Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಂಖ್ಯಾಶಾಸ್ತ್ರ (ಮಾರ್ಚ್ 30-ಏಪ್ರಿಲ್ 6): ಈ ವಾರ ನಿಮ್ಮ ಜನ್ಮ ಸಂಖ್ಯೆಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ನಿಮ್ಮ ಜನ್ಮ ಸಂಖ್ಯೆಗೆ ಹೇಗಿರಲಿದೆ ಎಂದು ನೋಡೋಣ... ನೀವು ಯಾವುದೇ ತಿಂಗಳಿನ 11ನೇ ರಾರೀಕಿಗೆ ಜನಿಸಿದ್ದರೆ ನಿಮ್ಮ ಜನ್ಮ ಸಂಖ್ಯೆ 2 ಎಂದು ಲೆಕ್ಕ ಹಾಕಬಹುದು, ನೀವು ಹುಟ್ಟಿದ ದಿನದ ಲೆಕ್ಕಚಾರದಲ್ಲಿ ಭವಿಷ್ಯ ಹೇಳಲಾಗಿದೆ ನೋಡಿ:

ಸಂಖ್ಯೆ 1(ಹುಟ್ಟಿದ ದಿನಾಂಕ 1,10,19,28)
ಈ ವಾರ ನಿಮಗೆ ತುಂಬಾ ಶುಭವಾಗಿರಲಿದೆ. ಈ ಸಮಯದಲ್ಲಿ ನಿಮ್ಮ ಬಾಕಿ ಕೆಲಸಗಳು ಪೂರ್ಣಗೊಳ್ಳುತ್ತವೆ. ನೀವು ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ನಿಮ್ಮ ಸಮಸ್ಯೆಯನ್ನು ಪರಿಹರಿಸಬಹುದು. ಆದರೆ ಈ ಸಮಯದಲ್ಲಿ ಸ್ವಲ್ಪ ಜಾಗರೂಕರಾಗಿರಲು ಸಲಹೆ ನೀಡಲಾಗುವುದು.ಈ ವಾರ ಆದಾಯಕ್ಕಿಂತ ಹೆಚ್ಚಿನ ಖರ್ಚು ಬರಬಹುದು. ಕೆಲಸದ ಒತ್ತಡ ಅಧಿಕವಿರಲಿದೆ. ಆದರೆ ನಿಮ್ಮ ಕಠಿಣ ಪರಿಶ್ರಮದಿಂದ ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ನಿಮ್ಮ ಆರ್ಥಿಕ ಸ್ಥಿತಿಯು ಉತ್ತಮವಾಗಿರುತ್ತದೆ, ಆದರೆ ನೀವು ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡಲು ಹೋಗಬೇಡಿ.
ಸಂಖ್ಯೆ 2 ( ಹುಟ್ಟಿದ ದಿನಾಂಕ 2,11,20,29)
ಅನಗ್ಯತ ಆಲೋಚನೆಯಿಂದ ನಿಮ್ಮ ಆರೋಗ್ಯ ಹದಗೆಡಬಹುದು. ನಿಮ್ಮ ಆರೋಗ್ಯವನ್ನು ನೀವು ಕಾಳಜಿ ವಹಿಸಬೇಕು. ಕೆಲಸದ ಹೊರೆ ಹೆಚ್ಚಾಗುವುದರಿಂದ ನೀವು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ನಿಮ್ಮ ಎಲ್ಲಾ ಕೆಲಸಗಳನ್ನು ಯೋಜನೆಯ ಪ್ರಕಾರ ಪೂರ್ಣಗೊಳಿಸಲು ನಿಮಗೆ ಸಲಹೆ ನೀಡಲಾಗವುದು. ಈ ಸಮಯದಲ್ಲಿ ನೀವು ದೀರ್ಘ ಪ್ರಯಾಣವನ್ನು ತಪ್ಪಿಸಬೇಕು. ನಿಮ್ಮ ವೈವಾಹಿಕ ಜೀವನದಲ್ಲಿ ಕೆಲ ಸಮಸ್ಯೆಗಳಿರಬಹುದು.
ಸಂಖ್ಯೆ 3 ( ಹುಟ್ಟಿದ ದಿನಾಂಕ 3,12,21,30)
ಬಡ್ತಿಗಾಗಿ ಹೆಚ್ಚಿನ ಶ್ರಮ ಹಾಕಬೇಕು. ವ್ಯಾಪಾರಿಗಳು ನಿಮ್ಮ ಯೋಜನೆಯಂತೆ ಮುಂದುವರಿಯಬಹುದು. ನಿಮ್ಮ ಕೆಲವು ಹಳೆಯ ಸಂಪರ್ಕಗಳಿಂದ ನೀವು ಪ್ರಯೋಜನ ಪಡೆಯಬಹುದು. ಉದ್ಯೋಗಿಗಳ ಮೇಲೆ ಜವಾಬ್ದಾರಿಗಳ ಹೊರೆ ಹೆಚ್ಚು ಇರಲಿದೆ. ಹಣದ ಬಗ್ಗೆ ನೋಡುವುದಾದರೆ ಮ್ಮ ಆದಾಯ ಹೆಚ್ಚಾಗಬಹುದು. ನಿಮ್ಮ ಸಂಗಾತಿಯಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ.
ಸಂಖ್ಯೆ 4 ( ಹುಟ್ಟಿದ ದಿನಾಂಕ 4,13,22,31)
ಪ್ರೇಮಿಗಳಿಗೆ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಸಂಗಾತಿಯೊಂದಿಗೆ ಭಾವನಾತ್ಮಕ ಬಾಂಧವ್ಯ ಹೆಚ್ಚಾಗುತ್ತದೆ. ಈ ಅವಧಿಯಲ್ಲಿ ಉದ್ಯಮಿಗಳು ಕೆಲವು ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಬಹುದು. ನಿಮ್ಮ ಯಾರೊಂದಿಗೆ ಹಂಚಿಕೊಳ್ಳಲು ಹೋಗಬೇಡಿ. ನೀವು ಉದ್ಯೋಗ ಹುಡುಕುತ್ತಿದ್ದರೆ ನಿಮ್ಮ ಪ್ರಯತ್ನ ಮತ್ತಷ್ಟು ಚುರುಕುಗೊಳಿಸಬೇಕು. ಹಣದ ವಿಷಯದಲ್ಲಿ ಈ ವಾರ ದುಬಾರಿಯಾಗಲಿದೆ, ಅನಗ್ಯತ ಖರ್ಚುಗಳಿಗೆ ಕಡಿವಾಣ ಹಾಕಿ.
ಸಂಖ್ಯೆ 5 (ಹುಟ್ಟಿದ ದಿನಾಂಕ 5,14,23)
ನಿಮ್ಮ ದಿನಚರಿಯಲ್ಲಿ ಯೋಗ ಮತ್ತು ಧ್ಯಾನವನ್ನು ಸೇರಿಸಿ, ಮತ್ತು ಅನಗತ್ಯ ಚಿಂತೆಗಳಿಂದ ದೂರವಿರಿ. ಕೆಉದ್ಯಮಿಗಳಿಗೆ ದೊಡ್ಡ ಅವಕಾಶ ಸಿಗುವ ಸಾಧ್ಯತೆ ಇದೆ. ನೀವು ಪ್ರಚಂಡ ಆರ್ಥಿಕ ಪ್ರಯೋಜನಗಳನ್ನು ಸಹ ಪಡೆಯಬಹುದು. ದುಡಿಯುವ ಜನರಿಗೆ ಇದು ಬದಲಾವಣೆಯ ಸಮಯ. ಈ ಸಮಯವು ವಿದ್ಯಾರ್ಥಿಗಳಿಗೆ ಬಹಳ ಮುಖ್ಯವಾಗಿರುತ್ತದೆ. ನಿಮ್ಮ ಶಿಕ್ಷಣಕ್ಕೆ ಸಂಬಂಧಿಸಿದಂತೆ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು.
ಸಂಖ್ಯೆ 6 (ಹುಟ್ಟಿದ ದಿನಾಂಕ 6,15,24)
ವೈವಾಹಿಕ ಜೀವನದಲ್ಲಿ ಪರಿಸ್ಥಿತಿಗಳು ಒತ್ತಡದಿಂದ ಕೂಡಿರುತ್ತವೆ. ನಿಮ್ಮ ಸಂಬಂಧದಲ್ಲಿ ಸಮಸ್ಯೆ ಉಂಟಾಗದಂತೆ ಜಾಗ್ರತೆವಹಿಸಿ. ಈ ಅವಧಿಯಲ್ಲಿ ಉದ್ಯಮಿಗಳು ಸಾಲದ ವಹಿವಾಟುಗಳನ್ನು ತಪ್ಪಿಸಬೇಕು. ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳಲು ಇದು ಉತ್ತಮ ಸಮಯವಲ್ಲ. ಈ ವಾರ ನಿಮಗೆ ಭಾವನಾತ್ಮಕವಾಗಿ ಸ್ವಲ್ಪ ಸವಾಲಾಗಿರುತ್ತದೆ. ಈ ಅವಧಿಯಲ್ಲಿ, ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು.
ಸಂಖ್ಯೆ 7(ಹುಟ್ಟಿದ ದಿನಾಂಕ 7,16,25)
ಈ ವಾರ ನೀವು ಈ ಹಿಂದೆ ಮಾಡಿದ ಹೂಡಿಕೆಯಿಂದ ಉದ್ಯಮಿಗಳು ಉತ್ತಮ ಲಾಭವನ್ನು ಪಡೆಯಬಹುದು. ಈ ಅವಧಿಯಲ್ಲಿ, ನಿಮ್ಮ ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ಉದ್ಯೋಗಸ್ಥರು ತಮ್ಮ ಕಠಿಣ ಪರಿಶ್ರಮದ ಆಧಾರದ ಮೇಲೆ ಉತ್ತಮ ಯಶಸ್ಸನ್ನು ಸಾಧಿಸಬಹುದು. ನಿಮ್ಮ ಕೆಲಸವು ವಿಭಿನ್ನ ಗುರುತನ್ನು ಪಡೆಯುತ್ತದೆ. ವಾರದ ಕೊನೆಯಲ್ಲಿ ನೀವು ಕೆಲವು ಒಳ್ಳೆಯ ಕೆಲಸಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಸಹ ಪಡೆಯಬಹುದು. ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ನಿಮ್ಮ ಸಮಸ್ಯೆಯನ್ನು ಪರಿಹರಿಸಬಹುದು. ವಾರದ ಕೊನೆಯಲ್ಲಿ ನಿಮ್ಮ ಸಂಗಾತಿಯೊಂದಿಗೆ ನೀವು ಕಡಿಮೆ ದೂರ ಪ್ರಯಾಣಿಸಬಹುದು. ನಿಮ್ಮ ಈ ಪ್ರಯಾಣವು ಬಹಳ ಸ್ಮರಣೀಯವಾಗಿರುತ್ತದೆ.
ಸಂಖ್ಯೆ 8 (ಹುಟ್ಟಿದ ದಿನಾಂಕ 8,17,26)
ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಉದ್ಯೋಗ ಮಾಡುವವರಿಗೆ ಮೇಲಾಧಿಕಾರಿಗಳ ಮಾರ್ಗದರ್ಶನ ಸಿಗಲಿದೆ. ನಿಮ್ಮ ಕೆಲಸವನ್ನು ಬದಲಾಯಿಸಲು ನೀವು ಬಯಸಿದರೆ, ನೀವು ದೊಡ್ಡ ಕಂಪನಿಯಿಂದ ಆಫರ್ ಪಡೆಯಬಹುದು. ವಿದ್ಯಾರ್ಥಿಗಳು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ಆದರೆ ಶೀಘ್ರದಲ್ಲೇ ನಿಮ್ಮ ಎಲ್ಲಾ ಸಮಸ್ಯೆಗಳು ಕೊನೆಗೊಳ್ಳುತ್ತವೆ, ನಿಮ್ಮ ಅಧ್ಯಯನದಲ್ಲಿ ನೀವು ಸರಿಯಾಗಿ ಗಮನಹರಿಸಲು ಸಾಧ್ಯವಾಗುತ್ತದೆ.
ಸಂಖ್ಯೆ 9 (ಹುಟ್ಟಿದ ದಿನಾಂಕ 9,18,27)
ಕೆಲಸದ ಸ್ಥಳದಲ್ಲಿ ಅತ್ಯಂತ ಸಮತೋಲಿತ ರೀತಿಯಲ್ಲಿ ವರ್ತಿಸಲು ನಿಮಗೆ ಸಲಹೆ ನೀಡಲಾಗುತ್ತದೆ. ಈ ಅವಧಿಯಲ್ಲಿ, ಹೆಚ್ಚಿನ ಕೆಲಸದ ಹೊರೆಯಿಂದಾಗಿ ನೀವು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಈ ವಾರ ಹಣದ ವಿಷಯದಲ್ಲಿ ಮಿಶ್ರ ಫಲಿತಾಂಶ. ನಿಮ್ಮ ಖರ್ಚುಗಳ ಮೇಲೆ ನಿಗಾ ಇಡಲು ಸಲಹೆ ನೀಡಲಾಗುತ್ತದೆ. ಅನಗತ್ಯ ವೆಚ್ಚಗಳು ನಿಮ್ಮ ಬಜೆಟ್ ಅನ್ನು ಹಾಳುಮಾಡಬಹುದು. ನಿಮ್ಮ ಆರೋಗ್ಯವನ್ನು ಸುಧಾರಿಸಲು, ನಿಮ್ಮ ದಿನಚರಿಯಲ್ಲಿ ನೀವು ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











