Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ಅಕ್ಟೋಬರ್ 19-26ರವರೆಗೆ ಸಂಖ್ಯಾಶಾಸ್ತ್ರ ಪ್ರಕಾರ ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರದಲ್ಲಿ ಜನ್ಮ ದಿನಾಂಕ ನೋಡಿ ಭವಿಷ್ಯ ಹೇಳಲಾಗುವುದು, ಯಾವುದೇ ಮಾಸವಾಗಿರಲಿ ಯಾವ ದಿನಾಂಕದಂದು ಜನಿಸಿದರೆ ಯಾವುದು ನಿಮ್ಮ ಜನ್ಮ ಸಂಖ್ಯೆ ಎಂದು ಹೇಳಬಹುದು, ಉದಾಹರಣೆಗೆ 18ನೇ ತಾರೀಕಿಗೆ ಜನಿಸಿದ್ದರೆ 9 ನಿಮ್ಮ ಜನ್ಮ ಸಂಖ್ಯೆ, ಅದರಂತೆ ಈ ವಾರ ನಿಮಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:

ಸಂಖ್ಯೆ 1 (ಹುಟ್ಟಿದ ದಿನಾಂಕ 1, 10, 19, 28)
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ನೀವು ಸ್ವಲ್ಪ ಜಾಗ್ರತೆವಹಿಸಬೇಕು. ಕೆಲಸದಲ್ಲಿ ಪರಿಸ್ಥಿತಿ ಅಷ್ಟೊಂದು ಚೆನ್ನಾಗಿರಲ್ಲ, ನೀವು ತಾಳ್ಮೆಯಿಂದ ವರ್ತಿಸಬೇಕು. ಅಲ್ಲದೆ ಆರೋಗ್ಯ ಸಮಸ್ಯೆ ಕೂಡ ತೊಂದರೆಯುಂಟು ಮಾಡಬಹುದು, ವೈಯಕ್ತಿಕ ಬದುಕಿನ ಸಮಸ್ಯೆಗಳ ಕಡೆಗೆ ಗಮನಹರಿಸಬೇಕು.
ನಿಮ್ಮ ಹಾಗೂ ಸಂಗಾತಿ ನಡುವೆ ಉತ್ತಮ ಬಾಂಧವ್ಯ ಕಾಪಾಡಿಕೊಳ್ಳಲು ಪ್ರಯತ್ನಿಸಿ.
ಸಂಖ್ಯೆ 2(ಹುಟ್ಟಿದ ದಿನಾಂಕ 2, 11, 20, 29)
ಈ ಸಂಖ್ಯೆಯವರಿಗೆ ಈ ವಾರ ಅನುಕೂಲಕರವಾಗಿದೆ, ವೃತ್ತಿ ಬದುಕಿನಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೀರಿ, ಇದರಿಂದಾಗಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಉತ್ತಮವಾಗಿರಲಿದೆ.
ಸಂಖ್ಯೆ 3(ಹುಟ್ಟಿದ ದಿನಾಂಕ 3, 12, 21, 30)
ಈ ವಾರ ನಿಮಗೆ ಶುಭವಾಗಿರಲಿದೆ, ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ನಿಮ್ಮೆಲ್ಲಾ ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಈ ಅವಧಿಯಲ್ಲಿ ಕೆಲವೊಂದು ಸ್ಥಳಗಳಿಗೆ ಪ್ರಯಾಣ ಮಾಡಬಹುದು, ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಸಂಖ್ಯೆ 4(ಹುಟ್ಟಿದ ದಿನಾಂಕ 4,13, 22, 31)
ಈ ವಾರ ನೀವು ಸ್ವಲ್ಪ ಜಾಗ್ರತೆವಹಿಸಬೇಕು, ವೃತ್ತಿ ಜೀವನದಲ್ಲಿ ಒತ್ತಡಗಳು ಹೆಚ್ಚಾಗಬಹುದು. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು, ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯದ ಏರಳಿತವಿರಲಿದೆ.
ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23)
ಈ ವಾರ ನಮಗೆ ಉತ್ತಮವಾಗಿರಲಿದೆ. ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24)
ವೃತ್ತಿ ಬದುಕಿನ ದೃಷ್ಟಿಯಿಂದ ನಿಮಗೆ ಉತ್ತಮವಾಗಿರಲಿದೆ, ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದರೆ ಈ ಸಮಯದಲ್ಲಿ ಕೆಲಸ ಸಿಗಲಿದೆ. ಕುಟುಂಬ ಜೀವನದ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯ ಚೆನ್ನಾಗಿರಲಿದೆ.
ಸಂಖ್ಯೆ 7 (ಹುಟ್ಟಿದ ದಿನಾಂಕ 7, 16, 25)
ಈ ವಾರ ನಿಮಗೆ ಸರಾಸರಿಯಾಗಿರಲಿದೆ, ನಿಮ್ಮೆಲ್ಲಾ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಆದರೆ ವ್ಯಾಪಾರಿಗಳು, ಉದ್ಯಮಿಗಳು ಹಣದ ವ್ಯವಹಾರ ಮಾಡುವಾಗ ಜಾಗ್ರತೆವಹಿಸಬೇಕು. ಸಂಬಂಧದಲ್ಲಿ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡಬೇಡಿ.
ಸಂಖ್ಯೆ 8 (ಹುಟ್ಟಿದ ದಿನಾಂಕ 8, 17, 26)
ಈ ಅವಧಿಯಲ್ಲಿ ಕೆಲಸದಲ್ಲಿ ಸಮಸ್ಯೆಯಿಂದಾಗಿ ನೀವು ಉದ್ಯೋಗ ಬದಲಾಯಿಸಲು ಯೋಚಿಸಬಹುದು. ಉದ್ಯಮಿಗಳು ಜಾಗ್ರತೆವಹಿಸದಿದ್ದರೆ ಜಾಗ್ರತೆವಹಿಸದಿದ್ದರೆ ಹಣ ನಷ್ಟವಾಗಬಹುದು, ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯ ಸಮಸ್ಯೆಗಳಿರಬಹುದು.
ಸಂಖ್ಯೆ 9 (ಹುಟ್ಟಿದ ದಿನಾಂಕ 9, 18, 27)
ವೃತ್ತಿ ಜೀವನದ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿದೆ, ಒಳ್ಳೆಯ ಉದ್ಯೋಗವಕಾಶ ದೊರೆಯಲಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ, ಆರೋಗ್ಯ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications