Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ವಾರ ಭವಿಷ್ಯ : ಜುಲೈ 15 ರಿಂದ ಜುಲೈ 21ರವರೆಗೆ 12 ರಾಶಿಗಳ ಪ್ರೀತಿ ಭವಿಷ್ಯ
ವೈದಿಕ ಶಾಸ್ತ್ರದ ಪ್ರಕಾರ 12 ರಾಶಿಗಳಿಗೆ ಈ ವಾರದ ಪ್ರೀತಿ ರಾಶಿಫಲ ಹೇಗಿದೆ ನೋಡೋಣ ಬನ್ನಿ:
ಮೇಷ ರಾಶಿ
ನೀವು ಪ್ರೀತಿಯಲ್ಲಿದ್ದರೆ ಕೆಲವು ಸವಾಲುಗಳು ಬರಬಹುದು, ಮನೆಯವರು ನಿಮ್ಮ ಪ್ರೀತಿಗೆ ಒಪ್ಪಿಗೆ ಸೂಚಿಸದಿದ್ದರೆ ತಾಳ್ಮೆಯಿಂದ ಅವರ ಮನವೊಲಿಸಿ, ಯಾವಿಉದೇ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ವೈವಾಹಿಕ ಜೀವನದಲ್ಲಿ ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು ಇದರಿಂದ ಕುಟುಂಬದಲ್ಲಿ ಒತ್ತಡದ ವಾತಾವರಣ ಇರಲಿದೆ. ನಿಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಕೋಪಕ್ಕಿಂತ ತಾಳ್ಮೆ ತುಂಬಾನೇ ಮುಖ್ಯ.

ವೃಷಭ ರಾಶಿ
ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳಿಗೆ ನಿಮ್ಮ ಸಂಗಾತಿಯಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಪ್ರೇಮಿಗಳಿಗೂ ಈ ವಾರ ಚೆನ್ನಾಗಿರಲಿದೆ, ಈ ಏಳೂ ದಿನಗಳನ್ನು ಖುಷಿ-ಖುಷಿಯಿಂದ ಕಳೆಯುತ್ತೀರಿ.
ಮಿಥುನ ರಾಶಿ
ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ, ಆದರೆ ನಿಮ್ಮ ಸಂಗಾತಿಯೊಂದಿಗೆ ಅನಗ್ಯತ ಚರ್ಚೆ ತಪ್ಪಿಸಿ, ನೀವು ತಾಳ್ಮೆಯಿಂದ ಇದ್ದರೆ ಮನೆಯಲ್ಲಿನ ಅನೇಕನ ಸಮಸ್ಯೆಗಳನ್ನು ಬಗೆಹರಿಸಬಹುದು.
ಕರ್ಕ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಹಾಗೂ ಸಂಗಾತಿಯ ನಡುವೆ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಎಲ್ಲವೂ ಸರಿಯಾಗಲಿದೆ. ವೈವಾಹಿಕ ಜೀವನದಲ್ಲಿ ಸಂತೋಷ ಇರಲಿದೆ, ಅವಾಹಿತರಿಗೆ ಈ ವಾರ ಮದುವೆ ಪ್ರಸ್ತಾಪ ಬರಲಿದೆ.
ಸಿಂಹ ರಾಶಿ
ನೀವು ಪ್ರೀತಿಯಲ್ಲಿದ್ದರೆ ಈ ವಾರ ಉತ್ತಮವಾಗಿದೆ, ನಿಮ್ಮ ಪ್ರೀತಿಗೆ ಮನೆಯವರ ಒಪ್ಪಿಗೆ ಸಿಗಲಿದೆ, ಶೀಘ್ರದಲ್ಲೇ ನೀವು ಮದುವೆಯಾಗಬಹುದು. ವಿವಾಹಿತರಿಗೆ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ, ನಿಮ್ಮ ನಿರ್ಧಾರಗಳನ್ನು ನೀವು ಬಹಳ ಆಲೋಚಿಸಿ ತೆಗೆದುಕೊಳ್ಳಿ, ಸಂಗಾತಿಯ ಭಾವನೆಯನ್ನು ಗುರುತಿಸಿ.
ಕನ್ಯಾ ರಾಶಿ
ಕೆಲಸದ ಒತ್ತಡ ಕಾರಣ ವೈವಾಹಿಕ ಜೀವನದ ಕಡೆಗೆ ಹೆಚ್ಚು ಗಮನ ಕೊಡಲು ಸಾಧ್ಯವಾಗುವುದಿಲ್ಲ, ಇದು ನಿಮ್ಮ ಸಂಗಾತಿಯ ಅಸಮಧಾನಕ್ಕೆ ಕಾರಣವಾಗಿರಬಹುದು. ನಿಮ್ಮ ಸಮಸ್ಯೆಯನ್ನು ಸಂಗಾತಿ ಜೊತೆಗೆ ಮುಕ್ತವಾಗಿ ಹಂಚಿಕೊಳ್ಳಿ, ಇದರಿಂದಾಗಿ ಸಮಸ್ಯೆ ಬಗೆಹರಿಯಲಿದೆ. ಅಲ್ಲದೆ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವುದಾದರೆ ಸಂಗಾತಿಯ ಅಭಿಪ್ರಾಯ ಕೇಳಿದರೆ ಬಾಂಧವ್ಯ ಚೆನ್ನಾಗಿರಲಿದೆ.
ತುಲಾ ರಾಶಿ
ವೈವಾಹಿಕ ಜೀವನದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದೆ. ನಿಮ್ಮ ನಡುವೆ ಸಮನ್ವಯದ ಕೊರತೆ ಇರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಅನಗತ್ಯ ವಿಷಯಗಳಿಗೆ ಜಗಳಗಳು ಸಂಭವಿಸಬಹುದು. ಪ್ರೀತಿಯ ದಂಪತಿಗಳಿಗೆ ಈ ವಾರ ತುಂಬಾ ರೋಮ್ಯಾಂಟಿಕ್ ಆಗಿರುತ್ತದೆ. ಈ ಸಮಯದಲ್ಲಿ, ನೀವು ಪರಸ್ಪರರ ಪ್ರೀತಿಯಲ್ಲಿ ಕಳೆದುಹೋಗುತ್ತೀರಿ ಮತ್ತು ನಿಮ್ಮ ಸುಂದರ ಭವಿಷ್ಯದ ಬಗ್ಗೆ ಕನಸು ಕಾಣುತ್ತೀರಿ.
ವೃಶ್ಚಿಕ ರಾಶಿ
ನಿಮ್ಮ ವೈವಾಹಿಕ ಜೀವನದಲ್ಲಿ ಇರುವ ಸಮಸ್ಯೆಗಳು ಈ ವಾರ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ. ಪ್ರೇಮಿಗಳಿಗೆ ಅನುಕೂಲಕರವಾಗಿದೆ. ನಿಮ್ಮ ಸಂಗಾತಿಯ ವರ್ತನೆ ನಿಮ್ಮ ಮನಸ್ಸಿಗೆ ನೋವುಂಟು ಮಾಡಬಹುದು ಆದರೆ ಹೆಚ್ಚು ಚಿಂತೆ ಮಾಡಲು ಹೋಗಬೇಡಿ, ಆರೋಗ್ಯದ ಕಡೆಗೆ ಗಮನಹರಿಸಿ.
ಧನು ರಾಶಿ
ವಿವಾಹಿತರಿಗೆ ಈ ವಾರ ಉತ್ತಮವಾಗಿದೆ. ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಸಂಗಾತಿಯಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ಅವಿವಾಹಿತರಿಗೆ ಕೆಲವು ಒಳ್ಳೆಯ ಮದುವೆಯ ಪ್ರಸ್ತಾಪಗ ಬರಬಹುದು.
ಮಕರ ರಾಶಿ
ಪ್ರೇಮ ಜೀವನದಲ್ಲಿ ನಿಮ್ಮ ಸಂಬಂಧ ಮತ್ತಷ್ಟು ಗಟ್ಟಿಯಾಗುವುದು. ನೀವು ಒಂಟಿಯಾಗಿದ್ದರೆ ನಿಮಗೆ ಪ್ರೀತಿಯ ಪ್ರಸ್ತಾಪವೂ ಬರಬಹುದು. ವಿವಾಹಿತರ ನಡುವೆ ಹೊಂದಾಣಿಕೆ ಬರಲಿದೆ.
ಕುಂಭ ರಾಶಿ
ನಿಮಗೆ ಏನೇ ಅಸಮಧಾನವಾಗಿರಲಿ, ನೀವು ಅದನ್ನು ಮುಕ್ತವಾಗಿ ಹಂಚಿಕೊಳ್ಳಬೇಕು. ನೀವು ನಿಮ್ಮ ಸಂಗಾತಿಯನ್ನೂ ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಪ್ರತಿಯೊಂದು ವಿಷಯಕ್ಕೂ ಅವರನ್ನು ಹೊಣೆಗಾರರನ್ನಾಗಿ ಮಾಡಬೇಡಿ. ಆವಾಗ ಯಾವುದೇ ಸಮಸ್ಯೆ ಇರಲ್ಲ.
ಮೀನ ರಾಶಿ
ಪ್ರೇಮಿಗಳಿಗೆ ಕೆಲ ಸಮಸ್ಯೆಗಳು ಬರಬಹುದು, ಯಾವುದೇ ಸಮಸ್ಯೆಯಿದ್ದರೆ ಅದನ್ನು ಒಟ್ಟಿಗೆ ಪರಿಹರಿಸಲು ಪ್ರಯತ್ನಿಸಿ. ಯಾವುದೇ ಮೂರನೇ ವ್ಯಕ್ತಿಗೆ ಹೆಚ್ಚು ಹಸ್ತಕ್ಷೇಪ ಮಾಡಲು ಅವಕಾಶ ನೀಡಬೇಡಿ, ವಿವಾಹಿತರಿಗೆ ಈ ಅವಧಿ ಉತ್ತಮವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











