Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ವಾರ ಭವಿಷ್ಯ: ನೀವು ಹುಟ್ಟಿದ ದಿನಾಂಕ ಪ್ರಕಾರ ಈ ವಾರ (ಮಾರ್ಚ್23-29) ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರದ ಪ್ರಕಾರ ಈ ವಾರ(ಮಾರ್ಚ್ 23-29) ನಿಮಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಸಂಖ್ಯೆ 1 (ಹುಟ್ಟಿದ ದಿನಾಂಕ 1,10, 19, 28)
ಈ ವಾರ ನಿಮ್ಮ ಬದುಕಿನಲ್ಲಿ ಕೆಲ ಪ್ರಮುಖ ಬದಲಾವಣೆಗಳಾಗಬಹುದು. ಉದ್ಯಮಿಗಳು ಈ ವಾರ ಸ್ವಲ್ಪ ಜಾಗ್ರತೆವಹಿಸಬೇಕು. ನೀವು ಕಠಿಣ ಸ್ಪರ್ಧೆಯನ್ನು ಎದುರಿಸಬಹುದು. ಉದ್ಯೋಗದ ಹುಡುಕಾಟದಲ್ಲಿರುವವರೆಗೆ ಈ ಅವಧಿ ಅನುಕೂಲಕರವಾಗಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಕೆಲವೊಂದು ಅಡೆತಡೆ ಎದುರಾಗಬಹುದು, ವಾರದ ಕೊನೆಯಲ್ಲಿ ಎಲ್ಲವೂ ಸರಿಯಾಗಲಿದೆ.

ಸಂಖ್ಯೆ 2 (ಹುಟ್ಟಿದ ದಿನಾಂಕ 2, 11, 20, 29)
ಈ ವಾರ ಹಣದ ವಿಷಯದಲ್ಲಿ ನಿಮಗೆ ಅನುಕೂಲಕರವಾಗಿದೆ, ನಿಮಗೆ ಬರಬೇಕಾಗಿರುವ ಹಣವು ಕೈ ಸೇರಲಿದೆ, ಹಣಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆ ಕೂಡ ಬಗೆಹರಿಯಲಿದೆ. ವೃತ್ತಿ ಜೀವನದಲ್ಲಿ ಒತ್ತಡ ಹೆಚ್ಚಿರಬಹುದು, ನಿಮ್ಮ ಕೆಲಸ ಪೂರ್ಣಗೊಳಿಸಲು ಅಡೆತಡೆ ಎದುರಾಗಬಹುದು. ನೀವು ಕೆಲಸ ಕಡೆಗೆ ಹೆಚ್ಚಿನ ಗಮನಹರಿಸಿದರೆ ಒಳ್ಳೆಯದು ಎಂದು ಸಲಹೆ ನೀಡಲಾಗುವುದು.
ಸಂಖ್ಯೆ 3 (ಹುಟ್ಟಿದ ದಿನಾಂಕ 3, 12, 21, 30)
ಈ ವಾರ ಹಣದ ಖರ್ಚು ಹೆಚ್ಚಿರಲಿದೆ. ಕೆಲ ಆರ್ಥಿಕ ಸವಾಲುಗಳು ಎದುರಾಗಬಹುದು. ಮಿತಿ ಮೀರಿ ಖರ್ಚು ಮಾಡಬೇಡಿ. ಕೆಲಸದ ಕಡೆಗೆ ಗಮನಹರಿಸಿ, ಕೆಲಸದ ಜಾಗದಲ್ಲಿ ನೀವು ತಾಳ್ಮೆಯಿಂದ ವರ್ತಿಸಬೇಕು. ನಿಮ್ಮ ಮೇಲಾಧಿಕಾರಿಯ ಜೊತೆಗೆ ಮಾತನಾಡುವಾಗ ತಾಳ್ಮೆ ಕಳೆದುಕೊಳ್ಳಬೇಡಿ. ಆಧ್ಯಾತ್ಮಿಕ ವಿಷಯಗಳ ಕಡೆಗೆ ಹೆಚ್ಚು ಗಮನಹರಿಸುತ್ತೀರಿ.
ಸಂಖ್ಯೆ 4(ಹುಟ್ಟಿದ ದಿನಾಂಕ 4, 13, 22, 31)
ಈ ವಾರ ಮಾನಸಿಕ ಒತ್ತಡ ಅಧಿಕವಿರಬಹುದು, ನೀವು ನಿಮ್ಮ ಕೋಪ ನಿಯತ್ರಿಸುವಂತೆ ಸಲಹೆ ನೀಡಲಾಗುವುದು, ಮಾಶನಸಿಕ ಒತ್ತಡ ನಿಯಂತ್ರಿಸಲು ಧ್ಯಾನದ ಕಡೆಗೆ ಗಮನಹರಿಸಿದರೆ ಒಳ್ಳೆಯದು. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಹೆಚ್ಚಾಗದಂತೆ ಜಾಗ್ರತೆವಹಿಸಿ. ಆರ್ಥಿಕ ವಿಷಯಗಳ ಕಡೆಗೆ ಹೆಚ್ಚಿನ ಗಮನಹರಿಸಿ.
ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23)
ಈ ವಾರ ನಿಮಗೆ ತುಂಬಾ ಉತ್ತಮವಾಗಿರಲಿದೆ. ವ್ಯಾಪಾರಸ್ಥರು ಉತ್ತಮ ಲಾಭ ಗಳಿಸಲು ಸಾಧ್ಯವಾಗಲಿದೆ, ಹೊಸ ಉದ್ಯಮ ಪ್ರಾರಂಭಿಸಲು ಬಯಸುವವರೆಗೆ ಈ ಅವಧಿ ತುಂಬಾನೇ ಅನಕೂಲಕರವಾಗಿದೆ. ಇನ್ನು ಈ ವಾರ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ. ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನಿಸುತ್ತಿರುವವರೆಗೆ ಈ ಸಮಯ ಅನುಕೂಲಕರವಾಗಿದೆ.
ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24)
ಈ ವಾರ ಎಲ್ಲಾ ರೀತಿಯಿಂದಲೂ ನಿಮಗೆ ಅನುಕೂಲಕರವಾಗಿದೆ, ವಾರದ ಆರಂಭ ಸ್ವಲ್ಪ ಸವಾಲು ಅನಿಸಿದರೂ ನಂತರ ಎಲ್ಲವೂ ಸರಿ ಹೋಗಲಿದೆ. ಕೆಲವೊಂದು ಪ್ರತಿಕೂಲ ಸಂದರ್ಭದಲ್ಲಿ ನೀವು ತಾಳ್ಮೆಯಿಂದ ವರ್ತಿಸಿದರೆ ಒಳ್ಳೆಯದು. ಕುಟುಂಬದ ಜೊತೆಗೆ ಸಂತೋಷದಿಂದ ಸಮಯ ಕಳೆಯಲು ಸಾಧ್ಯವಾಗಲಿದೆ.
ಸಂಖ್ಯೆ 7 (ಹುಟ್ಟಿದ ದಿನಾಂಕ 7, 16, 25)
ಮನೆಯ ಸಮಸ್ಯೆಗಳು ಮಾನಸಿಕ ಒತ್ತಡ ಹೆಚ್ಚಿಸಬಹುದು, ಈ ವಾರ ನೀವು ನಿಮ್ಮ ಕೋಪವನ್ನು ನಿಯಂತ್ರಿಸಿದರೆ ಒಳ್ಳೆಯದು, ನಿಮ್ಮ ಹಾಗೂ ಸಂಗಾತಿ ನುವೆ ಭಿನ್ನಾಭಿಪ್ರಾಯ ಉಂಟಾಗಬಹುದು, ಇಬ್ಬರು ಮಾತನಾಡಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿ. ಮಕ್ಕಳ ವರ್ತನೆ ನಿಮ್ಮ ಚಿಂತೆ ಹೆಚ್ಚಿಸಬಹುದು. ಕುಟುಂಬದ ಜೊತೆಗೆ ಚಿಕ್ಕ ಟ್ರಿಪ್ ಪ್ಲ್ಯಾನ್ ಮಾಡಿ ಎಲ್ಲವೂ ಸರಿಯಾಗಲಿದೆ.
ಸಂಖ್ಯೆ 8 (ಹುಟ್ಟಿದ ದಿನಾಂಕ 8, 17, 26)
ಈ ವಾರ ನಿಮಗೆ ತುಂಬಾನೇ ಅನುಕೂಲಕರವಾಗಿದೆ, ನಿಮ್ಮ ಕೆಲಸ ಕಾರ್ಯಗಳು ನೀವು ಅಮದುಕೊಂಡಂತೆಯೇ ಪೂರ್ಣವಾಗಲಿದೆ. ಅವಾಹಿತರಿಗೆ ಈ ಅವಧಿ ಅನುಕೂಲಕರವಾಗಿದೆ, ವಿಶೇಷ ವ್ಯಕ್ತಿಯನ್ನು ಭೇಟಿಯಾಗುತ್ತೀರಿ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯಲು ಸಾಧ್ಯವಾಗಲಿದೆ, ಆರ್ಥಿಕ ದೃಷ್ಟಿಯಿಂದಲೂ ಅನುಕೂಲಕರವಾಗಿದೆ.
ಸಂಖ್ಯೆ 9 (ಹುಟ್ಟಿದ ದಿನಾಂಕ 9, 18, 27)
ಕೆಲಸದ ಜಾಗದಲ್ಲಿ ನೀವು ಹೆಚ್ಚು ಜಾಗ್ರತೆ ಮಾಡಬೇಕು. ನಿಮ್ಮ ಹಾಗೂ ಪೋಷಕರ ನಡುವೆ ಭಿನ್ನಾಭಿಪ್ರಾಯ ಉಂಟಾದರೆ ಹೆಚ್ಚು ವಾದ ಮಾಡಲು ಹೋಗಬೇಡಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆದರೆ ಆದಾಯ ಮೀರಿದ ಖರ್ಚು ಮಾಡಲು ಹೋಗಬೇಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











