Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ನಿಮಗೆ ಹೇಗಿರಲಿದೆ? ಶುಭವಾಗಿದೆಯೇ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ನಿಮಗೆ ಹೇಗಿರಲಿದೆ ಎಂದು ನೋಡೋಣ (ನಿಮ್ಮ ಹುಟ್ಟಿದ ದಿನಾಂಕದಿಂದ ನಿಮ್ಮ ಜನ್ಮ ಸಂಖ್ಯೆ ತಿಳಿಯಬಹುದು. ಉದಾಹರಣೆಗೆ ನೀವು ಯಾವುದೇ ತಿಂಗಳಾಗಿರಲಿದೆ, 20ನೇ ದಿನಾಂಕದಂದು ಜನಿಸಿದ್ದರೆ ನಿಮ್ಮ ಜನ್ಮ ಸಂಖ್ಯೆ (2+0=2) ಆಗಿದೆ.

ಸಂಖ್ಯೆ 1( ಹುಟ್ಟಿದ ದಿನಾಂಕ 1,10,19,28)
ಈ ವಾರ ತುಂಬಾನೇ ಬ್ಯುಸಿಯಾಗಿರುತ್ತೀರಿ. ನೀವು ಅನೇಕ ಕೆಲಸಕ್ಕೆ ಸಂಬಂಧಿಸಿದ ಪ್ರಯಾಣಗಳನ್ನು ಕೈಗೊಳ್ಳಬೇಕಾಗಬಹುದು. ಯಾವುದೇ ಕೆಲಸವನ್ನು ಗಡಿಬಿಡಿಯಲ್ಲಿ ಮಾಡಿ ಮುಗಿಸಬೇಡಿ ಎಂದು ಸಲಹೆ ನೀಡಲಾಗುವುದು. ಪ್ರೇಮಿಗಳಿಗೆ ಈ ಸಮಯ ಅನುಕೂಲಕರವಲ್ಲ, ನಿಮ್ಮಿಬ್ಬರ ನಡುವೆ ತಿಳುವಳಿಕೆಯ ಕೊರತೆ ಇರುತ್ತದೆ. ಉದ್ಯಮಿಗಳಿಗೂ ಅಪೇಕ್ಷಿತ ಲಾಭ ಗಳಿಸಲು ಕಷ್ಟವಾಗುವುದು. ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಒಳ್ಳೆಯದಲ್ಲ.
ಸಂಖ್ಯೆ 2 ( ಹುಟ್ಟಿದ ದಿನಾಂಕ 2,11,20,29)
ಈ ಅವಧಿಯಲ್ಲಿ ಉದ್ಯೋಗಸ್ಥರು ಯಾವುದೇ ಕೆಲಸಕ್ಕೆ ಸಂಬಂಧಿಸಿದ ಪ್ರಯಾಣವನ್ನು ಕೈಗೊಂಡರೆ, ನಿಮ್ಮ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಿದೆ.ವ್ಯಾಪಾರಸ್ಥರ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ನೀವು ಲಾಭ ಗಳಿಸಲು ದೊಡ್ಡ ಅವಕಾಶವನ್ನು ಪಡೆಯಬಹುದು. ಪ್ರೇಮಿಗಳಿಗೆ ಈ ದಿನ ಅನುಕೂಲಕರವಾಗಿದೆ. ನಿಮ್ಮ ಸಂಗಾತಿಯೊಂದಿಗೆ ನೀವು ಜಗಳವಾಡಬಹುದು. ಈ ಅವಧಿಯಲ್ಲಿ ನಿಮ್ಮ ಆರೋಗ್ಯ ದುರ್ಬಲವಾಗಿರುತ್ತದೆ.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12,21,30)
ನಿಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಿರಿ. ಶಿಕ್ಷಣ ಮತ್ತು ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಈ ವಾರ ತುಂಬಾ ಮಂಗಳಕರವಾಗಿರುತ್ತದೆ. ನೀವು ದೊಡ್ಡ ಯಶಸ್ಸನ್ನು ಪಡೆಯಬಹುದು. ವ್ಯಾಪಾರಿಗಳಿಗೆ ಏಳು ದಿನಗಳು ಬಹಳ ಮುಖ್ಯವಾಗಿರುತ್ತದೆ. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಿದರೆ, ನಿಮ್ಮ ಪಾಲುದಾರರಿಂದ ನಿಮಗೆ ಸಂಪೂರ್ಣ ಬೆಂಬಲ ಸಿಗುತ್ತದೆ. ಸಂಬಂಧಗಳ ವಿಷಯದಲ್ಲಿ ಈ ವಾರ ನಿಮಗೆ ಸರಾಸರಿಯಾಗಲಿದೆ. ನೀವು ವಿವಾಹಿತರಾಗಿದ್ದರೆ, ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧದಲ್ಲಿ ಮಾಧುರ್ಯ ಹೆಚ್ಚಾಗುವುದು.
ಸಂಖ್ಯೆ 4 (ಹುಟ್ಟಿದ ದಿನಾಂಕ 4,13,22,31)
ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಬಗ್ಗೆ ಸಂಪೂರ್ಣ ಗಮನ ಹರಿಸಬೇಕು. ಉದ್ಯೋಗಸ್ಥರಿಗೆ ಈ ವಾರ ಸ್ವಲ್ಪ ಕಷ್ಟವಾಗಲಿದೆ. ವ್ಯಾಪಾರಿಗಳು ಹೊಸ ತಂತ್ರಗಳನ್ನು ಮಾಡಬೇಕಾಗುವುದು. ನಿಮಗೆ ಹೆಚ್ಚಿನ ಕೆಲಸದ ಹೊರೆ ಇದ್ದರೆ, ಸರಿಯಾದ ಯೋಜನೆಯ ಪ್ರಕಾರ ನಿಮ್ಮ ಕೆಲಸವನ್ನು ಪೂರ್ಣಗೊಳಿಸಲು ನಿಮಗೆ ಸಲಹೆ ನೀಡಲಾಗುವುದು .
