Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಂಖ್ಯಾಶಾಸ್ತ್ರ ಪ್ರಕಾರ ವಾರ ಭವಿಷ್ಯ: ನೀವು ಹುಟ್ಟಿದ ದಿನಾಂಕ ಪ್ರಕಾರ ಈ ವಾರ (ಮಾರ್ಚ್ 10-16) ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರದಲ್ಲಿ ನಿಮ್ಮ ಜನ್ಮ ದಿನಾಂಕದ ಪ್ರಕಾರ ಭವಿಷ್ಯ ಹೇಳಲಾಗುವುದು. ಸಂಖ್ಯೆ ಭವಿಷ್ಯ ಪ್ರಕಾರ ಈ ವಾರ ನಿಮಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಸಂಖ್ಯೆ 1 (ಜನ್ಮ ಸಂಖ್ಯೆ 1,10,19,28)
ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಈ ವಾರ ನಿಮ್ಮ ಬದುಕಿನಲ್ಲಿ ಕೆಲ ಧನಾತ್ಮಕ ಬದಲಾವಣೆ ಕಾಣುವಿರಿ. ಈ ವಾರ ನೀವು ಪ್ರಮುಖ ನಿರ್ಧಾರಗಳ ಬಗ್ಗೆ ತೆಗೆದುಕೊಳ್ಳುವಾಗ ಜಾಗ್ರತೆವಹಿಸಿ, ಕುಟುಂಬ ಜೀವನ ಚೆನ್ನಾಗಿರಲಿದೆ. ವೃತ್ತಿ ಬದುಕಿನಲ್ಲಿ ಈ ವಾರ ಕೆಲ ಅತೃಪ್ತಿ ಕಾಡಲಿದೆ, ಆದರೆ ತಾಳ್ಮೆಯಿಂದ ಕೆಲಸ ಮಾಡಿ.

ಸಂಖ್ಯೆ 2 (ಜನ್ಮ ಸಂಖ್ಯೆ 2,11,20,29)
ಈ ವಾರ ಭಾವನಾತ್ಮಕವಾಗಿ ಸ್ವಲ್ಪ ದುರ್ಬಲವಾಗಬಹುದು, ತುಂಬಾ ಭಾವನಾತ್ಮಕವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಇನ್ನು ಬೇರೆಯವರ ವಿಷಯದಲ್ಲಿ ಮೂಗು ತೂರಿಸಲು ಹೋಗಬೇಡಿ. ಅಲ್ಲದೆ ನೀವು ಯಾರನ್ನೂ ಕಣ್ಮುಚ್ಚಿ ನಂಬಲು ಹೋಗಬೇಡಿ. ನಿಮ್ಮ ಮನಸ್ಸಿಗೆ ಸರಿ ಅನಿಸಿದ್ದನ್ನು ಹೇಳುತ್ತೀರಿ, ಇದರಿಂದ ಕೆಲವರ ಕೋಪಕ್ಕೆ ಗುರಿಯಾಗಬಹುದು. ಪ್ರೀತಿ ಜೀವನ ತ ಉಂಬಾ ಚೆನ್ನಾಗಿರಲಿದೆ.
ಸಂಖ್ಯೆ 3 (ಜನ್ಮ ಸಂಖ್ಯೆ 3,12,21,30))
ನಿಮ್ಮ ಮಾತುಗಳಿಂದ ನಿಮಗೆ ಹೆಚ್ಚು ಪ್ರಯೋಜನ ಸಿಗಲಿದೆ, ನಿಮ್ಮ ಕೆಲಸ ಕಾರ್ಯಗಳಿಗೆ ಉತ್ತಮ ಮನ್ನಣೆ ದೊರೆಯಲಿದೆ. ನಿಮ್ಮ ಕುಟುಂಬ ಜೀವನದಲ್ಲಿ ಉತ್ತಮ ಉತ್ತಮ ಹೊಂದಾಣಿಕೆ ಇರಲಿದೆ. ನಿಮ್ಮ ಕೆಲಸ ಕಾರ್ಯವನ್ನು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳಿಸಲು ಸಾಧ್ಯವಾಗಲಿದೆ, ನಿಮ್ಮ ಕ್ರಿಯಾಶೀಲತೆಗೆ ಹೆಚ್ಚಿನ ಪ್ರಶಂಸೆ ಸಿಗಲಿದೆ . ನೀವು ನಿಮ್ಮ ಗುರಿಯತ್ತ ಗಮನಹರಿಸಿದರೆ ಉತ್ತಮ ಯಶಸ್ಸು ಪಡೆಯಲು ಸಾಧ್ಯವಾಗಲಿದೆ.
ಸಂಖ್ಯೆ 4 (ಜನ್ಮ ಸಂಖ್ಯೆ 4,13,22,31)
ಈ ವಾರ ನೀವು ಹಲವಾರು ಕೆಲಸ ಒಟ್ಟಿಗೆ ಮಾಡುವ ಬದಲು ನೀವು ನಿಮ್ಮ ಪ್ರಮುಖ ಕೆಲಸದ ಕಡೆಗೆ ಗಮನಹರಿಸಿದರೆ ಒಳ್ಳೆಯದು. ಇನ್ನು ಈ ವಾರ ಕೆಲ ಸವಾಲುಗಳು ಬರಬಹುದು ಆದರೆ ಆ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಲಿದೆ. ಸ್ನೇಹಿತರ ಜೊತೆಗಿನ ನಿಮ್ಮ ಬಾಂಧವ್ಯ ಚೆನ್ನಾಗಿರಲಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ, ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ.
ಸಂಖ್ಯೆ 5 (ಜನ್ಮ ಸಂಖ್ಯೆ 5,14,23)
ನೀವು ಹೊಸ ಕಾರ್ಯಕ್ಕೆ ಕೈ ಹಾಕಿದರೆ ಅದರಲ್ಲಿ ಯಶಸ್ಸು ಪಡೆಯುತ್ತೀರಿ, ಕೆಲವೊಂದು ಸವಾಲುಗಳು ಬರಬಹುದು, ಆದರೆ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಕುಟುಂಬ ಜೀವನದ ಕಡೆಗೆ ಗಮನಹರಿಸಿ, ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದನ್ನು ಮಾತುಕತೆ ಮೂಲಕ ಬಗೆಹರಿಸಲು ಪ್ರಯತ್ನಿಸಿ. ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನ ನಡುವೆ ಸಮತೋಲನ ಕಾಪಾಡಲು ಪ್ರಯತ್ನಿಸಬೇಕು.
ಸಂಖ್ಯೆ 6 (ಜನ್ಮ ಸಂಖ್ಯೆ 6,15,24)
ಈ ವಾರ ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ನಿಮ್ಮ ಪ್ರತಿಕೂಲ ಸಂದರ್ಭದಲ್ಲಿ ಕುಟುಂಬಸ್ಥರ ಹಾಗೂ ಸ್ನೇಹಿತರ ಬೆಂಬಲ ದೊರೆಯಲಿದೆ. ಈ ವಾರ ನೀವು ನಿಮ್ಮ ಮಾತಿನ ಕಡೆಗೆ ಗಮನಹರಿಸಿ. ನಿಮ್ಮ ಮಾತುಗಳಿಂದ ಯಾರನ್ನೂ ನೋಯಿಸಬೇಡಿ, ಸಂಗಾತಿಯ ಭಾವನೆಗಳನ್ನು ಗೌರವಿಸಿ. ಈ ವಾರ ಸಂತೋಷದ ಸುದ್ದಿಯೊಂದು ದೊರೆಯಲಿದೆ. ನಿಮ್ಮ ಕೋಪ ನಿಯಂತ್ರಿಸಿ, ಯಾರ ಜೊತೆಯೂ ಕೋಪದಿಂದ ವರ್ತಿಸಬೇಡಿ.
ಸಂಖ್ಯೆ 7 (ಜನ್ಮ ಸಂಖ್ಯೆ 7,16,25)
ಈ ವಾರ ನೀವು ಕೆಲವೊಂದು ವಿಷಯದ ಬಗ್ಗೆ ತುಂಬಾನೇ ಚಿಂತೆ ಮಾಡುತ್ತೀರಿ, ಇದರಿಂದ ನೀವು ಒಂದು ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಲಿದೆ, ಬೇರೆಯವರ ಬಗ್ಗೆ ತುಂಬಾ ತಲೆಕೆಡಿಸಿಕೊಳ್ಳದೆ ನಿಮ್ಮ ಗುರಿಯತ್ತ ಗಮನಹರಿಸಿ, ಸಂಬಂಧ ಉತ್ತಮವಾಗಿರಿಸಲು ಪ್ರಯತ್ನ ಹಾಕಿ, ಗ ವಿಥ್ ಎ ಪ್ಲೋ ಎಂಬಂತೆ ಅನಗ್ಯತ ಚಿಂತೆ ಬೇಡ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ.
ಸಂಖ್ಯೆ 8 (ಜನ್ಮ ಸಂಖ್ಯೆ 8,17,26)
ಈ ವಾರ ನಿಮಗೆ ಶುಭವಾಗಿದೆ, ಕೆಲಸ ಕಾರ್ಯದಲ್ಲಿ ಯಶಸ್ಸು ದೊರೆಯಲಿದೆ. ಈ ವಾರ ಖರ್ಚು ಹೆಚ್ಚು ಬರಬಹುದು, ಆದರೆ ಅನಗ್ಯತ ಖರ್ಚುಗಳನ್ನು ನಿಯಂತ್ರಿಸಿದರೆ ಒಳ್ಳೆಯದು, ನೀವು ಈ ವಾರ ಉತ್ತಮ ಆರ್ಥಿಕ ಲಾಭ ಪಡೆಯುತ್ತೀರಿ, ಈ ವಾರ ನೀವು ಇತರರಿಗೆ ಸಹಾಯ ಮಾಡುವ ಸಂದರ್ಭ ಬರಬಹುದು.
ಸಂಖ್ಯೆ 9 (ಜನ್ಮ ಸಂಖ್ಯೆ 9,18,27)
ಈ ವಾರ ನಿಮಗೆ ಅನುಕೂಲಕರವಾಗಿದೆ, ಈ ವಾರ ಭಾವನಾತ್ಮಕವಾಗಿ ದುರ್ಬಲವಾಗಿರಲಿದೆ, ಹಳೆಯ ಕಹಿ ನೆನಪು ಮರೆಯಬೇಡಿ. ಈ ವಾರ ಅನಗ್ಯತ ವಿಷಯಗಳ ಕಡೆ ಗಮನಹರಿಸದೆ ನಿಮ್ಮ ಗುರಿಯತ್ತ ಗಮನಹರಿಸಿ. ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ. ಪ್ರೀತಿ ಜೀವನ ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications