ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ (ಡಿಸೆಂಬರ್ 15-20) ನಿಮಗೆ ಹೇಗಿರಲಿದೆ?

ಈ ವಾರದ ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ಹೇಗಿರಲಿದೆ ಎಂದು ನೋಡೋಣ:

ಸಂಖ್ಯೆ 1(ಹುಟ್ಟಿದ ದಿನಾಂಕ 1, 10, 19, 28)
ಉದ್ಯೋಗಿಗಳಿಗೆ ಈ ಅವಧಿ ಅನುಕೂಲಕರವಾಗಿದೆ, ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ, ವ್ಯಾಪಾರಸ್ಥರು ಉತ್ತಮ ಲಾಭ ಪಡೆಯುತ್ತೀರಿ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ, ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ, ಆರೋಗ್ಯ ಜೀವನ ಚೆನ್ನಾಗಿರಲಿದೆ.

Weekly Numerology

ಸಂಖ್ಯೆ 2(ಹುಟ್ಟಿದ ದಿನಾಂಕ 2, 11, 20, 29)
ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ, ಕೆಲಸದಲ್ಲಿ ಪ್ರಗತಿ ಇರಲಿದೆ, ಕೆಲಸ ಕಾರ್ಯದಲ್ಲಿ ಪ್ರಗತಿ ಕಂಡು ಬರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯವಿರಬಹುದು, ಆದರೆ ತಾಳ್ಮೆಯಿಂದ ವರ್ತಸಿದರೆ ಎಲ್ಲವೂ ಬಗೆಹರಿಯಲಿದೆ.

ಸಂಖ್ಯೆ 3 (ಹುಟ್ಟಿದ ದಿನಾಂಕ 3,12, 21, 30)
ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಈ ಅವಧಿ ಸರಾಸರಿಯಾಗಿರಲಿದೆ, ವ್ಯಾಪಾರಸ್ಥರಿಗೆ ಈ ಅವಧಿ ಸ್ವಲ್ಪ ಸವಾಲಿನಿಂದ ಕೂಡಿರಲಿದೆ, ದೊಡ್ಡ ವ್ಯವಹಾರ ಮಾಡುವಾಗ ಜಾಗ್ರತೆವಹಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ.

ಸಂಖ್ಯೆ 4(ಹುಟ್ಟಿದ ದಿನಾಂಕ 4, 13, 22, 31)
ವೃತ್ತಿ ಬದುಕಿನ ಬಗ್ಗೆ ಹೇಳುವುದಾದರೆ ಕೆಲಸದಲ್ಲಿ ತಪ್ಪಾಗದಂತೆ ಜಾಗ್ರತೆವಹಿಸಿ. ವ್ಯಾಪಾರಿಗಳು ಈ ಸಮಯದಲ್ಲಿ ಹಣ ಲಾಭ ಗಳಿಸಲು ಸಾಧ್ಯವಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಈ ವಾರ ಆರೋಗ್ಯದ ದೃಷ್ಟಿಯಿಂದ ಅನುಕೂಲಕರವಾಗಿದೆ.

ಸಂಖ್ಯೆ 5 ( ಹುಟ್ಟಿದ ದಿನಾಂಕ 5, 14, 23)
ವೃತ್ತಿ ಬದುಕಿನಲ್ಲಿ ನೀವು ಅತ್ಯುತ್ತಮ ಅವಕಾಶ ಸಿಗಲಿದೆ, ಕೆಲಸ ಬದಲಾವಣೆಗೆ ಪ್ರಯತ್ನಿಸಿದ್ದರೆ ಈ ಅವಧಿ ಅನುಕೂಲವಾಗಿರಲಿದೆ.ವ್ಯಾಪಾರಿಗಳಿಗೆ ಈ ಸಮಯ ಅನುಕೂಲಕರವಾಗಿದೆ. ಆರೋಗ್ಯದ ದೃಷ್ಟಿಯಿಂದ ಈ ಸಮಯ ನಿಮಗೆ ಅನುಕೂಲಕರವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ.

ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24)
ಈ ವಾರ ಕೆಲಸದ ವಿಷಯದಲ್ಲಿ ಈ ಅವಧಿ ಅನುಕೂಲಕರವಾಗಿದೆ. ನಿಮ್ಮ ಕೆಲಸದಲ್ಲಿ ಉತ್ತಮ ಪ್ರತಿಫಲ ದೊರೆಯಲಿದೆ. ಉದ್ಯಮಿಗಳಿಗೆ ಈ ಅವಧಿ ಅನುಕೂಲಕರವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ.

ಸಂಖ್ಯೆ 7(ಹುಟ್ಟಿದ ದಿನಾಂಕ 7, 16, 25)
ಈ ವಾರ ವೃತ್ತಿ ಬದುಕಿನಲ್ಲಿ ಹೆಚ್ಚು ಒತ್ತಡ ಇರಲಿದೆ, ಉದ್ಯಮಿಗಳಿಗೆ ಈ ಅವಧಿ ಸವಾಲಿನಿಂದ ಕೂಡಿರಲಿದೆ, ಹಣದ ವ್ಯವಹಾರದ ಬಗ್ಗೆ ಜಾಗ್ರತೆವಹಿಸಿ. ಈ ಅವಧಿಯಲ್ಲಿ ಯಾವುದೇ ದೊಡ್ಡ ಹೂಡಿಕೆ ಮಾಡಲುಹೋಗಬೇಡಿ, ಆರೋಗ್ಯದ ದೃಷ್ಟಿಯಿಂದ ಕೂಡ ಈ ಸಮಯ ಅನುಕೂಲಕರವಲ್ಲ, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.

ಸಂಖ್ಯೆ 8 (ಹುಟ್ಟಿದ ದಿನಾಂಕ 8, 17, 26)
ವೃತ್ತಿ ಬದುಕಿನಲ್ಲಿ ಈ ಅವಧಿ ಅನುಕೂಲಕರವಲ್ಲ, ಕೆಲಸದ ಜಾಗದಲ್ಲಿ ಹೆಚ್ಚು ಜಾಗ್ರತೆವಹಿಸಿ, ಅನಗ್ಯತ ವಿವಾದಗಳಿಂದ ದೂರವಿರಿ, ವ್ಯಾಪಾರಿಗಳು ಕೂಡ ಈ ಸಮಯದಲ್ಲಿ ಜಾಗ್ರತೆವಹಿಸಿ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.

ಸಂಖ್ಯೆ 9(ಹುಟ್ಟಿದ ದಿನಾಂಕ 9, 18, 27)
ಈ ವಾರ ಒತ್ತಡದಿಂದ ಕೂಡಿರಲಿದೆ, ವ್ಯಾಪಾರಸ್ಥರಿಗೆ ಈ ಸಮಯ ಸವಾಲಿನ ಸಮಯ, ದೊಡ್ಡ ಲಾಭ ಸಿಗುತ್ತೆ ಎಂದು ಚಿಕ್ಕ ಲಾಭ ನಿರ್ಲಕ್ಷ್ಯ ಮಾಡಬೇಡಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಈ ಅವಧಿಯಲ್ಲಿ ಒತ್ತಡ ಇರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಸಾಮರಸ್ಯ ಕಾಪಾಡಲು ಪ್ರಯತ್ನಿಸಿ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

X
Desktop Bottom Promotion