ಸಂಖ್ಯೆ 5 ( ಹುಟ್ಟಿದ ದಿನಾಂಕ 5, 14,23)
ಈ ವಾರ ಉತ್ತಮವಾಗಿರುತ್ತದೆ. ವ್ಯಾಪಾರಿಗಳು ಈ ಸಮಯದಲ್ಲಿ, ನಿಮ್ಮ ಸರಿಯಾದ ನಿರ್ಧಾರಗಳ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಾಗುವುದು. ಈ ವಾರ ನಿಮ್ಮ ವೈಯಕ್ತಿಕ ಜೀವನದ ಮೇಲೆ ಕೇಂದ್ರೀಕರಿಸಲು ನಿಮಗೆ ಸಂಪೂರ್ಣ ಅವಕಾಶ ಸಿಗಲಿದೆ. ನಿಮ್ಮ ಸಂಬಂಧದಲ್ಲಿ ದೊಡ್ಡ ಸುಧಾರಣೆ ಕಂಡುಬರುವುದು.
ಸಂಖ್ಯೆ 6 ( ಹುಟ್ಟಿದ ದಿನಾಂಕ 6,15,24)
ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ದೂರವಾಗುವ ಸಾಧ್ಯತೆಯಿದೆ. ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಏನಾದರೂ ಉತ್ತಮ ಸಾಧನೆ ಮಾಡಲು ಬಯಸಿದರೆ ನೀವು ಹೆಚ್ಚು ಶ್ರಮಿಸಬೇಕು. ಈ ಅವಧಿಯಲ್ಲಿ, ನಿಮ್ಮ ಆತ್ಮವಿಶ್ವಾಸವು ಸ್ವಲ್ಪಮಟ್ಟಿಗೆ ದುರ್ಬಲವಾಗಿರಲಿದೆ. ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು, ಜಾಗ್ರತೆವಹಿಸಿ.
ಸಂಖ್ಯೆ 7 ( ಹುಟ್ಟಿದ 7,16,25)
ವಿವಾಹಿತರು ನಿಮ್ಮ ವೈವಾಹಿಕ ಜೀವನದ ಬಗ್ಗೆ ನೀವು ಹೆಚ್ಚು ಗಮನ ಹರಿಸಬೇಕು. ನಿಮ್ಮ ಸಂಗಾತಿಯ ಭಾವನೆಗಳನ್ನು ಗೌರವಿಸಿ. ಈ ವಾರ ಕೆಲಸದ ಒತ್ತಡ ಅಧಿಕವಿರಲಿದೆ, ನಿಮ್ಮ ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದ ಸಹಾಯದಿಂದ ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುವುದು. ವ್ಯಾಪಾರಿಗಳು ಜಾಗರೂಕರಾಗಿರಬೇಕು, ಇಲ್ಲದಿದ್ದರೆ ನಷ್ಟವಾಗುವುದು, ಆರೋಗ್ಯದ ಬಗ್ಗೆ ಕೂಡ ಗಮನಹರಿಸಬೇಕು.
ಸಂಖ್ಯೆ 8 (ಹುಟ್ಟಿದ ದಿನಾಂಕ 8,17,26)
ಉದ್ಯೋಗಗಳಿಗೆ ಬಡ್ತಿ ಸಿಗಲಿದೆ. ವ್ಯಾಪಾರಿಗಳು ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಈ ಸಮಯದಲ್ಲಿ ನೀವು ನಿಮ್ಮ ಪ್ರತಿಸ್ಪರ್ಧಿಗಳಿಗೆ ಕಠಿಣ ಸ್ಪರ್ಧೆ ನೀಡಲು ಸಾಧ್ಯವಾಗವುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಅನಗ್ಯತ ವಿಚಾರಗಳ ಬಗ್ಗೆ ಚಿಂತಿಸಬೇಡಿ. .
ಸಂಖ್ಯೆ 9 (ಹುಟ್ಟಿದ ದಿನಾಂಕ 9,18,27)
ಪ್ರೇಮಿಗಳಿಗೆ ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಸಂಬಂಧದಲ್ಲಿ ಬಿರುಕು ಉಂಟಾಗಬಹುದು. ಉದ್ಯೋಗಿಗಳು ಕೆಲಸದ ಕಡೆಗೆ ತುಂಬಾನೇ ಗಮನಹರಿಸಬೇಕು. ನೀವು ಅಜಾಗರೂಕರಾಗಿದ್ದರೆ ನಿಮ್ಮ ಕೆಲಸಕ್ಕೆ ತೊಂದರೆಯಾಗಬಹುದು. ಉದ್ಯಮಿಗಳು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸುವ ಯಾವುದೇ ಆತುರದ ನಿರ್ಧಾರವನ್ನು ತೆಗೆದುಕೊಳ್ಳಬಾರದು. ಈ ಅವಧಿಯಲ್ಲಿ ನಿಮ್ಮ ರೋಗನಿರೋಧಕ ಶಕ್ತಿ ತುಂಬಾ ದುರ್ಬಲವಾಗಿರುತ್ತದೆ. ಆದ್ದರಿಂದ ಆರೋಗ್ಯದ ಕಡೆ ಕೂಡ ಗಮನಹರಿಸಬೇಕು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications