ
ಪ್ರೇಮಿಗಳುಈ ವಾರ ಜಾಗ್ರತೆವಹಿಸಬೇಕು, ವಾರದ ಆರಂಭವು ನಿಮಗೆ ಉತ್ತಮವಾಗಿರುತ್ತದೆ. ಈ ಸಮಯದಲ್ಲಿ, ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುವುದು, ಆದರೆ ವಾರದ ಕೊನೆಯಲ್ಲಿ ನಿಮ್ಮ ನಡುವೆ ತಪ್ಪು ತಿಳುವಳಿಕೆ ಹೆಚ್ಚಾಗಬಹುದು. ನೀವು ನಿಮ್ಮ ಸಂಗಾತಿಯನ್ನು ಸಂಪೂರ್ಣ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ.
ಕನ್ಯಾ ರಾಶಿ
ನೀವು ಸಿಂಗಲ್ ಆಗಿದ್ದರೆ ನೀವು ಪ್ರೀತಿಯಲ್ಲಿ ಬೀಳುವ ಸಾಧ್ಯತೆಯಿದೆ. ಪ್ರೇಮಿಗಳಿಗೆ ತುಂಬಾ ಆಹ್ಲಾದಕರವಾಗಿರುತ್ತೀರಿ. ನಿಮ್ಮ ಸಂಬಂಧವು ಹೆಚ್ಚು ಪ್ರಬುದ್ಧವಾಗುತ್ತದೆ. ನಿಮ್ಮ ಸಂಬಂಧವನ್ನು ಸುಧಾರಿಸಲು ನೀವು ನಿಮ್ಮ ಕೈಲಾದಷ್ಟು ಪ್ರಯತ್ನಿಸುತ್ತೀರಿ.
ತುಲಾ ರಾಶಿ
ಪ್ರೇಮಿಗಳಿಗೆ ಈ ವಾರ ಒತ್ತಡದಿಂದ ಕೂಡಿರಲಿದೆ, ಆದರೆ ಚಿಕ್ಕ ವಿಷಯ ದೊಡ್ಡದು ಮಾಡಲು ಹೋಗದಿರಿ. ಈ ಸಮಯದಲ್ಲಿ, ಶಾಂತ ಮನಸ್ಸಿನಿಂದ ನಿಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಲಹೆ ನೀಡಲಾಗುವುದು. ವಿವಾಹಿತರ ನಡುವಿನ ಭಿನ್ನಾಭಿಪ್ರಾಯ ಕೊನೆಯಾಗುವುದು, ನೀವು ಹಿಂದಿನದನ್ನು ಮರೆತು ಹೊಸ ಪ್ರಾರಂಭವನ್ನು ಮಾಡಲು ಪ್ರಯತ್ನಿಸಿದರೆ ಅದು ಉತ್ತಮವಾಗಿರುತ್ತದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಈ ವಾರ ತುಂಬಾ ವಿಶೇಷವಾಗಿರಲಿದೆ, ನೀವು ಅವಿವಾಹಿತರಾಗಿದ್ದರೆ ಈ ವಾರ ಮದುವೆ ಪ್ರಸ್ತಾಪ ಬರಬಹುದು. ಪ್ರೇಮ ವಿವಾಹವಾಗಲು ಬಯಸುವುದಾದರೆ ನಿಮ್ಮ ಸಂಗಾತಿಯ ಮನಸ್ಸನ್ನು ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು. ನೀವು ಸಕಾರಾತ್ಮಕ ಉತ್ತರವನ್ನು ಪಡೆಯುವ ಸಾಧ್ಯತೆಯಿದೆ. ವಿವಾಹಿತರ ನಡುವೆ ಸಂಬಂಧ ತುಂಬಾ ಚೆನ್ನಾಗಿರಲಿದೆ.
ಧನು ರಾಶಿ
ಈ ಅವಧಿಯಲ್ಲಿ, ನಿಮ್ಮ ಸಂಗಾತಿಯು ತುಂಬಾ ರೊಮ್ಯಾಂಟಿಕ್ ಮೂಡ್‌ನಲ್ಲಿರುತ್ತಾರೆ . ಪ್ರೇಮ ಜೀವನದ ಸಂತೋಷದಿಂದ ಮುಂದೆ ಹೋಗಲಿದೆ, ನಿಮ್ಮ ಮದುವೆಗೆ ಮನೆಯವರ ಒಪ್ಪೊಗೆ ದೊರೆಯಲಿದೆ.
ಮಕರ ರಾಶಿ
ನಿಮ್ಮ ಬಾಂಧವ್ಯ ಚೆನ್ನಾಗಿರಲು ನೀವು ಕೋಪ ಮತ್ತು ಅಹಂಕಾರವನ್ನು ತಪ್ಪಿಸಿ, ಇಲ್ಲದಿದ್ದರೆ ಅನಗ್ಯತ ಭಿನ್ನಾಭಿಪ್ರಾಯ ಉಂಟಾಗಬಹುದು. ಈ ಅವಧಿಯಲ್ಲಿ, ನಿಮ್ಮ ಸಂಬಂಧಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ಈ ರಾಶಿಯ ವಿವಾಹಿತರಿಗೆ ಈ ವಾರ ಸಾಮಾನ್ಯವಾಗಿರುತ್ತದೆ.
ಕುಂಭ ರಾಶಿ
ನಿಮ್ಮ ಪ್ರೀತಿಸಿ ಮದುವೆಯಾಗಲು ಬಯಸಿದರೆ ನಿಮ್ಮ ಕುಟುಂಬ ಸದಸ್ಯರೊಂದಿಗೆ ಮಾತನಾಡಲು ಈ ಅವಧಿ ಅನುಕೂಲಕರವಾಗಿದೆ. ಇನ್ನು ಪ್ರೇಮ ನಿವೇದನೆ ಮಾಡುವವರು ಆತುರಬೇಡ ಎಂದು ಸಲಹೆ ನೀಡಲಾಗುವುದು.
ಮೀನ ರಾಶಿ
ಈ ವಾರ ನಿಮಗೆ ಸ್ವಲ್ಪ ಕಷ್ಟವಾಗುವ ಸಾಧ್ಯತೆ ಇದೆ. ನಿಮ್ಮ ನಡುವೆ ಭಿನ್ನಾಭಿಪ್ರಾಯಗಳಿರಬಹುದು. ನಿಮ್ಮ ನಡುವಿನ ವೈಮನಸ್ಯವನ್ನು ಸಂಭಾಷಣೆಯ ಮೂಲಕ ಕೊನೆಗೊಳಿಸಲು ಪ್ರಯತ್ನಿಸಿದರೆ ಉತ್ತಮ. ವಾರದ ಕೊನೆಯಲ್ಲಿ ನಿಮ್ಮ ನಡುವೆ ಎಲ್ಲವೂ ಸರಿಯಾಗಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications




