Latest Updates
-
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ -
ಬಿಸಿಲ ಬೇಗೆಯಿಂದ ಪಾರಾಗಲು ನಿಮ್ಮ ವ್ಯಾಯಾಮದ ಸಮಯ ಬದಲಾಯಿಸಿ
ಸಂಖ್ಯಾಶಾಸ್ತ್ರ ಪ್ರಕಾರ ವಾರಭವಿಷ್ಯ: ಈ ವಾರ ನಿಮ್ಮ ಹುಟ್ಟಿದ ದಿನಾಂಕ ಪ್ರಕಾರ ಈ ವಾರ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ನಿಮಗೆ ಹೇಗಿರಲಿದೆ ಎಂದು ನೋಡೋಣ...
ನಿಮ್ಮ ಜನ್ಮ ದಿನಾಂಕದ ಪ್ರಕಾರ ಈ ಭವಿಷ್ಯ ಹೇಳಲಾಗಿದೆ ನೋಡಿ.
ಸಂಖ್ಯೆ 1( ಹುಟ್ಟಿದ ದಿನಾಂಕ 1,10,19,28)
ಈ ವಾರ ನಿಮಗೆ ವಿಶೇಷವಾಗಿರಲಿದೆ, ಈ ವಾರ ಪ್ರೇಮಿಗಳಿಗೆ ತುಂಬಾ ಅದ್ಭುತವಾಗಿರಲಿದೆ. ಕೆಲಸದಲ್ಲಿ ತುಂಬಾ ಬ್ಯುಸಿ ಇರುವ ಕಾರಣ ನಿಮ್ಮ ಜೀವನ ಸಂಗಾತಿಯ ಕಡೆಗೆ ಗಮನ ಕೊಡಲು ಸಾಧ್ಯವಾಗುವುದಿಲ್ಲ, ಇದರಿಂದ ಸಮಸ್ಯೆ ಉಂಟಾಗುವುದು. ವ್ಯಾಪಾರಿಗಳಿಗೆ ಈ ದಿನ ಆರ್ಥಿಕ ಲಾಭವಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ. ಒಟ್ಟಿನಲ್ಲಿ ನೋಡುವುದಾದರೆ ಈ ವಾರ ನಿಮಗೆ ತುಂಬಾ ಉತ್ತಮವಾಗಿರಲಿದೆ.

ಈ ವಾರ ಏರಳಿತಗಳಿಂದ ಕೂಡಿರಲಿದೆ. ವಿದ್ಯಾರ್ಥಿಗಳು ತಮ್ಮ ಓದಿನ ಕಡೆಗೆ ಗಮನಹರಿಸಬೇಕು. ಪ್ರೇಮಿಗಳ ನಡುವೆ ಕೆಲ ಮನಸ್ತಾಪ ಇರಬಹುದು. ಸಂಗಾತಿಯ ಜೊತೆ ಜಗಳ ತಪ್ಪಿಸುವುದು ಒಳ್ಳೆಯದು. ಉದ್ಯೋಗಿಗಳು ಕೆಲಸದಲ್ಲಿ ಬದಲಾವಣೆಗೆ ಪ್ರಯತ್ನಿಸಬಹುದು. ಉದ್ಯಮಿಗಳು ತಮ್ಮ ಪ್ರತಿಸ್ಪರ್ಧಿಗಳಿಂದ ಕಠಿಣ ಸ್ಪರ್ಧೆಯನ್ನು ಎದುರಿಸಬಹುದು. ಈ ಅವಧಿಯಲ್ಲಿ ನೀವು ಸಾಕಷ್ಟು ಒತ್ತಡವನ್ನು ಅನುಭವಿಸುವಿರಿ. ನೀವು ಆರೋಗ್ಯದ ಕಡೆಗೆ ಗಮನಹರಿಸಿ.
ಸಂಖ್ಯೆ 3 ( ಹುಟ್ಟಿದ ದಿನಾಂಕ 3,12,21,30)
ಈ ವಾರ ನಿಮಗೆ ಚೆನ್ನಾಗಿರಲಿದೆ, ನೀವು ವಿವಾಹಿತರಾಗಿದ್ದರೆ ವೈವಾಹಿಕ ಸಂಬಂಧ ಚೆನ್ನಾಗಿರಲಿದೆ. ಉದ್ಯೋಗಿಗಳು ಕೂಡ ನೀವು ನಿಮ್ಮ ಶ್ರಮಕ್ಕೆ ತಕ್ಕ ಫಲ ಪಡೆಯುತ್ತೀರಿ. ವ್ಯಾಪಾರಿಗಳಿಗೂ ಈ ಅವಧಿ ಫಲಪ್ರದವಾಗಿದೆ. ನಕಾರಾತ್ಮಕತೆ ನಿಮ್ಮ ಮೇಲೆ ಪ್ರಭಾವ ಬೀರಲು ಬಿಡಬೇಡಿ, ಆರೋಗ್ಯ ಚೆನ್ನಾಗಿರಲಿದೆ.
ಸಂಖ್ಯೆ 4 (ಹುಟ್ಟಿದ ದಿನಾಂಕ 4,13,22,31)
ಈ ವಾರ ನಿಮಗೆ ಅಷ್ಟೊಂದು ಅನುಕೂಲಕರವಲ್ಲ, ನೀವು ಊಹಿಸದಂತೆ ಪಲಿತಾಂಶ ಸಿಗದೆ ನಿರಾಸೆ ಉಂಟಾಗುವುದು. ವ್ಯಾಪಾರಿಗಳು ಅದರಲ್ಲಿಯೂ ಪಾಲುದಾರಿಕೆಯ ವ್ಯವಹಾರ ಮಾಡುವವರು ದೊಡ್ಡ ಸವಾಲುಗಳನ್ನು ಎದುರಿಸಬೇಕಾಗಬಹುದು. ವಿದ್ಯಾರ್ಥಿಗಳು ಓದಿನ ಕಡೆಗೆ ಗಮನಹರಿಸಬೇಕು. ಪ್ರೇಮಿಗಳಿಗೆ ಅನುಕೂಲಕರವಾಗಿದೆ. ನಿಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು.
ಸಂಖ್ಯೆ 5 ( ಹುಟ್ಟಿದ ದಿನಾಂಕ 5,14,23)
ಈ ವಾರ ನಿಮಗೆ ಅದ್ಭುತವಾಗಿರಲಿದೆ, ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ಉದ್ಯೋಗಿಗಳು ಉತ್ತಮ ಪ್ರತಿಫಲ ಪಡೆಯುತ್ತಾರೆ. ಉದ್ಯಮಿಗಳು ಬಯಸಿದ ಲಾಭವನ್ನು ಪಡೆಯುತ್ತಾರೆ. ಈ ಸಮಯದಲ್ಲಿ, ನಿಮ್ಮ ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳ ಸಾಧ್ಯತೆಯಿದೆ. ಈ ಅವಧಿಯಲ್ಲಿ ನಿಮ್ಮ ದಾರಿಯಲ್ಲಿ ಬರುವ ಎಲ್ಲಾ ಅಡೆತಡೆಗಳು ನಿವಾರಣೆಯಾಗುತ್ತವೆ. ಈ ಸಮಯದಲ್ಲಿ ನೀವು ತುಂಬಾ ಧನಾತ್ಮಕವಾಗಿರುತ್ತೀರಿ.
ಸಂಖ್ಯೆ 6 (ಹುಟ್ಟಿದ ದಿನಾಂಕ 6,15,24)
ಈ ವಾರ ನಿಮಗೆ ತುಂಬಾ ಉತ್ತಮವಾಗಿರಲಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಆದಾಯ ಹೆಚ್ಚಾಗಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ಆರೋಗ್ಯ ಚೆನ್ನಾಗಿರಲಿದೆ, ನೀವು ಆರೋಗ್ಯದ ಕಡೆಗೆ ಗಮನ ಕೂಡ ಹರಿಸುತ್ತೀರಿ.
ಸಂಖ್ಯೆ 7 (ಹುಟ್ಟಿದ ದಿನಾಂಕ 7,16,25)
ಈ ವಾರ ನಿಮಗೆ ಅಷ್ಟೊಂದು ಅನುಕೂಲಕರವಲ್ಲ, ಈ ಅವಧಿಯಲ್ಲಿ ನಿಮ್ಮ ಸಂಗಾತಿಯ ಜೊತೆ ಭಿನ್ನಾಭಿಪ್ರಾಯ ಉಂಟಾಗುವುದು. ವಿದ್ಯಾರ್ಥಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ. ಈ ಅವಧಿಯಲ್ಲಿ ನೀವು ನಿಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು.
ಸಂಖ್ಯೆ 8 (ಹುಟ್ಟಿದ ದಿನಾಂಕ 8,17,26)
ಈ ವಾರ ನಿಮಗೆ ಉತ್ತಮವಾಗಿರಲಿದೆ. ನೀವು ಉದ್ಯೋಗದಲ್ಲಿದ್ದರೆ ಮತ್ತು ಬಡ್ತಿಯನ್ನು ಸಾಧಿಸಲು ಶ್ರಮಿಸುತ್ತಿದ್ದರೆ, ನಿಮಗೆ ಯಶಸ್ಸು ಸಿಗದಿರಬಹುದು. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ಈ ಅವಧಿಯಲ್ಲಿ ಮನೆಯ ಪರಿಸರ ಉತ್ತಮವಾಗಿರಲ್ಲ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಆರೋಗ್ಯದ ಬಗ್ಗೆ ಗಮನಹರಿಸಿ.
ಸಂಖ್ಯೆ 9 ( ಹುಟ್ಟಿದ ದಿನಾಂಕ 9,18,27)
ನಿಮ್ಮ ವೈವಾಹಿಕ ಜೀವನದ ಕಡೆ ಗಮನಹರಿಸಬೇಕು. ನಿಮ್ಮ ಸಂಗಾತಿಯೊಂದಿಗೆ ನೀವು ಧಾರ್ಮಿಕ ಪ್ರವಾಸಕ್ಕೆ ಹೋಗುವ ಸಾಧ್ಯತೆಯಿದೆ. ವೈವಾಹಿಕ ಜೀವನದ ಕಡೆಗೆ ಗಮನಹರಿಸಬೇಕು. ನೀವು ವಿದ್ಯಾರ್ಥಿಯಾಗಿದ್ದರೆ ಶಿಕ್ಷಣ ಕ್ಷೇತ್ರದಲ್ಲಿ ನಿಮ್ಮ ಸಾಧನೆ ಉತ್ತಮವಾಗಿರುತ್ತದೆ. ಈ ಸಮಯದಲ್ಲಿ ನೀವು ಬಯಸಿದ ಫಲಿತಾಂಶಗಳನ್ನು ಪಡೆಯಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











