Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ(ಏಪ್ರಿಲ್ 27-ಮೇ7) ನಿಮ್ಮ ಜನ್ಮ ಸಂಖ್ಯೆಗೆ ಹೇಗಿರಲಿದೆ?
ನಿಮ್ಮ ದಿನಾಂಕದ ಪ್ರಕಾರ ಸಂಖ್ಯಾಶಾಸ್ತ್ರದ ಸಂಖ್ಯೆ ಯಾವುದು ಎಂದು ತಿಳಿಯಬಹುದು. ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ನಿಮಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಸಂಖ್ಯೆ 1 (ಹುಟ್ಟಿದ ದಿನಾಂಕ 1,10,19,28)
ಈ ವಾರ ನಿಮಗೆ ತುಂಬಾ ವಿಶೇಷವಾಗಿರಲಿದೆ. ನಿಮ್ಮ ಕೆಲಸಗಳು ಯೋಜನೆಯಂತೆಯೇ ಪೂರ್ಣಗೊಳ್ಳುವುದರಿಂದ ನೀವು ಖುಷಿಯಾಗಿರುತ್ತೀರಿ. ಅಲ್ಲದೆ ನಿಮ್ಮ ಕೆಲಸದಲ್ಲಿ ನೀವು ಉತ್ತಮ ಫಲಿತಾಂಶ ಪಡೆಯುತ್ತೀರಿ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ಆದ್ದರಿಂದ ನಿಮ್ಮೆಲ್ಲಾ ಬೇಡಿಕೆಗಳು ಪೂರ್ಣಗೊಳ್ಳಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮಿಬ್ಬರ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.

ಸಂಖ್ಯೆ 2(ಹುಟ್ಟಿದ ದಿನಾಂಕ 2,11,20,29)
ಕೆಲಸದಲ್ಲಿ ನಿಮಗೆ ಶುಭವಾಗಿದೆ, ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳು ಒಳ್ಳೆಯ ಲಾಭವಾಗಿರಲಿದೆ. ವೈವಾಹಿಕ ಜೀವನದಲ್ಲಿ ಚೆನ್ನಾಗಿರಲಿದೆ. ಕುಟುಂಬದಲ್ಲಿ ಏನಾದರೂ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಹಣದ ಸ್ಥಿತಿ ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆಯಿದ್ದರೆ ಸೂಕ್ತ ವೈದ್ಯರಿಗೆ ತೋರಿಸಿ, ನಿರ್ಲಕ್ಷ್ಯ ಮಾಡಲೇಬೇಡಿ.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12,21,30)
ಈ ಅವಧಿಯಲ್ಲಿ ಕೆಲಸದಲ್ಲಿ ಅಭದ್ರತೆ ಕಾಡಬಹುದು, ಕೆಲಸದಲ್ಲಿ ಗಮನ ಕೊಡಲು ಸಾಧ್ಯವಾಗುವುದಿಲ್ಲ, ಕೆಲಸ ಹೋಗಬಹುದು ಎಂದನಿಸಬಹುದು, ಆದರೆ ಅನಗ್ಯತ ಚಿಂತೆ ಬಿಡಲು ಸಲಹೆ ನೀಡಲಾಗುವುದು. ಶೀಘ್ರದಲ್ಲಿಯೇ ನಿಮ್ಮ ಸಮಸ್ಯೆ ಬಗೆಹರಿಯಲಿದೆ. ಹಣಕಾಸಿನ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರಲಿದೆ. ಮನೆಯಲ್ಲಿ ಕೆಲವು ಶುಭ ಕಾರ್ಯ ನಡೆಯಲಿದೆ. ಹಣದ ಖರ್ಚು ಹೆಚ್ಚಾಗಲಿದೆ.
ಸಂಖ್ಯೆ 4 (ಹುಟ್ಟಿದ ದಿನಾಂಕ 4,13,22,31)
ಈ ಸಮಯದಲ್ಲಿ ಕೆಲಸದ ಹೊರೆ ಅಧಿಕವಿರಲಿದೆ. ಮಾನಸಿಕ ಆರೋಗ್ಯದ ಮೇಲೆ ಪ್ರಭಾವ ಬೀರುವುದು, ನೀವು ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.
ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆಸ್ತಿ ವ್ಯವಹಾರ ಮಾಡುವುದಾದರೆ ಲಾಭ ಗಳಿಸಬಹುದು. ಇನ್ನು ಕುಟುಂಬ ಜೀವನದಲ್ಲಿ ಕೆಲ ಸಮಸ್ಯೆಗಳಿರಬಹುದು, ಸಂಗಾತಿಯಲ್ಲಿ ಬದಲಾವಣೆ ಕಂಡು ಬರಬಹುದು, ಅವರು ನಿಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಭಾವಿಸುತ್ತೀರಿ. ಈ ಅವಧಿಯಲ್ಲಿ ವಾಹನ ಚಲಾಯಿಸುವಾಗ ಜಾಗ್ರತೆವಹಿಸಿ.
ಸಂಖ್ಯೆ 5 (ಹುಟ್ಟಿದ ದಿನಾಂಕ 5,14,23)
ಈ ಅವಧಿಯಲ್ಲಿ ಮನಸ್ಸು ಚೆನ್ನಾಗಿರಲ್ಲ. ಒಂದು ರೀತಿಯ ಕಾರಾತ್ಮಕತೆಯನ್ನು ಅನುಭವಿಸುವಿರಿ. ಈ ಸಮಯದಲ್ಲಿ ನೀವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳದಿದ್ದರೆ ಒಳ್ಳೆಯದು. ಉದ್ಯೋಗಿಗಳು ಅನುಪಯುಕ್ತ ವಿಷಯಗಳಲ್ಲಿ ಗಮನಹರಿಸದಿದ್ದರೆ ಒಳ್ಳೆಯದು. ವ್ಯಾಪಾರಿಗಳು ಈ ಸಮಯದಲ್ಲಿ ಲಾಭ ಗಳಿಸಬಹುದು. ಯಾವುದೇ ನಿರ್ಧಾರ ತೆಗೆದುಕೊಳ್ಳುವುದಾದರೆ ಹಣದ ಬಗ್ಗೆ ಗಮನಹರಿಸಿ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಸಂಖ್ಯೆ 6 (ಹುಟ್ಟಿದ ದಿನಾಂಕ 6,15,24)
ಈ ವಾರ ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ. ನಿಮ್ಮ ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ. ಉದ್ಯೋಗಿಗಳಿಗೂ ಈ ಸಮಯ ಉತ್ತಮವಾಗಿರಲಿದೆ. ನಿಮಗೆ ಬಡ್ತಿ ಸಿಗಲಿದೆ, ನಿಮ್ಮ ಸಂಬಳ ಹೆಚ್ಚಾಗಲಿದೆ. ಇನ್ನು ಈ ವಾರದ ಕೊನೆಯಲ್ಲಿ ನೀವು ಟ್ರಿಪ್ ಹೋಗಲು ಪ್ಲ್ಯಾನ್ ಮಾಡುತ್ತೀರಿ.
ಸಂಖ್ಯೆ 7 (ಹುಟ್ಟಿದ ದಿನಾಂಕ 7,16,25)
ಈ ವಾರ 7 ಸಂಖ್ಯೆಯವರಿಗೆ ನಿಮಗೆ ಉತ್ತಮವಾಗಿರಲಿದೆ. ಕುಟುಂಬ ಜೀವನದಲ್ಲಿ ಖುಷಿ ಇರಲಿದೆ, ಇನ್ನು ಅವಾಹಿತರಿಗೆ ಮದುವೆ ಸಂಬಂಧ ಕೂಡಿ ಬರಲಿದೆ. ನಿಮ್ಮೆಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಮೇಲಾಧಿಕಾರಿಗಳು ನಿಮ್ಮ ಕೆಲಸ ಮೆಚ್ಚಿಕೊಳ್ಳುತ್ತಾರೆ. ವ್ಯಾಪಾರಿಗಳು ನಿರೀಕ್ಷಿಸಿದಂತೆ ಫಲಿತಾಂಶಗಳನ್ನು ಪಡೆಯುತ್ತೀರಿ. ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಈ ವಾರ ಸುಧಾರಣೆ ಕಂಡು ಬರಲಿದೆ.
ಸಂಖ್ಯೆ 8 (ಹುಟ್ಟಿದ ದಿನಾಂಕ 8,17,26)
ಹಣದ ಖರ್ಚು ಹೆಚ್ಚಿರಲಿದೆ, ಹೆಚ್ಚುತ್ತಿರುವ ಖರ್ಚುಗಳಿಗೆ ನೀವು ಕಡಿವಾಣ ಹಾಕದಿದ್ದರೆ ಹಣಕಾಸಿನ ಸಮಸ್ಯೆ ಹೆಚ್ಚಾಗುವುದು. ಸಂಗಾತಿಯ ಆರೋಗ್ಯದ ಕಡೆಗೆ ಗಮಹರಿಸಬೇಕು. ಉದ್ಯೋಗವಿರಲಿ, ವ್ಯವಹಾರವಿರಲಿ, ಜವಾಬ್ದಾರಿಗಳ ಹೊರೆ ಹೆಚ್ಚಾಗಿರಲಿದೆ. ನೀವು ಕೋಪವನ್ನು ನಿಯಂತ್ರಿಸಿದರೆ ಮನೆಯಲ್ಲಿ ನೆಮ್ಮದಿ ಇರಲಿದೆ, ಇಲ್ಲದಿದ್ದರೆ ಮನಸ್ಸಿನ ನೆಮ್ಮದಿ ಹಾಳಾಗುವುದು.
ಸಂಖ್ಯೆ 9 (ಹುಟ್ಟಿದ ದಿನಾಂಕ 9,18,27)
ಸಂಖ್ಯೆ 9 ನಿಮ್ಮದಾಗಿದ್ದರೆ ಈ ವಾರ ನಿಮಗೆ ಉತ್ತಮವಾಗಿದೆ. ಕೆಲಸದಲ್ಲಿ ಪ್ರಗತಿ ಕಾಣುತ್ತೀರಿ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ದಾಂಪತ್ಯ ಜೀವನ ಚೆನ್ನಾಗಿರಲಿದೆ. ನಿಮ್ಮಿಬ್ಬರ ದಾಂಪತ್ಯ ಹೆಚ್ಚಾಗಲಿದೆ. ವಾರದ ಕೊನೆಯಲ್ಲಿ ನೀವು ಇದ್ದಕ್ಕಿದ್ದಂತೆ ಆರ್ಥಿಕ ಲಾಭವನ್ನು ಪಡೆಯಬಹುದು. ಅಲ್ಲದೆ ಗಳಿಕೆ ಚೆನ್ನಾಗಿರುವುದರಿಂದ ಆದಾಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











