Latest Updates
-
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ
ಸಂಖ್ಯಾಸಾಸ್ತ್ರ ಪ್ರಕಾರ ಈ ವಾರ (ಜನವರಿ12-17) ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರದ ಭವಿಷ್ಯ ನೀಡಲಾಗಿದೆ. 1-9ರವರೆಗಿನ ಸಂಖ್ಯೆಯ ಭವಿಷ್ಯ ನೀಡಲಾಗಿದ್ದು, ನಿಮ್ಮ ಜನ್ಮ ಸಂಖ್ಯೆ (ನೀವು ಹುಟ್ಟಿದ ದಿನಾಕ 24 ಆಗಿದ್ದರೆ 2+4=6 ನಿಮ್ಮ ಸಂಖ್ಯೆ , 29 ಆಗಿದ್ದರೆ 2+9=2 (1+1=2) ನಿಮ್ಮ ಜನ್ಮ ಸಂಖ್ಯೆ ಆಗಿದೆ, ಈ ರೀತಿ ಲೆಕ್ಕಾಚಾರ ಮಾಡಿದರೆ ನಿಮ್ಮ ಜನ್ಮ ಸಂಖ್ಯೆ ತಿಳಿಯುತ್ತದೆ:
ಸಂಖ್ಯೆ 1
ಈ ವಾರ ನಿಮಗೆ ಅನುಕೂಲಕರವಾಗಿದೆ, ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಸಂಬಂಧದ ವಿಷಯದಲ್ಲಿ ಕೆಲ ಸಮಸ್ಯೆಗಳು ಬರಬಹುದು, ಆದರೆ ಧೈರ್ಯದಿಂದ ಎದುರಿಸಿ, ವಾರದ ಕೊನೆಯಲ್ಲಿ ಎಲ್ಲೂ ಸರಿಯಾಗಲಿದೆ. ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶಗಳು ಸಿಗಲಾರಂಬಿಸುತ್ತದೆ.

ಸಂಖ್ಯೆ 2
ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ, ಕೆಲಸದ ಕಡೆಗೆ ಗಮನಹರಿಸುವುದರಿಂ ಕೆಲಸ ಕಾರ್ಯವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುವುದು. ನಿಮ್ಮ ಕೆಲಸ ಇತರರನ್ನು ಪ್ರಭಾವಿಸುತ್ತದೆ. ಸಂಬಂಧದ ದೃಷ್ಟಿಯಿಂದಲೂ ಈ ವಾರ ಅನುಕೂಲರವಾಗಿದೆ, ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ.
ಸಂಖ್ಯೆ 3
ಮನೆಯ ವಾತಾವರಣ ಸಂತೋಷದಿಂದ ಕೂಡಿರಲಿದೆ. ನೀವು ವೈಯಕ್ತಿಕ ಹಾಗೂ ವೃತ್ತಿ ಬದುಕಿನ ನಡುವೆ ಸಮತೋಲನ ಕಾಪಾಡಿಕೊಂಡು ಹೋಗಲು ಸಾಧ್ಯವಾಗುವುದು. ಅಲ್ಲದೆ ಈ ಅವಧಿಯಲ್ಲಿ ನಿಮಗೆ ಸಿಗುವ ಅವಕಾಶವನ್ನು ಉತ್ತಮವಾಗಿ ಬಳಸಿಕೊಳ್ಳುತ್ತೀರಿ. ಆರ್ಥಿಕ ದೃಷ್ಟಿಯಿಂದ ಈ ವಾರ ಅನುಕೂಲಕರವಾಗಿದೆ, ಆರೋಗ್ಯ ಕೂಡ ಚೆನ್ನಾಗಿರಲಿದೆ.
ಸಂಖ್ಯೆ 4
ಈ ವಾರ ನಿಮಗೆ ಶುಭವಾಗಿದೆ, ವೃತ್ತಿ ಬದುಕಿನಲ್ಲಿ ಏನಾದರೂ ಬದಲಾವಣೆ ಮಾಡಲು ಬಯಸಿದರೆ ಆತುರದ ನಿರ್ಧಾರ ತೆಗೆದುಕೊಳ್ಳದಂತೆ ಸಲಹೆ ನೀಡಲಾಗುವುದ, ನಿಮ್ಮ ಜವಾಬ್ದಾರಿ ಚೆನ್ನಾಗಿ ನಿಭಾಯಿಸಲು ಸಾಧ್ಯವಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ.
ಸಂಖ್ಯೆ 5
ಈ ದಿನ ಆತ್ಮವಿಶ್ವಾಸ ಚೆನ್ನಾಗಿರಲಿದೆ, ಕೆಲಸ ಕಾರ್ಯಗಳನ್ನು ತುಂಬಾ ಚಟುವಟಿಕೆಯಿಂದ ಮಾಡುತ್ತೀರಿ, ನಿಮ್ಮ ಕೆಲಸದಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ. ವೃತ್ತಿ ಜೀವನ ಹಾಗೂ ವೈಯಕ್ತಿಕ ಜೀವನದ ನಡುವೆ ಫಲಿತಾಂಶ ಕಾಪಾಡಿಕೊಂಡು ಹೋಗಲು ಸಾಧ್ಯವಾಗಲಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಆರ್ಥಿಕ ದೃಷ್ಟಿಯಿಂದಲೂ ಈ ವಾರ ಅನುಕೂಲಕರವಾಗಿದೆ.
ಸಂಖ್ಯೆ 6
ಈ ವಾರ ಕೆಲಸ ಕಾರ್ಯಗಳು ನೀವು ಅಂದುಕೊಂಡಿರುವುದಕ್ಕಿಂತಲೂ ನಿಧಾನವಾಗಬಹುದು, ಆರ್ಥಿಕವಾಗಿ ಕೂಡ ಕೆಲ ಸವಾಲುಗಳು ಬರಬಹುದು. ಪ್ರತಿಕೂಲ ಪರಿಸ್ಥಿತಿಯನ್ನು ತಾಳ್ಮೆಯಿಂದ ಎದುರಿಸಲು ಸಲಹೆ ನೀಡಲಾಗುವುದು. ನಿಮ್ಮ ಕನಸುಗಳನ್ನು ಸಾಕಾರಗೊಳಿಸಲು ಪ್ರಯತ್ನಿಸುವುದು ಒಳ್ಳೆಯದು.
ಸಂಖ್ಯೆ 7
ಕೆಲವೊಂದು ಸವಾಲುಗಳು ಬರಬಹುದು, ಆದರೆ ಶಿಸ್ತು, ತಾಳ್ಮೆ ನಿಮಗೆ ಆ ಸವಾಲು ಎದುರಿಸಲು ಸಹಾಯ ಮಾಡಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಅಭಿಪ್ರಾಯ ವ್ಯತ್ಯಾಸ ಬಂದರೆ ಅದನ್ನು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಬೇಕು, ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಿ, ಇದರಿಂದ ಯಶಸ್ಸು ಪಡೆಯಲು ಸಾಧ್ಯವಾಗುವುದು.
ಸಂಖ್ಯೆ 8
ಈ ವಾರ ನೀವು ಧನಾತ್ಮಕ ಬದಲಾವಣೆಯನ್ನು ಕಾಣಬಹುದು, ವೈಯಕ್ತಿಕ ಸಮಸ್ಯೆಗಳನ್ನು ಜಾಗ್ರತೆಯಿಂದ ಬಗೆಹರಿಸಲು ಪ್ರಯತ್ನಿಸಬೇಕು. ವಾರದ ಮಧ್ಯ ಪ್ರಯಾಣ ಮಾಡುವ ಅಕಾಶ ದೊರೆಯಬಹುದು. ವೃತ್ತಿ ಜೀವನದ ಕಡೆಗೆ ಹೆಚ್ಚಿನ ಗಮನಹರಿಸಿ, ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯಲು ಸಾಧ್ಯವಾಗುವುದು.
ಸಂಖ್ಯೆ 9
ಈ ವಾರ ನಿಮಗೆ ಮಿಶ್ರಫಲ, ನೀವು ನಿಮ್ಮ ಗುರಿಯತ್ತ ಹೆಚ್ಚು ಗಮನಹರಿಸಬೇಕು, ವೃತ್ತಿ ಬದುಕಿನಲ್ಲಿ ಮಹತ್ವದ ವಿಷಯದ ಕಡೆಗೆ ಗಮನಹರಿಸಲು ಸಲಹೆ ನೀಡಲಾಗುವುದು, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ಹೊಸ ಅವಕಾಶಗಳು ದೊರೆಯಲಿದೆ. ಕುಟುಂಬ ಜೀವನದ ದೃಷ್ಟಿಯಿಂದ ಈ ವಾರ ನಿಮಗೆ ಅನುಕೂಲಕರ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
