Latest Updates
-
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ(ಜುಲೈ 14-20ರವರೆಗೆ ) ನಿಮಗೆ ಹೇಗಿರಲಿದೆ?
ಈ ಸಂಖ್ಯಾಶಾಸ್ತ್ರ ಭವಿಷ್ಯವನ್ನು ನಿಮ್ಮ ಜನ್ಮ ದಿನಾಂಕ ನೋಡಿ ಹೇಳಲಾಗಿದೆ, ನೀವು ಹುಟ್ಟಿದ ದಿನಾಂಕ ನಿಮ್ಮ ಜನ್ಮ ಸಂಖ್ಯೆ ಆಗಿದೆ ಉದಾಹರಣೆಗೆ ನೀವು 25ನೇ ತಾರೀಕಿಗೆ ಜನಿಸಿದ್ದರೆ 2+5=7 ನಿಮ್ಮ ಜನ್ಮ ಸಂಖ್ಯೆ ನೋಡಿ:
ಸಂಖ್ಯೆ 1 (ಹುಟ್ಟಿದ ದಿನಾಂಕ 1,10,19,28)
ಈ ವಾರ ನಿಮಗೆ ಉತ್ತಮವಾಗಿದೆ, ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ, ಆರ್ಥಿಕ ಪ್ರಗತಿ ಕಂಡು ಬರಲಿದೆ. ಯಾವುದೇ ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ಅಡೆತಡೆಗಳು ಇರಬಹುದು. ಆದರೆ ಈ ಸಮಸ್ಯೆ ತಾತ್ಕಾಲಿಕವಾಗಿರುವುದರಿಂದ ಹೆಚ್ಚಿನ ಸಮಸ್ಯೆ ಇರಲ್ಲ, ಕುಟುಂಬ ಜೀವನ ಚೆನ್ನಾಗಿರಲಿದೆ, ಆರ್ಥಿಕವಾಗಿಯೂ ಈ ಸಮಯ ಉತ್ತಮವಾದೆ. ಪ್ರೇಮಿಗಳಿಗೆ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ, ಆತುರದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಆರೋಗ್ಯದ ದೃಷ್ಟಿಯಿಂದ ಈ ಏಳು ದಿನಗಳು ನಿಮಗೆ ಒಳ್ಳೆಯದು.

ಸಂಖ್ಯೆ 2 (ಹುಟ್ಟಿದ ದಿನಾಂಕ 2,11,20,29)
ಈ ಅವಧಿ ನಿಮಗೆ ಶುಭವಾಗಿದೆ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ನಗೊಳ್ಳಲಿದೆ, ಇನ್ನು ಹೊಸ ಕೆಲಸ ಹುಡುಕುತ್ತಿದ್ದರೆ ಸಕರಾತ್ಮಕ ಫಲ ಕಂಡು ಬರಲಿದೆ, ಮನೆಯ ವಾತಾವರಣ ಚೆನ್ನಾಗಿರಲಿದೆ. ಆದರೆ ನೀವು ಹಣಕಾಸಿನ ಬಗ್ಗೆ ಜಾಗ್ರತೆ ಮಾಡಬೇಕು, ಇಲ್ಲದಿದ್ದರೆ ಹಣ ನಷ್ಟವಾಗಬಹುದು, ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12,21,30)
ಈ ವಾರ ನೀವು ಸ್ವಲ್ಪ ಜಾಗ್ರತೆವಹಿಸಬೇಕು, ನಿಮ್ಮ ಖರ್ಚುಗಳು ಅಧಿಕವಿರಬಹುದು, ಆರ್ಥಿಕ ಸವಾಲುಗಳು ಎದುರಾಗಬಹುದು, ವೃತ್ತಿ ಬದುಕಿನ ಬಗ್ಗೆ ನೋಡುವುದಾದರೆ ಈ ಅವಧಿ ಅನುಕೂಲಕರವಾಗಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ವಾರದ ಕೊನೆಯಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು.
ಸಂಖ್ಯೆ 4 (ಹುಟ್ಟಿದ ದಿನಾಂಕ 4,13,22,31)
ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ, ನೀವು ಕೆಲಸದ ಕಡೆಗೆ ಗಮನಹರಿಸಬೇಕು, ವೈವಾಹಿಕ ಜೀವನ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಬೇಕು. ಆವಾಗ ಸಂತೋಷ ಇರುತ್ತದೆ. ಹಣದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರುತ್ತದೆ. ಹಣದ ಖರ್ಚು ಇರಲಿದೆ.
ಸಂಖ್ಯೆ 5 (ಹುಟ್ಟಿದ ದಿನಾಂಕ 5,14,23)
ಈ ವಾರ ಕೆಲಸದಲ್ಲಿ ಜಾಗ್ರತೆವಹಿಸಬೇಕು, ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ ಕೆಲಸದಲ್ಲಿ ತಪ್ಪುಗಳಾಗದಂತೆ ಜಾಗ್ರತೆವಹಿಸಬೇಕು. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯವಿರಲಿದೆ, ನೀವು ಸಮಧಾನದಿಂದ ತಾಳ್ಮೆ ಬಗೆಹರಿಸಲು ಪ್ರಯತ್ನಿಸಬೇಕು. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಇನ್ನು ಕೆಲಸ ಹೂಡಿಕೆಗೆ ಈ ಅವಧಿ ಅನುಕೂಲಕರವಾಗಿದೆ, ಹವಾಮಾನ ಬದಲಾವಣೆಯಿಂದಾಗಿ ಆರೋಗ್ಯ ಸಮಸ್ಯೆಗಳಿರಬಹುದು.
ಸಂಖ್ಯೆ 6 (ಹುಟ್ಟಿದ ದಿನಾಂಕ 6,15,24)
ಹಣದ ವಿಷಯದಲ್ಲಿ ಈ ವಾರ ಉತ್ತಮವಾಗಿದೆ, ಏನಾದರೂ ಹೊಸ ಕೆಲಸ ಪ್ರಾರಂಭಿಸುವ ಬಗ್ಗೆ ಯೋಚನೆ ಮಾಡಿದ್ದರೆ ಅದು ಮಾಡಲು ಸಾಧ್ಯವಾಗುವುದು. ವ್ಯಾಪಾರಿಗಳಿಗೆ ಈ ಸಮಯ ತುಂಬಾ ಚೆನ್ನಾಗಿರಲಿದೆ. ಪ್ರೇಮಿಗಳಿಗೆ, ವಿವಾಹಿತರಿಗೆ ಈ ವಾರ ವಿಶೇಷವಾಗಿರುತ್ತದೆ. ಆರೋಗ್ಯದ ಬಗ್ಗೆ ತುಂಬಾ ಚಿಂತೆ ಮಾಡಲು ಹೋಗಬೇಡಿ. ಏನಾದರೂ ಆರೋಗ್ಯ ಸಮಸ್ಯೆ ಇದ್ದರೆ ನಿಯಮಿತ ಔಷಧ ತೆಗೆದುಕೊಳ್ಳಿ.
ಸಂಖ್ಯೆ 7 (ಹುಟ್ಟಿದ ದಿನಾಂಕ 7,16,25)
ಪ್ರೇಮಿಗಳಿಗೆ ಈ ಸಮಯ ತುಂಬಾ ಚೆನ್ನಾಗಿರಲಿದೆ, ಅದರಲ್ಲಿಯೂ ವಿವಾಹಿತರಿಗೆ ಈ ವಾರ ರೊಮ್ಯಾಂಟಿಕ್ ಆಗಿರಲಿದೆ, ಸಂಗಾತಿಯ ಜೊತೆಗೆ ಹೆಚ್ಚಿನ ಸಮಯ ಕಳೆಯುತ್ತೀರಿ. ನಿಮ್ಮ ಆದಾಯ ಚೆನ್ನಾಗಿರಲಿದೆ. ಉದ್ಯಮಿಗಳಿಗೆ ಆರ್ಥಿಕವಾಗಿ ಉತ್ತಮವಾಗಿದೆ. ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ.
ಸಂಖ್ಯೆ 8 (ಹುಟ್ಟಿದ ದಿನಾಂಕ 8,17,26)
ಉದ್ಯೋಗಿಗಳಿಗೆ ಈ ಸಮಯವು ತುಂಬಾ ಚೆನ್ನಾಗಿರಲಿದೆ. ಕೆಲಸ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಈ ಸಮಯನಿಮಗೆ ಒಳ್ಳೆಯದಿದೆ. ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಯಾವುದೇ ವಿಷಯವನ್ನು ಹೆಚ್ಚು ಮನಸ್ಸಿಗೆ ತೆಗೆದುಕೊಳ್ಳಬೇಡಿ, ವ್ಯವಹಾರವನ್ನು ವಿಸ್ತರಿಸಲು ನೀವು ಯೋಜನೆ ಮಾಡುತ್ತಿದ್ದರೆ ಅದರ ಬಗ್ಗೆ ಮರುಶೀಲನೆ ನಿಮಗೆ ಮುಖ್ಯವಾಗಿದೆ. ಹಣದ ವಿಷಯದಲ್ಲಿ ಜಾಗ್ರತೆವಹಿಸದಿದ್ದರೆ ನಷ್ಟ ಉಂಟಾಗಬಹುದು.
ಸಂಖ್ಯೆ 9 (ಹುಟ್ಟಿದ ದಿನಾಂಕ 9,18,27)
ವಿದ್ಯಾರ್ಥಿಗಳ ನಿರ್ಲಕ್ಷ್ಯ ಪರೀಕ್ಷೆಯ ಫಲಿತಾಂಶಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳಲು ಇದು ಉತ್ತಮ ಸಮಯವಲ್ಲ. ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಸಂಬಂಧ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











