Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಂಖ್ಯಾಶಾಸ್ತ್ರ ಭವಿಷ್ಯ: ನೀವು ಹುಟ್ಟಿದ ಜನ್ಮ ದಿನಾಂಕ ಪ್ರಕಾರ ಈ ವಾರ (ಫೆಬ್ರವರಿ9-15) ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರದ ಭವಿಷ್ಯ ನೀಡಲಾಗಿದ್ದು ಯಾವ ದಿನಾಂಕದಲ್ಲಿ ಜನಿಸಿದವರಿಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಸಂಖ್ಯೆ 1 (ಹುಟ್ಟಿದ ದಿನಾಂಕ 1, 10, 19, 28)
ಈ ವಾರ ನಿಮಗೆ ಅನುಕೂಲಕರವಾಗಿದೆ, ವಾರದ ಆರಂಭದಲ್ಲಿ ಸ್ವಲ್ಪ ಮಾನಸಿಕ ಒತ್ತಡಗಳಿರಬಹುದು, ಆದರೆ ವಾರದ ಕೊನೆಯಲ್ಲಿ ಎಲ್ಲವೂ ಸರಿಯಾಗಲಿದೆ,ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಕೆಲಸದಲ್ಲಿ ಒತ್ತಡ ಕಡಿಮೆಯಾಗಲಿದೆ.

ಸಂಖ್ಯೆ 2 (ಹುಟ್ಟಿದ ದಿನಾಂಕ 2, 11, 20, 29)
ಈ ವಾರ ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಬರಬಹುದು, ಆದರೆ ಈ ಭಿನ್ನಾಭಿಪ್ರಾಯ ಸರಿಪಡಿಸಲು ಪ್ರಯತ್ನ ಹಾಕಿ. ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ವೈಯಕ್ತಿಕ ಬದುಕು ಕೂಡ ಚೆನ್ನಾಗಿ ಆಗಲಿದೆ, ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುವುದು.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12, 21, 30)
ಕೆಲಸ ಕಾರ್ಯದಲ್ಲಿ ಪ್ರಗತಿ ಕಂಡು ಬರುವುದು, ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯಲು ಸಾಧ್ಯವಾಗಲಿದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ನಿಮ್ಮ ಕೆಲಸ ಕಾರ್ಯದ ಕಡೆಗೆ ಗಮನಹರಿಸಿ. ವೃತ್ತಿ ಬದುಕು ಉತ್ತಮವಾಗಿರಲಿದೆ, ವೈಯಕ್ತಿಕ ಬದುಕಿನಲ್ಲಿ ಉತ್ತಮ ಅವಕಾಶಗಳು ದೊರೆಯಲಿದೆ.
ಸಂಖ್ಯೆ 4(ಹುಟ್ಟಿದ ದಿನಾಂಕ 4, 13, 22, 31)
ಈ ವಾರ ನಿಮ್ಮನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆ ಬಗೆಹರಿಯಲಿದೆ, ನಿಮಗೆ ನೀಡಿರುವ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಣೆ ಮಾಡಲು ಸಾಧ್ಯವಾಗುವುದು. ನಿಮ್ಮ ಸಂವಹನ ಕೌಶಲ್ಯದಿಂದಾಗಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ಬದುಕಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದು.
ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23)
ಪ್ರೀತಿ ಪಾತ್ರರ ಜೊತೆಗೆ ಉತ್ತಮ ಸಮಯ ಕಳೆಯಲು ಸಾಧ್ಯವಾಗುವುದು, ನಿಮ್ಮ ಬಜೆಟ್ ಕಡೆಗೆ ಹೆಚ್ಚು ಗಮನಹರಿಸಬೇಕು, ಖರ್ಚುಗಳು ಹೆಚ್ಚು ಬರಬಹುದು, ಆದರೆ ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ. ಅಲ್ಲದೆ ಯಾರನ್ನೂ ಅತಿಯಾಗಿ ನಂಬಬೇಡಿ ಎಂದು ಸಲಹೆ ನೀಡಲಾಗುವುದು.
ಸಂಖ್ಯೆ 6(ಹುಟ್ಟಿದ ದಿನಾಂಕ 6, 15, 24)
ಈ ವಾರ ಮಾನಸಿಕವಾಗಿ ಅಷ್ಟೊಂದು ಉತ್ತಮವಾಗಿರಲ್ಲ, ಕೆಲವೊಂದು ಚಿಂತೆಗಳು ನಿಮ್ಮನ್ನು ಕಾಡಬಹುದು, ಕೆಲವೊಂದು ವಿಷಯಗಳು ಕೈ ಮೀರಿ ನಡೆಯಬಹುದು, ಆದ್ದರಿಂದ ನೀವು ತುಂಬಾನೇ ಜಾಗ್ರತೆವಹಿಸಿ. ಅತಿಯಾದ ಮಾನಸಿಕ ಒತ್ತಡ ನಿದ್ದೆ ಹಾಗೂ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು, ಆದ್ದರಿಂದ ಈ ಬಗ್ಗೆ ಜಾಗ್ರತೆವಹಿಸಿ.
ಸಂಖ್ಯೆ 7(ಹುಟ್ಟಿದ ದಿನಾಂಕ 7, 16, 25)
ಸಂಬಂಧದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿರಲಿದೆ, ಅವಾಹಿತರಿಗೆ ಮದುವೆ ಸಂಬಂಧ ಬರಬಹುದು. ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಧನಾತ್ಮಕ ಬದಾವಣೆಯಾಗಲಿದೆ.
ಸಂಖ್ಯೆ 8(ಹುಟ್ಟಿದ ದಿನಾಂಕ 8, 17, 26)
ಈ ವಾರ ಅಧಿಕ ಕೆಲಸದ ಒತ್ತಡದಿಂದ ಆಯಾಸ ಉಂಟಾಗುವುದು, ವಿಶ್ರಾಂತಿ ಕಡೆಗೆ ಗಮನಹರಿಸಿ, ಆದರೆ ಈ ವಾರ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯುವಲ್ಲಿ ಯಶಸ್ವಿಯಾಗುತ್ತೀರಿ. ವೃತ್ತಿ ಬದುಕಿನಲ್ಲಿ ತೃಪ್ತಿ ಇರಲಿದೆ. ಇನ್ನು ಪ್ರಮುಖ ನಿರ್ಧಾರವನ್ನು ಆಲೋಚಿಸಿ ತೆಗೆದುಕೊಳ್ಳುವಂತೆ ಸಲಹೆ ನೀಡಲಾಗುವುದು.
ಸಂಖ್ಯೆ 9(ಹುಟ್ಟಿದ ದಿನಾಂಕ 9, 18, 27)
ಈ ವಾರ ನಿಮಗೆ ಅನುಕೂಲಕರವಾಗಿದೆ ಆದರೆ ಕೆಲವು ಸವಾಲುಗಳು ಎದುರಾಗಬಹುದು, ಅದನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗಲಿದೆ. ಹೀಗಾಗಿ ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಬೆಳವಣಿಗೆ ಕಾಣಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications