Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಂಖ್ಯಾಶಾಸ್ತ್ರ ಪ್ರಕಾರ ವಾರ ಭವಿಷ್ಯ: ನಿಮ್ಮ ಜನ್ಮ ಸಂಖ್ಯೆ ಪ್ರಕಾರ ಡಿ.7-14ರವರೆಗಿನ ದಿನಗಳು ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಭವಿಷ್ಯವನ್ನು ನೀವು ಹುಟ್ಟಿದ ದಿನಾಂಕ ಪ್ರಕಾರ ನೀಡಲಾಗಿದ್ದು ಈ ವಾರ ನಿಮ್ಮ ಜನ್ಮ ಸಂಖ್ಯೆಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಸಂಖ್ಯೆ 1 (1, 10, 19, 28)
ಈ ವಾರ ವೃತ್ತಿ ಬದುಕಿನ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿರಲಿದೆ,ಆದರೆ ನೀವು ಕುಟುಂಬದ ಕಡೆಗೆ ಗಮನಹರಿಸಬೇಕು, ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು. ಆರ್ಥಿಕ ದೃಷ್ಟಿಯಿಂದಲೂ ಈ ವಾರ ನಿಮಗೆ ಉತ್ತಮವಾಗಿರಲಿದ. ಅನುಭವಿಗಳ ಸಲಹೆ ನಿಮಗೆ ಪ್ರಯೋಜನ ನೀಡಲಿದೆ.

ಸಂಖ್ಯೆ 2 (ಹುಟ್ಟಿದ ದಿನಾಂಕ 2, 11, 20, 29)
ಈ ವಾರ ನಿಮ್ಮ ಕಡೆ ಹೆಚ್ಚು ಗಮನಹರಿಸುತ್ತೀರಿ. ಹೀಗಾಗಿ ದೇಹ ಹಾಗೂ ಮನಸ್ಸಿಗೆ ಲವಲವಿಕೆ ಮರಳುತ್ತದೆ. ಆರೋಗ್ಯದ ಕಡೆ ಕೂಡ ತುಂಬಾನೇ ಗಮನ ನೀಡುತ್ತೀರಿ. ಇನ್ನು ಈ ವಾರ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ. ಆದರೆ ನೀವು ಕುಟುಂಬದ ಕಡೆ ಗಮನಹರಿಸಿ, ಕುಟುಂಬದ ಜೊತೆ, ಸಂಗಾತಿ ಜೊತೆ ಹೆಚ್ಚು ಸಮಯ ಕಳೆಯುವುದರಿಂದ ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ಸಂಖ್ಯೆ 3 (ಹುಟ್ಟಿದ ದಿನಾಂಕ 3, 12,21, 30)
ನೀವು ಕೆಲವೊಂದು ವಿಚಾರದಲ್ಲಿ ಸಮಧಾನದಂದ ನಿರ್ಧಾರ ತೆಗೆದುಕೊಳ್ಳಬೇಕು, ಹೆಚ್ಚು ಆತ್ಮವಿಶ್ವಾಸ ಒಳ್ಳೆಯದಲ್ಲ ಎಂಬ ಸಲಹೆ ನೀಡಲಾಗುವುದು. ಬೇರೆಯವರು ಏನು ಯೋಚಿಸುತ್ತಾರೆ ಎನ್ನುವ ಬದಲಿಗೆ ನಮ್ಮ ಬಗ್ಗೆ ಯೋಚಿಸಬೇಕು. ಈ ಅವಧಿಯಲ್ಲಿ ಪ್ರತಿಕೂಲ ಸಂದರ್ಭದಲ್ಲಿ ತಾಳ್ಮೆಯೇ ಗೆಲುವಿನ ಪ್ರಮುಖ ಅಸ್ತ್ರವಾಗಿದೆ.
ಸಂಖ್ಯೆ 4 (ಹುಟ್ಟಿದ ದಿನಾಂಕ 4, 13,22, 31)
ವೈಯಕ್ತಿಕ ಬದುಕಿನ ಸಮಸ್ಯೆಗಳು ನಿಮ್ಮ ಚಿಂತೆಗೆ ಕಾರಣವಾಗಿರಬಹುದು, ವೈಯಕ್ತಿಕ ಕಾರಣಗಳಿಂದ ಕೆಲಸದ ಕಡೆ ಕೂಡ ಸರಿಯಾಗಿ ಗಮನ ನೀಡಲು ಸಾಧ್ಯವಾಗುವುದಿಲ್ಲ. ಆದರೆ ಹೆಚ್ಚು ಚಿಂತೆ ಮಾಡಬೇಡಿ, ಈ ಸಮಸ್ಯೆಗಳಿಂದ ಹೊರಬರಲು ಸಾಧ್ಯವಾಗುವುದು, ಧಾರ್ಮಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ.
ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23)
ವಾರದ ಆರಂಭದಲ್ಲಿ ಸಂಬಂಧದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಲ್ಲ, ಸಂಗಾತಿಯ ಜೊತೆಗೆ ಕೆಲ ಭಿನ್ನಾಭಿಪ್ರಾಯವಿರಬಹುದು, ಆದರೆ ಎಲ್ಲವೂ ಬಗೆಹರಿಯಲಿದೆ, ವೃತ್ತಿ ಬದುಕಿನ ಕಡೆಗೆ ಗಮನಹರಿಸಿ, ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ವ್ವ್ಯಾಪಾರಿಗಳು ಸಿಗುವ ಅವಕಾಶ ಬಳಸಿಕೊಳ್ಳಲು ಪ್ರಯತ್ನಿಸಬೇಕು, ಚಿಕ್ಕ ಲಾಭವೆಂದು ನಿರ್ಲಕ್ಷ್ಯ ಮಾಡಬೇಡಿ.
ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24)
ಈ ವಾರ ನಿಮಗೆ ಅನುಕೂಲಕರವಾಗಿರಲಿದೆ,ವೃತ್ತಿ ಜೀವನದಲ್ಲಿ ಕೆಲಸ ಕಾರ್ಯ ಸುಲಭವಾಗಿ ಮುಗಿಸಲು ಸಾಧ್ಯವಾಗುವುದು. ನಿಮ್ಮ ಕೌಶಲ್ಯಕ್ಕೆ ಉತ್ತಮ ಮನ್ನಣೆ ದೊರೆಯಲಿದೆ. ನೀವು ನಿಮ್ಮ ಗುರಿಯತ್ತ ಹೆಚ್ಚು ಗಮನಹರಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಯೋಗ, ಧ್ಯಾನ ಅಂತ ಮಾಡುವುದರಿಂದ ಮಾನಸಿಕ ಒತ್ತಡ ಕಡಿಮೆ ಮಾಡಲು ಸಲಹೆ ಮಾಡಲಾಗುವುದು.
ಸಂಖ್ಯೆ 7 (ಹುಟ್ಟಿದ ದಿನಾಂಕ 7, 16, 25)
ಈ ವಾರ ನೀವು ತೆಗೆದುಕೊಳ್ಳುವಾಗ ಪ್ರಮುಖ ನಿರ್ಧಾರಗಳಿಂದ ಸಮಸ್ಯೆಗಳು ಬಗೆಹರಿಯಲಿದೆ, ನಿಮ್ಮ ನಿರ್ಧಾರಗಳಿಗೆ ಕ್ಲಾರಿಟಿ ರಲಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನ ದೃಷ್ಟಿಯಿಂದ ಈ ವಾರ ನಿಮಗೆ ಅನುಕೂಲಕರವಾಗಿದೆ. ವಿದ್ಯಾರ್ಥಿಗಳಿಗಂತೂ ಈ ಅವಧಿ ತುಂಬಾ ಉತ್ತಮವಾಗಿರಲಿದೆ, ಒಟ್ಟಿನಲ್ಲಿ ಈ ವಾರ ನಿಮಗೆ ಅನುಕೂಲಕರವಾಗಿದೆ.
ಸಂಖ್ಯೆ 8 (ಹುಟ್ಟಿದ ದಿನಾಂಕ 8, 17, 26)
ಈ ವಾರ ನೀವು ಸಂಬಂಧದ ಕಡೆಗೆ ಹೆಚ್ಚು ಗಮನಹರಿಸಬೇಕು, ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ಆದರೆ ಪರಸ್ಪರ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು, ಆರ್ಥಿಕವಾಗಿ ಈ ಅವಧ ಉತ್ತಮವಾಗಿರಲಿದೆ. ವೃತ್ತಿ ಬದುಕಿನಲ್ಲಿಯೂ ಜವಾಬ್ದಾರಿ ಹೆಚ್ಚಾಗಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ.
ಸಂಖ್ಯೆ 9 (ಹುಟ್ಟಿದ ದಿನಾಂಕ 9, 18, 27)
ಈ ವಾರ ಕೆಲಸ ಕಾರ್ಯದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ. ನೀವು ಮಾನಸಿಕ ದೈಹಿಕ ಆರೋಗ್ಯದ ಕಡೆಗೆ ಗಮನಹರಿಸಬೇಕು.ನೀವು ತೆಗೆದುಕೊಳ್ಳುವ ನಿರ್ಧಾರ ಉತ್ತಮ ಫಲಿತಾಂಶ ನೀಡಲಿದೆ. ನಿಮ್ಮ ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ, ನಿಮ್ಮ ಮಾತಿನಿಂದ ಇತರರಿಗೆ ನೋವಾಗದಂತೆ ಗಮನಹರಿಸುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications