Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ(ಜುಲೈ 26ರಿಂದ ಆಗಸ್ಟ್ 2) ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ನಿಮಗೆ ಹೇಗಿರಲಿದೆ ನೋಡೋಣ:
ಸಂಖ್ಯೆ 1 (ಹುಟ್ಟಿದ ದಿನಾಂಕ 1,10,19,28)
ಈ ವಾರ ನಿಮಗೆ ಏರಳಿತವಿರಲಿದೆ. ಕೆಲಸ ಕಾರ್ಯಗಳಲ್ಲಿ ಅಡೆತಡೆ ಉಂಟಾಗಲಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲ್ಲ.ಆರ್ಥಿಕ ಪರಿಸ್ಥಿತಿ ಹದಗೆಡುವ ಸಾಧ್ಯತೆ ಇದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಇರಲಿದೆ. ಅಲ್ಲದೆ ಯಾರ ಬಳಿಯಾದರೂ ಹಣ ಪಡೆದಿದ್ದರೆ ಅದನ್ನು ಮರುಪಾವತಿಸಲು ಒತ್ತಡ ಇರಲಿದೆ.

ಸಂಖ್ಯೆ 2 (ಹುಟ್ಟಿದ ದಿನಾಂಕ 2,11,20,29)
ಈ ವಾರ ಉತ್ತಮವಾಗಿರಲಿದೆ, ಹಣಕಾಸಿನ ಪರಿಸ್ಥಿತಿಯಲ್ಲಿ ಕ್ರಮೇಣ ಸುಧಾರಣೆ ಕಂಡುಬರಲಿದೆ. ಆರ್ಥಿಕವಾಗಿ ಹೇಳುವುದಾದರೆ ಖರ್ಚು ಕಡಿಮೆ ಮಾಡಿದರೆ ಒಳ್ಳೆಯದು. ಕುಟುಂಬ ಜೀವನ ಚೆನ್ನಾಗಿರಲಿದೆ. ವಿದೇಶಕ್ಕೆ ಹೋಗಲು ಪ್ರಯತ್ನಿಸುತ್ತಿರುವವರೆಗೆ ಈ ಅವಧಿ ಉತ್ತಮವಾಗಿರಲಿದೆ. ವ್ಯಾಫಾರಿಗಳಿಗೆ ಧನ ಲಾಭವಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12,21,30)
ಕುಟುಂಬದಲ್ಲಿ ಕೆಲ ಸಮಸ್ಯೆಗಳಿರಬಹುದು, ಆದರೆ ಈ ಅವಧಿಯಲ್ಲಿ ಕೋಪ ನಿಯಂತ್ರಿಸಿ, ಅಹಂನಿಂದ ವರ್ತಿಸಬೇಡಿ. ಪ್ರೇಮಿಗಳಿಗೆ ಈ ವಾರ ವಿಶೇಷವಾಗಿರಲಿದೆ. ನಿಮ್ಮ ಮದುವೆಗೆ ಮನೆಯವರ ಒಪ್ಪಿಗೆ ಸಿಗಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಶ್ರಮಿಸಿ.
ಸಂಖ್ಯೆ 4 (ಹುಟ್ಟಿದ ದಿನಾಂಕ 4,13,22,31)
ಕೆಲಸದಲ್ಲಿ ಉತ್ತಮ ಯಶಸ್ಸು ಸಿಗಲಿದೆ, ಆರ್ಥಿಕವಾಗಿ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಧನ ಲಾಭವಿರಲಿದೆ. ಈ ವಾರ ಮನೆಯಲ್ಲಿ ಉತ್ತಮ ವಾತಾವರಣ ಇರಲಿದೆ, ಮನೆಯಲ್ಲಿ ಕೆಲವು ಶುಭ ಕಾರ್ಯಗಳನ್ನು ಆಯೋಜಿಸಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರಲಿದೆ.
ಸಂಖ್ಯೆ 5 (ಹುಟ್ಟಿದ ದಿನಾಂಕ 5,14,23)
ಈ ವಾರ ನೀವು ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಿ, ವೈವಾಹಿಕ ಜೀವನದಲ್ಲಿ ಏನಾದರೂ ಸಮಸ್ಯೆ ಇದ್ದರೆ ನೀವಿಬ್ಬರು ಮಾತನಾಡಿ ಬಗೆಹರಿಸಿ. ಪ್ರೇಮಿಗಳಿಗೂ ಈ ಅವಧಿಯಲ್ಲಿ ಕೆಲ ಒತ್ತಡಗಳಿರಲಿದೆ. ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಹಣದ ವಿಷಯದಲ್ಲಿ ಈ ವಾರ ಉತ್ತಮವಾಗಿರಲಿದೆ. ಆರೋಗ್ಯ ಸಮಸ್ಯೆ ಇದ್ದಿದ್ದರೆ ಈ ವಾರ ಸುಧಾರಣೆ ಕಂಡು ಬರಲಿದೆ.
ಸಂಖ್ಯೆ 6 (ಹುಟ್ಟಿದ ದಿನಾಂಕ 6,15,24)
ಕೆಲಸ ಕಾರ್ಯಗಳಲ್ಲಿ ಈ ಅವಧಿ ಅಡೆತಡೆ ಇರಬಹುದು, ಆರ್ಥಿಕವಾಗಿ ನೋಡುವುದಾದರೆ ಈ ವಾರ ಖರ್ಚು ಇರಲಿದೆ. ಖರ್ಚು ಮಿತಿಯಲ್ಲಿ ಮಾಡಿ, ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ, ಅತಿಯಾಗಿ ಒತ್ತಡ ತೆಗೆದುಕೊಳ್ಳಬೇಡಿ.
ಸಂಖ್ಯೆ 7 (ಹುಟ್ಟಿದ ದಿನಾಂಕ 7,16,25)
ಈ ವಾರ ಉತ್ತಮವಾಗಿರಲಿದೆ. ವೈವಾಹಿಕ ಜೀವನದಲ್ಲಿನ ಸಮಸ್ಯೆ ಬಗೆಹರಿಯಲಿದೆ, ಹಣಕಾಸಿನ ವಿಷಯಗಳಲ್ಲಿ ಆತುರ ಬೇಡ, ಹೂಡಿಕೆ ಇತ್ಯಾದಿಗಳನ್ನು ಮಾಡುವ ಮೊದಲು ನೀವು ಬಹಳ ಆಲೋಚಿಸಿ ಮಾಡಬೇಕು. ಕೆಲಸದಲ್ಲಿ ಒತ್ತಡ ಹಚ್ಚಿರಲಿದೆ, ಆದರೆ ಎಲ್ಲಾ ಚಿಂತೆಗಳನ್ನು ಮರೆತು ನಿಮ್ಮ ಕೆಲಸದತ್ತ ಗಮನ ಹರಿಸಿ.
ಸಂಖ್ಯೆ 8 (ಹುಟ್ಟಿದ ದಿನಾಂಕ 8,17,26)
ವಾರದ ಆರಂಭವು ನಿಮಗೆ ತುಂಬಾ ಅನುಕೂಲಕರವಾಗಿರುತ್ತದೆ. ಕೆನೀವು ಅವಿವಾಹಿತರಾಗಿದ್ದರೆ ಮತ್ತು ಪ್ರೇಮ ವಿವಾಹವಾಗಲು ಬಯಸಿದರೆ ಮದುವೆ ಮಾತುಕತೆಗೆ ಈ ವಾರ ಉತ್ತಮವಾಗಿರಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ದೊಡ್ಡ ಏರಿಳಿತದ ಸಾಧ್ಯತೆಯಿದೆ. ಉದ್ಯೋಗಿಗಳು ಅತಿಯಾದ ಆತ್ಮವಿಶ್ವಾಸವನ್ನು ತಪ್ಪಿಸಬೇಕು . ಅಪೂರ್ಣವಾಗಿದ್ದ ಕೆಲಸ ಕಾರ್ಯಗಳು ಪೂರ್ಣವಾಗಲಿದೆ.
ಸಂಖ್ಯೆ 9 (ಹುಟ್ಟಿದ ದಿನಾಂಕ 9,18,27)
ಈ ವಾರ ಆರ್ಥಿಕವಾಗಿ ಉತ್ತಮವಾಗಿದೆ,ಹಿಂದೆ ಮಾಡಿದ ಯಾವುದೇ ಹೂಡಿಕೆಯಿಂದ ನೀವು ಉತ್ತಮ ಲಾಭವನ್ನು ಪಡೆಯಬಹುದು. ನಿಮ್ಮ ಹಣಕಾಸಿನ ನಿರ್ಧಾರಗಳನ್ನು ನೀವು ಸಂಪೂರ್ಣ ವಿಶ್ವಾಸದಿಂದ ತೆಗೆದುಕೊಳ್ಳುತ್ತೀರಿ. ಕೆಲಸದ ಸ್ಥಳದಲ್ಲಿ ಅಪೇಕ್ಷಿತ ಫಲಿತಾಂಶಗಳನ್ನು ಪಡೆಯಲು ಸಾಧ್ಯವಾಗುವುದು. ಬೇಡದ ವಿಷಯಗಳ ಕಡೆ ಗಮನ ನೀಡದೆ, ನಿಮ್ಮ ಕೆಲಸ ಕಾರ್ಯಗಳತ್ತ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications


