Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ (ಜೂನ್ 15-ಜೂನ್22) ನಿಮ್ಮ ಜನ್ಮ ಸಂಖ್ಯೆಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ನಿಮ್ಮ ಜನ್ಮ ಸಂಖ್ಯೆಗೆ ಹೇಗಿರಲಿದೆ ಎಂದು ನೋಡೋಣ:
ಸಂಖ್ಯೆ 1(ಹುಟ್ಟಿದ ದಿನಾಂಕ 1,10,19,28)
ಈ ಅವಧಿಯಲ್ಲಿ, ನಿಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು, ಹಳೆಯ ಕಾಯಿಲೆ ಹೊರಹೊಮ್ಮುವ ಸಾಧ್ಯತೆಯಿದೆ. ಅಲ್ಲದೆ ಈ ಸಮಯದಲ್ಲಿ ತಾಳ್ಮೆ ಕಡಿಮೆ ಇರಲಿದೆ. ಖರ್ಚು ಅಧಿಕವಿರಲಿದೆ ಅನಗತ್ಯ ವೆಚ್ಚಗಳು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಈ ವಾರ ಸಂಬಂಧಗಳ ವಿಷಯದಲ್ಲಿ ಏರಿಳಿತಗಳಿಂದ ಕೂಡಿರಲಿದೆ. ಕೆಲಸದ ಬಗ್ಗೆ ಅನಗ್ಯತ ಚಿಂತೆ ಬಿಡಿ.

ಸಂಖ್ಯೆ 2 (ಹುಟ್ಟಿದ ದಿನಾಂಕ 2,11,20,29)
ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ, ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ಉದಾರವಾಗಿ ಖರ್ಚು ಮಾಡುತ್ತೀರಿ. ನೀವು ಕೆಲವು ದುಬಾರಿ ಐಷಾರಾಮಿಗಳನ್ನು ಕೂಡ ಖರೀದಿಸಬಹುದು. ಈ ಸಮಯವು ಉದ್ಯಮಿಗಳಿಗೆ ತುಂಬಾ ಅನುಕೂಲಕರವಾಗಿರುತ್ತದೆ. ಹೂಡಿಕೆಯಿಂದ ಉತ್ತಮ ಲಾಭ ಪಡೆಯುತ್ತೀರಿ. ವಾರದ ಕೊನೆಯಲ್ಲಿ ಮಾಡುವ ಪ್ರಯಾಣ ಖುಷಿ ನೀಡಲಿದೆ.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12,21,30)
ಈ ವಾರ ನಿಮಗೆ ಶುಭವಾಗಿದೆ, ಈ ವಾರ ಬಾಕಿಯಿರುವ ಕೆಲವು ಕೆಲಸಗಳು ಪೂರ್ಣಗೊಳ್ಳಬಹುದು. ವಾರದ ಮಧ್ಯದಲ್ಲಿ ಕುಟುಂಬದ ಸದಸ್ಯರಿಂದ ಒಳ್ಳೆಯ ಸುದ್ದಿ ಬರುವ ಸಾಧ್ಯತೆ ಇದೆ. ಮನೆಯ ವಾತಾವರಣವು ತುಂಬಾ ಚೆನ್ನಾಗಿರುತ್ತದೆ. ಹಣಕಾಸಿನ ದೃಷ್ಟಿಯಿಂದ ವಾರ ನಿಮಗೆ ತುಂಬಾ ಮಂಗಳಕರವಾಗಿರುತ್ತದೆ. ನಿಮ್ಮ ಉಳಿತಾಯ ಹೆಚ್ಚಾಗಲಿದೆ. ನೀವು ಯಾವುದೇ ಹೊಸ ಭೂಮಿ, ಮನೆ, ವಾಹನ ಇತ್ಯಾದಿಗಳನ್ನು ಖರೀದಿಸಲು ಬಯಸಿದರೆ ನಿಮ್ಮ ಆಸೆ ಈಡೇರಲಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ.
ಸಂಖ್ಯೆ 4 (ಹುಟ್ಟಿದ ದಿನಾಂಕ 4,13,22,31)
ಕೆಲಸದಲ್ಲಿ ತುಂಬಾ ಬ್ಯುಸಿಯಾಗಿರುತ್ತೀರಿ. ಆರೋಗ್ಯದ ಕಡೆಗೆ ಗಮನಹರಿಸಿ, ವಾರದ ಮಧ್ಯದಲ್ಲಿ ನೀವು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ಹಣ ನಷ್ಟವಾಗದಂತೆ ಜಾಗ್ರತೆವಹಿಸಿ. ಪ್ರೇಮಿಗಳಿಗೆ ಈ ಅವಧಿ ಅನುಕೂಲಕರವಾಗಿದೆ, ನಿಮ್ಮ ಸಂಗಾತಿಯಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು.
ಸಂಖ್ಯೆ 5 (ಹುಟ್ಟಿದ ದಿನಾಂಕ 5,14,23)
ಕೆಲಸದ ದೃಷ್ಟಿಯಿಂದ ಈ ವಾರ ನಿಮಗೆ ಶುಭವಾಗಿದೆ. ನೀವು ಉದ್ಯೋಗವನ್ನು ಬದಲಾಯಿಸಲು ಯೋಚಿಸುತ್ತಿದ್ದರೆ ಈ ಸಮಯವು ನಿಮಗೆ ಅನುಕೂಲಕರವಾಗಿದೆ. ಉದ್ಯಮಿಗಳು ತಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶ ಸಿಗಲಿದೆ. ವೈವಾಹಿಕ ಜೀವನದಲ್ಲಿ ಸಂತೋಷ, ಶಾಂತಿ ಇರಲಿದೆ. ಆರ್ಥಿಕ ಚಿಂತೆ ದೂರಾಗಲಿದೆ, ಆದರೆ ನೀವು ಅನಗ್ಯತ ಚಿಂತೆಗೆ ಕಡಿವಾಣ ಹಾಕುವುದು ಒಳ್ಳೆಯದು.
ಸಂಖ್ಯೆ 6 (ಹುಟ್ಟಿದ ದಿನಾಂಕ 6,15,24)
ಈ ಅವಧಿಯಲ್ಲಿ ಎಲ್ಲಾ ಕೆಲಸಗಳು ನಿಮ್ಮ ಯೋಜನೆಯಂತೆ ಪೂರ್ಣಗೊಳ್ಳುತ್ತವೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ನಿಮ್ಮ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ನೀವು ಅವಿವಾಹಿತರಾಗಿದ್ದರೆ ಒಳ್ಳೆಯ ಮದುವೆ ಪ್ರಸ್ತಾಪ ಬರಬಹುದು. ಶೀಘ್ರದಲ್ಲೇ ಮದುವೆ ಕೂಡ ಆಗುವುದು. ಅರೋಗ್ಯ ಚೆನ್ನಾಗಿರಲಿದೆ, ನಿಮ್ಮೆಲ್ಲಾ ಕೆಲಸವನ್ನು ಪೂರ್ಣ ಶ್ರದ್ಧೆಯಿಂದ ಮಾಡುವುದು ಒಳ್ಳೆಯದು.
ಸಂಖ್ಯೆ 7 ( ಹುಟ್ಟಿದ ದಿನಾಂಕ 7,16,25)
ವೈವಾಹಿಕ ಜೀವನ ಚೆನ್ನಾಗಿರಲಿದೆ, ನಿಮ್ಮ ನಡುವೆ ಬಾಂಧವ್ಯ ಇರಲಿದೆ. ಕೆಲಸದಿಂದ ದಣಿವು ಉಂಟಾಗುವುದು, ಆದರೆ ನಿಮ್ಮ ಕೆಲಸಕ್ಕೆ ಉತ್ತಮ ಫಲಿತಾಂಶ ಸಿಗಲಿದೆ. ವು ಉದ್ಯಮಿಯಾಗಿದ್ದರೆ, ನೀವು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ನಿಮ್ಮ ನಿರ್ಧಾರಗಳ ಸರಿಯಾದ ಫಲಿತಾಂಶಗಳನ್ನು ನೀವು ಪಡೆಯುವ ಸಾಧ್ಯತೆಯಿದೆ. ಆರೋಗ್ಯದಲ್ಲಿ, ಈ ವಾರ ಸ್ವಲ್ಪ ಉತ್ತಮವಾಗಿರಲಿದೆ.
ಸಂಖ್ಯೆ 8 (ಹುಟ್ಟಿದ ದಿನಾಂಕ 8,17,26)
ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ವೈವಾಹಿಕ ಜೀವನದಲ್ಲಿ ಸಂತೋಷ ಇರಲಿದೆ. ಪ್ರೀತಿಯ ಜೋಡಿಗಳಿಗೆ ಈ ವಾರ ತುಂಬಾ ವಿಶೇಷವಾಗಿರಲಿದೆ. ನಿಮ್ಮ ನಡುವೆ ಬಾಂಧವ್ಯ ಚೆನ್ನಾಗಿರಲಿದೆ, ಬಡ್ತಿ ನಿರೀಕ್ಷೆಯಲ್ಲಿದ್ದರೆ ಇನ್ನೂ ಕಾಯಬೇಕಾಗುವುದು.ಈ ರೀತಿಯಲ್ಲಿ ನೀವು ತಾಳ್ಮೆಯಿಂದಿರಬೇಕು. ಈ ವಾರ ಉದ್ಯಮಿಗಳಿಗೆ ಮಿಶ್ರ ಫಲಿತಾಂಶ, ಯಾರನ್ನೂ ಕುರುಡಾಗಿ ನಂಬಬೇಡಿ ಎಂದು ಸಲಹೆ ನೀಡಲಾಗುವುದು.
ಸಂಖ್ಯೆ 9 (ಹುಟ್ಟಿದ ದಿನಾಂಕ 9,18,27)
ಕೆಲಸದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಎಲ್ಲಾ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳಲಿದೆ, ನಿಮ್ಮ ತಂದೆಯೊಂದಿಗಿನ ನಿಮ್ಮ ಸಂಬಂಧವು ಗಟ್ಟಿಯಾಗುತ್ತದೆ. ಹಣಕಾಸಿನ ನಿರ್ವಹಣೆಯಲ್ಲಿ ಅಸಡ್ಡೆ ಬೇಡ. ಆರೋಗ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











