Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸಂಖ್ಯಾಶಾಸ್ತ್ರ ಪ್ರಕಾರ ವಾರ ಭವಿಷ್ಯ (ಮಾ.16-23): ಈ ವಾರ ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರದ ಪ್ರಕಾರ ಈ ವಾರದ ಭವಿಷ್ಯ ನೀಡಲಾಗಿದೆ, ನೀವು ಯಾವ ದಿನಾಂಕದಂದು ಜನಿಸಿದ್ದೀರಿ ಎಂಬುವುದರ ಮೇಲೆ ನಿಮ್ಮ ಜನ್ಮ ಸಂಖ್ಯೆ ಯಾವುದೆಂದು ತಿಳಿಯಬಹುದು, ಈ ದಿನ ನಿಮ್ಮ ಜನ್ಮ ಸಂಖ್ಯೆಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:

ಸಂಖ್ಯೆ 1 ( 1, 10, 19, 28 )
ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ, ಈ ಸಮಯದಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ, ನಿಮ್ಮೆಲ್ಲಾ ಕೆಲಸವನ್ನು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳಿಸಲು ಸಾಧ್ಯವಾಗುವುದು. ಇನ್ನು ವೈವಾಹಿಕ ಜೀವನದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ. ವಿದ್ಯಾರ್ಥಿಗಳು ಈ ಸಮಯದಲ್ಲಿ ಅಧ್ಯಯನದ ಕಡೆ ಹೆಚ್ಚಿನ ಗಮನಹರಿಸಿದರೆ ಅದರ ಫಲ ಪಡೆಯುತ್ತೀರಿ, ವ್ಯಾಪಾರಸ್ಥರು ಈ ವಾರ ಲಾಭ ಗಳಿಸಲು ಸಾಧ್ಯವಾಗುವುದು, ಆದರೆ ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು, ಜಾಗ್ರತೆವಹಿಸಿ.
ಸಂಖ್ಯೆ 2 (2, 11, 20, 29)
ಈ ವಾರ ಈ ಸಂಖ್ಯೆಯಲ್ಲಿ ಜನಿಸಿದ ಮಹಿಳೆಯರು ತಮ್ಮ ವೃತ್ತಿ ಜೀವನದ ಬಗ್ಗೆ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ. ಈ ಸಮಯದಲ್ಲಿ ಅತಿಯಾದ ಚಿಂತೆ ಮಾಡಲು ಹೋಗಬೇಡಿ. ಇನ್ನು ವೈವಾಹಿಕ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಲ್ಲ, ನಿಮ್ಮಿಬ್ಬರ ನಡುವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು. ವಿದ್ಯಾರ್ಥಿಗಳು ಅಷ್ಟೇ ಈ ಅವಧಿಯಲ್ಲಿ ಹೆಚ್ಚು ಗಮನಹರಿಸಬೇಕು. ಇನ್ನು ವೃತ್ತಿ ಜೀವನದಲ್ಲಿ ಹೆಚ್ಚು ಸವಾಲುಗಳು ಬರಬಹುದು, ಆದ್ದರಿಂದ ಹೆಚ್ಚು ಜಾಗ್ರತೆವಹಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು.
ಸಂಖ್ಯೆ 3 ( ಜನ್ಮ ಸಂಖ್ಯೆ 03, 12, 21, 30)
ನೀವು ನಿಮ್ಮ ಗುರಿ ತಲುಪಲು ಹೆಚ್ಚು ಗಮನಹರಿಸಬೇಕಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಒಡಹುಟ್ಟಿದವರೊಂದಿಗೆ ಉತ್ತಮ ಸಂಬಂಧ ಇರಲಿದೆ. ಇನ್ನು ವೈವಾಹಿಕ ಹಾಗೂ ಪ್ರೇಮ ಜೀವನ ಕೂಡ ಚೆನ್ನಾಗಿರಲಿದೆ. ಇನ್ನು ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ಒಳ್ಳೆಯ ಅವಕಾಶ ದೊರೆಯುವುದರಿಂದ ಖುಷಿಯಾಗುವಿರಿ. ವ್ಯಾಪಾರಿಗಳು ಉತ್ತಮ ಆರ್ಥಿಕ ಲಾಭ ಪಡೆಯುತ್ತೀರಿ. ಆರೋಗ್ಯ ಜೀವನ ಚೆನ್ನಾಗಿರಲಿದೆ.
ಸಂಖ್ಯೆ 4 (ಜನ್ಮ ಸಂಖ್ಯೆ 04, 13, 22, 31)
ಈ ಅವಧಿಯಲ್ಲಿ ವೈವಾಹಿಕ ಸಂಬಂಧದಲ್ಲಿ ಕೆಲ ಸಮಸ್ಯೆಗಳು ಬರಬಹುದು, ಸಂಗಾತಿಯೊಂದಿಗೆ ಜಗಳವಾಡಬಹುದು. ಆದರೆ ನೀವು ಮುಕ್ತವಾಗಿ ಸಂಗಾತಿಯೊಂದಿಗೆ ಮತನಾಡಿದರೆ ಎಲ್ಲಾ ಸಮಸ್ಯೆ ಬಗೆಹರಿಯಲಿದೆ. ವಿದ್ಯಾರ್ಥಿಗಳಿಗೆ ಈ ಅವಧಿ ಅನುಕೂಲರವಾಗಿದೆ. ಇನ್ನು ವೃತ್ತಿ ಜೀವನದ ಬಗ್ಗೆ ಹೇಳುವುದಾದರೆ ಈ ವಾರ ನೀಡಿರುವ ಕೆಲಸದ ಬಗ್ಗೆ ಅತೃಪ್ತಿ ಇರಬಹುದು, ವ್ಯವಹಾರಸ್ಥರೂ ಈ ವಾರ ಜಾಗ್ರತೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಸಂಖ್ಯೆ 5 (ಜನ್ಮ ದಿನಾಂಕ 05, 14, 23)
ನಿಮ್ಮ ಹಾಗೂ ಸಂಗಾತಿ ನಡುವಿನ ಸಂಬಂಧ ಚೆನ್ನಾಗಿರಲಿದೆ, ಈ ವಾರ ನೀವಿಬ್ಬರು ಟ್ರಿಪ್ ಪ್ಲ್ಯಾನ್ ಮಾಡಬಹುದು, ಇನ್ನು ವಿದ್ಯಾರ್ಥಿಗಳಿಗೆ ಈ ವಾರ ಅನುಕೂಲಕರವಾಗಿರಲಿದೆ. ಈ ವಾರ ನೀವು ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುವುದು, ವ್ಯಾಪಾರಿಗಳು ಹೊಸ ಬ್ಯುಸ್‌ನೆಸ್ ಮಾಡುವುದಕ್ಕೆ ಈ ಅವಧಿ ಉತ್ತಮವಾಗಿದೆ. ಆರೋಗ್ಯ ಉತ್ತಮವಾಗಿರಲಿದೆ.
ಸಂಖ್ಯೆ 6 (ಜನ್ಮ ಸಂಖ್ಯೆ 6, 15, 24)
ಕೆಲಸದ ಒತ್ತಡದಿಂದ ಹೊರಬಂದು ಸಂಗಾತಿ ಜೊತೆಗೆ ಉತ್ತಮ ಸಂಬಂಧ ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ನಡುವೆ ಪ್ರೀತಿ ಹೆಚ್ಚಾಗಲಿದೆ. ವಿದ್ಯಾರ್ಥಿಗಳು ಕಠಿಣ ಶ್ರಮ ಹಾಕಿದರೆ ಮಾತ್ರ ಯಶಸ್ಸು ಗಳಿಸಲು ಸಾಧ್ಯವಾಗುವುದು. ಇನ್ನು ಕೆಲಸದಲ್ಲಿ ನಿಮ್ಮ ಕೆಲಸಕ್ಕೆ ತಕ್ಕ ಪ್ರತಿಫಲ ಸಿಗುವುದಿಲ್ಲ, ಇನ್ನು ವ್ಯಾಪಾರಿಗಳಿಗೂ ತಮ್ಮ ಪ್ರತಿಸ್ಪರ್ಧಿಗಳಿಂದ ಕಠಿಣ ಪ್ರತಿಸ್ಪರ್ಧೆ ಎದುರಾಗುವುದು.
ಸಂಖ್ಯೆ 7 (ಜನ್ಮ ಸಂಖ್ಯೆ 7, 16, 25)
ಈ ಅವಧಿಯಲ್ಲಿ ನಿಮ್ಮ ಹಾಗೂ ಸಂಗಾತಿಯ ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಿ ಅಂತರ ಹೆಚ್ಚಾಗುವುದು, ನೀವಿಬ್ಬರು ಹೊಂದಾಣಿಕೆಯಿಂದ ಇರಲು ಪ್ರಯತ್ನಿಸಿದರೆ ಮಾತ್ರ ಸಂಬಂಧ ಚೆನ್ನಾಗಿರಲಿದೆ. ವಿದ್ಯಾರ್ಥಿಗಳು ಸುಮ್ಮನೆ ಕನಸು ಕಂಡರೆ ಸಾಲದು ಅದಕ್ಕೆ ತಕ್ಕ ಪ್ರಯತ್ನ ಪಡಬೇಕಾಗುವುದು. ಇನ್ನು ಕೆಲಸದಲ್ಲಿ ನೀವು ಹೆಚ್ಚು ಜಾಗ್ರತೆವಹಿಸಬೇಕು. ಇನ್ನು ವಾರ ವಾಹನ ಚಲಾಯಿಸುವಾಗ ಜಾಗ್ರತೆವಹಿಸಿ.
ಸಂಖ್ಯೆ 8 (ಜನ್ಮ ದಿನಾಂಕ 8, 17, 26)
ನಿಮ್ಮ ಹಾಗೂ ಸಂಗಾತಿ ನಡುವಿನ ಅಂತರ ಹೆಚ್ಚಾಗಬಹುದು. ಇದರಿಂದ ಸಂತೋಷ ದೂರಾಗುವುದು, ಎಲ್ಲಾ ಕಳೆದುಕೊಂಡಂತೆ ಅನಿಸುವುದು. ನಿಮ್ಮ ವೈಯಕ್ತಿಕ ಸಮಸ್ಯೆ ವೃತ್ತಿ ಜೀವನದ ಮೇಲೂ ಪರಿಣಾಮ ಬೀರುವುದು, ಕೆಲಸದ ಕಡೆಗೆ ಗಮನ ನೀಡುವುದು ಕಷ್ಟವಾಗುವುದು. ವ್ಯಾಪಾರಸ್ಥರೂ ಜಾಗ್ರತೆವಹಿಸಬೇಕು, ಇನ್ನು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ತನ್ನ ಪಾರ್ಟನರ್ ಜೊತೆ ಭಿನ್ನಾಭಿಪ್ರಾಯ ಹೊಂದುವ ಸಾಧ್ಯತೆ ಇದೆ. ಆರೋಗ್ಯ ಕೂಡ ಅಷ್ಟು ಉತ್ತಮವಾಗಿರಲ್ಲ.
ಸಂಖ್ಯೆ 9 (ಜನ್ಮ ಸಂಖ್ಯೆ 9,18,27)
ಪ್ರೀತಿಯಲ್ಲಿರುವವರಿಗೆ ಈ ವಾರ ಒಳ್ಳೆಯದಲ್ಲ, ಹಲವು ಸಮಸ್ಯೆಗಳು ಎದುರಾಗುವುದು, ವಿವಾಹಿತರ ವೈವಾಹಿಕ ಜೀವನ ಚೆನ್ನಾಗಿರಲಿದೆ. ವಿದ್ಯಾರ್ಥಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ. ಇನ್ನು ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರು ಇನ್ನೂ ಸ್ವಲ್ಪ ಕಾಯಬೇಕು. ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ ಸಿಗಲ್ಲ, ಆರೋಗ್ಯದ ಬಗ್ಗೆ ಹೇಳುವುದಾದರೆ ನಿದ್ರಾಹೀನತೆ ಸಮಸ್ಯೆವಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











