Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಸಂಖ್ಯಾಶಾಸ್ತ್ರ ಪ್ರಕಾರ ವಾರ ಭವಿಷ್ಯ: ನವೆಂಬರ್ 3-9ರವರೆಗೆ ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ನವೆಂಬರ್ 3-9ರವರೆಗಿನ ಭವಿಷ್ಯ ನೀಡಲಾಗಿದ್ದು ಈ ವಾರದ ಏಳು ದಿನಗಳು ನಿನಗೆ ಹೇಗಿರಲಿದೆ ಎಂದು ನೋಡೋಣ:
ಸಂಖ್ಯೆ 1 (ಹುಟ್ಟಿದ ದಿನಾಂಕ 1, 10, 19,28)
ಈ ವಾರ ನಿಮಗೆ ಅನುಕೂಲಕರವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಸಾಮರಸ್ಯ ಚೆನ್ನಾಗಿರಲಿದೆ. ವೃತ್ತಿ ಜೀವನದ ದೃಷ್ಟಿಯಿಂದ ಈಅವಧಿ ಅನುಕೂಲಕರರವಾಗಿದೆ, ನಿಮ್ಮ ಕೆಲಸ ಕಾರ್ಯಕ್ಕೆ ಮೆಚ್ಚುಗೆ ದೊರೆಯಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಆರೋಗ್ಯ ಚೆನ್ನಾಗಿರಲಿದೆ.

ಸಂಖ್ಯೆ 2 (ಹುಟ್ಟಿದ ದಿನಾಂಕ 2,11, 20, 29)
ಈ ವಾರ ನೀವು ಜಾಗ್ರತೆವಹಿಸಬೇಕು, ಮನೆಯ ವಾತಾವರಣ ಅಷ್ಟು ಚೆನ್ನಾಗಿರಲ್ಲ, ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಲಿದೆ, ನೀವು ಕುಟುಂಬದ ಕಡೆಗ ಗಮಹಹರಿಸಬೇಕು. ವೃತ್ತಿ ಜೀವನದ ಕಡೆಗೆ ಗಮನಹರಿಸಬೇಕು, ವ್ಯಾಪಾರಿಗಳು ತುಂಬಾನೇ ಜಾಗ್ರತೆವಹಿಸಬೇಕು. ಆರೋಗ್ಯ ಸಮಸ್ಯೆಗಳಿರಬಹುದು.
ಸಂಖ್ಯೆ 3 (ಹುಟ್ಟಿದ ದಿನಾಂಕ 3, 12, 21, 30)
ಈ ವಾರ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ವೃತ್ತಿ ಜೀವನದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ. ನಿಮ್ಮೆಲ್ಲಾ ಕೆಲಸಗಳು ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ, ಆರೋಗ್ಯ ಕೂಡ ಚೆನ್ನಾಗಿರಲಿಎ.
ಸಂಖ್ಯೆ 4 (ಹುಟ್ಟಿದ ದಿನಾಂಕ 4, 13, 22, 31)
ಈ ವಾರ ನಿಮಗೆ ಸರಾಸರಿಯಾಗಿರಲಿದೆ, ಈ ವಾರ ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ. ವ್ಯಾಪಾರಿಗಳು ಕಠಿಣ ಸ್ಪರ್ಧೆಯನ್ನು ಎದುರಿಸಬಹುದು, ಹಣದ ವ್ಯವಹಾರ ಮಾಡುವಾಗ ಜಾಗ್ರತೆವಹಿಸಬೇಕು. ಆರೋಗ್ಯದ ಕಡೆಗೆ ಗಮನಹರಿಸಬೇಕು.
ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23)
ಕುಟುಂಬ ಜೀವನದ ಕಡೆಗೆ ಹರಿಸಬೇಕು, ಕುಟುಂಬದ ವಾತಾವರಣ ಚೆನ್ನಾಗಿರಲು ಅಹಂ ತೋರಿಸಬೇಡಿ, ಕೋಪ ನಿಯಂತ್ರಿಸಿ. ವೃತ್ತಿ ಜೀವನದಲ್ಲಿಯೂ ಕೆಲ ಸಮಸ್ಯೆಗಳು ಎದುರಿಸಬಹುದು, ಆದರೆ ನೀವು ತಾಳ್ಮೆಯಿಂದ ವರ್ತಿಸಿ. ಕೆಲವರು ನಿಮ್ಮ ವಿರುದ್ಧ ಪಿತೂರಿ ಮಾಡಬಹುದು, ಈ ಬಗ್ಗೆ ಜಾಗ್ರತೆವಹಿಸಿ. ವ್ಯಾಪಾರಿಗಳು ಲಾಭ ಗಳಿಸಲು ಕಷ್ಟವಾಗುವುದು. ಇನ್ನು ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24)
ಈ ವಾರ ನಿಮಗೆ ಅನುಕೂಲಕರವಾಗಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಉದ್ಯೋಗಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ನಿಮ್ಮ ಯೋಜನೆಯಂತೆಯೇ ಕೆಲಸ ಕಾರ್ಯಗಳು ನಡೆಯಲಿದೆ. ವ್ಯಾಪಾರಿಗಳು ಈ ಅವಧಿಯಲ್ಲಿ ಜಾಗ್ರತೆವಹಿಸಬೇಕು. ಆರೋಗ್ಯದ ಕಡೆಗೆ ಗಮನಹರಿಸಬೇಕು.
ಸಂಖ್ಯೆ 7 (ಹುಟ್ಟಿದ ದಿನಾಂಕ 7, 16,25)
ಈ ವಾರ ನೀವು ಕುಟುಂಬ ಜೀವನದ ಕಡೆಗೆ ಗಮನಹರಿಸಬೇಕು. ಅನಗ್ಯತ ಭಿನ್ನಾಭಿಪ್ರಾಯ ತಪ್ಪಿಸಿ, ಸಂಬಂಧದಲ್ಲಿ ಸಾಮರಸ್ಯ ಕಾಪಾಡಲು ಪ್ರಯತ್ನ ಹಾಕಬೇಕು. ವೃತ್ತಿ ಜೀವನದ ದೃಷ್ಟಿಯಿಂದಲೂ ಈ ವಾರ ಸವಾಲಿನಿಂದ ಕೂಡಿರಲಿದೆ. ವ್ಯಾಪಾರಿಗಳಗೆ ಹೊಸ ಹೂಡಿಕೆ ಮಾಡದಂತೆ ಸಲಹೆ ನೀಡಲಾಗುವುದು. ಆರೋಗ್ಯ ಸಮಸ್ಯೆಗಳಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಸಂಖ್ಯೆ 8 (ಹುಟ್ಟಿದ ದಿನಾಂಕ 8, 17, 26)
ನೀವು ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗದಿರಲು ಅಹಂ ತೋರಿಸಬೇಡಿ, ನೀವು ಸಂಬಂಧವನ್ನು ಸುಧಾರಿಸಲು ಪ್ರಯತ್ನ ಹಾಕಬೇಕು. ಉದ್ಯೋಗಿಗಳಿಗೆ ಈ ವಾರ ಕೆಲಸದ ಒತ್ತಡ ಅಧಿಕವಿರಬಹುದು, ಸ್ವಂತ ವ್ಯಾಪಾರ ಮಾಡುವವರಿಗೆ ಸವಾಲಿನ ವಾರವಾಗಿರಲಿದೆ. ಆರೋಗ್ಯದಲ್ಲಿ ಏರಳಿತವಿರಬಹುದು.
ಸಂಖ್ಯೆ 9 (ಹುಟ್ಟಿದ ದಿನಾಂಕ 9, 18, 27)
ಈ ವಾರ ನಿಮಗೆ ಅನುಕೂಲಕರವಾಗಲಿದೆ. ಕುಟುಂಬ ಜೀವನದಲ್ಲಿ ಸಂತೋಷವಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ವೃತ್ತಿ ಜೀವನ ಚೆನ್ನಾಗಿರಲಿದೆ. ನಿಮ್ಮ ಯೋಜನೆಯಂತೆಯೇ ಕೆಲಸಕಾರ್ಯಗಳು ನಡೆಯಲಿದೆ, ಆರೋಗ್ಯದ ದೃಷ್ಟಿಯಿಂದ ಈ ವಾರ ಅನುಕೂಲಕರವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
