Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ವಾರದ ಪ್ರೀತಿ ಭವಿಷ್ಯ ಪ್ರಕಾರ ವಿವಾಹಿತರಿಗೆ, ಪ್ರೇಮಿಗಳಿಗೆ, ಅವಾಹಿತರಿಗೆ ಹೇಗಿರಲಿದೆ?
ವಾರ ಭವಿಷ್ಯ ಪ್ರಕಾರ ಈ ವಾರ (ಸೆಪ್ಟೆಂಬರ್22-28) ನಿಮ್ಮ ಪ್ರೀತಿ ಜೀವನ ಹೇಗಿರಲಿದೆ?
ಮೇಷ ರಾಶಿ
ಮೇಷ ರಾಶಿಯ ಪ್ರೇಮಿಗಳಿಗೆ, ವಿವಾಹಿತರಿಗೆ ಈ ವಾರ ಅನುಕೂಲಕರವಾಗಿದೆ, ಈ ಅವಧಿಯಲ್ಲಿ ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ನಿಮ್ಮ ನಡುವೆ ಏನೇ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು.

ವೃಷಭ ರಾಶಿ
ವೃಷಭ ರಾಶಿಯವರ ಪ್ರೀತಿ ಜೀವನ ಚೆನ್ನಾಗಿರಲಿದೆ. ಇನ್ನು ಮದುವೆಗೆ ಪ್ರಸ್ತಾಪ ಮಾಡಲು ಅಥವಾ ನಿಮ್ಮ ಪ್ರೀತಿ ನಿವೇದನೆ ಮಾಡಲು ಈ ಅವಧಿಅನುಕೂಲಕರವಾಗಿದೆ. ಅವರಿಂದ
ನೀವು ಸಕಾರಾತ್ಮಕ ಉತ್ತರವನ್ನು ಪಡೆಯಬಹುದು.
ಮಿಥುನ ರಾಶಿ
ಮಿಥುನ ರಾಶಿಯವರ ಪ್ರೀತಿ ಜೀವನ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಜೀವನದ ಕಡೆಗೆ ನೀವು ಹೆಚ್ಚು ಗಮನ ಹರಿಸಬೇಕು. ನಿಮ್ಮ ಸಂಗಾತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಇದರಿಂದ ನಿಮ್ಮ ಸಂಬಂಧದಲ್ಲಿ ಸುಧಾರಣೆ ಕಂಡು ಬರುವುದು.
ಕರ್ಕ ರಾಶಿ
ಈ ವಾರ ನೀವು ಖುಷಿಯಾಗಿರುತ್ತೀರಿ, ಕುಟುಂಬಕ್ಕೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುವುದು. ಇನ್ನು ಮಕ್ಕಳ ಕುರಿತ ಕಾಳಜಿ ಬಗೆಹರಿಯಲಿದೆ. ವೈವಾಹಿಕ ಬದುಕು ಕೂಡ ಚೆನ್ನಾಗಿರಲಿದೆ, ಅವಾಹಿತರಿಗೆ ಮದುವೆ ಸಂಬಮಧ ಬಂದಿದ್ದರೆ ಮದುವೆ ಮಾತುಕತೆ ನಡೆಯಬಹುದು.
ಸಿಂಹ ರಾಶಿ
ಸಂಬಂಧದ ವಿಷಯದಲ್ಲಿ ಈ ವಾರ ಅಷ್ಟೊಂದು ಅನುಕೂಲಕರವಲ್ಲ, ಪ್ರೇಮಿಗಳ ನಡುವೆ ಭಿನ್ನಾಭಿಪ್ರಾಯಗಳಿರಬಹುದು, ನಿಮ್ಮ ಸಂಬಂಧಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ.
ಕನ್ಯಾ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧವು ಬಲಗೊಳ್ಳುತ್ತದೆ. ಹೀಗಾಗಿ ವೈವಾಹಿಕ ಬದುಕಿನಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ಪ್ರೇಮಿಗಳಿಗೂ ಈ ವಾರ ವಿಶೇಷವಾಗಿರಲಿದೆ.
ತುಲಾ ರಾಶಿ
ಈ ಸಮಯದಲ್ಲಿ ತುಲಾ ರಾಶಿಯವರ ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ನಿಮ್ಮ ನಡುವೆ ಮಾಧುರ್ಯ ಹೆಚ್ಚಾಗಲಿದೆ. ಮಕ್ಕಳು ತಮ್ಮ
ಕ್ಷೇತ್ರದಲ್ಲಿ ಉತ್ತಮ ಯಶಸ್ಸನ್ನು ಪಡೆಯಬಹುದು, ಹೀಗಾಗಿ ನಿಮಗೆ ತುಂಬಾನೇ ಖುಷಿಯಾಗಲಿದೆ.
ವೃಶ್ಚಿಕ ರಾಶಿ
ನಿಮ್ಮ ಬದುಕಿನಲ್ಲಿ ನಡೆಯುತ್ತಿರುವ ಸಮಸ್ಯೆಗೆ ಪರಿಹಾರ ಸಿಗಲಿದೆ, ಮನೆಯಲ್ಲಿ ಉತ್ತಮ ವಾತಾವರಣ ಇರಲಿದೆ. ಸಂಗಾತಿಗೆ ಆರೋಗ್ಯ ಸಮಸ್ಯೆಯಿದ್ದರೆ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು. ವಾರದ ಕೊನೆಯಲ್ಲಿ ಸ್ಥಿರಾಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಪರಿಹರಿಸುವ ಬಲವಾದ ಸಾಧ್ಯತೆಯಿದೆ ಹೀಗಾಗಿ ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಧನು ರಾಶಿ
ವೈವಾಹಿಕ ಜೀವನದಲ್ಲಿ ಕೆಲವು ಸಮಸ್ಯೆಗಳಿರುತ್ತವೆ. ನಿಮ್ಮ ನಡುವೆ ನಂಬಿಕೆಯ ಕೊರತೆ ಇರಬಹುದು, ನೀವು ಇದರತ್ತ ಗಮನಹರಿಸಬೇಕು, ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕು. ಅಲ್ಲದೆ ಈ ಅವಧಿಯಲ್ಲಿ ಕೋಪ ನಿಯಂತ್ರಿಸಿ, ಅವಾಹಿತರಿಗೆ ಮದುವೆ ಸಂಬಂಧ ಬಂದರೆ ಅವರ ಬಗ್ಗೆ ಚೆನ್ನಾಗಿ ವಿಚಾರಿಸಿ ನಂತರವಷ್ಟೇ ಒಪ್ಪಿಕೊಳ್ಳಿ.
ಮಕರ ರಾಶಿ
ಈ ವಾರ ನಿಮಗೆ ಸ್ವಲ್ಪ ಕಷ್ಟಕರವಾಗಿರುತ್ತದೆ. ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಮತೋಲನವನ್ನು ಸಾಧಿಸುವಲ್ಲಿ ನೀವು ಸಮಸ್ಯೆಗಳನ್ನು ಎದುರಿಸಬಹುದು, ಆದರೆ ನೀವು ಕುಟುಂಬವನ್ನು ನಿರ್ಲಕ್ಷ್ಯ ಮಾಡಬೇಡಿ. ನೀವು ತುಂಬಾ ನಂಬುವ ಯಾರಾದರೂ ನಿಮಗೆ ದ್ರೋಹ ಮಾಡಬಹುದು ಹಾಗಾಗಿ ಎಲ್ಲಾ ವಿಷಯವನ್ನು ಕುರುಡಾಗಿ ನಂಬಬೇಡಿ.
ಕುಂಭ ರಾಶಿ
ಕುಟುಂಬದ ಜವಾಬ್ದಾರಿಗಳ ಬಗ್ಗೆ ನಿರ್ಲಕ್ಷ್ಯ ಬೇಡ, ಸಾಧ್ಯವಾದರೆ, ಪೋಷಕರೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ. ಇದಲ್ಲದೆ, ನೀವು ಮಕ್ಕಳ ಬಗ್ಗೆಯೂ ಗಮನ ಹರಿಸಬೇಕು.
ಮೀನ ರಾಶಿ
ಈ ವಾರ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ನೀವು ಒಬ್ಬರಿಗೊಬ್ಬರು ಸಾಕಷ್ಟು ಸಮಯವನ್ನು ನೀಡುತ್ತೀರಿ, ಹೀಗಾಗಿ ಬಾಂಧವ್ಯ ಚೆನ್ನಾಗಿರಲಿದೆ. ಈ ಏಳು ದಿನಗಳು ವಿವಾಹಿತರಿಗೆ, ಪ್ರೇಮಿಗಳಿಗೆ ವಿಶೇಷವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











