Latest Updates
-
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ
ಸಂಖ್ಯಾಶಾಸ್ತ್ರ ಪ್ರಕಾರ ಏಪ್ರಿಲ್ 6 -13ರವರೆಗಿನ ಭವಿಷ್ಯ ಹೇಗಿರಲಿದೆ?
ನಿಮ್ಮ ಜನ್ಮ ದಿನಾಂಕ ನೋಡಿ ಸಂಖ್ಯಾಶಾಸ್ತ್ರ ಹೇಳಲಾಗುವುದು. ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ನಿಮಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಸಂಖ್ಯೆ 1 (ಹುಟ್ಟಿದ ದಿನಾಂಕ 1,10,19,28)
ಈ ವಾರ ನೀವು ತುಂಬಾ ಕಾರ್ಯನಿರತವಾಗಿರುತ್ತದೆ. ನಿಮ್ಮ ಪ್ರಮುಖ ಕಾರ್ಯಗಳನ್ನು ಪೂರ್ಣಗೊಳಿಸಲು ನೀವು ಪ್ರಯತ್ನಿಸಬೇಕು. ಈ ಅವಧಿಯಲ್ಲಿ, ಉದ್ಯೋಗಿಗಳು ತಮ್ಮ ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನೀವು ಉದ್ಯಮಿಯಾಗಿದ್ದು ಈ ಅವಧಿಯಲ್ಲಿ ಯಾವುದೇ ಪ್ರಮುಖ ವ್ಯವಹಾರ ನಿರ್ಧಾರವನ್ನು ತೆಗೆದುಕೊಂಡರೆ ಅದರಿಂದ ನೀವು ಉತ್ತಮ ಫಲಿತಾಂಶ ಪಡೆಯುತ್ತೀರಿ. ಈ ಅವಧಿಯಲ್ಲಿ, ನಿಮ್ಮ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬರುವುದು. ನಿಮ್ಮ ಆದಾಯ ಹೆಚ್ಚಾಗಬಹುದು. ಅತಿಯಾಗಿ ಖರ್ಚು ಮಾಡಲು ಹೋಗಬೇಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ.

ಸಂಖ್ಯೆ 2 (ಹುಟ್ಟದ ದಿನಾಂಕ 2,11,20,29)
ಮನೆಯಲ್ಲಿ ವಾತಾವರಣ ತುಂಬಾ ಚೆನ್ನಾಗಿರಲಿದೆ. ಹಣದ ವಿಷಯದಲ್ಲಿ ಈ ದಿನ ತುಂಬಾ ಚೆನ್ನಾಗಿದೆ. ಈ ಅವಧಿಯಲ್ಲಿ ನಿಮ್ಮ ಹಣಕಾಸಿನ ಪ್ರಯತ್ನಗಳು ಯಶಸ್ವಿಯಾಗಬಹುದು. ಕೆಲವು ಹಳೆಯ ಅಥವಾ ಸಣ್ಣ ಸಾಲವನ್ನು ಮರುಪಾವತಿ ಮಾಡುವಲ್ಲಿ ನೀವು ಯಶಸ್ವಿಯಾಗುವ ಸಾಧ್ಯತೆಯಿದೆ.
ನೀವು ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಹೆಚ್ಚು ಚಿಂತೆ ಮಾಡಲು ಹೋಗಬೇಡಿ. ಸೂಕ್ತ ಸಮಯ ಬಂದಾಗ ನಿಮ್ಮ ಸಮಸ್ಯೆ ಬಗೆಹರಿಯಲಿದೆ. ಈ ಅವಧಿಯಲ್ಲಿ, ನಿಮ್ಮ ಆರೋಗ್ಯದ ಬಗ್ಗೆ ಯಾವುದೇ ರೀತಿಯಲ್ಲಿ ಅಜಾಗರೂಕರಾಗಿರಲು ಸಲಹೆ ನೀಡಲಾಗುವುದು. ಆರೋಗ್ಯ ಸಮಸ್ಯೆ ಹೊಂದಿದ್ದರೆ ಜಾಗ್ರತೆವಹಿಸಿ.
ಸಂಖ್ಯೆ 3 ( ಹುಟ್ಟಿದ ದಿನಾಂಕ 3,12,21,30)
ಭವಿಷ್ಯದಲ್ಲಿ ಆರ್ಥಿಕ ಬಿಕ್ಕಟ್ಟನ್ನು ತಪ್ಪಿಸಲು, ನೀವು ಅನಗತ್ಯವಾಗಿ ಖರ್ಚು ಮಾಡಬಾರದು. ನೀವು ಉಳಿತಾಯದತ್ತ ಹೆಚ್ಚು ಗಮನಹರಿಸಿದರೆ, ನಿಮ್ಮ ಭವಿಷ್ಯವು ಹೆಚ್ಚು ಸುರಕ್ಷಿತವಾಗಿರಲಿದೆ. ಈ ಅವಧಿ ಉದ್ಯೋಗಸ್ಥರಿಗೆ ಉತ್ತಮವಾಗಿರಲಿದೆ. ಕೆಲಸದ ನಿಮಿತ್ತ ವಿದೇಶ ಪ್ರಯಾಣ ಮಾಡುವ ಅವಕಾಶ ಸಿಗಬಹುದು. ನೀವು ವ್ಯಾಪಾರಸ್ಥರಾಗಿದ್ದರೆ ನಿಮ್ಮ ಯಾವುದೇ ಬಾಕಿ ಕೆಲಸಗಳು ಪೂರ್ಣಗೊಳ್ಳುತ್ತವೆ, ಆರ್ಥಿಕವಾಗಿ ಉತ್ತಮವಾಗಿದೆ. ಈ ಅವಧಿಯಲ್ಲಿ, ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ
ಸಂಖ್ಯೆ 4 ( ಹುಟ್ಟಿದ ದಿನಾಂಕ 4,13,22,31)
ವೈಯಕ್ತಿಕ ಜೀವನದಲ್ಲಿ ಕೆಲ ಸಮಸ್ಯೆಗಳಿರಬಹುದು. ವೈಯಕ್ತಿಕ ಹಾಗೂ ವೃತ್ತಿ ಜೀವನದಲ್ಲಿ ಹೊಸ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಆದರೆ ಯಾವುದೇ ಪರಿಸ್ಥಿತಿಯಲ್ಲಿ ತಾಳ್ಮೆ ಕಳೆದುಕೊಳ್ಳದಂತೆ ಸಲಹೆ ನೀಡಲಾಗುವುದು. ಮನೆಯಲ್ಲಿ ವಯಸ್ಸಾದ ಸದಸ್ಯರಿದ್ದರೆ ಅವರ ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ. ಹಣಕಾಸಿನ ಸಮಸ್ಯೆಗಳಿಂದಾಗಿ, ಈ ಅವಧಿಯಲ್ಲಿ ನಿಮ್ಮ ಮನಸ್ಸಿನಲ್ಲಿ ಅನೇಕ ನಕಾರಾತ್ಮಕ ಆಲೋಚನೆಗಳು ಉದ್ಭವಿಸಬಹುದು.
ಸಂಖ್ಯೆ 5 (ಹುಟ್ಟಿದ ದಿನಾಂಕ 5,14,23)
ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ಖಂಡಿತವಾಗಿಯೂ ನಿಮ್ಮ ಹಿರಿಯರ ಆಶೀರ್ವಾದ ಪಡೆಯಿರಿ. ಕಚೇರಿಯಲ್ಲಿ ಬಾಕಿ ಉಳಿದಿರುವ ಕೆಲಸಗಳನ್ನು ಪೂರ್ಣಗೊಳಿಸಲು ನೀವು ತುಂಬಾ ಶ್ರಮಿಸುತ್ತೀರಿ. ಭವಿಷ್ಯದಲ್ಲಿ ನೀವು ಕೆಲಸದ ಬಗ್ಗೆ ಹೆಚ್ಚು ಅಸಡ್ಡೆ ತೋರದೆ, ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿದರೆ ಉತ್ತಮ. ವ್ಯಾಪಾರಿಗಳಿಗೆ ಈ ವಾರ ತುಂಬಾ ಒತ್ತಡದಿಂದ ಕೂಡಿರಲಿದೆ. ನೀವು ಹೊಸ ಯೋಜನೆಯಲ್ಲಿ ಕೆಲಸವನ್ನು ಪ್ರಾರಂಭಿಸಲಿದ್ದರೆ ಕೆಲ ಅಡೆತಡೆಗಳು ಉಂಟಾಗಬಹುದು, ಆದರೆ ಈ ಸಮಸ್ಯೆ ತಾತ್ಕಾಲಿಕವಾಗಿರುತ್ತದೆ, ಆದ್ದರಿಂದ ನೀವು ತಾಳ್ಮೆಯಿಂದಿರಬೇಕು. ಈ ವಾರ ನಿಮಗೆ ತುಂಬಾ ದುಬಾರಿಯಾಗಲಿದೆ.
ಸಂಖ್ಯೆ 6 (ಹುಟ್ಟಿದ ದಿನಾಂಕ 6,15,24)
ನೀವು ನಿಮ್ಮ ವೈಯಕ್ತಿಕ ಜೀವನದ ಬಗ್ಗೆ ನೀವು ಹೆಚ್ಚು ಗಮನ ಹರಿಸುತ್ತೀರಿ. ನೀವು ನಿಮ್ಮ ಮನೆಯ ಅಲಂಕಾರದಲ್ಲಿ ಬದಲಾವಣೆಗಳನ್ನು ಮಾಡಲು ಬಯಸಿದರೆ ಅಥವಾ ರಿಪೇರಿ ಮಾಡಲು ಬಯಸಿದರೆ, ಈ ಸಮಯವು ಅದಕ್ಕೆ ಸೂಕ್ತವಾಗಿರಲಿದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧದಲ್ಲಿ ಪ್ರೀತಿ ಮತ್ತು ಅನ್ಯೋನ್ಯತೆ ಹೆಚ್ಚಾಗುವುದು. ವಿವಾಹ ಸಂಬಂಧ ನೋಡುತ್ತಿರುವವರೆಗೆ ಈ ಅವಧಿ ತುಂಬಾ ಒಳ್ಳೆಯದು.ಹಣಕಾಸಿನ ದೃಷ್ಟಿಯಿಂದ ಈ ವಾರ ನಿಮಗೆ ತುಂಬಾ ಒಳ್ಳೆಯದು. ಈ ವಾರ ನೀವು ಉಳಿತಾಯದತ್ತ ಗಮನ ಹರಿಸಲು ಸಾಧ್ಯವಾಗುವುದು ಉದ್ಯೋಗಸ್ಥರಿಗೆ ಬಡ್ತಿ ದೊರೆಯಲಿದೆ.
ಸಂಖ್ಯೆ 7 (ಹುಟ್ಟಿದ ದಿನಾಂಕ 7,16,25)
ನೀವು ಚಿಕ್ಕ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಿ. ಈ ವಾರ ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ. ಉದ್ಯೋಗಿಗಳಿಗೆ ಇದು ಬದಲಾವಣೆಯ ಸಮಯ, ವಿಶೇಷವಾಗಿ ನೀವು ನಿಮ್ಮ ಕೆಲಸವನ್ನು ಬದಲಾಯಿಸಲು ಬಯಸಿದರೆ, ನೀವು ಒಳ್ಳೆಯ ಕಡೆ ಕೆಲಸ ಪಡೆಯುತ್ತೀರಿ.. ಈ ಅವಧಿಯಲ್ಲಿ ಆರೋಗ್ಯ ಉತ್ತಮವಾಗಿರುತ್ತದೆ, ನಿದ್ದೆ ಸರಿಯಾಗಿ ಆಗದಿದ್ದರೆ ಆರೋಗ್ಯ ಸಮಸ್ಯೆ ಉಂಟಾಗುವುದು.
ಸಂಖ್ಯೆ 8 (ಹುಟ್ಟದ ದಿನಾಂಕ 8,17,26)
ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿ ಚೆನ್ನಾಗಿರಲಿದೆ, ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು, ಖಂಡಿತವಾಗಿಯೂ ನಿಮ್ಮ ಕುಟುಂಬದವರ ಅಭಿಪ್ರಾಯ ಪಡೆಯಿರಿ, ವ್ಯಾಪಾರಿಗಳಿಗೆ ಈ ಅವಧಿ ಲಾಭದಾಯಕವಾಗಿರಲಿದೆ. ಉದ್ಯೋಗಸ್ಥರು ಈ ಅವಧಿಯಲ್ಲಿ ತುಂಬಾ ಕಷ್ಟಪಡಬೇಕಾಗಬಹುದು. ನಿಮಗೆ ಹೆಚ್ಚಿನ ಕೆಲಸದ ಹೊರೆ ಇರಲಿದೆ. ಈ ದಿನ ನೀವು ಧನಾತ್ಮಕವಾಗಿರಬೇಕು. ಸರಿಯಾದ ಯೋಜನೆಯ ಪ್ರಕಾರ ನಿಮ್ಮ ಕೆಲಸವನ್ನು ಪೂರ್ಣಗೊಳಿಸಲು ನೀವು ಪ್ರಯತ್ನಿಸಬೇಕು. ಹಣದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರಲಿದೆ. ನಿಮ್ಮ ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡಬೇಡಿ.
ಸಂಖ್ಯೆ 9 ( ಹುಟ್ಟಿದ ದಿನಾಂಕ 9,18,27)
ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಉದ್ಯೋಗಸ್ಥರು ಪ್ರಗತಿ ಹೊಂದಬಹುದು. ಆದರೆ, ನಿಮ್ಮ ಮೇಲೆ ಜವಾಬ್ದಾರಿಗಳ ಹೊರೆ ಹೆಚ್ಚಾಗುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಇದಕ್ಕೆ ಮುಂಚಿತವಾಗಿ ಸಿದ್ಧರಾಗಿರಬೇಕು. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ನೀವು ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಕುಟುಂಬದೊಂದಿಗೆ ಈ ಅವಧಿ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











