Latest Updates
-
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ -
ಗೃಹಹಿಂಸೆಯ ಸುಳಿಯಲ್ಲಿ ಸಿಲುಕಿದ್ದೀರಾ? ಸುರಕ್ಷಿತವಾಗಿ ಪಾರಾಗಲು ಈ ಮಾರ್ಗದರ್ಶಿ ಮತ್ತು ತುರ್ತು ಸಹಾಯವಾಣಿಗಳು ನಿಮಗೆ ನೆರವಾಗಲಿವೆ -
ಗಣೇಶ ಹಬ್ಬ 2026: ಬೆಂಗಳೂರಿನಲ್ಲಿ PoP ಮೂರ್ತಿಗಳ ಮೇಲೆ ಕಠಿಣ ನಿಷೇಧ, ಪರಿಸರ ಸ್ನೇಹಿ ಗಣಪತಿಯನ್ನು ಪತ್ತೆ ಹಚ್ಚುವುದು ಹೇಗೆ? -
ವೈ-ವೈ ನೂಡಲ್ಸ್ ಕಂಪನಿಗೆ FSSAI ಬಿಗ್ ಶಾಕ್: ಉತ್ಪಾದನೆ ಸ್ಥಗಿತ, ಅಸಲಿ ಕಾರಣವೇನು? -
ಭಾರತ-ಪಾಕಿಸ್ತಾನ ಹೈ-ವೋಲ್ಟೇಜ್ ಕದನ: ನಾಳೆ ದುಬೈನಲ್ಲಿ ಗೆಲ್ಲೋರು ಯಾರು? -
ಜನ್ಮಾಷ್ಟಮಿ ಉಪವಾಸ: ಸುಸ್ತಾಗದೆ, ಆರೋಗ್ಯಕರವಾಗಿ ವ್ರತ ಆಚರಿಸಲು ಇಲ್ಲಿವೆ ಸರಳ ಟಿಪ್ಸ್!
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರದ ದಿನಗಳು ನಿಮ್ಮ ದಿನಾಂಕ ಪ್ರಕಾರ ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ನಿಮಗೆ ಹೇಗಿರಲಿದೆ ಎಂದು ನೋಡೋಣ, ನೀವು ಹುಟ್ಟಿದ ಜನ್ಮ ದಿನಾಂಕಕ್ಕೆ ಅನುಸಾರ ಈ ಭವಿಷ್ಯ ನೀಡಲಾಗಿದೆ:
ಸಂಖ್ಯೆ 1 (ಹುಟ್ಟಿದ ದಿನಾಂಕ 1,10, 19, 28)
ಈ ವಾರ ನಿಮಗೆ ಉತ್ತಮವಾಗಿರಲಿದೆ, ವೃತ್ತಿ ಜೀವನಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ಆರ್ಥಿಕವಾಗಿ ನೋಡುವುದಾದರೆ ಈ ಅವಧಿ ಉತ್ತಮವಾಗಿದೆ, ಆದರೆ ಆರೋಗ್ಯದ ಕಡೆಗೆ ಗಮನಹರಿಸಿ.

ಸಂಖ್ಯೆ 2 (ಹುಟ್ಟಿದ ದಿನಾಂಕ 2, 11, 20, 29)
ಈ ವಾರ ನಿಮ್ಮ ಕೆಲಸ ಕಾರ್ಯಗಳು ಸಮಯಕ್ಕೆ ಪೂರ್ಣಗೊಳ್ಳುತ್ತದೆ, ಆದರೆ ಹೆಚ್ಚು ರಿಸ್ಕ್ ತೆಗೆದುಕೊಳ್ಳಲು ಹೋಗಬೇಡಿ, ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ, ಹೂಡಿಕೆ ಮಾಡುವಾಗ ಜಾಗ್ರತೆವಹಿಸಿ.
ಸಂಖ್ಯೆ 3 (ಹುಟ್ಟಿದ ದಿನಾಂಕ 3, 12, 21, 30)
ಈ ವಾರ ನಿಮ್ಮ ಕೋಪ ನಿಯಂತ್ರಿಸಿ, ಈ ವಾರ ಕೆಲ ವೈಯಕ್ತಿಕ ಸಮಸ್ಯೆ ನಿಮ್ಮ ಮಾನಸಿಕ ಶಕ್ತಿ, ಆತ್ಮವಿಶ್ವಾಸ ಕುಗ್ಗಿಸಬಹುದು, ಏನೇ ಸಮಸ್ಯೆ ಅಥವಾ ಗೊಂದಲವಿದ್ದರೆ ಹಿರಿಯರ ಸಲಹೆ ಪಡೆಯುವುದು ಒಳ್ಳೆಯದು.
ಸಂಖ್ಯೆ 4 (ಹುಟ್ಟಿದ ದಿನಾಂಕ 4, 13, 22, 31)
ಈ ವಾರನೀವು ನಿಮ್ಮ ವೃತ್ತಿ ಬದುಕಿನಲ್ಲಿ ತಪ್ಪುಗಳಾಗದಂತೆ ಜಾಗ್ರತೆವಹಿಸಿ, ಈ ವಾರ ವ್ಯಾಪಾರಿಗಳಿಗೆ ತುಂಬಾನೇ ಅನುಕೂಲಕರವಾಗಿದೆ. ಈ ವಾರ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳುತ್ತೀರಿ, ಈ ವಾರ ಉತ್ತಮವಾಗಿ ಸಮಯ ಕಳೆಯಲು ಸಾಧ್ಯವಾಗುವುದು.
ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23)
ಈ ವಾರ ನೀವು ವೈಯಕ್ತಿಕ ಬದುಕು ಹಾಗೂ ವೃತ್ತಿ ಬದುಕಿನ ನಡುವೆ ಸಮತೋಲನಕಾಆಪಾಡಲು ಪ್ರಯತ್ನಿಸಬೇಕು. ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ, ವೃತ್ತಿ ಜೀವನದಲ್ಲಿ ನೀವು ಧನಾತ್ಕ ಬದಲಾವಣೆ ಕಾಣಲು ಸಾಧ್ಯವಾಗಲಿದೆ.
ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24)
ನೀವು ಅನಗ್ಯತ ವಿಷಯಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಲು ಹೋಗಬೇಡಿ, ಪಾಲುದಾರಿಕೆಯ ವ್ಯವಹಾರ ಮಾಡುವವರು ಈ ಅವಧಿಯಲ್ಲಿ ಜಾಗ್ರತೆವಹಿಸಿ, ಪ್ರಮುಖ ದಾಖಲಾತಿಗೆ ಸಹಿ ಹಾಕುವಾಗ ನೀವು ಅದರ ಬಗ್ಗೆ ಸರಿಯಾಗಿ ವಿಚಾರಿಸಿದ ಬಳಿಕವಷ್ಟೇ ಹಾಕಬೇಕು, ಮೋಸ ಹೋಗದಂತೆ ಹೆಚ್ಚು ಜಾಗ್ರತೆವಹಿಸಿ.
ಸಂಖ್ಯೆ 7 (ಹುಟ್ಟಿದ ದಿನಾಂಕ 7, 16, 25)
ಕೋರ್ಟ್‌ನಲ್ಲಿ ಕೇಸ್ ಇರುವವರು ಅನುಕೂಲಕರ ತೀರ್ಪು ಪಡೆಯುತ್ತೀರಿ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಇನ್ನು ಕೆಲ ಸಮಸ್ಯೆ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ, ಅದು ಸಮಯ ಬಂದಾಗ ತಾನಾಗಿಯೇ ಬಗೆಹರಿಯಲಿದೆ, ಆರ್ಥಿಕವಾಗಿ ನೋಡುವುದಾದರೆ ಬಜೆಟ್ ಮೀರಿ ಖರ್ಚು ಮಾಡಬೇಡಿ.
ಸಂಖ್ಯೆ 8 (ಹುಟ್ಟಿದ ದಿನಾಂಕ 8,17, 26)
ಈ ವಾರ ನಿಮಗೆ ಉತ್ತಮವಾಗಿರಲಿದೆ, ವೃತ್ತಿ ಬದುಕಿನಲ್ಲಿ ಪ್ರಗತಿ ತರಲಿದೆ, ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವುದಾದರೆ ಆಲೋಚಿಸಿ ತೀರ್ಮಾನ ತೆಗೆದುಕೊಳ್ಳಬೇಕು. ಆಸ್ತಿ ಖರೀದಿ ಅಥವಾ ವಾಹನ ಖರೀದಿ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಈ ಅವಧಿ ನಿಮಗೆ ಅನುಕೂಲಕರವಾಗಿದೆ.
ಸಂಖ್ಯೆ 9 (ಹುಟ್ಟಿದ ದಿನಾಂಕ 9, 18, 27)
ಈ ವಾರ ನೀವು ನಿಮ್ಮ ಕೋಪ ಸ್ವಲ್ಪ ನಿಯಂತ್ರಿಸಿ, ಕುಟುಂಬದಲ್ಲಿ ಏನಾಷದರು ಸಮಸ್ಯೆವಿದ್ದರೆ ತಾಳ್ಮೆಯಿಂದ ಬಗೆಹರಿಸಿ. ವೃತ್ತಿ ಬದುಕಿನ ಕಡೆಗೆ ಗಮಹರಿಸಿ, ಆರ್ಥಿಕ ವಿಷಯದ ಬಗ್ಗೆ ಹೇಳುವುದಾದರೆ ಬಜೆಟ್ ಮೀರಿ ಖರ್ಚು ಮಾಡಬೇಡಿ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications