ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ(ಜೂನ್ 22-29) ನಿಮ್ಮ ಜನ್ಮ ಸಂಖ್ಯೆಗೆ ಹೇಗಿರಲಿದೆ?

ಸಂಖ್ಯಾಶಾಸ್ತ್ರ ಪ್ರಕಾರ ನೀವು ಹುಟ್ಟಿದ ದಿನಾಂಕಕ್ಕೆ ವಾರ ಭವಿಷ್ಯ ಹೇಳಲಾಗಿದೆ ನೋಡಿ:

ಸಂಖ್ಯೆ 1 ( ಹುಟ್ಟಿದ ದಿನಾಂಕ 1,10,19,28)

ಈ ವಾರ ನೀವು ಹಣಕ್ಕೆ ಸಂಬಂಧಿಸಿದ ಕೆಲವು ಸವಾಲುಗಳನ್ನು ಎದುರಿಸಬಹುದು, ಖರ್ಚುಗಳು ಹೆಚ್ಚಾಗುವುದು, ಸಾಲ ತೆಗೆದುಕೊಳ್ಳಬೇಕಾಗುವುದು, ಆದರೆ ಅಗ್ಯತಕ್ಕಿಂ ಹೆಚ್ಚು ಸಾಲ ಮಾಡಬೇಡಿ ಎಂದು ಸಲಹೆ ನೀಡಲಾಗುವುದು.

weekly numerology prediction

ಈ ವಾರ ಕೆಲಸದ ಜಾಗದಲ್ಲಿ ಯಾರ ಬಗ್ಗೆ ಗಾಸಿಪ್‌ ಬೇಡ, ಒಳ ರಾಜಕೀಯದ ಬಗ್ಗೆ ಮಾತು ಬೇಡ, ನೀವು ನಿಮ್ಮ ಕೆಲಸದ ಕಡೆಗಷ್ಟೇ ಗಮನಹರಿಸಿದರೆ ಸಾಕು. ಇಲ್ಲದಿದ್ದರೆ ನೀವು ದೊಡ್ಡ ತೊಂದರೆಗೆ ಸಿಲುಕಬಹುದು. ಅಗತ್ಯಕ್ಕಿಂತ ಹೆಚ್ಚಾಗಿ ಯಾರನ್ನೂ ನಂಬಬೇಡಿ, ನಿಮಗೆ ಸಂಬಂಧಿಸಿದ ವಿಷಯವನ್ನು ಅವರೊಂದಿಗೆ ಹಂಚಿಕೊಳ್ಳಬೇಡಿ.

ವ್ಯಾಪಾರಿಗಳು ಈ ವಾರ ಆರ್ಥಿಕ ನಷ್ಟ ಉಂಟಾಗದಂತೆ ಜಾಗ್ರತೆವಹಿಸಿ. ನಿಮ್ಮ ತಪ್ಪು ನಿರ್ಧಾರ ಫಲದಿಂದಾಗಿ ಹಣ ನಷ್ಟವಾಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಅನಗ್ಯತ ಚಿಂತೆ ಆತ್ಮವಿಶ್ವಾಸ ಕಡಿಮೆ ಮಾಡುವುದು, ಅಂಥ ಆಲೋಚನೆಗಳನ್ನು ಮನಸ್ಸಿನಿಂದ ತೆಗೆದು ಹಾಕಿ, ಆರೋಗ್ಯದ ಕಡೆಗೆ ಗಮನಹರಿಸಿ.


ಸಂಖ್ಯೆ 2 (ಹುಟ್ಟಿದ ದಿನಾಂಕ 2,11,20,29)

ನೀವು ಹಿಂದು ಮುಂದು ಯೋಚಿಸದೆ ಮಾತನಾಡಲು ಹೋಗದಿರಿ. ಇತರರ ಜೀವನದಲ್ಲಿ ಹಸ್ತಕ್ಷೇಪ ಮಾಡುವುದು ನಿಮಗೆ ದುಬಾರಿಯಾಗಬಹುದು. ಇನ್ನು ವಿದ್ಯಾರ್ಥಿಗಳಿಗೆ ಏನಾದರೂ ಪರೀಕ್ಷೆ ಸಮೀಪಿಸುತ್ತಿದ್ದರೆ ತುಂಬಾನೇ ಜಾಗ್ರತೆವಹಿಸಿ, ಸಮಯ ವ್ಯರ್ಥ ಮಾಡದಿರಿ.

ಕುಟುಂಬ ಜೀವನದ ಬಗ್ಗೆ ನೋಡುವುದಾದರೆ ಚಿಕ್ಕ ವಿಷಯವನ್ನು ದೊಡ್ಡದು ಮಾಡಲು ಹೋಗಬೇಡಿ, ಅಲ್ಲದೆ ಕೊಂಕು ಮಾತನಿಂದ ಯಾರ ಮನಸ್ಸಿಗೂ ನೋವುಂಟು ಮಾಡಲು ಹೋಗಬೇಡಿ, ವೃತ್ತಿ ಬದುಕು ಸರಾಸರಿಯಾಗಿರಲಿದೆ, ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ.

ಸಂಖ್ಯೆ 3 (ಹುಟ್ಟಿದ ದಿನಂಕ 3,12,21,30)

ಈ ವಾರ ನೀವು ಕೆಲಸದ ಕಡೆಗೆ ತುಂಬಾನೇ ಗಮನಹರಿಸಬೇಕು, ಉದ್ಯಮಿಗಳಿಗೆ ಈ ವಾರ ಓಡಾಟ ಅಧಿಕವಿರಲಿದೆ. ಇನ್ನು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಈ ಅವಧಿ ಲಾಭದಾಯಕವಾಗಿದೆ.

ಸಂಬಂಧದ ಬಗ್ಗೆ ನೋಡುವುದಾರೆ ಈ ಅವಧಿ ಅನುಕೂಲಕರವಾಗಿದೆ, ನಿಮ್ಮಿಬ್ಬರ ನಡುವೆ ಪ್ರೀತಿ ಹೆಚ್ಚಾಗುವುದು, ಸಂಬಂಧ ಬಲವಾಗುವುದು. ವಿದ್ಯಾರ್ಥಿಗಳು ಯಾವುದೇ ಹೊಸ ಕೋರ್ಸ್ ಇತ್ಯಾದಿಗಳಿಗೆ ದಾಖಲಾಗಲು ಬಯಸಿದರೆ ಅದಕ್ಕೆ ಈ ಸಮಯ ಅನುಕೂಲಕರವಾಗಿದೆ. ಇನ್ನು ಈ ಸಮಯದಲ್ಲಿ ಆರೋಗ್ಯದ ಕಡಗೆ ಗಮನಹರಿಸಬೇಕು, ಏನಾದರೂ ಆರೋಗ್ಯ ಸಮ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.


ಸಂಖ್ಯೆ 4 (ಹುಟ್ಟಿದ ದಿನಾಂಕ 4,13,22,31)

ಈ ಸಂಖ್ಯೆಯವರಿಗೆ ಈ ವಾರ ಅಷ್ಟು ಅನುಕೂಲಕರವಲ್ಲ, ಈ ಅವಧಿಯಲ್ಲಿ ಅಧಿಕ ಕೆಲಸ ಒತ್ತಡ ದೈಹಿಕ ಹಾಗೂ ಮಾನಸಿಕ ಬಳಲಿಕೆ ಉಂಟು ಮಾಡುವುದು, ನೀವು ವಿಶ್ರಾಂತಿ ಕಡೆಗೆ ಗಮನಹರಿಸಿದರೆ ತುಂಬಾ ಒಳ್ಳೆಯದು. ವಿದ್ಯಾರ್ಥಿಗಳಿಗೆ ಈ ಅವಧಿ ಮಂಗಳಕರ.

ದಾಂಪತ್ಯ ಜೀವನದಲ್ಲಿ ಖುಷಿ, ನೆಮ್ಮದಿ ಇರಲಿದೆ. ನಿಮ್ಮ ನಡುವೆ ಸಂಬಂಧ ತುಂಬಾ ಚೆನ್ನಾಗಿರಲಿದೆ, ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ತೊಡೆದುಹಾಕಲು, ನಿಮ್ಮ ಜೀವನಶೈಲಿಯಲ್ಲಿ ನೀವು ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಬಹುದು. ಅಲ್ಲದೆ ಈ ಅವಧಿಯಲ್ಲಿ ಕೆಲ ಪ್ರಮುಖ ನಿರ್ಧಾರಗಳನ್ನು ಆತುರದಿಂದ ತೆಗೆದುಕೊಳ್ಳಬೇಡಿ.

ಸಂಖ್ಯೆ 5 (ಹುಟ್ಟಿದ ದಿನಾಂಕ 5,14,23)

ಈ ಅವಧಿ ನಿಮಗೆ ಶುಭವಾಗಿದೆ, ನೀವೇನಾದರೂ ಹೊಸ ವ್ಯಾಪಾರ ಯೋಜನೆಗಳನ್ನು ಮಾಡಲು ಯೋಚಿಸುತ್ತಿದ್ದರೆ ಈ ಸಮಯ ಅನುಕೂಲಕರವಾಗಿದೆ. ಉದ್ಯೋಗಿಗಳಿಗೆ ತಮ್ಮ ಕೆಲಸ ಅಚ್ಚುಕಟ್ಟಾಗಿ ಮಾಡಿ ಮುಗಿಸಲು ಸಾಧ್ಯವಾಗುವುದು. ಕುಟುಂಬದಲ್ಲಿ ಬಾಂಧವ್ಯ ಚೆನ್ನಾಗಿರಲಿದೆ, ಕುಟುಂಬದ ಜೊತೆಗೆ ಚಿಕ್ಕ ಟ್ರಿಪ್‌ಗೂ ಪ್ಲ್ಯಾನ್ ಮಾಡಬಹುದು.

ಈ ವಾರ ತುಂಬಾ ಧನಾತ್ಮಕವಾಗಿರುವಿರಿ, ಪ್ರತಿಯೊಂದು ದಿನವನ್ನು ಖುಷಿ-ಖುಷಿಯಿಂದ ಕಳೆಯುತ್ತೀರಿ, ಆರೋಗ್ಯ ಚೆನ್ನಾಗಿರಲಿದೆ.

ಸಂಖ್ಯೆ 6 (ಹುಟ್ಟಿದ ದಿನಾಂಕ 6,15,24)

ಉದ್ಯೋಗಿಗಳಿಗೆ ಈ ಅವಧಿ ಅನುಕೂಲಕರವಾಗಿದೆ, ನಿಮ್ಮ ಕೆಲಸಕ್ಕೆ ಉತ್ತಮ ಮನ್ನಣೆ ಇರಲಿದೆ. ವ್ಯಾಪಾರಿಗಳು ಈ ಸಮಯದಲ್ಲಿ ಹೊಸ ನಿರ್ಧಾರ ಮುಂದಾಗಬಹುದು. ಹೂಡಿಕೆಗೆ ಈ ಸಮಯ ಅನುಕೂಲಕರವಾಗಿದೆ.

ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವ ವಿದ್ಯಾರ್ಥಿಗಳು ಈ ಅವಧಿಯಲ್ಲಿ ಉತ್ತಮ ಅವಕಾಶಗಳನ್ನು ಪಡೆಯಬಹುದು. ಒಟ್ಟಾರೆಯಾಗಿ, ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.

ಸಂಖ್ಯೆ 7 (ಹುಟ್ಟಿದ ದಿನಾಂಕ 7,16,25)

ನಿಮಗೆ ವಹಿಸಿದ ಕೆಲಸವನ್ನು ಆತ್ಮವಿಶ್ವಾಸದಿಂದ ಪೂರ್ಣಗೊಳಿಸುತ್ತೀರಿ, ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರೆಯಲಿದೆ. ಉದ್ಯಮಿಗಳಿಗೆ ಈ ಅವಧಿ ಅನುಕೂಲಕರವಾಗಿರುತ್ತದೆ. ಕೆಲಸಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುತ್ತೀರಿ.

ಕುಟುಂಬ ಜೀವನ ಚೆನ್ನಾಗಿರಲಿದೆ, ಕುಟುಂಬಕ್ಕೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುವುದು. ಸಂಬಂಧಗಳು ಇನ್ನಷ್ಟು ಉತ್ತಮವಾಗಿರುತ್ತವೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ಸನ್ನು ಸಾಧಿಸಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.

ಸಂಖ್ಯೆ 8 (ಹುಟ್ಟಿದ ದಿನಾಂಕ 8,17,26)

ನಿಮ್ಮ ಕುಟುಂಬದ ಜವಾಬ್ದಾರಿಗಳನ್ನು ನಿರ್ಲಕ್ಷಿಸಬೇಡಿ. ಸಂಗಾತಿಗೆ ನಿಮ್ಮ ಮೇಲೆ ಬೇಸರ ಉಂಟಾಗದಂತೆ ಜಾಗ್ರತೆವಹಿಸಿ. ವಿದ್ಯಾರ್ಥಿಗಳು ಓದಿನ ಕಡೆಗೆ ತುಂಬಾನೇ ಗಮನಹರಿಸಬೇಕು. ಕುಟುಂಬಕ್ಕೆ ಸಂಬಂಧಿಸಿದ ನಿರ್ಧಾರವನ್ನು ಬುದ್ಧಿವಂತಿಕೆಯಿಂದ ತೆಗೆದುಕೊಂಡರೆ ಉತ್ತಮ.

ಸಮಸ್ಯೆಗಳನ್ನು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ, ಇನ್ನು ಆರೋಗ್ಯದ ಬಗ್ಗೆ ನೋಡುವುದಾದರೆ ಈ ಅವಧಿಯಲ್ಲಿ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಬಹುದು, ಹಾಗಾಗಿ ಹೊರಗಡೆಯ ಆಹಾರ ಸೇವಿಸಬೇಡಿ.

ಸಂಖ್ಯೆ 9 (ಹುಟ್ಟಿದ ದಿನಾಂಕ 9,18,27)

ನೀವು ವೈಯಕ್ತಿಕ ವಿಷಯಗಳನ್ನು ಯಾರೊಂದಿಗೂ ಹೆಚ್ಚು ಹಂಚಿಕೊಳ್ಳಬೇಡಿ, ಇಲ್ಲದಿದ್ದರೆ ಅದು ನಿಮಗೆ ಸಮಸ್ಯೆಗಳನ್ನು ಉಂಟುಮಾಡಬಹುದು. ಈ ಅವಧಿಯಲ್ಲಿ ಉತ್ತಮ ಯಶಸ್ಸನ್ನು ಸಾಧಿಸಲು ನೀವು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ

ನೀವು ವಿದ್ಯಾರ್ಥಿಯಾಗಿದ್ದರೆ ನಿಮ್ಮ ಶಿಕ್ಷಣದಲ್ಲಿ ಕೆಲವು ಸಮಸ್ಯೆಗಳು ಬರಬಹುದು, ನೀವು ಮಾರ್ಗದರ್ಶಕರ ಸಹಾಯದಿಂದ ಬಗೆಹಿಸಲು ಪ್ರಯತ್ನಿಸಬೇಕು. ಆರೋಗ್ಯ ಸಮಸ್ಯೆಗಳಿದ್ದರೆ ನಿರ್ಲಕ್ಷ್ಯ ಬೇಡ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Weekly Numerology Prediction From June 22 To 29 In Kannada

Here is weekly numerology prediction from June 22 To 29, read on...
Story first published: Saturday, June 22, 2024, 11:33 [IST]
X
Desktop Bottom Promotion