Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ವಾರ ಭವಿಷ್ಯ (ಮೇ 12-18 ): ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ನಿಮ್ಮ ಜನ್ಮ ಸಂಖ್ಯೆಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ನಿಮ್ಮ ಜನ್ಮ ಸಂಖ್ಯೆಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಸಂಖ್ಯೆ 1( ಹುಟ್ಟಿದ ದಿನಾಂಕ 1,10,19,28)
ನಿಮ್ಮ ಜನ್ಮ ಸಂಖ್ಯೆ 1 ಆಗುದ್ದರೆ ಈ ವಾರ ನಿಮಗೆ ತುಂಬಾನೇ ಚೆನ್ನಾಗಿರಲಿದೆ. ಈ ಸಮಯದಲ್ಲಿ ನೀವು ನಿಮ್ಮ ವೃತ್ತಿ ಬದುಕಿನಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೀರಿ. ಉದ್ಯೋಗಿಗಳು ತಮ್ಮ ವೃತ್ತಿ ಬದುಕಿನಲ್ಲಿ ಬೆಳೆಯುವ ಅವಕಾಶ ಪಡೆಯುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದಲ್ಲಿ ಈ ದಿನ ಉತ್ತಮವಾಗಿರಲಿದೆ.

ಸಂಖ್ಯೆ 2 ( ಹುಟ್ಟಿದ ದಿನಾಂಕ 2,11,20,29)
ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ನಿಮ್ಮಿಬ್ಬರ ನಡುವೆ ಹೊಂದಾಣಿಕೆ ಚೆನ್ನಾಗಿರಲಿದೆ. ಉದ್ಯೊಗಿಗಳಿಗೆ ಕೆಲಸದಲ್ಲಿ ತೃಪ್ತಿ ಇರಲಿದೆ. ಇನ್ನು ವ್ಯಾಪಾರಿಗಳ ವ್ಯಾಪಾರ ವಹಿವಾಟು ಕೂಡ ಚೆನ್ನಾಗಿರಲದೆ. ವ್ಯಾಪಾರಿಗಳು ಕೆಲಸಕ್ಕಾಗಿ ಹೆಚ್ಚು ಪ್ರಯಾಣ ಮಾಡಬೇಕಾಗುವುದು. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12,21,30)
ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಬಲಗೊಳ್ಳುವ ಸೂಚನೆಯಿದೆ. ಇನ್ನು ಕುಟುಂಬ ಜೀವನ ಚೆನ್ನಾಗಿರಲಿದೆ, ಗಂಡ- ಹೆಂಡತಿ ನಡುವೆ ಒಳ್ಳೆಯ ಹೊಂದಾಣಿಕೆ ಇರಲಿದೆ.
ಇನ್ನು ಮದುವೆಗೆ ಸಂಬಂಧ ಹುಡುಕುತ್ತಿದ್ದರೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳು, ಉದ್ಯೋಗಿಗಳು ಉತ್ತಮ ಫಲಿತಾಂಶ ಪಡೆಯುತ್ತಾರೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಸಂಖ್ಯೆ 4 (ಹುಟ್ಟಿದ ದಿನಾಂಕ 4,13,22,31)
ಉದ್ಯೋಗಿಗಳಿಗೆ ಈ ವಾರ ತುಂಬಾ ಚೆನ್ನಾಗಿರಲಿದೆ. ಇನ್ನು ಕೆಲಸದಲ್ಲಿ ಇರುವ ಅಡೆತಡೆಗಳು ದೂರಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ. ಅವಾಹಿತರಿಗೆ ಸಂಬಂಧ ಕೂಡ ಬರುವ ಸೂಚನೆಯಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ತ್ವಚೆಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ಸಂಖ್ಯೆ 5 (ಹುಟ್ಟಿದ ದಿನಾಂಕ 5,14,23)
ಈ ವಾರ ಕೆಲಸದಲ್ಲಿ ಒತ್ತಡ ಅಧಿಕವಿರಲಿದೆ, ಉದ್ಯೋಗಿಗಳು ಲಾಭ ಪಡೆಯುತ್ತೀರಿ. ಕುಟುಂಬದಲ್ಲಿಯೂ ಬಾಂಧವ್ಯ ತುಂಬಾನೇ ಚೆನ್ನಾಗಿರಲಿದೆ. ಆದರೆ ಆರೋಗ್ಯದ ಬಗ್ಗೆ ತುಂಬಾನೇ ಜಾಗ್ರತೆವಹಿಸಿ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ.
ಸಂಖ್ಯೆ 6 (ಹುಟ್ಟಿದ ದಿನಾಂಕ 6,15,24)
ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ, ಗಂಡ- ಹೆಂಡತಿ ನಡುವೆ ಕೆಲ ಭಿನ್ನಾಭಿಪ್ರಾಯದ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕೆಲಸದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ಪಾಲುದಾರಿಕೆಯ ವ್ಯಾಪಾರ ಮಾಡುವವರು ಹೆಚ್ಚಿನ ಲಾಭ ಪಡೆಯುತ್ತೀರಿ, ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಸಂಖ್ಯೆ 7 (ಹುಟ್ಟಿದ ದಿನಾಂಕ 7,16,25)
ಉದ್ಯೋಗಿಗಳು ಈ ವಾರ ನಿರೀಕ್ಷೆಯ ಫಲ ಪಡೆಯಲು ಸಾಧ್ಯವಾಗಲು, ನೀವು ಬಡ್ತಿಗಾಗಿ ಕಾಯುತ್ತಿದ್ದರೆ ನೀವು ಇನ್ನೂ ಸ್ವಲ್ಪ ಕಾಯಿರಿ. ವೈವಾಹಿಕ ಜೀವನದಲ್ಲಿಯೂ ಕೆಲ ಸಮಸ್ಯೆ ಬರಹುದು, ಏನಾದರೂ ಸಮಸ್ಯೆಯಿದ್ದರೆ ಕೂತು ಬಗೆಹರಿಸಲು ಪ್ರಯತ್ನಿಸಿ. ವ್ಯಾಪಾರಿಗಳು ಹಣದ ವಿಷಯದಲ್ಲಿ ಜಾಗ್ರತೆವಹಿಸಿ, ಯಾವುದೇ ಹೂಡಿಕೆ ಮಾಡಲು ಈ ದಿನ ಸೂಕ್ತವಲ್ಲ. ಆರೋಗ್ಯದ ಕಡೆ ಗಮನಹರಿಸಬೇಕು.
ಸಂಖ್ಯೆ 8 (ಹುಟ್ಟಿದ ದಿನಾಂಕ 8,17,26)
ಈ ವಾರ ಮನಸ್ಥಿತಿ ಅಷ್ಟು ಚೆನ್ನಾಗಿರಲ್ಲ, ಅನಗ್ಯತ ಯೋಚನೆಗಳು ನಿಮ್ಮ ನೆಮ್ಮದಿ ಹಾಳು ಮಾಡಬಹುದು. ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ವೃತ್ತಿ ಜೀವನದಲ್ಲಿ ಒತ್ತಡ ಅಧಿಕವಿರಲಿದೆ. ವ್ಯಾಪಾರಿಗಳು ಈ ವಾರ ಬಯಸಿದ ಫಲ ಪಡೆಯಲು ಕಷ್ಟವಾಗಬಹುದು.
ಸಂಖ್ಯೆ 9 (ಹುಟ್ಟಿದ ದಿನಾಂಕ 9,18,27)
ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ದಾಂಪತ್ಯ ಜೀವನ ಚೆನ್ನಾಗಿರಲಿದೆ. ಈ ವಾರ ವೃತ್ತಿ ಬದುಕಿನಲ್ಲಿನೀವು ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಈ ಸಮಯದಲ್ಲಿ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ ಅನ್ನು ಆಯ್ಕೆ ಮಾಡಬಹುದು. ಈ ಅವಧಿಯಲ್ಲಿ ನಿಮ್ಮ ಆದಾಯ ಚೆನ್ನಾಗಿರಲಿದೆ, ಆದ್ದರಿಂದ ಆರ್ಥಿಕವಾಗಿ ತೊಂದರೆಯಿಲ್ಲ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
